Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ರಾಜ್ಯ ಸರ್ಕಾರದಿಂದ “ಕನ್ನಡಕ್ಕಾಗಿ ನಾವು” ಅಭಿಯಾನ

66ನೇ ಕನ್ನಡ ರಾಜ್ಯೋತ್ಸವದ ಹಿನ್ನಲೆ ; ಅ.24 ರಿಂದ 7 ದಿನ ರಾಜ್ಯದ ಉದ್ದಗಲದಲ್ಲಿ ಸಂಪೂರ್ಣ ಕನ್ನಡಮಯ ವಾತಾವರಣ ಸೃಷ್ಟಿ | ಅ.28 ರಂದು ಬೆಳಗ್ಗೆ ಒಂದು ಲಕ್ಷ ಕಂಠಗಳಲ್ಲಿ ಕನ್ನಡದ ಮೂರು ಪ್ರಸಿದ್ಧ ಗೀತೆಗಳ ಗಾಯನ

by Bengaluru Wire Desk
October 19, 2021
in News Wire
Reading Time: 2 mins read
3

ಬೆಂಗಳೂರು, (www.bengaluruwire.com) :
ಕರ್ನಾಟಕದ 66ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ‘ಕನ್ನಡಕ್ಕಾಗಿ ನಾವು’ ಅಭಿಯಾನ ಕಾರ್ಯಕ್ರಮದ ಲಾಂಛನ, ಕರಪತ್ರ , ಭಿತ್ತಿಪತ್ರಗಳು ಹಾಗೂ “ಮಾತಾಡ್ ಮಾತಾಡ್ ಕನ್ನಡ” ಎನ್ನುವ ಘೋಷ ವಾಕ್ಯ ವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ.ಸುನಿಲ್ ಕುಮಾರ್ ವಿಧಾನಸೌಧದ ಸಮ್ಮೇಳ ಸಭಾಂಗಣದಲ್ಲಿ ಮಂಗಳವಾರ ಅನಾವರಣಗೊಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವರು, ರಾಜ್ಯದಾದ್ಯಂತ 66ನೇ ಕನ್ನಡ ರಾಜ್ಯೋತ್ಸವ (66th Kannada Rajyotsava)ವನ್ನು ವಿಶಿಷ್ಟವಾಗಿ ಆಚರಿಸಲು ನಿರ್ಧರಿಸಲಾಗಿದೆ. ಎಂದಿನಂತೆ ನವೆಂಬರ್ ಒಂದರಂದು ಮಾತ್ರ ರಾಜ್ಯೋತ್ಸವ ಆಚರಿಸದೇ, ಈ ಬಾರಿ ಅಕ್ಟೋಬರ್ 24ರಿಂದ
ಅಕ್ಟೋಬರ್ 30ರವರೆಗೆ “ಕನ್ನಡಕ್ಕಾಗಿ ನಾವು” ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದ ಉದ್ದಗಲಕ್ಕೆ
ನಡೆಯುವ ಈ ಕಾರ್ಯಕ್ರಮಕ್ಕೆ ಪ್ರತ್ಯೇಕ ಲಾಂಛನವನ್ನು ರೂಪಿಸಲಾಗಿದೆ ಎಂದರು.

ಕನ್ನಡಕ್ಕಾಗಿ ನಾವು ಅಭಿಯಾನದ ಲಾಂಛನ ಬಿಡುಗಡೆ ಮಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ.ವಿ.ಸುನಿಲ್‌ಕುಮಾರ್

