ಬಾಗಲಕೋಟೆ, (www.bengaluruwire.com) : ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಯರಗಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಿಗ್ಗೆ ಮನೆಮನೆಗೆ ಗಂಗೆ ನಲ್ಲಿ ನೀರಿನ ಸಂಪರ್ಕವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪರವರು ಉದ್ಘಾಟನೆ ಮಾಡಿದರು.
ಇದೇ ವೇಳೆ ಹನಗಂಡಿ ಗ್ರಾಮದಲ್ಲಿ ನರೇಗಾ ಯೋಜನೆ ಅಡಿಯಲ್ಲಿ ನಿರ್ಮಾಣವಾಗಿರುವ ಕಲ್ಯಾಣಿ ವೀಕ್ಷಣೆ ಮಾಡಿದರು. ಅವರೊಂದಿಗೆ ಸ್ಥಳೀಯ ಮುಖಂಡರುಗಳು
ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.