Wednesday, August 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಎತ್ತಿನಗಾಡಿ ಆಯ್ತು, ಸೈಕಲ್ ಜಾಥಾ ಮುಗೀತು ಈಗ ಕುದುರೆ ಟಾಂಗ ಏರಿದ ಕಾಂಗ್ರೆಸ್ ಮುಖಂಡರು

ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದ ತನಕ ಟಾಂಗಾ ಜಾಥಾ ನಡೆಸಿದರು.

by Bengaluru Wire Desk
September 24, 2021
in News Wire
Reading Time: 1 min read
0

ಬೆಂಗಳೂರು, (www.bengaluruwire.com) :
ಬೆಲೆ ಏರಿಕೆಯಿಂದ ಜನ ತತ್ತರಿಸುತ್ತಿದ್ದರೂ ಅದಕ್ಕೆ ಸ್ಪಂದಿಸದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ಟಾಂಗಾ ಜಾಥಾ ನಡೆಸುವ ಮೂಲಕ ಶುಕ್ರವಾರ ಛಾಟಿ ಬೀಸಿದರು. ಆ ಮೂಲಕ ಬೆಲೆ ಏರಿಕೆ ವಿರುದ್ಧ ರಾಜ್ಯ ಕಾಂಗ್ರೆಸ್ ಸತತವಾಗಿ ಮೂರನೇ ಬಾರಿಗೆ ಪ್ರತಿಭಟನೆ ಜಾಥಾ ನಡೆಸಿದಂತಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ನೇತೃತ್ವದಲ್ಲಿ ಕೆಲವು ದಿನಗಳ ಹಿಂದೆ ಎತ್ತಿನ ಗಾಡಿ, ಸೈಕಲ್ ಜಾಥಾ ನಡೆಸಿದ್ದ ಕಾಂಗ್ರೆಸ್ ಶುಕ್ರವಾರ ಬೆಳಗ್ಗೆ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಟಾಂಗಾ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ತನ್ನ ಜನವಿರೋಧಿ ನೀತಿ ಮೂಲಕ ಜನರ ಬದುಕು ದುಸ್ಥಿತಿಗೆ ನೂಕುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಮುಖಂಡರು ಘೋಷಣೆ ಕೂಗಿದರು. ಸರಕಾರ ಎಷ್ಟೇ ಭಂಡತನ ಪ್ರದರ್ಶಿಸಿದರೂ ಕಾಂಗ್ರೆಸ್ ತನ್ನ ಜನಪರ ಹೋರಾಟ ಮುಂದುವರೆಸುತ್ತದೆ ಎಂಬ ಸಂದೇಶ ರವಾನಿಸಿದರು.

ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ಬೆಲೆ ಏರಿಕೆ ಮಾಡುವ ಮೂಲಕ ಬಿಜೆಪಿ ಸರ್ಕಾರಗಳು ಜನರನ್ನು ಪಿಕ್ ಪಾಕೆಟ್ ಮಾಡುತ್ತಿವೆ. ಇದು ದಪ್ಪ ಚರ್ಮದ ಸರ್ಕಾರ. ಅವರಿಗೆ ಜನರ ನೋವು, ಭಾವನೆ ಅರ್ಥವಾಗುತ್ತಿಲ್ಲ. ಈ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಯಾವುದೂ ಇಲ್ಲ. ಹೀಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಹೋರಾಟವಲ್ಲ. ಇದು ಜನರ ಹೋರಾಟ, ಎಲ್ಲ ವರ್ಗದ ಜನರ ನೋವಿನ ಪ್ರತಿಧ್ವನಿ. ಇದನ್ನು ಮುಂದುವರೆಸಿಕೊಂಡು ಹೋಗುತ್ತೇವೆ ಎಂದರು.

“ಅಕ್ಟೋಬರ್ ತಿಂಗಳಲ್ಲಿ ಪ್ರತಿ ಪಂಚಾಯ್ತಿ ಹಾಗೂ ವಾರ್ಡ್ ನಲ್ಲೂ ನಮ್ಮ ಕಾರ್ಯಕರ್ತರು ಬೆಲೆ ಏರಿಕೆ ವಿಚಾರದಲ್ಲಿ ಜನರ ಧ್ವನಿಯಾಗಲು ಕಾರ್ಯಕ್ರಮ ರೂಪಿಸಿದ್ದಾರೆ. ಮಾನ ಮರ್ಯಾದೆ ಇಲ್ಲದ ಈ ಸರ್ಕಾರ ಜನರೇ ತೆಗೆಯಬೇಕು. ರಾಜ್ಯದಲ್ಲಿ ಕೋವಿಡ್ ನಿಂದ ಲಕ್ಷಾಂತರ ಮಂದಿ ಸತ್ತಿರುವುದನ್ನು ನೋಡಿದ್ದೇವೆ. ಯಾರಿಗೂ ಈ ಸರ್ಕಾರ ಸಹಾಯ ಮಾಡಿಲ್ಲ. 20 ಲಕ್ಷ ಕೋಟಿ ರುಪಾಯಿ ಪ್ಯಾಕೇಜ್ ಘೋಷಿಸಿದರೂ ಒಬ್ಬರಿಗೂ ಸಹಾಯವಾಗಿಲ್ಲ.” ಎಂದು ಡಿ.ಕೆ.ಶಿವಕುಮಾರ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

