ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ಹಾಗೂ ಬೆಂಗಳೂರು ನಗರ ಜಿಲ್ಲೆ(ಜಿಲ್ಲಾಡಳಿತ) ವತಿಯಿಂದ “ಕೋವಿಡ್ ನಿಂದ ಮೃತಪಟ್ಟವರ ವಾರಸುದಾರರು ಅಥವಾ ಕುಟುಂಬಸ್ಥರಿಗೆ ಪರಿಹಾರ ಧನ ವಿತರಣಾ ಕಾರ್ಯಕ್ರಮ”ವನ್ನು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಎಸ್. ಬೊಮ್ಮಾಯಿ ರವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕಂದಾಯ ಸಚಿವರಾದ ಆರ್.ಅಶೋಕ್, ವಸತಿ ಸಚಿವರಾದ ವಿ.ಸೋಮಣ್ಣ, ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ ಸುಧಾಕರ್, ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್, ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ, ಸಂಸದರಾದ ಪಿ.ಸಿ. ಮೋಹನ್, ಶಾಸಕರುಗಳಾದ ಸತೀಶ್ ರೆಡ್ಡಿ, ರವಿಸುಬ್ರಮಣ್ಯ, ಬಿ.ಎ ಸುರೇಶ್, ಎನ್.ಎ.ಹ್ಯಾರೀಸ್, ಮಂಜುನಾಥ್, ಜಮೀರ್ ಅಹ್ಮದ್ ಖಾನ್, ವಿಧಾನ ಪರಿಷತ್ ಶಾಸಕರುಗಳಾದ ಲೆಹರ್ ಸಿಂಗ್ ಸಿರೋಯಾ, ಯು.ಬಿ.ವೆಂಕಟೇಶ್, ರಮೇಶ್ ಗೌಡ, ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ಗೌರವ್ ಗುಪ್ತ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜೆ.ಮಂಜುನಾಥ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.