Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 90 ದಿನದಲ್ಲಿ ಸಿದ್ದವಾಯ್ತು 100 ಬೆಡ್ ಗಳ ಹೈಟೆಕ್ “ಮಾಡ್ಯುಲರ್ ಐಸಿಯು”

ತುರ್ತು ಸಂದರ್ಭದಲ್ಲಿ ಬೇರೆಡೆ ಸ್ಥಳಾಂತರಿಸುವ ವ್ಯವಸ್ಥೆ | ದೇಶದಲ್ಲಿ ನಡೆದ ಮೊದಲ ಪ್ರಯೋಗ | ನೂತನ ಐಸಿಯು ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ

by Bengaluru Wire Desk
February 8, 2021
in Bengaluru Focus, News Wire
Reading Time: 1 min read
0

ಬೆಂಗಳೂರು :  ತುರ್ತು ಸಂದರ್ಭ, ಅದರಲ್ಲೂ ನೈಸರ್ಗಿಕ ವಿಕೋಪದಂಥ ದುರಂತಗಳು ಎದುರಾದಾಗ ಎಲ್ಲೆಂದರಲ್ಲಿ ಸಾಗಿಸಬಹುದಾದ 100 ಹಾಸಿಗೆಗಳ ಹೈಟೆಕ್ ಮಾಡ್ಯುಲರ್ ಐಸಿಯು ಘಟಕ ನಗರದಲ್ಲಿ ತಲೆ ಎತ್ತಿದೆ.

ಮಲ್ಲೇಶ್ವರದ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಕೇವಲ ಮೂರು ತಿಂಗಳ ಅವಧಿಯಲ್ಲಿ ಈ 100 ಹಾಸಿಗೆಗಳ ಐಸಿಯುವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಲೋಕಾರ್ಪಣೆ ಮಾಡಿದ್ದಾರೆ.

ಈ ಮೂಲಕ ಇಂದಿನಿಂದ ಸಾರ್ವಜನಿಕರ ಬಳಕೆಗೆ ಮುಕ್ತವಾಗಿದೆ. ಇಂಥ ಐಸಿಯುಗಳು ಹೆಚ್ಚು ಪರಿಣಾಮಕಾರಿ. ಎಲ್ಲಿಗೆ ಬೇಕಾದರೂ ಸುಲಭವಾಗಿ ಕೊಂಡೊಯ್ಯಬಹುದಾಗಿದೆ.

ಭಾರತದಲ್ಲಿ ಇಂತಹ ಹೈಟೆಕ್ ಮಾಡ್ಯುಲರ್ ಐಸಿಯು ಪ್ರಯೋಗ ಮೊತ್ತಮೊದಲನೆಯದಾಗಿದೆ. ಕೋವಿಡ್‌ನಂಥ ಸಂಕಷ್ಟ ಪರಿಸ್ಥಿತಿಯೂ ಸೇರಿದಂತೆ ಯಾವುದೇ ತುರ್ತು ಸಂದರ್ಭದಲ್ಲೂ ಪರಿಣಾಮಕಾರಿಯಾಗಿ ಈ ಐಸಿಯು ಘಟಕವನ್ನು ಬಳಕೆ ಮಾಡಬಹುದು.

ಹಲವು ದಾನಿಗಳ ನೆರವಿನಿಂದ ಈ ಘಟಕವನ್ನು ಸ್ಥಾಪನೆ ಮಾಡಲಾಗಿದೆ.

ಮಾಡ್ಯುಲರ್ ಐಸಿಯು ಉದ್ಘಾಟನೆ ಬಳಿಕ ಮಾತನಾಡುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಇದೇ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅತ್ಯಂತ ಕಡಿಮೆ ಅವಧಿಯಲ್ಲಿ ಮಾಡ್ಯೂಲರ್‌ ಐಸಿಯು ಸ್ಥಾಪಿಸಿರುವುದು ಶ್ಲಾಘನೀಯ. ಇದರಿಂದ ಈ ಭಾಗದ ಜನರಿಗೆ ಹೆಚ್ಚು ಅನುಕೂಲವಾಗಲಿದೆ.

ಜಯದೇವ ಹೃದ್ರೋಗ ಆಸ್ಪತ್ರೆ ವತಿಯಿಂದ 50 ಹಾಸಿಗೆಯ ಕ್ಯಾಥ್ ಲ್ಯಾಬ್‌ ಸ್ಥಾಪನೆ ಹಾಗೂ 50 ಹಾಸಿಗೆಯ ಟ್ರಾಮಾ ಕೇರ್ ಸೆಂಟರ್ ಹಾಗೂ 150 ಹಾಸಿಗೆಯ ತಾಯಿ- ಮಗು ಚಿಕಿತ್ಸಾ ಕೇಂದ್ರವನ್ನು ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ಸ್ಥಾಪಿಸಲಾಗುವುದು ಎಂದು ಹೇಳಿದರು.

