Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP Missed the Deadline | Pothole Bangalore | ಮಾತಿಗೆ ತಪ್ಪಿದ ಬಿಬಿಎಂಪಿ ; ಮುಂದಿನ 20 ರಿಂದ 30 ದಿನಗಳಲ್ಲಿ ನಗರದ ರಸ್ತೆಗಳು ಗುಂಡಿ ಮುಕ್ತವಾಗಲಿದೆಯಂತೆ…! – ಮತ್ತೆ ಹೊಸ ಡೆಡ್ ಲೈನ್

by Bengaluru Wire Desk
September 30, 2021
in Bengaluru Focus
Reading Time: 2 mins read
0

ಬೆಂಗಳೂರು, (www.bengaluruwire.com) : ರಾಜಧಾನಿ ಬೆಂಗಳೂರಿನ ಗುಂಡಿಮಯ ರಸ್ತೆ ಮುಚ್ಚಲು ಖುದ್ದು ಕಂದಾಯ ಸಚಿವ ಆರ್.ಅಶೋಕ್ ಸೆ.30 ರ ತನಕ ನೀಡಿದ್ದ ಗಡುವು ಮುಗಿದರೂ ನಗರದಲ್ಲಿನ ರಸ್ತೆಗುಂಡಿಗೆ ಡಾಂಬರ್ ಹಾಕಿ ಸರಿಪಡಿಸುವ ಕಾರ್ಯ ಪೂರ್ಣಗೊಂಡಿಲ್ಲ. ಆ ಮೂಲಕ ಅಧಿಕಾರಿಗಳು ಮಾತಿಗೆ ತಪ್ಪಿದ್ದಾರೆ.

ಅಧಿಕಾರಿಗಳು ಮಾಡಿದ ತಪ್ಪನ್ನು ಸರಿಪಡಿಸುವ ಭರದಲ್ಲಿ ಕಂದಾಯ ಸಚಿವ ಆರ್.ಅಶೋಕ್ ವಿಕಾಸಸೌಧದಲ್ಲಿ ಗುರುವಾರ ಬಿಬಿಎಂಪಿ ಅಧಿಕಾರಿಗಳ ಸಭೆ ನಡೆಸಿ ರಸ್ತೆಗುಂಡಿ ಮುಚ್ಚಲು ನೀಡಿದ ಗಡುವು ವಿಸ್ತರಿಸಿದ್ದಾರೆ. ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಎಂಜಿನಿಯರ್ ಹಾಗೂ ಇತರೆ ಪಾಲಿಕೆ ವಲಯದ ಅಧಿಕಾರಿಗಳು ನಿಗಧಿತ ಅವಧಿಯಲ್ಲಿ ಗುಂಡು ಮುಚ್ಚಲು ಸಾಧ್ಯವಾಗದಿರುವುದಕ್ಕೆ ಸತತ ಮಳೆ ಸುರಿದ ಕಾರಣ ನೀಡಿ ಸುಮ್ಮನಾಗಿದ್ದಾರೆ.

ಹೀಗಾಗಿ ಅಕ್ಟೋಬರ್ 10ರೊಳಗೆ ಪ್ರಮುಖ ರಸ್ತೆಗಳು ಹಾಗೂ ಅಕ್ಟೋಬರ್ 20 ರಿಂದ 25 ರೊಳಗಾಗಿ ವಾರ್ಡ್ ರಸ್ತೆಗಳನ್ನು ಮುಚ್ಚಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಸಚಿವರಾದ ಅಶೋಕ್ ಹೇಳಿದ್ದಾರೆ.

ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ನಡೆದ ಸಭೆಯ ದೃಶ್ಯ

ರಸ್ತೆಗುಂಡಿ, ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ಹಾಗೂ ಕೋವಿಡ್ ನಿಂದ ಮೃತಪಟ್ಟವರಿಗೆ ಪರಿಹಾರ ನೀಡುವ ಸಂಬಂಧ ನಡೆದ ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದರು. ಪಾಲಿಕೆಯ ಹಾಟ್ ಮಿಕ್ಸ್ ಪ್ಲಾಂಟ್ ನಿಂದ 16 ಲೋಡ್ ಡಾಂಬರನ್ನು ನೀಡುತ್ತಿದ್ದು, ಸುಮಾರು 12 ದಿನಗಳ‌ ಕಾಲ ನಿರಂತರವಾಗಿ ಮಳೆ ಬಿದ್ದ ಹಿನ್ನೆಲೆಯಲ್ಲಿ ಪ್ಲಾಂಟ್ ನಲ್ಲಿ ಬಿಟಮಿನ್ ಮಿಕ್ಸ್(ಜೆಲ್ಲಿ) ಉತ್ಪಾದಿಸಲು ಸಾಧ್ಯವಾಗಿಲ್ಲ. ಹಾಗಾಗಿ ರಸ್ತೆ ಗುಂಡಿಗಳನ್ನು ನಿಗಧಿತ ಸಮದಲ್ಲಿ ಮುಚ್ಚಲು ಆಗಿಲ್ಲ. ಉಳಿದ ದಿನಗಳಲ್ಲಿ ಸಕ್ರಿಯವಾಗಿ ರಸ್ತೆಗುಂಡಿಗಳನ್ನು ಮುಚ್ಚುವ ಕೆಲಸ ಮಾಡಿದ್ದಾರೆ ಎಂದು ಸಮರ್ಥಿಸಿಕೊಂಡರು.

