Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಕೋವಿಡ್-19 ಮೂರನೇ ಅಲೆ ಹಿನ್ನೆಲೆ : ಗಡಿ ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲು ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

ಮಕ್ಕಳಿಗಾಗಿ ಜಿಲ್ಲಾಸ್ಪತ್ರೆಗಳಲ್ಲಿ ಹೆಚ್ಚಿನ ಐಸಿಯು ಬೆಡ್ ಮೀಸಲಿಗೆ ಸಿಎಂ ಫರ್ಮಾನು | ಮಹಾರಾಷ್ಟ್ರ ಮತ್ತು ಕೇರಳ ಭಾಗಗಳಿಂದ ಬರುವವರ ಮೇಲೆ ತೀವ್ರ ನಿಗಾ | ಬ್ಲಾಕ್ ಫಂಗಸ್ ಔಷಧ ವೆಚ್ಚ ಸರ್ಕಾರದಿಂದ ಭರಿಸಲು ಕ್ರಮ | ಶನಿವಾರ ಬೆಳಗ್ಗೆ ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಿಗೆ ಬಾಗಿನ ಅರ್ಪಿಸಿದ ಸಿಎಂ |

by Bengaluru Wire Desk
August 21, 2021
in News Wire
Reading Time: 1 min read
0

ವಿಜಯಪುರ, (www.bengaluruwire.com): ಕೋವಿಡ್ 19 ಮೂರನೇ ಅಲೆಯ ಅಪಾಯದ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ವಿಶೇಷ ಗಮನ ನೀಡಬೇಕು. ಮಕ್ಕಳಿಗಾಗಿ ಜಿಲ್ಲಾ ಆಸ್ಪತ್ರೆ ಗಳಲ್ಲಿ ಹೆಚ್ಚಿನ ಐಸಿಯು ಬೆಡ್ ಗಳನ್ನು ಮೀಸಲಿಡಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದ್ದಾರೆ.

ಆಲಮಟ್ಟಿ ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಶನಿವಾರ, ವಿಜಯಪುರ ಬಾಗಲಕೋಟೆ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡುತ್ತಾ, ಕೋವಿಡ್-19 ಮೂರನೇ ಅಲೆಯ ಬಗ್ಗೆ ತಜ್ಞರು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕು ಎಂದರು.

ಮಕ್ಕಳ ಬೆಳವಣಿಗೆ ಸೇರಿದಂತೆ ಅಪೌಷ್ಟಿಕತೆ ನಿವಾರಣೆಗೆ ಗಮನ ಇಟ್ಟು ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಗರಗಳ ವಾರ್ಡ್ ವ್ಯಾಪ್ತಿಯಲ್ಲಿ ಮಕ್ಕಳ ಚಿಕಿತ್ಸಾ ಶಿಬಿರಗಳನ್ನು ಏರ್ಪಡಿಸಬೇಕು. ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಸಹಯೋಗದೊಂದಿಗೆ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಹಾಗೂ ಅಪೌಷ್ಟಿಕತೆ ಕೊರತೆ ನೀಗಿಸಲು ಗಮನ ನೀಡಲು ಸೂಚಿಸಿದರು.

ಮಹಾರಾಷ್ಟ್ರ ಮತ್ತು ಕೇರಳ ಭಾಗಗಳಿಂದ ಬರುವವರ ಮೇಲೆ ತೀವ್ರ ನಿಗಾ ಇಡಲು ಚಕ್ ಪೋಸ್ಟ್ ಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಿಗೆ ಕೋವಿಡ್ 19 ಲಸಿಕೆಗಳ ಸರಬರಾಜು ಹೆಚ್ಚಿಸಲು ಪ್ರಯತ್ನಿಸಲಾಗುವುದು. ವಿಶೇಷವಾಗಿ ಈ ಎರಡೂ ಜಿಲ್ಲೆಗಳಿಗೆ ಮುಂದಿನ ದಿನಗಳಲ್ಲಿ ಪ್ರತಿ ದಿನಕ್ಕೆ ತಲಾ 25,000 ಸಾವಿರ ಲಸಿಕೆಗಳ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದೆಂದು ಹೇಳಿದರು.

