Wednesday, September 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

    ​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

    ಚೀನಾ ಬಾಹ್ಯಾಕಾಶ ನಿಲ್ದಾಣಕ್ಕೆ ಪಾಕ್ ಗಗನಯಾತ್ರಿ

    Video News | ಚಲಿಸುವ ಕಾರಿನ ಮೇಲೇರಿ 40 ಕಿ.ಮೀ ಸಾಹಸ: ತಮಿಳುನಾಡಿನಲ್ಲಿ ಗುಟ್ಕಾ ಕಳ್ಳಸಾಗಣೆದಾರರನ್ನು ಹಿಡಿದ ರಿಯಲ್ ‘ಸಿಂಗಂ’ ಕಾಪ್

    ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಸೌಜನ್ಯ ಪ್ರಕರಣ: ಮರುತನಿಖೆಗೆ ರಾಜ್ಯ ಸರ್ಕಾರದಿಂದ ಎಸ್‌ಐಟಿ ರಚನೆ

    ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

  • Bengaluru Focus

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

    BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

    ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

    GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರಿನ ಸಮಗ್ರ ಅಭಿವೃದ್ಧಿಯ ಮಿಷನ್ -2022 ಪ್ರಗತಿ ಪರಿಶೀಲನಾ ಸಭೆ

ಶೀಘ್ರ ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ

by Bengaluru Wire Desk
January 30, 2021
in Bengaluru Focus, News Wire
Reading Time: 1 min read
0

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಇಡೀ ದಿನ ಬೆಂಗಳೂರಿನ ಅಭಿವೃದ್ಧಿ ಕುರಿತಂತೆ ನಿರಂತರವಾಗಿ ಕಾಮಗಾರಿ ಪರಿಶೀಲನೆ, ಬೆಂಗಳೂರು ಮಿಷನ್-2022 ಬಗ್ಗೆ ಸುಧೀರ್ಘ ಅವಧಿಯ ಸಭೆ ನಡೆಸಿದರು.

ವಿಧಾನಸೌಧದಲ್ಲಿ ಬೆಂಗಳೂರು ಮಿಷನ್ -2022 ಕುರಿತಂತೆ ಪ್ರಗತಿ ಪರಿಶೀಲನಾ ಸಭೆ‌ ನಡೆಯಿತು. 190 ಕಿ.ಮೀ ಉದ್ದದ 12 ಹೈಡೆನ್ಸಿಟಿ ಕಾರಿಡಾರ್ ಅಭಿವೃದ್ಧಿ ಮತ್ತು ನಿರ್ವಹಣೆ ಯೋಜನೆಗೆ 477 ಕೋಟಿ ರೂಪಾಯಿ ಆಗಲಿದೆ. ಈ ಯೋಜನೆಗೆ ಏಪ್ರಿಲ್ ಒಳಗೆ ಟೆಂಡರ್ ಪ್ರಕ್ರಿಯೆ ಮುಗಿಸಲು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಕೇಂದ್ರಭಾಗದಲ್ಲಿನ 37 ರಸ್ತೆಗಳನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲಾಗುತ್ತಿದೆ. ಆ ಪೈಕಿ 5 ಯೋಜನೆಗಳು ಪೂರ್ಣವಾಗಿದೆ. ಉಳಿದ 32 ರಸ್ತೆಗಳನ್ನು ಮೇ-2021 ರ ಒಳಗೆ ಪೂರ್ಣಗೊಳಿಸಲು ಗಡುವು ನೀಡಿದರು. ಸುಸ್ಥಿತಿಯಲ್ಲಿರುವ ಫುಟ್ ಪಾತ್ ಉಳಿಸಿಕೊಂಡು ರಸ್ತೆ ಅಭಿವೃದ್ಧಿ ಮಾಡಲು ಸಲಹೆ ನೀಡಿದರು.

ಕೆಂಗೇರಿ ಮಾರ್ಗದ ಮೆಟ್ರೋ ಜೂನ್ ಗೆ ಸೇವೆಗೆ:
ಜೂನ್-2021 ಅಂತ್ಯದೊಳಗೆ ಕೆಂಗೇರಿ ಲೈನ್ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಸಿಎಂ ಬಿಎಸ್ ವೈ, ವೈಟ್‍ಫೀಲ್ಡ್ ಮಾರ್ಗ ಹಾಗೂ ಎಲೆಕ್ಟ್ರಾನಿಕ್ ಸಿಟಿ ಮಾರ್ಗಗಳ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ. ಇದಕ್ಕೆ ಇರುವ ತೊಡಕುಗಳನ್ನು ಶೀಘ್ರ ನಿವಾರಿಸುವಂತೆ ಸೂಚನೆ ನೀಡಿದರು.

