Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಜಡ್ಡುಗಟ್ಟಿದ ಬಿಡಿಎ ಅಧಿಕಾರಿಗಳಿಗೂ ಇನ್ನು ಮುಂದೆ ವರ್ಗಾವಣೆ ಅನ್ವಯ…!

ಬಿಡಿಎ ಮಂಡಳಿ ಸಭೆಯಲ್ಲಿ ಮಹತ್ವದ ನಿರ್ಧಾರ | ಬಜೆಟ್ ಅಧಿವೇಶನದಲ್ಲಿ ಕಾಯ್ದೆಗೆ ತಿದ್ದುಪಡಿ

by Bengaluru Wire Desk
January 31, 2021
in Bengaluru Focus, News Wire, Public interest
Reading Time: 1 min read
0
ಬಿಡಿಎ ಕೇಂದ್ರ ಕಚೇರಿ

ಬಿಡಿಎ ಕೇಂದ್ರ ಕಚೇರಿ

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಲವಾರು ವರ್ಷಗಳಿಂದ ಒಂದೆಡೆ ನೆಲೆಸಿ ಆಮೆಗತಿಯ ಕಾರ್ಯಗಳಲ್ಲಿ ತೊಡಗಿರುವ ಅಧಿಕಾರಿ, ನೌಕರರೂ ಇನ್ನು ಮುಂದೆ ವರ್ಗಾವಣೆ ಆಗಲಿದ್ದಾರೆ. ಈ ಕುರಿತು ಮಹತ್ವದ ನಿರ್ಧಾರವನ್ನು ಬಿಡಿಎ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.ಮಂಡಳಿ ಸಭೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಎಸ್.ಆರ್.ವಿಶ್ವನಾಥ್, ನೌಕರರು ಮತ್ತು ಕೆಲವು ಅಧಿಕಾರಿಗಳು ಬಿಡಿಎದಲ್ಲಿ ನೇಮಕಾತಿ ಆಗಿ ಇಲ್ಲಿಯೇ ನಿವೃತ್ತಿ ಹೊಂದುತ್ತಿದ್ದಾರೆ. ಇವರಲ್ಲಿ ಕೆಲವರು ಜಡ್ಡುಗಟ್ಟು ಹೋಗಿದ್ದಾರೆ. ಕೆಲವರು ಹಲವಾರು ಅಕ್ರಮಗಳನ್ನು ಎಸಗುವ ಮೂಲಕ ಸಂಸ್ಥೆಗೆ ಕಪ್ಪು ಚುಕ್ಕೆ ತರುತ್ತಿದ್ದಾರೆ.

ಇದರಿಂದ ಸಂಸ್ಥೆಗೆ ನಷ್ಟವಾಗುತ್ತಿದೆ. ಈ ಅಕ್ರಮಗಳಿಗೆ ಕಡಿವಾಣ ಹಾಕಲು ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಇಂತಹ ನೌಕರರು ಮತ್ತು ಅಧಿಕಾರಿಗಳನ್ನು ಬೇರೆ ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ವರ್ಗಾವಣೆ ಮಾಡಲು ಬಿಡಿಎ ಕಾಯ್ದೆಯಲ್ಲಿ ಇದುವರೆಗೆ ಅವಕಾಶವಿರಲಿಲ್ಲ. ಆದ್ದರಿಂದ ವರ್ಗಾವಣೆಗೆ ಅನುವು ಆಗುವ ರೀತಿಯಲ್ಲಿ ಬಿಡಿಎ ಕಾಯ್ದೆ 1976 ರ ಕಲಂ 50 ಕ್ಕೆ ಉಪ ಕಲಂ 3 ಅನ್ನು ಹೊಸದಾಗಿ ಸೇರ್ಪಡೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಈ ಬಜೆಟ್ ಅಧಿವೇಶನದಲ್ಲಿ ತಿದ್ದುಪಡಿ :
ಈ ಕಾಯ್ದೆಗೆ ವಿಧಾನಮಂಡಲದ ಅನುಮತಿ ಬೇಕಾಗಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಕಾಯ್ದೆಗೆ ತಿದ್ದುಪಡಿ ತಂದು ಅಂಗೀಕಾರ ಪಡೆಯುವುದಾಗಿ ವಿಶ್ವನಾಥ್ ತಿಳಿಸಿದರು.

