ಬೆಂಗಳೂರು : ಎರಡು ವರ್ಷಗಳ ಹಿಂದೆ ಜಮ್ಮು – ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ 42 ಸೈನಿಕರಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಅವರ ನೇತೃತ್ವದಲ್ಲಿ ನಗರದ ಮೌರ್ಯ ವೃತ್ತದಲ್ಲಿ ಪುಲ್ವಾಮ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಮೃತಪಟ್ಟ ಸೈನಿಕರಿಗೆ ಮೊಂಬತ್ತಿ ಬೆಳಗಿ ಗೌರವ ಸಲ್ಲಿಕೆ ಮಾಡಿದರು.
ಬಳಿಕ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆಯಿಂದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಚೇರಿವರೆಗೆ ಮೊಂಬತ್ತಿ ಮೆರವಣಿಗೆ ನಡೆಸಲಾಯಿತು.
ಯುವ ಕಾಂಗ್ರೆಸ್ ನ ಉಪಾಧ್ಯಕ್ಷರಾದ ಭವ್ಯ ಕೆ.ಆರ್. ಯುವ ಕಾಂಗ್ರೆಸ್ ಬ್ಲಾಕ್ ಅದ್ಯಕ್ಷರು, ಜಿಲ್ಲಾ ಅಧ್ಯಕ್ಷರು ಮತ್ತು ಕಾರ್ಯಕರ್ತರು ಮತ್ತಿತರರು ಪಾಲ್ಗೊಂಡಿದ್ದರು.
























