Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Auto Fare Hike | ಬಿಬಿಎಂಪಿ ವ್ಯಾಪ್ತಿಯಲ್ಲಿ ಆಟೋ ದರದಲ್ಲಿ ಏರಿಕೆ – ಡಿ.1 ನೂತನ ಪರಿಷ್ಕೃತ ದರ ಜಾರಿ

ಆಟೋ ಬಾಡಿಗೆ ಮೊದಲ ಕನಿಷ್ಠ ದೂರ 1.9 ಕಿ.ಮೀನಿಂದ 2 ಕಿ.ಮೀಗೆ ಏರಿಕೆ ಹಾಗೂ ಮೊದಲ ಕನಿಷ್ಠ ದರವನ್ನು 25 ರೂ. ನಿಂದ‌ 30 ರೂ.ಗೆ ಏರಿಕೆ

by Bengaluru Wire Desk
November 8, 2021
in Bengaluru Focus, Public interest
Reading Time: 1 min read
0

ಬೆಂಗಳೂರು, (www.bengaluruwire.com) : ಪೆಟ್ರೋಲ್, ಡಿಸೇಲ್, ಗ್ಯಾಸ್ ರೇಟ್ ನಿಂದ ಕಂಗಾಲಾಗಿರುವ ಗ್ರಾಹಕರಿಗೆ ಇದೀಗ ಬೆಂಗಳೂರು ನಗರ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಶಾಕ್ ನೀಡಿದೆ. ಡಿ.1 ರಿಂದ ಜಾರಿಗೆ ಬರುವಂತೆ ಬೃಹತ್ ಬೆಂಗಳೂರು ನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬಾಡಿಗೆ ಆಟೋಗಳ ನೂತನ ದರ ಪರಿಷ್ಕರಣೆ ಜಾರಿಗೆ ಬರಲಿದೆ.

ಈ ಹಿಂದೆ ಕನಿಷ್ಠ ದರ ಮೊದಲ 1.9 ಕಿ.ಮೀಗೆ 25 ರೂ.ಗಳಾಗಿತ್ತು. ಆದರೀಗ ನೂತನ ಕನಿಷ್ಠ ದರ ಮೊದಲ 2 ಕಿ.ಮೀಗೆ 30 ರೂ.ಗಳಿಗೆ ಹೆಚ್ಚಾಗಲಿದೆ. ಅಂದರೆ ಇಲ್ಲಿ ಕನಿಷ್ಠ ದೂರವನ್ನು 100 ಮೀಟರ್ ಏರಿಕೆ ಮಾಡಿ ಮೊದಲ ಕನಿಷ್ಠ ದರವನ್ನು 5 ರೂ. ಹೆಚ್ಚಳ ಮಾಡಲಾಗಿದೆ.

ಜಿಲ್ಲಾಧಿಕಾರಿಗಳ ಆದೇಶದ ಪ್ರತಿ

ಹಾಲಿ ದರ ಮತ್ತು ಪರಿಷ್ಕೃತ ದರಗಳ ಹೋಲಿಕೆಯ ವಿವರ ಈ ಕೆಳಕಂಡಂತಿದೆ ;

ಹಾಲಿ ದರದಲ್ಲಿ ಕನಿಷ್ಠ ದರ 1.9 ಕಿ.ಮೀ ನಂತರ ಪ್ರತಿ ಕಿ.ಮೀ ಆಟೊ ಬಾಡಿಗೆ ಮೂರು ಜನ ಪ್ರಯಾಣಿಕರ ಮಿತಿಗೊಳಪಟ್ಟು 13 ರೂ.ಗಳಾಗಿತ್ತು. ಆದರೆ ಡಿ.1 ರಿಂದ ಜಾರಿಗೆ ಬರುವಂತೆ ಮೊದಲ ಕನಿಷ್ಠ ದೂರದ ನಂತರ ಪ್ರತಿ ಕಿ.ಮೀ ಆಟೊ ಬಾಡಿಗೆ 15 ರೂ.ಗೆ ಅಂದರೆ ಎರಡೂ ರೂ. ಹೆಚ್ಚಿಸಲಾಗಿದೆ.