ನಗರದ ರಸ್ತೆಗಳ ಪರಿಸ್ಥಿತಿ ಹೀಗಿದೆಯಂತೆ…..!

ಬೆಂಗಳೂರಿನಲ್ಲಿ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್, ಸಬ್-ಆರ್ಟಿರಿಯಲ್ ಹಾಗೂ ವಾರ್ಡ್ ಸೇರಿದಂತೆ ಒಟ್ಟು 13,874 ಕಿ.ಮೀ ಉದ್ದದ ರಸ್ತೆಗಳಿವೆ. ಈ ಪೈಕಿ ವಾಹನ ಸಂಚಾರ ದಟ್ಟಣೆಯಿರುವ ಆರ್ಟಿರಿಯಲ್, ಸಬ್-ಆರ್ಟಿರಿಯಲ್ ರಸ್ತೆಗಳು 1,344 ಕಿ.ಮೀ ಉದ್ದವಿದ್ದು, 895 ಕಿ.ಮೀ ಉದ್ದದ ರಸ್ತೆ ಸುಸ್ಥಿತಿಯಲ್ಲಿದೆ. ಇನ್ನುಳಿದ 449 ಕಿ.ಮೀ ಉದ್ದದ ರಸ್ತೆ ಹಾಳಾಗಿದೆ. ಈಗಾಗಲೇ 246 ಕಿ.ಮೀ ಉದ್ದದ ರಸ್ತೆಗಳಲ್ಲಿ ರಸ್ತೆಗುಂಡಿಗಳನ್ನು ಮುಚ್ಚಲಾಗಿದೆ. ಇನ್ನುಳಿದ 203 ಕಿ.ಮೀ ಉದ್ದದ ರಸ್ತೆಗಳನ್ನು ಮುಚ್ಚಬೇಕಿದೆ. ಅಕ್ಟೋಬರ್ 10ರೊಳಗಾಗಿ ಮುಚ್ಚಲು ಸೂಚನೆ ನೀಡಲಾಗಿದೆ ಎಂದರು.

ನಗರದಲ್ಲಿರುವ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಲು ಇದುವರೆಗೆ 585 ಲೋಡ್ ಡಾಂಬರನ್ನು ಬಳಸಲಾಗಿದೆ. ಇನ್ನು ಹೊರ ವಲಯ ವ್ಯಾಪ್ತಿಯಲ್ಲಿ ಬರುವ 110 ಹಳ್ಳಿಗಳಿಗೆ ಸಂಬಂಧಿಸಿದಂತೆ ಜಲಮಂಡಳಿಯಿಂದ ನೀರು ಹಾಗೂ ಒಳಚರಂಡಿ ಸಂಪರ್ಕ ಕಲ್ಪಿಸಲು ಹಾಗೂ ಬೆಸ್ಕಾಂ ಸಂಸ್ಥೆಯು ನೆಲದಡಿ ಕೇಬಲ್ ಅಳವಡಿಕೆಯಿಂದ ರಸ್ತೆಗಳು ಹಾಳಾಗಿವೆ. ಅದಕ್ಕಾಗಿ ರಾಜ್ಯ ಸರ್ಕಾರ 1,000 ಕೋಟಿ ರೂ. ಬಿಡುಗಡೆ ಮಾಡುತ್ತಿದ್ದು, ಟೆಂಡರ್ ಪ್ರಕ್ರಿಯೆ ಮುಗಿಯುವ ಹಂತಕ್ಕೆ ಬಂದಿದೆ. ಮುಂದಿನ 20 ರಿಂದ 30 ದಿನಗಳಲ್ಲಿ ಸಂಪೂರ್ಣ ರಸ್ತೆಗಳನ್ನು ಡಾಂಬರೀಕರಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಳಾಗುವುದು ಎಂದು ತಿಳಿಸಿದರು.