ಅಭಿಯಾನದ ಸಂದರ್ಭದಲ್ಲಿ ಎಲ್ಲರೂ ಕನ್ನಡದಲ್ಲೇ ಮಾತಾಡುವುದು, ಕನ್ನಡದಲ್ಲೇ ವ್ಯವಹರಿಸುವುದು,
ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲರೂ ಕನ್ನಡವನ್ನೇ ಬಳಸುವುದು, ಕನ್ನಡೇತರರಿಗೆ ಕನ್ನಡ ಕಲಿಸುವುದು,
ಕನ್ನಡದಲ್ಲೇ ಸಹಿ ಮಾಡುವುದು, ಮೊಬೈಲ್ ನಲ್ಲಿ ಸಂದೇಶಗಳನ್ನು ಕನ್ನಡದಲ್ಲಿಯೇ ಕಳುಹಿಸುವುದು, ಐಟಿ-ಬಿಟಿ
ಕಂಪೆನಿಗಳಲ್ಲಿ ಕನ್ನಡದಲ್ಲಿಯೇ ಮಾತನಾಡುವುದು ಹಾಗೂ ಎಲ್ಲಾ ಮಾಧ್ಯಮಗಳಲ್ಲಿಯೂ ಸಿರಿಗನ್ನಡವನ್ನೇ
ಬಳಸುವ ಮೂಲಕ ಕನ್ನಡ ಹಬ್ಬದ ವಾತಾವರಣವನ್ನು ಸೃಷ್ಟಿಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.

ನಾಡಿನ ಎಲ್ಲರೂ ಕನ್ನಡವನ್ನು ಬಳಸುವುದು, ಪ್ರತಿಯೊಬ್ಬರಲ್ಲೂ ಕನ್ನಡ ಭಾಷೆಯ ಮಹತ್ವವನ್ನು
ತಿಳಿಸುವುದರ ಜೊತೆ ಅನ್ಯ ಭಾಷೆಯ ಪದಗಳನ್ನು ಬಳಸದೇ ಕನ್ನಡದಲ್ಲಿ ಮಾತನಾಡಲು ಪೂರಕ
ವಾತಾವರಣ ನಿರ್ಮಿಸುವುದು. ಒಂದು ವಾರ ಕಾಲ ಸಂಪೂರ್ಣ ಕನ್ನಡಮಯ ವಾತಾವರಣ ಸೃಷ್ಟಿಸುವ
ಮೂಲಕ “ಕನ್ನಡಕ್ಕಾಗಿ ನಾವು” ಅಭಿಯಾನ ನಡೆಸಲಾಗುತ್ತಿದೆ.

ಅಭಿಯಾನದ ಹಿನ್ನಲೆಯಲ್ಲಿ ಲಾಂಛನ, ಕನ್ನಡದ ಹಿರಿಯ ಸಾಧಕರ ನುಡಿಗಳನ್ನು ಒಳಗೊಂಡ ಪ್ರೊಮೊ
ಬಳಸುವ ಮೂಲಕ ಕನ್ನಡಪರ ವಾತಾವರಣವನ್ನು ನಾಡಿನಾದ್ಯಂತ ಮೂಡಿಸಲಾಗುತ್ತಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.

ನಾಟಕ, ನೃತ್ಯ, ಸಂಗೀತ ಕಾರ್ಯಕ್ರಮ:

ರಾಜ್ಯದ ಐದು ರಂಗಾಯಣಗಳು ಹಾಗೂ ವಿವಿಧ
ಅಕಾಡೆಮಿಗಳು ಮತ್ತು ಪ್ರಾಧಿಕಾರಗಳ ಸಹಯೋಗದಲ್ಲಿ ರಾಜ್ಯದ ಆಯ್ದ ಸಾರ್ವಜನಿಕ ಸ್ಥಳಗಳಲ್ಲಿ
ಕನ್ನಡ ನಾಡು- ನುಡಿ, ಸಂಸ್ಕೃತಿ ಮತ್ತು ಕರ್ನಾಟಕದ ಹಿರಿಮೆ ಬಿಂಬಿಸುವ ನಾಟಕಗಳು, ನೃತ್ಯ,
ಸಂಗೀತ ಕಾರ್ಯಕ್ರಮಗಳನ್ನು ಒಳಗೊಂಡ ‘ಕನ್ನಡ ಸಾಂಸ್ಕೃತಿಕ ಉತ್ಸವ’ ಆಯೋಜಿಸಲಾಗಿದೆ.