ನಂತರ ಮಾತನಾಡಿದ ಉಪಮುಖ್ಯಮಂತ್ರಿ  ಡಾ.ಅಶ್ವತ್ಥನಾರಾಯಣ, ಶಸ್ತ್ರಚಿಕಿತ್ಸಾ ಘಟಕ ಹಾಗೂ ಕ್ಲೀನ್ ರೂಮುಗಳನ್ನು ಅಭಿವೃದ್ಧಿಪಡಿಸುವ ಬೆಂಗಳೂರು ಮೂಲದ ʼರಿನ್ಯಾಕ್’ ಎಂಬ ಕಂಪನಿ ಇವುಗಳನ್ನು ಅತ್ಯಾಧುನಿಕ ಮಾಡ್ಯುಲರ್ ಐಸಿಯು ಅಭಿವೃದ್ಧಿಪಡಿಸಿದೆ. ಈ ಕಂಪನಿಗೆ ನಾನು ಭೇಟಿ ನೀಡಿ, ಎಲ್ಲ ರೀತಿಯ ಪರಿಶೀಲನೆ ಮಾಡಿ, ಕಡಿಮೆ ದರದಲ್ಲಿ ಜಾಗತಿಕ ಮಟ್ಟದ ಗುಣಮಟ್ಟ ದೃಷ್ಟಿಯಲ್ಲಿ ಇಟ್ಟುಕೊಂಡು ಈ ಐಸಿಯು ಘಟಕಗಳನ್ನು ಸಿದ್ಧಪಡಿಸಲಾಗಿದೆ ಎಂದರು.

ಮಾಡ್ಯುಲರ್ ಐಸಿಯು ಹೇಗಿರುತ್ತೆ?

ಸರಕು ಸಾಗಣೆ ಮಾಡುವ ಕಂಟೇನರ್ʼಗಳ ಮಾದರಿ ಇಟ್ಟುಕೊಂಡು ಈ ಐಸಿಯುಗಳನ್ನು ಸಿದ್ಧಪಡಿಸಲಾಗಿದೆ. ಪ್ರತೀ ಒಂದು ಕಂಟೇನರ್‌ʼನಲ್ಲಿ ಐದು ಐಸಿಯು ಹಾಸಿಗೆಗಳಿರುತ್ತದೆ. ಈ ರೀತಿ 20 ಕಂಟೇನರ್ ಸೇರಿ ಒಟ್ಟು 100 ಹಾಸಿಗೆಗಳು ಲಭ್ಯ ಇರುತ್ತವೆ.

ಎಲ್ಲ ಮಾಡ್ಯೂಲರ್‌ ಐಸಿಯುಗಳ ನಿರ್ವಹಣೆಗೆ ತಜ್ಞ ವೈದ್ಯರು, ಅರೆವೈದ್ಯ ಸಿಬ್ಬಂದಿ, ನರ್ಸುಗಳು ಸೇರಿ ಒಟ್ಟು 150 ಮಂದಿ ಸಿಬ್ಬಂದಿಯನ್ನು ನೇಮಿಸಲಾಗಿದೆ.

ಪ್ರತಿ ಐಸಿಯು ಗಾತ್ರ 12.135 X 3.3 X 2.62 ಮೀಟರ್ ನಷ್ಟಿದೆ. ಯಾವುದೇ ವಾತಾವರಣಕ್ಕೂ ಸರಿಹೊಂದುವ ತಾಂತ್ರಿಕ ಸೌಲಭ್ಯ, ಕುಶಲತೆಯನ್ನು ಇವು ಹೊಂದಿದೆ.

ಹೈ ಸ್ಪೀಡ್‌ ವೈಫೈ, ಪ್ರತ್ಯೇಕ ಲ್ಯಾನ್‌ ಕೇಬಲ್‌, ಎಚ್‌ಡಿ ಕ್ಯಾಮೆರಾಗಳು, ಸೆಂಟ್ರಲ್‌ ಮಾನಿಟರಿಂಗ್‌ ಸಿಸ್ಟಂ, ಪ್ರತ್ಯೇಕ ನೀರು ಮತ್ತು ಒಳಚರಂಡಿ ವ್ಯವಸ್ಥೆ ಪ್ರತಿ ಮಾಡ್ಯೂಲರ್‌ ಐಸಿಯುಗೂ ಇರುತ್ತದೆ. ಜತೆಗೆ, ಸೆಂಟ್ರಲ್‌ ಮಾನಿಟರಿಂಗ್‌ ಸಿಸ್ಟಮ್‌ ಮೂಲಕ ವೈದ್ಯರು ಎಲ್ಲೇ ಇದ್ದರೂ ಸುಲಭವಾಗಿ ಈ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗೆ ಚಿಕಿತ್ಸೆ ನೀಡಬಹುದು.