ಸುಂದರವಾಗೊಳ್ಳಲಿವೆ ರಾಜಕಾಲುವೆಗಳು :
ವಿನೂತನ ರೀತಿಯಲ್ಲಿ 11 ಕಿ.ಮೀ. ಉದ್ದದ ರಾಜಕಾಲುವೆ ಸುಂದರಗೊಳಿಸುವ ಕೆ-100 ಎಂಬ ಯೋಜನೆಯನ್ನು ರೂಪಿಸಲಾಗಿದೆ. ಈ ರಾಜಕಾಲುವೆಗಳನ್ನು ಅಭಿವೃದ್ಧಿಗೊಳಿಸಲು ಈಗಾಗಲೇ ಟೆಂಡರ್ ಆಹ್ವಾನಿಸಲಾಗಿದೆ.

ಇದಕ್ಕೆ ಪೂರಕವಾಗಿ ರಾಜಕಾಲುವೆಯಲ್ಲಿ ಜಲಮಂಡಳಿಯ ತ್ಯಾಜ್ಯ ನೀರು ಒಯ್ಯುವ ಕೊಳವೆಗಳನ್ನು ಸ್ವಚ್ಛಗೊಳಿಸುವ ಕಾಮಗಾರಿಗಳನ್ನು ಫೆಬ್ರವರಿ-2021ರ ಅಂತ್ಯಕ್ಕೆ ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಫೆಬ್ರವರಿ -2022ರ ಒಳಗೆ ಕೆರೆಗಳ ಪುನಶ್ಚೇತನ:
ನಗರದ ಕೆರೆಗಳನ್ನು ಉಳಿಸಿ, ಜೀವವೈವಿದ್ಯ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ 25 ಕೆರೆಗಳ ಅಭಿವೃದ್ಧಿ ಮತ್ತು ಪುನಶ್ಚೇತನ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಹಂತಹಂತವಾಗಿ ಪೂರ್ಣಗಳಿಸಲಾಗುವುದು. ಇದರ ಜೊತೆಗೆ ಬೆಳ್ಳಂದೂರು ಮತ್ತು ವರ್ತೂರು ಕೆರೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ.

ಫೆಬ್ರುವರಿ 2022ರೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ‌ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ಬೃಹತ್ ವೃಕ್ಷೋದ್ಯಾನಗಳು‌ ಸದ್ಯದಲ್ಲೇ ಲೋಕಾರ್ಪಣೆ :
ನಗರದ ಹಸಿರು ಸಿರಿ ಕಾಪಾಡುವ ನಿಟ್ಟಿನಲ್ಲಿ ಮತ್ತು ಗಾರ್ಡನ್ ಸಿಟಿ ಎಂಬ ಹೆಗ್ಗಳಿಕೆಗೆ ಪೂರಕವಾಗುವಂತೆ ಬೃಹತ್ ವೃಕ್ಷೋದ್ಯಾನಗಳನ್ನು ನಿರ್ಮಿಸಲಾಗುತ್ತಿದೆ. ಏಪ್ರಿಲ್-2021ರ ಅಂತ್ಯಕ್ಕೆ 400 ಎಕರೆಯ ತುರಹಳ್ಳಿ ಅರಣ್ಯ, ಮೇ-2021ರ ಅಂತ್ಯಕ್ಕೆ 102 ಎಕರೆಯ ಕಾಡುಗೋಡಿ.

ಜೂನ್-2021ರ ಅಂತ್ಯಕ್ಕೆ 98 ಎಕರೆಯ ಮಾಚೋಹಳ್ಳಿಯಲ್ಲಿ ವೃಕ್ಷ ಉದ್ಯಾನಗಳನ್ನು ಲೋಕಾರ್ಪಣೆಗೆ ಸಿದ್ಧವಾಗಲಿದೆ ಎಂದು‌ ಮುಖ್ಯಮಂತ್ರಿಗಳಿಗೆ ಅಧಿಕಾರಿಗಳು‌ ಹೇಳಿದರು.

