ಸಿಂದಗಿ, (www.bengaluruwire.com) : ಸಿಂದಗಿಯ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಕಂಕಣ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸಿಂದಗಿ ರೈತರ ಹೋಲಗಳಿಗೆ ನೀರು ಹರಿಸುವುದು, ಇಲ್ಲಿನ ಯುವಕರಿಗೆ ಉದ್ಯೋಗ ನೀಡುವುದಕ್ಕೆ ನಾವು ಹೆಚ್ಚು ಒತ್ತು ನೀಡುತ್ತೇವೆ ಎಂದು ಬ್ಯಾಕೋಡು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಅವರು ತಿಳಿಸಿದರು.
ಭಾರತೀಯ ಜನತಾ ಪಕ್ಷದ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಅದರಲ್ಲೂ ರೈತರ ಮಕ್ಕಳ ಶಿಕ್ಷಣಕ್ಕಾಗಿ ಹೆಚ್ಚಿನ ಕಾಳಜಿ ವಹಿಸಿದೆ. ದೇಶದಲ್ಲಿ ಮೊದಲ ಬಾರಿಗೆ 20 ಲಕ್ಷ ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಯೋಜನೆ ರೂಪಿಸಿದ್ದೇವೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಇನ್ನುಮುಂದೆ ಪಡಿತರ ಪಡೆಯಲು ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕೆತೆ ಇಲ್ಲ. ಮುಂದಿನ ವರ್ಷ ಜನವರಿ.26 ರಿಂದ ರಾಜ್ಯದಲ್ಲಿ ಮನೆ ಬಾಗಿಲಿಗೆ ಪಡಿತರ ವಿತರಣೆ ಆಗಲಿದೆ. ಬಡವರ, ದೀನ ದಲಿತರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಅವರು ವಿವರಿಸಿದರು.
ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎನ್ನುವಂತೆ ಬಿಜೆಪಿ ಸರ್ಕಾರ ಸಿಂದಗಿಯ ಅಭಿವೃದ್ಧಿಯ ಮಾಡಲಿದೆ. ಸಿಂದಗಿಯಲ್ಲಿ 7 ಸಾವಿರ ಮನೆ ಕಟ್ಟಿಯೇ ಕಟ್ಟುತ್ತೇವೆ ಎಂದು ಅವರು ಇದೇ ವೇಳೆ ಜನತೆಗೆ ವಾಗ್ದಾನ ನೀಡಿದರು.
ಸಚಿವರಾದ ಗೋವಿಂದ ಕಾರಜೋಳ, ಬೈರತಿ ಬಸವರಾಜ್, ಸಿಸಿ ಪಾಟೀಲ್ ಮುಂತಾದವರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು.