66ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ‘ಕನ್ನಡಕ್ಕಾಗಿ ನಾವು’ ಅಭಿಯಾನಕ್ಕೆ ರಾಜಭವನದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಭಾನುವಾರ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಸಚಿವ ವಿ. ಸುನಿಲ್ ಕುಮಾರ್ ಲಾಲ್ಬಾಗ್ನಲ್ಲಿ ಕಿರು ನಾಟಕ ಉದ್ಘಾಟನೆ ಹಾಗೂ ಲಾಲ್ ಬಾಗ್ ಮೆಟ್ರೋ ನಿಲ್ದಾಣದಲ್ಲಿ ಕನ್ನಡ ಅಭಿಯಾನದ ಸ್ವಯಂ ಭಾವ ಚಿತ್ರ ಕೇಂದ್ರ( ಸೆಲ್ಫಿ)ವನ್ನು ಅನಾವರಣ ಮಾಡಿದರು.