ಪಾಲಿಕೆಯ ಹಾಟ್ ಮಿಕ್ಸ್ ಪ್ಲಾಂಟ್ ನಿಂದ ಪ್ರತಿನಿತ್ಯ 30 ಲೋಡ್ ಡಾಂಬರನ್ನು ಹಾಗೂ ಆಯಾ ವಾರ್ಡ್ ಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು 20 ಲಕ್ಷ ರೂ. ಮೀಸಲಿಟ್ಟಿದ್ದು, ಅದರಿಂದ ಡಾಂಬರು ಹಾಕುವ ಸ್ಥಳೀಯ ಗುತ್ತಿಗೆದಾರರನ್ನು ನಿಯೋಜನೆ ಮಾಡಿಕೊಂಡು ತ್ವರಿತವಾಗಿ ರಸ್ತೆಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಶಿಥಿಲಗೊಂಡ ಕಟ್ಟಡಗಳ ಸಮೀಕ್ಷೆ :

ಬಿಬಿಎಂಪಿ ವ್ಯಾಪ್ತಿಯಲ್ಲಿ 2019ರಲ್ಲಿ 185 ಶಿಥಿಲಗೊಂಡ ಕಟ್ಟಡಗಳನ್ನು ಸಮೀಕ್ಷೆ ಮಾಡಲಾಗಿರುತ್ತದೆ. ಅದರಲ್ಲಿ 10 ಕಟ್ಟಡಗಳನ್ನು ನೆಲಸಮ ಮಾಡಿದ್ದು, ಬಾಕಿ 175 ಕಟ್ಟಡಗಳನ್ನು ನೆಲಸಮ ಮಾಡುವ ಸಲುವಾಗಿ ಕಟ್ಟಡ ಮಾಲೀಕರಿಗೆ ನೋಟಿಸ್ ನೀಡಬೇಕು. ಆ ಬಳಿಕ ಬೆಸ್ಕಾಂಗೆ ವಿದ್ಯುತ್ ತೆಗೆಯಲು ಪತ್ರ ನೀಡಬೇಕು. ಬಳಿಕ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿ ಕಟ್ಟಡವನ್ನು ನೆಲಸಮ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾಗಿ ಸಚಿವರು ತಿಳಿಸಿದರು.

ನಗರದಲ್ಲಿ ಶಿಥಲಗೊಂಡಿರುವ ಕಟ್ಟಡಗಳನ್ನು ಮುಂದಿನ 15 ದಿನಗಳಲ್ಲಿ ಸಮೀಕ್ಷೆ ಮಾಡಿ ವರದಿ ನೀಡಬೇಕು. ಆ ಬಳಿಕ ಶಿಥಿಲಗೊಂಡ ಕಟ್ಟಡ ಮಾಲೀಕರಿಗೆ ನೋಟಿಸ್ ನೀಡಿ ನಿಯಮಾನುಸಾರ ಕಟ್ಟಡಗಳನ್ನು ನೆಲಸಮ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೊತೆಗೆ ಪಾಲಿಕೆಯಿಂದಲೇ ಕಟ್ಟಡಗಳನ್ನು ನೆಲಸಮ ಮಾಡಲು ತಗುಲಿದ ವೆಚ್ಚವನ್ನು ಕಟ್ಟಡ ಮಾಲೀಕರ ಆಸ್ತಿ ತೆರಿಗೆಗೆ ಸೇರಿಸಿ ವಸೂಲಿ ಮಾಡಬೇಕು ಎಂದು ಹೇಳಿದರು.

ಕೋವಿಡ್ ನಿಂದ ಮೃತಪಟ್ಟ ಕುಟುಂಬದವರಿಗೆ ಪರಿಹಾರ :

ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 15,000 ಕೋವಿಡ್ ನಿಂದ ಮೃತಪಟ್ಟಿರುವ ಮಾಹಿತಿ ಇದೆ. ಈ ಸಂಬಂಧ ಆಯಾ ವಾರ್ಡ್ ಕಛೇರಿಗಳಲ್ಲಿ ಕೋವಿಡ್‌ನಿಂದ ಮೃತಪಟ್ಟ ರೋಗಿಯ ಸಂಖ್ಯೆಗೆ ಅನುಗುಣವಾಗಿ ಮುಂದಿನ 15 ದಿನದಲ್ಲಿ ಪಟ್ಟಿಯನ್ನು ಸಿದ್ದಪಡಿಸಿಕೊಳ್ಳಬೇಕು. ಕೋವಿಡ್ ನಿಂದ ಮೃತಪಟ್ಟವರಲ್ಲಿ ಬಿಪಿಎಲ್ ಕಾರ್ಡ್ ಇರುವವರಿಗೆ 1.50 ಲಕ್ಷ, ಸಾಮಾನ್ಯ ಜನರಿಗೆ 50,000 ನೀಡಲಾಗುತ್ತೆ. ಎಲ್ಲರಿಗೂ ತ್ವರಿತವಾಗಿ ಪರಿಹಾರ ನೀಡುವ ಸಲುವಾಗಿ ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಿ ತ್ವರಿತವಾಗಿ ಪರಿಹಾರ ನೀಡಲಾಗುವುದು ಎಂದು ಅವರು ಹೇಳಿದರು.