ಈ ಉತ್ಸವದಲ್ಲಿ ಬೆಂಗಳೂರಿನ ಪಾಲಿಕೆಯ ಎಲ್ಲ ವಾರ್ಡ್ ಗಳಲ್ಲಿ, ಐಟಿಬಿಟಿ ಸಂಸ್ಥೆಗಳ ಆವರಣಗಳಲ್ಲಿ, ಮೆಟ್ರೋ,
ವಿಧಾನಸೌಧ, ವಿವಿಧ ಕಾರ್ಖಾನೆಗಳ ಆವರಣದಲ್ಲಿ ಇದೇ ತೆರನಾದ ಕಾರ್ಯಕ್ರಮಗಳನ್ನು
ಆಯೋಜಿಸಲಾಗುವುದು.

1 ಲಕ್ಷ ಕಂಠಗಳಲ್ಲಿ ಸಾಮೂಹಿಕ ಕನ್ನಡ ಗೀತ ಗಾಯನ:

ರಾಜ್ಯಾದಾದ್ಯಂತ ಅಕ್ಟೋಬರ್ 28 ರಂದು ಬೆಳಗ್ಗೆ 11:06ಕ್ಕೆ
ಒಂದು ಲಕ್ಷ ಕಂಠಗಳಲ್ಲಿ ಕನ್ನಡದ ಮೂರು ಗೀತೆಗಳ ಗಾಯನ ನಡೆಯಲಿದೆ. ಇದಕ್ಕೆ
ಈಗಾಗಲೇ ಕನ್ನಡದ ಮೂರು ಗೀತೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ರಾಷ್ಟ್ರಕವಿ ಕುವೆಂಪು ರಚಿತ “ಬಾರಿಸು ಕನ್ನಡ ಡಿಂಡಿಮವ”, ಕೆ.ಎಸ್. ನಿಸಾರ್ ಅಹಮದ್ ರಚಿತ “ಜೋಗದ ಸಿರಿ ಬೆಳಕಿನಲ್ಲಿ”, ಹಂಸಲೇಖಾ ರಚನೆಯ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಈ ಗೀತೆಗಳನ್ನು
ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆ-ಕಾಲೇಜುಗಳು, ವಿಶ್ವವಿದ್ಯಾಲಯಗಳು, ಜಿಲ್ಲೆ, ತಾಲೂಕು, ಗ್ರಾಮ
ಮಟ್ಟದಲ್ಲಿ ಗಡಿನಾಡು, ಹೊರನಾಡುಗಳಲ್ಲಿ ಏಕಕಾಲದಲ್ಲಿ ಈ ಮೂರು ಹಾಡುಗಳ ಗಾಯನ ಕಾರ್ಯಕ್ರಮ
ನಡೆಯಲಿದೆ.

ವಿಧಾನಸೌಧದ ಮೆಟ್ಟಿಲ ಬಳಿ ವಿಧಾನಸೌಧ ಸಿಬ್ಬಂದಿಗಳಿಂದ, ಗಾಂಧಿ ಪ್ರತಿಮೆ ಬಳಿ ಅಧಿಕಾರಿ ವೃಂದದಿಂದ ಗೀತ ಗಾಯನ ನಡೆಯಲಿದೆ.

