Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

IAS Shilpa Nag | ಮೈಸೂರು ಐಎಎಸ್ ಅಧಿಕಾರಿಗಳ ನಡುವಣ ಶೀಥಲ ಸಮರ ; ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಡೆಯಿಂದ ಬೇಸೆತ್ತು ರಾಜಿನಾಮೆ ನೀಡಿದ ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್

ಡಿಸಿ ರೋಹಿಣಿ ಸಿಂಧೂರಿ ಕಿರುಕುಳಕ್ಕೆ ರಾಜಿನಾಮೆ ನೀಡಿದ ಮೈಸೂರು ನಗರ ಪಾಲಿಕೆ ಆಯುಕ್ತೆ | ಸಿಂಧೂರಿ ನಡೆಗೆ ಈ ಹಿಂದೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಜನಪ್ರತಿನಿಧಿಗಳು | ಶಿಲ್ಪನಾಗ್ ರಾಜಿನಾಮೆ ಅಂಗೀಕರಿಸದಂತೆ ಪ್ರಧಾನಿ ಜೊತೆ ಮಾತನಾಡಿ, ಪತ್ರ ಬರೆದ ಬಿಜೆಪಿ ಮುಖಂಡ ಎಸ್.ಎ.ರಾಮದಾಸ್ |

by Bengaluru Wire Desk
June 3, 2021
in News Wire
Reading Time: 2 mins read
0

ಮೈಸೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಿರುಕುಳ ನೀಡಿದ್ದರಿಂದ ಬೇಸೆತ್ತು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ಮೈಸೂರು ‌ನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಗುರುವಾರ ತಿಳಿಸಿದ್ದಾರೆ.

ನಗರದಲ್ಲಿ ಸಂಜೆ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಶಿಲ್ಪಾನಾಗ್ ಅವರು, ಡಿಸಿ ವಿರುದ್ಧ ಹರಿಹಾಯ್ದಿದ್ದಾರಲ್ಲದೆ, ಇಂತಹ ಡಿಸಿ ಮೈಸೂರಿನಂತಹ‌ ನಗರದಲ್ಲಿ ಇರಬಾರದು ಎಂದು ಕಿಡಿಕಾರಿದ್ದಾರೆ. ಜಿಲ್ಲಾಧಿಕಾರಿಗಳ ಈ ರೀತಿಯ ನಡೆಯಿಂದಾಗಿ ಮೈಸೂರಿನ ಮಾನ ಮರ್ಯಾದೆ ಬೀದಿಗೆ ಬಂದು ನಿಂತಿದೆ ಎಂದು ಟೀಕಿಸಿದರು.

ತಮ್ಮ ಮಾತಿನುದ್ದಕ್ಕೂ ಡಿಸಿ ನಡೆಯನ್ನು ಬೇಸರದಿಂದಲೇ ನುಡಿದರಲ್ಲದೆ, ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದರು. ಮಾತ್ರವಲ್ಲ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದರು.

ಐಎಎಸ್ ಅಧಿಕಾರಿ ಶಿಲ್ಪಾನಾಗ್

ಜಿಲ್ಲಾಡಳಿತದಿಂದ‌ ನಮಗೆ ಯಾವುದೇ ಸಹಕಾರ ದೊರೆತಿಲ್ಲ. ಸಿಎಸ್‌ಆರ್ ಫಂಡ್‌ನಿಂದ ನಾವು ಕೆಲಸ ಮಾಡುತ್ತಿದ್ದೇವೆ. ಎಲ್ಲರಿಗೂ ಒಂದು ಸಹನೆ ಇರುತ್ತೆ, ಸಹನೆ ಒಡೆದಾಗ ಏನು ಮಾಡಬೇಕು. ಒಬ್ಬರು ಐಎಎಸ್ ಅಧಿಕಾರಿಯಾಗಿ ಮತ್ತೊಬ್ಬ ಅಧಿಕಾರಿ ಮೇಲೆ ದಬ್ಬಾಳಿಕೆ ಮಾಡೋದು ಎಷ್ಟು ಸರಿ ?
ನನ್ನನ್ನು ತುಳಿಯುವ ವ್ಯವಸ್ಥಿತ ಪಿತೂರಿ ನಡೆದಿದೆ.