ಲಿಕ್ವಿಡ್‌ ಆಕ್ಸಿಜನ್‌ (ದ್ರವರೂಪದ ಆಮ್ಲಜನಕ) ವ್ಯವಸ್ಥೆ ಇರುತ್ತದೆ. ಇದರ ಪ್ರಮಾಣವನ್ನು 2,000 ಲೀಟರುಗಳಿಂದ 8,000 ಲೀಟರಿಗೆ ಹೆಚ್ಚಿಸಲಾಗಿದೆ. ಹವಾನಿಯಂತ್ರಿತ ವ್ಯವಸ್ಥೆ ಜತೆಗೆ, ಶುದ್ಧ ಗಾಳಿ ತುಂಬಿಸಿ ಕಂಪ್ಲೀಟ್ ಏರ್ʼಟೈಟ್ ಮಾಡಲಾಗಿರುತ್ತದೆ. ನಮ್ಮ ದೇಶದಲ್ಲೇ ಇಂತಹ ವ್ಯವಸ್ಥೆ ಇದೇ ಮೊದಲು ಎನ್ನಲಾಗಿದೆ.

ನಮ್ಮ ಸಂಶೋಧಕರು, ತಜ್ಞರ ಸೃಜನಶೀಲತೆಗೆ ಇದೊಂದು ಉತ್ತಮ ಉದಾಹರಣೆ. ಪ್ರಸಕ್ತ ಕಾಲದ ಅಗತ್ಯಕ್ಕೆ ತಕ್ಕಂತೆ ಇವುಗಳನ್ನು ಅತ್ಯಾಧುನಿಕವಾಗಿ ರೂಪಿಸಲಾಗಿದೆ. ಗುಣಮಟ್ಟಕ್ಕೆ ಹೆಚ್ಚು ಒತ್ತು ನೀಡಲಾಗಿದೆ ಹಾಗೂ ಬಳಸಲಾಗಿರುವ ಎಲ್ಲ ಉಪಕರಣಗಳು ಉತ್ತಮವಾಗಿದೆ ಎಂದು ಹೇಳುತ್ತಾರೆ ಕೆ.ಸಿ.ಜನರಲ್ ಆಸ್ಪತ್ರೆ ವೈದ್ಯರು.

ಹೈಟೆಕ್ ಮಾಡ್ಯುಲರ್ ಐಸಿಯು ಘಟಕ ಉದ್ಘಾಟನಾ ಸಮಾರಂಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ಶಾಸಕ ದಿನೇಶ್ ಗುಂಡೂರಾವ್  ಹಾಜರಿದ್ದರು.

WhatsApp Join our WhatsApp Channel
Previous Post

ನವಿಲು ಮೀಸಲು ಸಂರಕ್ಷಿತಾ ಪ್ರದೇಶವಾಗಬೇಕಿದ್ದ ಸ್ಥಳವೀಗ ಟ್ರೀಪಾರ್ಕ್

Next Post

ಭ್ರಷ್ಟಾಚಾರ ಪ್ರಕರಣದಲ್ಲಿ ಸಿಕ್ಕಿಬಿದ್ದ ದೇವೇಂದ್ರಪ್ಪ ಬಳಿಯಿತ್ತು ಬಿಬಿಎಂಪಿಯ 480 ಫೈಲ್ಸ್…!

Next Post

ಭ್ರಷ್ಟಾಚಾರ ಪ್ರಕರಣದಲ್ಲಿ ಸಿಕ್ಕಿಬಿದ್ದ ದೇವೇಂದ್ರಪ್ಪ ಬಳಿಯಿತ್ತು ಬಿಬಿಎಂಪಿಯ 480 ಫೈಲ್ಸ್...!

ಭ್ರಷ್ಟಾಚಾರ ಪ್ರಕರಣದಲ್ಲಿ ಸಿಕ್ಕಿಬಿದ್ದ ದೇವೇಂದ್ರಪ್ಪ ಸಸ್ಪೆಂಡ್ !

Please login to join discussion

Like Us on Facebook

Follow Us on Twitter

Recent News

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group