ಸಾಧ್ಯವಾದಷ್ಟು ಕನ್ನಡ ಭಾಷೆ ಬಳಕೆ:

ಕನ್ನಡ ಭಾಷೆಯನ್ನು ಬೆಳೆಸುವ ಹಿನ್ನಲೆಯಲ್ಲಿ
ಕಡ್ಡಾಯವಾಗಿ ಎಲ್ಲೆಡೆಯೂ ಕನ್ನಡ ಬಳಸುವ ರೀತಿಯಲ್ಲಿ ಮೊಬೈಲ್ ನಲ್ಲಿ ಕನ್ನಡ ಭಾಷೆಯಲ್ಲೇ
ಸಂದೇಶ ಕಳುಹಿಸಲು, ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿಯೂ ಕನ್ನಡವನ್ನೇ
ಬಳಸುವಂತೆ ಪ್ರೇರೇಪಿಸುವುದು, ಇದರ ಹಿಂದಿನ ಉದ್ದೇಶವಾಗಿದೆ ಎಂದು ಕನ್ನಡ ಕಾರ್ಯಕ್ರಮಗಳ ಬಗ್ಗೆ ಸುನಿಲ್ ಕುಮಾರ್ ಮಾಹಿತಿ ನೀಡಿದರು.

ಕನ್ನಡದಲ್ಲಿ ನಾಲ್ಕು ನಿಮಿಷ ಸೆಲ್ಫಿ ವಿಡಿಯೋ ಮಾಡಿ ಮಾತನಾಡುವ ಸ್ಪರ್ಧೆ:

ಒಂದೂ ಅನ್ಯ ಭಾಷೆಯ ಪದಗಳನ್ನು ಬಳಸದೇ
ನಿರ್ಗಳವಾಗಿ ಕನ್ನಡದಲ್ಲಿ ನಾಲ್ಕು ನಿಮಿಷಗಳ ಕಾಲ ಕನ್ನಡ ನಾಡು- ನುಡಿ, ಪರಂಪರೆಗೆ
ಸಂಬಂಧಿಸಿದ ವಿಷಯಗಳ ಕುರಿತು ವಿಡಿಯೋ ಸೆಲ್ಸಿ ತಗೆದು ಕಳುಹಿಸುವುದು. ಸ್ಪರ್ಧೆಯಲ್ಲಿ ಜಿಲ್ಲಾ
ಮಟ್ಟದಲ್ಲಿ ಆಯ್ಕೆಯಾದ ಮೂವರಿಗೆ ಪ್ರಥಮ- 5,000/-ರೂ., ದ್ವಿತೀಯ- 3,000-ರೂ., ತೃತೀಯ 2,000/- ರೂ.
ಬಹುಮಾನ ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ವಿಜೇತರಾದವರನ್ನು
ರಾಜ್ಯಮಟ್ಟದಲ್ಲಿ ಮತ್ತೆ ಸ್ಪರ್ಧೆ ನಡೆಸಲಾಗುವುದು.

ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನ
50,000/- ರೂ. ದ್ವಿತೀಯ ಬಹುಮಾನ- 30,000/- ಮತ್ತು ತೃತೀಯ ಬಹುಮಾನ- 20,000/ರೂ. ನೀಡಲಾಗುವುದು. ಅಕ್ಟೋಬರ್ 28ರೊಳಗೆ ವಿಡಿಯೋ-ಸೆಲ್ಸಿ ತಗೆದು ಕಳುಹಿಸಬೇಕಾಗುತ್ತದೆ. ಅಕ್ಟೋಬರ್ 30 ರಂದು ರಾಜ್ಯಮಟ್ಟದ ಸ್ಪರ್ಧೆ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದರು.

ಗಡಿಭಾಗದಲ್ಲಿ ಕನ್ನಡ ಜಾಗೃತಿ ಕಾರ್ಯಕ್ರಮ:

ರಾಜ್ಯದ ಗಡಿಭಾಗಗಳಾದ ಮಹಾರಾಷ್ಟ್ರ, ಕೇರಳ,
ತಮಿಳುನಾಡು, ಆಂಧ್ರಪ್ರದೇಶ ಮತ್ತು ಗೋವಾ ರಾಜ್ಯಗಳಿಗೆ ಹೊಂದಿಕೊಂಡಿರುವ ಗಡಿಭಾಗದ ತಾಲೂಕು ಪ್ರದೇಶಗಳಲ್ಲಿ ನಾಡಿನ ಸಂಸ್ಕೃತಿ, ಭಾಷೆ, ಸಾಹಿತ್ಯ ಕುರಿತ ಜಾಗೃತಿ ಕಾರ್ಯಕ್ರಮಗಳನ್ನು
ನಡೆಸುವ ಮೂಲಕ ಕನ್ನಡಕ್ಕಾಗಿ ನಾವು” ಅಭಿಯಾನ ನಡೆಸಲಾಗುವುದು.