ಅವರ ಪ್ರತಿಷ್ಠೆಯಿಂದಾಗಿ ನಾವು ಮಾಡುವ ಕೆಲಸಕ್ಕೆ ಮನ್ನಣೆ ಸಿಗುತ್ತಿಲ್ಲ. ಪ್ರಾಥಮಿಕ ಹಂತದಿಂದಲೂ ಕೆಲಸ ನಿರ್ವಹಿಸುತ್ತಿದ್ದೇವೆ. ಆದರೂ, ಸಿಟಿಯಲ್ಲಿ ಯಾವುದೇ ಕೆಲಸ ಆಗುತ್ತಿಲ್ಲ, ಟೆಸ್ಟ್ ಸರಿಯಾಗಿ ನಡೆಯುತ್ತಿಲ್ಲ ಎಂಬ ಮಾತುಗಳು ಬರುತ್ತಿವೆ.

ಮೊನ್ನೆ ಒಂದು ದುಃಖದ ಸಂಗತಿ ಯಾಯಿತು.
3000 ಮೆಡಿಷನ್ ಕಿಟ್ ನ್ನು ಒಂದು ಸಂಸ್ಥೆ ನೀಡಿತು.
ಪಾಲಿಕೆ ಕಚೇರಿಯ ಬೀಗ ತೆಗೆದು ಪೊಲೀಸರನ್ನ ಕಳುಹಿಸಿ ಜಿಲ್ಲಾಡಳಿತ ಔಷಧಿ ತೆಗೆದುಕೊಳ್ಳಲಾಯಿತು.
ಒಬ್ಬ ಐಎಎಸ್ ಅಧಿಕಾರಿಯಿಂದ ಮತ್ತೊಬ್ಬ ಐಎಎಸ್ ಅಧಿಕಾರಿಗಳ ಮೇಲೆ ಈ ನಡೆ ಸರಿಯಿಲ್ಲ ಎಂದು ದೂರಿದರು.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ

ಜಿಲ್ಲಾಡಳಿತದ ಕೆಲವು ನಿರ್ಣಯ ಸಹಿಸಿಕೊಂಡು ಸಾಕಾಗಿದೆ. ನಮಗೆ ಯಾವುದೇ ಅನುಧಾನ ನೀಡಿಲ್ಲ, ಸಿ.ಎಸ್.ಆರ್ ನಿಧಿಯಿಂದ ಎಲ್ಲ ಕೆಲಸ ಮಾಡುತ್ತಿದ್ದೇವೆ. ಸಿ.ಎಸ್.ಆರ್ ನ ವಾಟ್ಸಾಪ್ ಗ್ರೂಪ್ ನಿಂದ ನನ್ನನ್ನು ತೆಗೆಯುವ ಕೆಲಸ ಆಗಿದೆ. ನಾನೂ ಸಹ ಸಾಕಷ್ಟು ಐಎಎಸ್ ಅಧಿಕಾರಿಗಳ ಜೊತೆ ಕೆಲಸ ಮಾಡಿದ್ದೇನೆ. ಆದರೆ ಈ ರೀತಿ ಎಂದೂ ಆಗಿಲ್ಲ.

ಪ್ರತಿ ದಿನ ಈ ಅವಮಾನ ಸಾಕಾಗಿದೆ. ಒಬ್ಬ ಅಧಿಕಾರಿಯಾಗಿ ಕೆಲಸ ಮಾಡಲು ಸಾಕಾಗಿದೆ. ಒಬ್ಬರ ದುರಾಹಂಕಾರದಿಂದ ಇಡೀ ನಗರವನ್ನು ಸುಡುವ ಕೆಲಸವಾಗುತ್ತಿದೆ. ಮೈಸೂರು ನಗರದಲ್ಲಿ ಜನರು, ಅಧಿಕಾರಿಗಳು ನಮಗೆ ಸಹಕಾರ ನೀಡುತ್ತಿದ್ದಾರೆ ಆದರೂ, ಜಿಲ್ಲಾಡಳಿತ ಸರಿಯಾದ ರೀತಿಯಲ್ಲಿ ನಡೆದುಕೊಳ್ಳುತ್ತಿಲ್ಲ.

ಮಾಧ್ಯಮಗಳಲ್ಲಿ ಪಾಲಿಕೆ ಚೆನ್ನಾಗಿ ಕೆಲಸ ಮಾಡುತ್ತಿದೆ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ನನ್ನನ್ನು ಟಾರ್ಗೆಟ್ ಮಾಡಲಾಗಿದೆ. ನನಗೆ ಕೆಲಸ ಮಾಡುವ ಆಸಕ್ತಿಯೇ ಇಲ್ಲದಂತಾಗಿದೆ. ನಗರ ಪ್ರದೇಶಕ್ಕೆ ಒಂದು ಮಾನದಂಡ, ಗ್ರಾಮೀಣ ಪ್ರದೇಶಕ್ಕೆ ಒಂದು ಮಾನದಂಡ ಮಾಡಲಾಗಿದೆ. ಸೂಕ್ತವಾಗಿ ಕರೊನಾ ನಿರ್ವಹಣೆ ಮಾಡಿದರೂ, ಪಾಲಿಕೆ ಕೆಲಸ ಮಾಡುತ್ತಿಲ್ಲ ಎಂದು ಬಿಂಬಿಸಲಾಗುತ್ತಿದೆ.