ಗರಿಷ್ಠ ಮೂರು ವರ್ಷ ಬಿಡಿಎ ಹೊರಗೆ ಕೆಲಸ :
ಕಾಯ್ದೆಗೆ ತಿದ್ದುಪಡಿ ತಂದ ನಂತರ ಜಡ್ಡುಗಟ್ಟಿದ ಅಧಿಕಾರಿಗಳು ಮತ್ತು ನೌಕರರನ್ನು ಕನಿಷ್ಠ ಒಂದು ವರ್ಷ ರಾಜ್ಯದ ಇತರೆ ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ವರ್ಗಾವಣೆ ಮಾಡಲಾಗುತ್ತದೆ. ಹಾಗೂ ಗರಿಷ್ಠ ಮೂರು ವರ್ಷಗಳವರೆಗೆ ಅಲ್ಲಿ ಕೆಲಸ ಮಾಡುವಂತೆ ಕಾಯ್ದೆಗೆ ತಿದ್ದಪಡಿ ತರಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಮೂರು ವರ್ಷಗಳ ನಂತರ ಮತ್ತೆ ಬಿಡಿಎಗೆ ವರ್ಗಾವಣೆ ಆಗಬೇಕಾದರೆ ಆ ಬಗ್ಗೆ ಪ್ರಾಧಿಕಾರದ ಮಂಡಳಿ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದರು. ಈ ಮಹತ್ವದ ನಿರ್ಧಾರದಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ. ಸೋಮಾರಿ,‌ ಸರಿಯಾಗಿ ಕೆಲಸ ಮಾಡದ ಸಿಬ್ಬಂದಿಗೆ ಎಚ್ಚರಿಕೆ ನೀಡಿದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಕೆಂಪೇಗೌಡ ಬಡಾವಣೆಗೆ 650 ಕೋಟಿ :
ರೂಪಾಯಿ ಉದ್ದೇಶಿತ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ, ಒಳಚರಂಡಿ, ವಿದ್ಯುತ್, ಕುಡಿಯುವ ನೀರು ಸೇರಿದಂತೆ ಇನ್ನಿತರೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು. ಈ ಲೇಔಟ್ ಅಭಿವೃದ್ಧಿಗೆ 650 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಮಂಡಳಿ ಸಭೆಯಲ್ಲಿ ನಿರ್ಧರಿಸಲಾಯಿತು.

ಇದಕ್ಕೆ ಪೂರ್ವಭಾವಿಯಾಗಿ ಇದುವರೆಗೆ ಬಡಾವಣೆಯಲ್ಲಿ ಆಗಿರುವ ಮತ್ತು ಆಗಬೇಕಿರುವ ಅಭಿವೃದ್ಧಿ ಕಾಮಗಾರಿಗಳ ವಿಸ್ತೃತ ವರದಿಯನ್ನು ಒಂದು ತಿಂಗಳೊಳಗೆ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.

ಡಿಸೆಂಬರ್ ಒಳಗೆ ಅಗತ್ಯ ಮೂಲಸೌಕರ್ಯ :
ರೆರಾ ಒಪ್ಪಂದದ ಪ್ರಕಾರ ಈ ವರ್ಷದ ಡಿಸೆಂಬರ್ ವೇಳೆಗೆ ಕೆಂಪೇಗೌಡ ಬಡಾವಣೆಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಬಿಡಿಎ ಬದ್ಧವಾಗಿದೆ. ಇದಕ್ಕೆ ಸಂಬಂಧಿಸಿದ ಅಗತ್ಯ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ ಎಂದರು.