ಬೆಂಗಳೂರಿನಲ್ಲಿ ಕರ್ನಾಟಕ ಸಾಂಸ್ಕೃತಿಕ ಉತ್ಸವ :

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ “ಕರ್ನಾಟಕ ಸಾಂಸ್ಕೃತಿಕ ಉತ್ಸವ”ವನ್ನು ಅಕ್ಟೋಬರ್ 29,
30, 31ರವರೆಗೆ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ.

ಪುಸ್ತಕೋತ್ಸವ, ದೇಶೀಯ ಉಡುಪು ಮತ್ತು
ಆಹಾರ ಮೇಳ, ಚಿತ್ರಕಲೆ/ಶಿಲ್ಪಕಲಾ ಮೇಳಗಳನ್ನು ಆಯೋಜಿಸಲಾಗುವುದು. ಜೊತೆಗೆ ಗೀತಗಾಯನ,
ನೃತ್ಯರೂಪಕ, ಯಕ್ಷಗಾನ, ವಿಚಾರ ಸಂಕಿರಣ, ಶಾಸ್ತ್ರೀಯ ನೃತ್ಯ, ಕಾವ್ಯ-ಕುಂಚ-ಗಾಯನ, ನಾಟಕ,
ಸುಗಮಸಂಗೀತ, ವಾದ್ಯಸಂಗೀತ, ಜಾನಪದ ನೃತ್ಯ, ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು
ಆಯೋಜಿಸಲಾಗಿದೆ ಎಂದು ಸಚಿವರು ಹೇಳಿದರು.

‘ಕನ್ನಡಕ್ಕಾಗಿ ನಾವು’ ಅಭಿಯಾನ ಕಾರ್ಯಕ್ರಮದ ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಚಿತ್ರ ನಿರ್ದೇಶಕ ಟಿ.ಎಸ್.ನಾಗಾಭರಣ, ಗಡಿನಾಡು ಅಭಿವೃದ್ಧಿ ಮಂಡಳಿಯ ಸಿ.ಸೋಮಶೇಖರ್, ಇಲಾಖೆ ಕಾರ್ಯದರ್ಶಿ ಮಂಜುಳಾ, ನಿರ್ದೇಶಕ ರಂಗಪ್ಪ, ರಂಗಾಯಣದ ಅಡಂಡ್ಡ ಕಾರಿಯಪ್ಪ, ಮತ್ತಿತರರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Sabarimala temple news | ಕೇರಳದಲ್ಲಿ ಭಾರೀ ಮಳೆ ಹಿನ್ನಲೆ- ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ಭಕ್ತರಿಗೆ ಅವಕಾಶವಿಲ್ಲ

Next Post

#VaccineCentury | ‘ಒಂದು ಶತಕೋಟಿʼ ಲಸಿಕೆಗಳ ಮಹತ್ವದ ಮೈಲಿಗಲ್ಲನ್ನು ಸಾಧಿಸಿದ ಭಾರತ – ವೈದ್ಯರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ

Next Post

#VaccineCentury | 'ಒಂದು ಶತಕೋಟಿʼ ಲಸಿಕೆಗಳ ಮಹತ್ವದ ಮೈಲಿಗಲ್ಲನ್ನು ಸಾಧಿಸಿದ ಭಾರತ - ವೈದ್ಯರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ 100 ಕೋಟಿ ಲಸಿಕೆ ನೀಡಿಕೆ ಸಂಭ್ರಮಾಚರಣೆ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d