ಪಾಲಿಕೆ ಹೆಲ್ಪ್ ಲೈನ್ ಗೆ ರಸ್ತೆಗುಂಡಿ ದೂರುಗಳೇ ಹೆಚ್ಚು :

ಸೆ.17 ರಿಂದ ನಗರದಲ್ಲಿ ಕೋವಿಡೇತರ ನಾಗರೀಕ ಸಮಸ್ಯೆಗಳಾದ ರಸ್ತೆಗುಂಡಿ, ಬೀದಿ ದೀಪ, ನಾಯಿ ಹಾವಳಿ ಮೊದಲಾದ ಸಮಸ್ಯೆ ಇತ್ಯರ್ಥಕ್ಕೆಂದು ನಾಗರೀಕರಿಗಾಗಿ ಬಿಬಿಎಂಪಿಯು 1533 ಎಂಬ ಸಹಾಯವಾಣಿ ಆರಂಬಿಸಿದೆ. ಈ ಹೆಲ್ಪ್ ಲೈನ್ ಆರಂಭವಾದ ದಿನದಿಂದ ಸೆ.30ರ 14 ದಿನದಲ್ಲಿ ಒಟ್ಟು 329 ದೂರುಗಳು ದಾಖಲಾಗಿದ್ದು ಆ ಪೈಕಿ 130 ದೂರುಗಳು ರಸ್ತೆಗುಂಡಿ, ಮಳೆನೀರು ಮೋರಿ, ರಸ್ತೆ ನಿರ್ವಹಣೆಗೆ ಸಂಬಂಧಿಸಿದ್ದಾಗಿದೆ. ಬೀದಿ ದೀಪ ಸಮಸ್ಯೆ ಕುರಿತಂತೆ 95 ದೂರುಗಳು ಪ್ರತ್ಯೇಕವಾಗಿ ದಾಖಲಾಗಿದೆ.

ಸಚಿವರು ಕರೆದಿದ್ದ ಸಭೆಗೆ ಪಾಲಿಕೆ ಮುಖ್ಯ ಆಯುಕ್ತ ಗೌರವ ಗುಪ್ತಾ, ವಲಯ ವಿಶೇಷ ಆಯುಕ್ತರು, ಪ್ರಧಾನ ಮುಖ್ಯ ಅಭಿಯಂತರರಾದ ಪ್ರಭಾಕರ್, ವಲಯ ಜಂಟಿ ಆಯುಕ್ತರು, ಸೇರಿದಂತೆ ಮತ್ತಿತರರ ಅಧಿಕಾರಿಗಳು ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

DEFENCE MEG DAY | ದೇಶದ ಯುದ್ಧ ಇತಿಹಾಸದಲ್ಲಿ ಅಚ್ಚಳಿಯದ ಗುರುತು ಮೂಡಿಸಿದ ಮದ್ರಾಸ್ ಸ್ಯಾಪರ್ಸ್ ಗೆ 241 ವರ್ಷ ವಯಸ್ಸು….!!

Next Post

Basavanagudi Doddaganesha Temple | ದೊಡ್ಡ ಗಣೇಶನಿಗೆ ಪುಷ್ಪವೃಷ್ಠಿ ಸೇವೆಯ ಮನಮೋಹಕ ದೃಶ್ಯ

Next Post

Basavanagudi Doddaganesha Temple | ದೊಡ್ಡ ಗಣೇಶನಿಗೆ ಪುಷ್ಪವೃಷ್ಠಿ ಸೇವೆಯ ಮನಮೋಹಕ ದೃಶ್ಯ

World Senior Citizen Day | ವೃದ್ಧಾಶ್ರಮಗಳ ನಿರ್ವಹಣೆಗೆ ರಾಜ್ಯ ಸರ್ಕಾರ ನೀಡುವ ಅನುದಾನ 15 ಲಕ್ಷ ರೂ.ಗಳಿಗೆ ಏರಿಕೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group