ಬೆಂಗಳೂರು, (www.bengaluruwire.com) : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಜಿ.ಕೆ.ಡಬ್ಲ್ಯೂ. ಬಡಾವಣೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಿರ್ಮಿಸಿದ ಸಂಗೊಳ್ಳಿ ರಾಯಣ್ಣ ಪುತ್ಥಳಿ ಹಾಗೂ ಡಯಾಲಿಸಿಸ್ ಸೆಂಟರ್ ಸೇರಿದಂತೆ 89.50 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.
ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ ಡಾ|| ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣ ನವೀಕರಣ ಕಾಮಗಾರಿಗೆ (22 ಕೋಟಿ ರೂ. ವೆಚ್ಚದ ಕಾರ್ಯಕ್ರಮ), ಪಂತರಪಾಳ್ಯದಲ್ಲಿ 150 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ (18 ಕೋಟಿ ರೂ.), ನಾಯಂಡಹಳ್ಳಿಯ ವಾರ್ಡ್ ಕಛೇರಿ, ಪಂತರಪಾಳ್ಯದಲ್ಲಿ ಶಾಲಾ ಕಟ್ಟಡ (3 ಕೋಟಿ ರೂ.), ನಾಗರಭಾವಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ (2 ಕೋಟಿ ರೂ. ವೆಚ್ಚದ) ಹಾಗೂ ಆರ್.ಕೆ. ಉರ್ದು ಶಾಲೆ (1.50 ಕೋಟಿ ರೂ. ವೆಚ್ಚದ ಕಾಮಗಾರಿಗೆ) ಶಿಲಾನ್ಯಾಸ ಕಾರ್ಯಕ್ರಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉದ್ಯಾನವನ ಹಾಗೂ ಸ್ಕೇಟಿಂಗ್ ಟ್ರಾಕ್ಸ್ ಮತ್ತಿತರ ಕಾಮಗಾರಿಗಳ ಉದ್ಘಾಟನೆ ಕಾರ್ಯವನ್ನು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ, ಸಚಿವರಾದ ಆರ್.ಅಶೋಕ್, ವಿ.ಸೋಮಣ್ಣ, ಗೋಪಾಲಯ್ಯ, ಭೈರತಿ ಬಸವರಾಜ್, ಡಾ.ಕೆ.ಸುಧಾಕರ್, ವಿವಿಧ ಮಠಗಳ ಮಠಾಧೀಶರು, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.