“ಚಾಲಕರು, ಸವಿತಾ ಸಮಾಜದವರು ಸಾಂಪ್ರದಾಯಿಕ ವೃತ್ತಿ ಅವಲಂಬಿಸಿರುವವರು, ರೈತರು ಸೇರಿದಂತೆ ಯಾರಿಗೂ ಸಹಾಯ ಮಾಡಿಲ್ಲ. ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಅವರಿಗೆ ಕೆಲಸ ಸಿಗುವಂತೆ ಮಾಡಬೇಕು. ಸರಕಾರ ತೆರಿಗೆ ಹಾಕಿ ಜನರನ್ನು ಹಿಂಡುತ್ತಿದ್ದು, ಅವರ ರಕ್ಷಣೆಗೆ ಹೋರಾಟ ಮಾಡುತ್ತೇವೆ. ಜನ ಈ ಸರ್ಕಾರವನ್ನು ಕಿತ್ತೊಗೆಯುವವರೆಗೂ ನಾವು ಈ ಹೋರಾಟ ನಿಲ್ಲಿಸುವುದಿಲ್ಲ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ದಿನೇ ದಿನೇ ಇಂಧನ ಹಾಗೂ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರುತ್ತಿರುವುದರ ವಿರುದ್ಧ ಕಾಂಗ್ರೆಸ್ ಪಕ್ಷ ನಿರಂತರವಾಗಿ ಸಮರ ಸಾರುತ್ತಲೇ ಬಂದಿದೆ. ಈ ಹಿಂದೆ ಸೈಕಲ್ ಜಾಥಾ ನಡೆಸಿ, ನಂತರ ರಾಜ್ಯಾದ್ಯಂತ 5,000 ಪೆಟ್ರೋಲ್ ಬಂಕ್ ಗಳ ಮುಂದೆ ಐದು ದಿನಗಳ ಕಾಲ ‘100 ನಾಟೌಟ್’ ಪ್ರತಿಭಟನೆ ಮಾಡಿತ್ತು. ಈ ಬಾರಿ ಮುಂಗಾರು ಅಧಿವೇಶನ ಆರಂಭವಾದ ನಂತರ 10 ದಿನಗಳ ಅಂತರದಲ್ಲಿ ಸೈಕಲ್ ಜಾಥಾ, ಎತ್ತಿನಗಾಡಿ ಯಾತ್ರೆ ಮಾಡಿದ್ದ ಕಾಂಗ್ರೆಸ್ ನಾಯಕರು ಈಗ ಟಾಂಗಾ ಜಾಥಾ ಮೂಲಕ ಪ್ರತಿಭಟನೆ ಮಾಡಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ, ಸಲೀಂ ಅಹ್ಮದ್, ಮಾಜಿ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಮತ್ತಿತರ ನಾಯಕರು ಜಾಥಾದಲ್ಲಿ ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

BBMP TREE BRANCH MISHAP | ಮರದಕೊಂಬೆ ಬಿದ್ದು ಸಾವನ್ನಪ್ಪಿದ ಕುಟುಂಬಕ್ಕೆ 1 ವರ್ಷವಾದರೂ ಪರಿಹಾರ ನೀಡದ ಬಿಬಿಎಂಪಿ

Next Post

BHARATH BANDH : ಭಾರತ್ ಬಂದ್ ಯಶಸ್ವಿಗೆ ರೈತ ಸಂಘಟನೆಗಳು ಸಿದ್ಧ

Next Post

BHARATH BANDH : ಭಾರತ್ ಬಂದ್ ಯಶಸ್ವಿಗೆ ರೈತ ಸಂಘಟನೆಗಳು ಸಿದ್ಧ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BBMP Officers Transfer | ಬಿಬಿಎಂಪಿಯಲ್ಲಿ ಅಧಿಕಾರಿಗಳ ಭರಪೂರ ಎತ್ತಂಗಡಿ....!!?

Please login to join discussion

Like Us on Facebook

Follow Us on Twitter

Recent News

ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group