ಬೆಂಗಳೂರು, (www.bengaluruwire.com) :
ರಾಜ್ಯಾದಾದ್ಯಂತ ನ.23ರ ಬೆಳಿಗ್ಗೆ 8:30ರ ತನಕ ವ್ಯಾಪಕವಾಗಿ ಹಗುರದಿಂದ ಸಾಮಾನ್ಯ ಮಳೆಯಾಗಲಿದ್ದು, ದಕ್ಷಿಣ ಕರ್ನಾಟಕದ ಒಳನಾಡು, ಮಲೆನಾಡು ಭಾಗಗಳಲ್ಲಿ ಕೆಲವು ಕಡೆ ಭಾರೀ ಮಳೆಯಗುವ ಸಾಧ್ಯತೆಯಿದೆ.
ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಗುಡುಗಿನ ಜೊತೆಗೆ ಹಗುರದಿಂದ ಸಾಮಾನ್ಯ ಮಳೆಯಾಗಲಿದೆ.
ಇನ್ನು ಕರಾವಳಿ, ಉತ್ತರ ಕರ್ನಾಟಕದ ಒಳನಾಡು ಪ್ರದೇಶದಲ್ಲಿ ವ್ಯಾಪಕವಾಗಿ ಚದುರಿದಂತೆ ಹಗುರದಿಂದ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಹವಾಮಾನ ವರದಿ ತಿಳಿಸಿದೆ.
ದಕ್ಷಿಣ ಒಳನಾಡಿನ ಪರಿಸ್ಥಿತಿ (SIK) : ದಕ್ಷಿಣ ಕರ್ನಾಟಕದ ಒಳನಾಡಿನ ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಮಾನ್ಯ ಮಳೆಯಾಗಲಿದೆ. ಇದೇ ರೀತಿ ಇನ್ನಿತರ ಪ್ರದೇಶದಲ್ಲಿ ವ್ಯಾಪಾಕವಾಗಿ ಅತಿ ಹಗುರದಿಂದ ಸಾಮಾನ್ಯ ಮಳೆಯಾಗಲಿದೆ.
ಉತ್ತರ ಕರ್ನಾಟಕದ ಒಳನಾಡು ಪ್ರದೇಶದ ಪರಿಸ್ಥಿತಿ (NIK) :
ವಿಜಯಪುರ, ವಿಜಯನಗರ, ಧಾರವಾಡ, ಹಾವೇರಿ, ಕೊಪ್ಪಳ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಚದುರಿದಂತೆ ಹಗುರದಿಂದ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿ ಈ ಭಾಗದ ಇನ್ನಿತರ ಪ್ರದೇಶದಲ್ಲಿ ವ್ಯಾಪಾಕವಾಗಿ ಅತಿ ಹಗುರದಿಂದ ಸಾಮಾನ್ಯ ಮಳೆಯಾಗಲಿದೆ.
ಮಲೆನಾಡಿನಲ್ಲಿ ಹವಾಮಾನ ಸ್ಥಿತಿಗತಿ :
ಹಾಸನ, ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕವಾಗಿ ವರುಣನ ಅಬ್ಬರವಿರಲಿದೆ.
ಕರಾವಳಿ ಭಾಗ :
ದಕ್ಷಿಣಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಚದುರಿದಂತೆ ಅತಿಹಗುರ ಮಳೆಯಗುವ ನಿರೀಕ್ಷೆಯಿದೆ ಎಂದು ಕೆಎಸ್ ಎನ್ ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.