ಹಾಲಿ, ಕಾಯುವಿಕೆ ದರ ಮೊದಲ 5 ನಿಮಿಷಕ್ಕೆ ಉಚಿತವಿತ್ತು. ಮೊದಲ ಐದು ನಿಮಿಷದ ನಂತರ ಪ್ರತಿ 15 ನಿಮಿಷ ಅಥವಾ ಅದರ ಭಾಗಕ್ಕೆ ಸದ್ಯ 5 ರೂ. ನಿಗದಿಯಾಗಿದೆ. ಪರಿಷ್ಕೃತ ದರದಲ್ಲಿ ಇದನ್ನು ಹಾಗೇ ಉಳಿಸಿಕೊಳ್ಳಲಾಗಿದೆ

ಪ್ರಯಾಣಿಕರ ಲಗೇಜು ದರ ಮೊದಲ 20 ಕೆ.ಜಿಗೆ ಉಚಿತವಿದ್ದು, ನಂತರ ಪ್ರತಿ 20 ಕೆ.ಜಿಗೆ ಅಥವಾ ಅದರ ಭಾಗಕ್ಕೆ 2 ರೂ. ನಿಗಧಿಪಡಿಸಲಾಗಿದೆ. ಪ್ರಯಾಣಿಕರ ಆಟೋದಲ್ಲಿ ಗರಿಷ್ಠ 50 ಕೆ.ಜಿವರೆಗೆ ಲಗೇಜು ಹಾಕಲು ಅವಕಾಶವಿದೆ. ಪರಿಷ್ಕೃತ ನೂತನ ದರದಂತೆ ಮೊದಲ ಪ್ರತಿ 20 ಕೆ.ಜಿ ಹಾಗೂ ನಂತರ್ ಪ್ರತಿ 20 ಕೆ.ಜಿ ದರವನ್ನು 2 ರೂ. ನಿಂದ 5 ರೂ.ಗೆ ಹೆಚ್ಚಿಸಲಾಗಿದೆ.

ಹಾಲಿ ದರದಂತೆ ರಾತ್ರಿ ವೇಳೆ ಅಂದರೆ ರಾತ್ರಿ 10 ರಿಂದ ಬೆಳಗಿನ ಜಾವ 5 ಗಂಟೆವರೆಗೆ ಆಟೋ ದರದ ಒಂದೂವರೆ ಪಟ್ಟು ಬಾಡಿಗೆ ವಿಧಿಸಲಾಗುತ್ತಿದೆ. ಇದೇ ಕ್ರಮವನ್ನು ಪರಿಷ್ಕೃತ ದರದಲ್ಲೂ ಮುಂದುವರೆಸಲಾಗಿದೆ.

ಬೆಂಗಳೂರು ನಗರ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಹಾಗೂ ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿ ಜೆ.ಮಂಜುನಾಥ್ ನ.6 ರಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಉಪಸಮಿತಿಯ ಶಿಫಾರಸ್ಸಿನಂತೆ ಈ ನೂತನ ದರ ಪರಿಷ್ಕರಣೆಯ ಆದೇಶ ಹೊರಡಿಸಿದ್ದಾರೆ.

ಪ್ರಾದೇಶಿಕ ಸಾರಿಗೆ ಪ್ರಾಧಿಕಾರದಿಂದ ಅನುಮೋದಿಸಲ್ಪಟ್ಟ ನೂತನ ಪರಿಷ್ಕೃತ ದರವನ್ನು ಎಲ್ಲಾ ಪ್ರಯಾಣಿಕರ ಆಟೋಗಳಲ್ಲಿ ಪ್ರಯಾಣಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು. ಪರಿಷ್ಕೃತ ದರಗಳನ್ನು‌ ಮೀಟರಿನಲ್ಲಿ 28-02-2022 ರ (ಪರಿಷ್ಕೃತ ದರ ಜಾರಿಗೆ ಬಂದ 90 ದಿನದ ಒಳಗಾಗಿ) ಮುಂಚೆ ಪುನಃ ಸತ್ಯ ಮಾಪನೆ ಮಾಡಿ ಸೀಲ್ ಹಾಕಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Puneeth Rajkumar Death Mystery | ಪುನೀತ್ ಸಾವಿಗೆ ನಿಧಾನಗತಿ ವಿಷಾಹಾರ ಸೇವನೆಯಿಂದ ಅಸಹಜ ಸಾವಾಯ್ತಾ!!?

Next Post

Hotel Food Rate Hike | ಹೋಟೆಲ್ ಊಟ-ತಿಂಡಿ ಬೆಲೆ ಸರಾಸರಿ ಶೇ.10ರಷ್ಟು ಏರಿಕೆ

Next Post

Hotel Food Rate Hike | ಹೋಟೆಲ್ ಊಟ-ತಿಂಡಿ ಬೆಲೆ ಸರಾಸರಿ ಶೇ.10ರಷ್ಟು ಏರಿಕೆ

Actress Poonam Pandey | ನಟಿ ಪೂನಮ್ ಪಾಂಡೆ ಆಸ್ಪತ್ರೆಗೆ ದಾಖಲು - ಹಲ್ಲೆ ನಡೆಸಿದ ಪತಿ ಸ್ಯಾಮ್ ಬಾಂಬೆ ಬಂಧನ

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d