ಹೊಸದಾಗಿ ನಿರ್ಮಾಣವಾಗುತ್ತಿರುವ ಪಾಟರಿ ಟೌನ್ ಮೆಟ್ರೋ ನಿಲ್ದಾಣಕ್ಕೆ ಪುನೀತ್ ರಾಜ್ ಕುಮಾರ್ ರವರ ಹೆಸರನ್ನು ನಾಮಕರಣ ಮಾಡಬೇಕೆಂದು ಕರ್ನಾಟಕ ಬಹುಜನ ಫೆಡರೇಷನ್ ವತಿಯಿಂದ ಸ್ಥಳೀಯ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ ಅವರ ಮೂಲಕ ನಮ್ಮ ಮೆಟ್ರೊ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಅವರಿಗೆ ಸೋಮವಾರ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಬಹುಜನ ಫೆಡರೇಷನ್ ಸಂಸ್ಥಾಪಕ ಅಧ್ಯಕ್ಷರಾದ ಜಿ.ಎಚ್ ಶಂಕರ್ ಹಾಗೂ ಫೆಡರೇಷನ್ ನ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.