ಸುಮ್ಮನೆ ಟಾರ್ಗೆಟ್ ಮಾಡಿದ ಪರಿಣಾಮ ನಮ್ಮ ಪಾಲಿಕೆ ಅಧಿಕಾರಿಗಳಿಗೆ ಟೀಕೆ ಉತ್ತರಗಳು ಬಂದಿದೆ.
ನಾನು 2016 ಬ್ಯಾಚ್, ಅವರು 2009ರ ಬ್ಯಾಚಿನವರು. ಅವರಿಗೆ ಯಾವತ್ತೂ ಮರ್ಯಾದೆ ಇಲ್ಲದೆ ನಡೆದುಕೊಂಡಿಲ್ಲ. ನಾನು ರಾಜೀನಾಮೆ ನೀಡಿ ನನ್ನ ಕೆಲಸ ನಾನು ನೋಡಿಕೊಳ್ಳುತ್ತೇನೆ.

ಮೈಸೂರು ಜನತೆಗೆ ಮುಂದಾದರೂ ಒಳ್ಳೆಯದಾಗಲಿ.
ಮುಂದೆ 3ನೇ ಅಲೆ ಇದೆ, ಮಕ್ಕಳ ಮೇಲೆ ಪರಿಣಾಮ ಬೀರಲಿದೆ.

ನಮ್ಮ ಅಧಿಕಾರಿಗಳಿಗೆ ಅವಮಾನವಾದರೆ ಅದನ್ನು ನಾನು ಸಹಿಸೋದಿಲ್ಲ. ಕೆಲವರನ್ನು ಹೋಗು , ಬಾ ಅಂತ ಮಾತನಾಡಿಸೋದು, ನಾನೇ ಜಿಲ್ಲಾಧಿಕಾರಿ, ನಾನೇ ಸುಪ್ರೀಂ ಅಂತ ಹೇಳೋದು ನಾಯಕತ್ವದ ಗುಣ ಅಲ್ಲ. ನಾನು ರಾಜೀನಾಮೆ ನೀಡಿದರೆ ಆಗಲಾದರೂ ನಮ್ಮ ಮೈಸೂರಿಗೆ ಒಳ್ಳೆಯದಾಗಲಿ. ನನ್ನಿಂದ ಮೈಸೂರು ಜನತೆಗೆ ತೊಂದರೆ ಆಗೋದು ಬೇಡ.

ಇನ್ನೂ ನಾನಾ ವಿಚಾರಗಳಿಂದಾದ ಬೇಸರದಿಂದ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದೇನೆ. ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದೇನೆ. ಯಾವುದೇ ಅಧಿಕಾರಿಗೂ ಈ ರೀತಿಯ ಜಿಲ್ಲಾಧಿಕಾರಿ ಸಿಗದಿರಲಿ ಎಂದು ಪತ್ರ ಉಲ್ಲೇಖಿಸಿದ್ದೇನೆ ಎಂದು ಹೇಳಿದ್ದಾರೆ.

ಮಾನಸಿಕ ಕಿರುಕುಳ ನೀಡಿಲ್ಲವೆಂದು ಡಿಸಿ ಸಿಂಧೂರಿ ಸ್ಪಷ್ಟನೆ

ಇನ್ನೊಂದೆಡೆ ಐಎಎಸ್ ಅಧಿಕಾರಿ ಶಿಲ್ಪಾನಾಗ್ ಗೆ ತಾವು ಯಾವುದೇ ರೀತಿ ಕಿರುಕುಳ ನೀಡಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸ್ಪಷ್ಟಪಡಿಸಿದ್ದಾರೆ. ಶಿಲ್ಪ ನಾಗ್ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಎಲ್ಲೂ ಆ ರೀತಿ ಹೇಳಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಲ್ಲದೆ ಶಿಲ್ಪಾ ನಾಗ್ ಮಾಡಿರುವ ಆರೋಪಗಳಿಗೆ ಪ್ರತಿಯಾಗಿ, ಮೈಸೂರು ನಗರದಲ್ಲಿ ಕೋವಿಡ್ ವಿಷಯದಲ್ಲಿ ನಗರ ಪಾಲಿಕೆ ಆಯುಕ್ತೆಯಾಗಿ ಸೂಕ್ತ ರೀತಿ ಕೆಲಸ ಮಾಡಿಲ್ಲ‌ ಎಂದು ರೋಹಿಣಿ ಹೇಳಿದ್ದಾರೆ.