ಬ್ಲಾಕ್ ಫಂಗಸ್ ಔಷಧ ವೆಚ್ಚ ಸರ್ಕಾರದಿಂದ ಭರಿಸಲು ಕ್ರಮ :

ಬ್ಲಾಕ್ ಫಂಗಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ರೋಗಿಗಳ ಚಿಕಿತ್ಸೆ ವೆಚ್ಚ ಹೆಚ್ಚಿನ ರೀತಿಯಲ್ಲಿ ಆಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಪಡೆಯುವ ರೋಗಿಗಳ ಚಿಕಿತ್ಸೆ ಔಷಧಿ ವೆಚ್ಚ ಸರ್ಕಾರದಿಂದ ಭರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಕೋವಿಡ್ 19 ಮೊದಲ ಹಾಗೂ 2ನೇ ಅಲೆಯಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸವಾಲನ್ನು ಎದುರಿಸಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ್ದಾರೆ. ಇದಕ್ಕಾಗಿ ಮೆಚ್ಚುಗೆ ವ್ಯಕ್ತಪಡಿಸಿದ ಅವರು 3ನೇ ಅಲೆ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಗಳೊಂದಿಗೆ ಸಜ್ಜುಗೊಳ್ಳುವಂತೆ ಅವರು ಸೂಚನೆ ನೀಡಿದರು.

ಮಧ್ಯಮ ಹಾಗೂ ಬೃಹತ್ ಉದ್ಯಮಿದಾರರು ತಮ್ಮ ಸಿಬ್ಬಂದಿಗಳಿಗೆ ಅವರೇ ಪ್ರಥಮ ಹಾಗೂ 2ನೇ ಲಸಿಕೆ ಕೊಡುವ ವ್ಯವಸ್ಥೆ ಮಾಡಬೇಕು. ವಿಜಯಪುರದ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಉನ್ನತೀಕರಣಕ್ಕಾಗಿ 22 ಕೋಟಿ ರೂ. ಅನುಮೋದನೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಸಂದರ್ಭ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ, ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ ಸೇರಿದಂತೆ ವಿಜಯಪುರ ಬಾಗಲಕೋಟೆ ಜಿಲ್ಲೆಗಳ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಪುನರ್ವಸತಿ ಹಾಗೂ ಪುನರ್ನಿರ್ಮಾಣಕ್ಕೆ ಆದ್ಯತೆ :

ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಯಿಂದ ಮುಳುಗಡೆಯಾದ ಗ್ರಾಮಗಳ ಪುನರ್ವಸತಿ ಹಾಗೂ ಪುನರ್ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಆಲಮಟ್ಟಿ ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸುವ ಮುನ್ನ ಬೆಳಗ್ಗೆ ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಿಗೆ ಬಾಗಿನ ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಪುನರ್ವಸತಿ ಮತ್ತು ಪುನರ್ ನಿರ್ಮಾಣಕ್ಕಾಗಿ ಈ ಹಿಂದೆ 100 ಕೋಟಿ ರೂ.ಗಳ ಅನುದಾನವನ್ನು ನೀಡಲಾಗಿತ್ತು. ಇತ್ತೀಚೆಗೆ 197 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಇನ್ನೂ 100 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು ಎಂದರು.

WhatsApp Join our WhatsApp Channel
Previous Post

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ದಿಟ್ಟ ನಿರ್ಧಾರ : ಸಚಿವಾಲಯದ ಆಡಳಿತಕ್ಕೆ ಮೇಜರ್ ಸರ್ಜರಿ

Next Post

ಪೀಣ್ಯ ಕೈಗಾರಿಕಾ‌ ಪ್ರದೇಶದಲ್ಲಿ ಆದ್ಯತೆ ಮೇಲೆ ಮೂಲಭೂತ ಸೌಕರ್ಯ ಕಲ್ಪಿಸಿ : ಬಿಬಿಎಂಪಿ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ಗೌರವ್ ಗುಪ್ತ ಸೂಚನೆ

Next Post

ಪೀಣ್ಯ ಕೈಗಾರಿಕಾ‌ ಪ್ರದೇಶದಲ್ಲಿ ಆದ್ಯತೆ ಮೇಲೆ ಮೂಲಭೂತ ಸೌಕರ್ಯ ಕಲ್ಪಿಸಿ : ಬಿಬಿಎಂಪಿ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ಗೌರವ್ ಗುಪ್ತ ಸೂಚನೆ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BW INVESTIGATION | MAYOR FUND MISUSE –PART 2 | ಮೇಯರ್ ಫಂಡ್ 5% ರಿಂದ 10% “ಕಿಕ್ ಬ್ಯಾಕ್ ” ಪಡೆದು ಜಾಬ್ ಕೋಡ್ ನೀಡಲಾಗಿತ್ತಾ ?!!

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group