ಬನಶಂಕರಿ 6ನೇ ಹಂತಕ್ಕೆ ಕುಡಿಯುವ ನೀರು :
ಹಳೆಯ ಬಡಾವಣೆಗಳಲ್ಲಿ ಒಂದಾಗಿರುವ ಬನಶಂಕರಿ 6 ನೇ ಹಂತ ಬಡಾವಣೆಗೆ ಕಾವೇರಿ ನೀರು ಪೂರೈಸುವುದು ವಿಳಂಬವಾಗಿತ್ತು. ಈ ಬಗ್ಗೆ ಅಲ್ಲಿನ ನಾಗರಿಕರು ಹಲವು ಬಾರಿ ಮನವಿಗಳನ್ನೂ ಸಲ್ಲಿಸಿದ್ದರು. ಈ ಭಾಗಕ್ಕೆ ಕುಡಿಯುವ ನೀರು ಪೂರೈಸಲು 168 ಕೋಟಿ ರೂಪಾಯಿ ವೆಚ್ಚವಾಗಲಿದೆ. ಈ ಪೈಕಿ ಬಿಡಿಎ ಮೂರನೇ ಒಂದು ಭಾಗದಷ್ಟು ಹಣವನ್ನು ಬೆಂಗಳೂರು ಜಲಮಂಡಳಿಗೆ ನೀಡಲಿದೆ. ತಕ್ಷಣವೇ ನೀರು ಪೂರೈಕೆ ಕಾಮಗಾರಿಯನ್ನು ಕೈಗೊಳ್ಳುವಂತೆ ಜಲಮಂಡಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಶಿವರಾಮ ಕಾರಂತ ಬಡಾವಣೆಗೆ ಡಿಪಿಆರ್ ಗೆ ನಿರ್ಧಾರ :
ಹಲವು ವರ್ಷಗಳಿಂದ ಡಾ.ಶಿವರಾಮ ಕಾರಂತ ಬಡಾವಣೆ ನಿರ್ಮಾಣ ನೆನಗುದಿಗೆ ಬಿದ್ದಿದೆ. ಈ ಕುರಿತು ಸುಪ್ರೀಂ ಕೋರ್ಟ್ ಬಡಾವಣೆಯ ಸಾಧಕ ಭಾದಕಗಳನ್ನು ಪರಿಶೀಲಿಸಿ ವರದಿ ನೀಡಲು ಮೂವರು ನಿವೃತ್ತ ಉನ್ನತಾಧಿಕಾರಿಗಳ ಸಮಿತಿಯನ್ನು ರಚಿಸಿದೆ. ಅದರಂತೆ ಸಮಿತಿಯು ಕಾರ್ಯಪ್ರವೃತ್ತವಾಗಿದೆ.

ಮತ್ತೊಂದೆಡೆ ಆ ಬಿಡಿಎ ಬಡಾವಣೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಹೆಜ್ಜೆ ಹಾಕಿದೆ. ಇದಕ್ಕೆ ಪೂರಕವಾಗಿ ಸಮಗ್ರ ಯೋಜನಾ ವರದಿಯನ್ನು ಸಿದ್ಧಪಡಿಸಲು ಸಲಹಾ ಸಂಸ್ಥೆ ನೇಮಕ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ವಿಶ್ವನಾಥ್ ತಿಳಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬೆಂಗಳೂರಿನ ಸಮಗ್ರ ಅಭಿವೃದ್ಧಿಯ ಮಿಷನ್ -2022 ಪ್ರಗತಿ ಪರಿಶೀಲನಾ ಸಭೆ

Next Post

ತ್ರಿಮತಸ್ಥ ಬ್ರಾಹ್ಮಣರ ಐಕ್ಯತೆ- ಏಕತೆಗೆ ಎಲ್ಲರೂ ಒಗ್ಗೂಡಬೇಕು ; ಪುತ್ತಿಗೆ ಶ್ರೀ – ಮಂತ್ರಾಲಯಶ್ರೀಗಳಿಂದ ಕರೆ

Next Post

ತ್ರಿಮತಸ್ಥ ಬ್ರಾಹ್ಮಣರ ಐಕ್ಯತೆ- ಏಕತೆಗೆ ಎಲ್ಲರೂ ಒಗ್ಗೂಡಬೇಕು ; ಪುತ್ತಿಗೆ ಶ್ರೀ - ಮಂತ್ರಾಲಯಶ್ರೀಗಳಿಂದ ಕರೆ

ಏರ್ ಶೋ-2021 ಹಿನ್ನಲೆ ; ಬೆಂಗಳೂರು ಏರ್ ಪೋರ್ಟ್ ವಿಮಾನಗಳ ಕಾರ್ಯಾಚರಣೆ ಅವಧಿ ಬದಲಾವಣೆ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d