ಏಕೀಕೃತ ಡಿಜಿಟಲ್ ಪೋರ್ಟಲ್ ಸೇವೆ ಏಪ್ರಿಲ್ ಗೆ ಲಭ್ಯ:
ನಾಗರೀಕರ ಸೇವೆಗಳಾದ ಖಾತಾ, ಆಸ್ತಿ ತೆರಿಗೆ, ಜನನ ಮತ್ತು ಮರಣ ಪ್ರಮಾಣ ಪತ್ರ, ಉದ್ಯಮ ಪರವಾನಗಿ, ಕಟ್ಟಡ ನಕ್ಷೆ ಪರವಾನಗಿ ಇತ್ಯಾದಿ ಸೇವೆಗಳು ಈಗಾಗಲೇ ಲಭ್ಯವಿದೆ. ಈ ಎಲ್ಲಾ ಸೇವೆಗಳನ್ನು ಸರಳವಾದ ಏಕೀಕೃತ ಡಿಜಿಟಲ್ ಪೋರ್ಟಲ್ ಅಡಿ ಒದಗಿಸಲು ಕ್ರಮವಹಿಸಲಾಗಿದೆ. ಏಪ್ರಿಲ್-2021 ಅಂತ್ಯಕ್ಕೆ ಈ ಸೇವೆ ಲಭ್ಯವಾಗುವುದು ಎಂದು ಮಾಹಿತಿ ನೀಡಿದರು.

ಸ್ವಚ್ಛ ಬೆಂಗಳೂರಿಗಾಗಿ ಎಸ್ ಪಿವಿ ಸ್ಥಾಪನೆಗೆ ಸೂಚನೆ : ನಗರದಲ್ಲಿ ಹೆಚ್ಚಿನ ಜನಸಂಖ್ಯೆಯಿಂದ ತ್ಯಾಜ್ಯ ನಿರ್ವಹಣೆ ಪ್ರಮುಖ ಸವಾಲಿನ ಅಂಶವಾಗಿದೆ. ಪ್ರತಿನಿತ್ಯ ನಗರದಲ್ಲಿ ಸುಮಾರು 4,500ಕ್ಕೂ ಅಧಿಕ ಮೆಟ್ರಿಕ್ ಟನ್ ತ್ಯಾಜ್ಯ ಉತ್ಪಾದನೆಯಾಗುತ್ತಿದೆ. ವೈಜ್ಞಾನಿಕ ಮತ್ತು ಸಮರ್ಪಕ ಘನತ್ಯಾಜ್ಯ ನಿರ್ವಹಣೆಗಾಗಿ 15 ದಿನದೊಳಗೆ ವಿಶೇಷ ಉದ್ದೇಶಿತ ವಾಹಕ (ಎಸ್ ಪಿ ವಿ) ಸ್ಥಾಪಿಸುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು.

ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಪ್ರತಿ ವಾರ ಈ ಯೋಜನೆಯ ಪ್ರಗತಿ ಪರಿಶೀಲನೆ ನಡೆಸುವಂತೆ ಸೂಚಿಸಿದರು.‌ ಬೆಂಗಳೂರು ಮಿಷನ್ -2022 ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ, ಸಚಿವರಾದ ಸುರೇಶ್ ಕುಮಾರ್, ಬಿಬಿಎಂಪಿ, ಜಲಮಂಡಳಿ‌ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ

Next Post

ಜಡ್ಡುಗಟ್ಟಿದ ಬಿಡಿಎ ಅಧಿಕಾರಿಗಳಿಗೂ ಇನ್ನು ಮುಂದೆ ವರ್ಗಾವಣೆ ಅನ್ವಯ…!

Next Post
ಬಿಡಿಎ ಕೇಂದ್ರ ಕಚೇರಿ

ಜಡ್ಡುಗಟ್ಟಿದ ಬಿಡಿಎ ಅಧಿಕಾರಿಗಳಿಗೂ ಇನ್ನು ಮುಂದೆ ವರ್ಗಾವಣೆ ಅನ್ವಯ...!

ತ್ರಿಮತಸ್ಥ ಬ್ರಾಹ್ಮಣರ ಐಕ್ಯತೆ- ಏಕತೆಗೆ ಎಲ್ಲರೂ ಒಗ್ಗೂಡಬೇಕು ; ಪುತ್ತಿಗೆ ಶ್ರೀ - ಮಂತ್ರಾಲಯಶ್ರೀಗಳಿಂದ ಕರೆ

Please login to join discussion

Like Us on Facebook

Follow Us on Twitter

Recent News

ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

September 30, 2026

BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

September 29, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

September 30, 2026

BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

September 29, 2026

BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

September 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d