ಸಿಎಸ್ ಆರ್ ನಿಧಿಯನ್ನು ಮೈಸೂರು ಜಿಲ್ಲೆ ತಾಲೂಕು, ಗ್ರಾಮೀಣ ಪ್ರದೇಶದಲ್ಲಿ ಬಳಸದೆ ಸಂಪೂರ್ಣವಾಗಿ ಮೈಸೂರು ನಗರಕ್ಕೆ ಬಳಸಿದ್ದು ತಪ್ಪು. ಆ ಬಗ್ಗೆ ಲೆಕ್ಕ ಕೇಳಿದರೆ ಈ ತನಕ ಶಿಲ್ಪ ನಾಗ್ ಕೊಟ್ಟಿಲ್ಲ ಎಂದು ಡಿಸಿ ರೋಹಿಣಿ ಕೌಂಟರ್ ಕೊಟ್ಟಿದ್ದಾರೆ.

ಇತ್ತೀಚೆಗೆ ಮೈಸೂರು ಜನಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆಡಳಿತ ವೈಖರಿ ಹಾಗೂ ನಡೆಯ ಬಗ್ಗೆ ಮುಖಂಡರು ಸಾಕಷ್ಟು ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ತೀವ್ರ ತರಾಟೆ ತೆಗೆದುಕೊಂಡಿದ್ದರು ಎನ್ನಲಾಗಿದೆ.

ಬಿಜೆಪಿ ಎಸ್.ಎ.ರಾಮದಾಸ್ ರಿಂದ ಶಿಲ್ಪಾನಾಗ್ ಪರ ಟ್ವೀಟ್

ಬಿಜೆಪಿ ಹಿರಿಯ ಮುಖಂಡ ಹಾಗೂ ಶಾಸಕ ಎಸ್.ಎ.ರಾಮದಾಸ್, ಶಿಲ್ಪನಾಗ್ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಇವರ ರಾಜೀನಾಮೆ ಪಡೆಯದಂತೆ ಪ್ರಧಾನಮಂತ್ರಿ ಜೊತೆ ಮಾತನಾಡಿದ್ದಾಗಿ ಹೇಳಿದ್ದಾರೆ. ಕೆಲವು ವಿಷಯಗಳಲ್ಲಿ ಬೇಸೆತ್ತು ರಾಜಿನಾಮೆ ನೀಡಿದ್ದಾರೆ. ಇಂತಹ ಅಧಿಕಾರಿ ಅವಶ್ಯಕತೆಯಿದೆ ಎಂದು ತಮ್ಮ ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಗೆ ಈ ಕುರಿತು ಬರೆದ ಪತ್ರವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ

I Wrote and sent a letter to Hon. PM @narendramodi ji to not accept the resignation of MCC Commissioner Smt.Shilpa Nag and Copy of the letter sent to Hon.@BSYBJP and Hon. CS,, Karnataka Govt. pic.twitter.com/ZgFZTNNetU

— S A Ramadass ( Modi ka Parivar ) (@ramadassmysuru) June 3, 2021
WhatsApp Join our WhatsApp Channel
Previous Post

PROPERTY TAX | ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡ ಮಾಲೀಕರಿಗೆ ನೋಟಿಸ್ ನೀಡುವಲ್ಲೂ ಎಡವಿದ ಬಿಬಿಎಂಪಿ ; ನಾಲ್ಕು ವರ್ಷದಿಂದ ರೆವಿನ್ಯೂ ಸಿಬ್ಬಂದಿ ಮಾಡಿದ್ದೇನು?

Next Post

Don’t Blame Bengaluru | “ಡೋಂಟ್ ಬ್ಲೇಮ್ ಬೆಂಗಳೂರು” – ಆಡಿಯೋ ನಾಳೆ ಬಿಡುಗಡೆ

Next Post

Don't Blame Bengaluru | "ಡೋಂಟ್ ಬ್ಲೇಮ್ ಬೆಂಗಳೂರು" - ಆಡಿಯೋ ನಾಳೆ ಬಿಡುಗಡೆ

ಸ್ಮಶಾನದಲ್ಲಿ ಶವ ಸುಡುವ ಸಿಬ್ಬಂದಿ ಜೊತೆ ಉಪಹಾರ ಸೇವಿಸಿದ ಬೆಂಗಳೂರು ನಗರ ಜಿಲ್ಲಾಧಿಕಾರಿ...!

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group