Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ILLEGAL LIQUOR SALES IN KARNATAKA | ಕರ್ನಾಟಕದ ಈ ಜಿಲ್ಲೆಗಳಲ್ಲಿ ಅಕ್ರಮ ಮದ್ಯ ಮಾರಾಟ ಪ್ರಕರಣಗಳು ಹೆಚ್ಚಾಗಿವೆ !!

ಶಾಸಕ ಯು.ಟಿ.ಖಾದರ್ ವಿಧಾನಸಭೆಯಲ್ಲಿ ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಅಬಕಾರಿ ಸಚಿವ ಗೋಪಾಲಯ್ಯ ನೀಡಿದ ಲಿಖಿತ ಉತ್ತರದಲ್ಲಿ ಈ ಅಂಶ ಬಹಿರಂಗವಾಗಿದೆ.

by Bengaluru Wire Desk
February 15, 2022
in News Wire
Reading Time: 2 mins read
0
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (ಸಾಂದರ್ಭಿಕ ಚಿತ್ರ)

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (ಸಾಂದರ್ಭಿಕ ಚಿತ್ರ)

ಬೆಂಗಳೂರು, (www.bengaluruwire.com) : ರಾಜ್ಯದಲ್ಲಿ 2021-22ನೇ ಸಾಲಿನಲ್ಲಿ ಡಿಸೆಂಬರ್ ತನಕ 12,608 ಅಕ್ರಮ ಮದ್ಯ ಮಾರಾಟ ಪ್ರಕರಣಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿ ಕ್ರಮ ಕೈಗೊಂಡಿದ್ದಾರೆ ಎಂದು ಅಬಕಾರಿ ಸಚಿವ ಗೋಪಾಲಯ್ಯ ವಿಧಾನಸಭೆಗೆ ತಿಳಿಸಿದ್ದಾರೆ.

ಅಬಕಾರಿ ಸಚಿವ ಗೋಪಾಲಯ್ಯ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕ ಹಾಗೂ ಶಾಸಕರಾಗಿರುವ ಯು.ಟಿ.ಖಾದರ್ ಅವರು ಕೇಳಿದ ಚುಕ್ಕೆಗುರುತಿಲ್ಲದ ಪ್ರಶ್ನೆಗೆ ಮಂಗಳವಾರ ವಿಧಾನಸಭೆಯಲ್ಲಿ ಲಿಖಿತ ಉತ್ತರ ನೀಡಿರುವ ಸಚಿವ ಗೋಪಾಲಯ್ಯ, ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಅಬಕಾರಿ ಇಲಾಖೆಯು ವಲಯ ವ್ಯಾಪ್ತಿ ರೂಟ್ ಗಳಲ್ಲಿ ನಿರಂತರವಾಗಿ ಅಧಿಕಾರಿಗಳು ಗಸ್ತು ತಿರುಗಿ, ಅಕ್ರಮ ಮದ್ಯ ಮಾರಾಟ ಕಂಡು ಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತಿದೆ. ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಯಮಿತವಾಗಿ ರಸ್ತೆಗಾವಲು ನಡೆಸಿ ಸಂಶಯದಾಸ್ಪದ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

2019-20ನೇ ಸಾಲಿನಲ್ಲಿ ರಾಜ್ಯದಲ್ಲಿ ಒಟ್ಟು 18,375 ಅಕ್ರಮ ಮದ್ಯ ಮಾರಾಟ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 2020-21ನೇ ಸಾಲಿನಲ್ಲಿ ರಾಜ್ಯದಲ್ಲಿ 22,302 ಅಕ್ರಮ ಮದ್ಯ ಮಾರಾಟ ಪ್ರಕರಣಗಳನ್ನು ದಾಖಲಿಸಿ ಅಬಕಾರಿ ಕಾಯ್ದೆಯ ನಿಯಮಗಳ ಅನ್ವಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಲಿಖಿತ ಉತ್ತರದಲ್ಲಿ ವಿವರಿಸಿದ್ದಾರೆ.

ಇಡೀ ರಾಜ್ಯದಲ್ಲಿ ಹೆಚ್ಚಾಗಿ ಅಕ್ರಮ ಮದ್ಯ ಮಾರಾಟ ಪ್ರಕರಣ ದಾಖಲಾಗಿರುವ ಜಿಲ್ಲೆಗಳ ವಿವರ ಈ ಕೆಳಕಂಡಂತಿದೆ :

ಕ್ರಮ ಸಂಖ್ಯೆಜಿಲ್ಲೆಯ ಹೆಸರು2020-2021ನೇ ಇಸವಿ2021-22ನೇ ಇಸವಿ (ಡಿಸೆಂಬರ್ ತನಕ)
1)ಬೆಂಗಳೂರು ನಗರ ಜಿಲ್ಲೆ1,5271,528
2)ತುಮಕೂರು2,0421,030
3)ಕಲಬುರುಗಿ529832
4)ಮೈಸೂರು ಮತ್ತು ಮೈ.ಗ್ರಾಮಾಂತರ848703
5)ಬೆಳಗಾವಿ874521
6)ಹಾವೇರಿ879521
7)ಶಿವಮೊಗ್ಗ1,000479
8)ಬೆಂಗಳೂರು ಗ್ರಾಮಾಂತರ730449
9)ಹಾಸನ609427
10)ಮಂಡ್ಯ700405
  ಒಟ್ಟಾರೆ ಪ್ರಕರಣಗಳು9,7386,925

ಬೆಂಗಳೂರು ನಗರ ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ ಒಟ್ಟು 1,527 ಪ್ರಕರಣಗಳು ಕಂಡು ಬಂದಿದ್ದರೆ 2021-22ನೇ ಸಾಲಿನಲ್ಲಿ ಡಿಸೆಂಬರ್ ತನಕ ಒಟ್ಟು 1,528 ಪ್ರಕರಣಗಳು ಕಂಡು ಬಂದಿದೆ. ಇದು ರಾಜ್ಯದಲ್ಲಿ ಕಂಡು ಬಂದ ಅತ್ಯಂತ ಹೆಚ್ಚಿನ ಅಕ್ರಮ ಮದ್ಯ ಮಾರಾಟ ಪ್ರಕರಣಗಳಾಗಿದೆ. ಒಟ್ಟು 10 ಜಿಲ್ಲೆಗಳಿಂದ 2020-21ನೇ ಸಾಲಿನಲ್ಲಿ ಒಟ್ಟಾರೆ 9,738 ಅಕ್ರಮ ಲಿಕ್ಕರ್ ಮಾರಾಟ ಪ್ರಕರಣ ದಾಖಲಾಗಿದ್ರೆ, 2021-22ನೇ ಸಾಲಿನಲ್ಲಿ ಡಿಸೆಂಬರ್ ತನಕ 6,925 ಪ್ರಕರಣಗಳು ಅಬಕಾರಿ ಇಲಾಖೆಯಲ್ಲಿ ದಾಖಲಾಗಿದೆ. ಅಬಕಾರಿ ಇಲಾಖೆಯು ಆಡಳಿತ ದೃಷ್ಟಿಯಿಂದ ರಾಜ್ಯದಲ್ಲಿನ 31 ಜಿಲ್ಲೆಗಳಲ್ಲಿ 6 ವಿಭಾಗಗಳನ್ನು ಮಾಡಿಕೊಂಡು, ಅದರಲ್ಲಿ 34 ಅಬಕಾರಿ ಜಿಲ್ಲೆಗಳನ್ನು ರಚಿಸಿದೆ.

ಅಬಕಾರಿ ಕಾಯ್ದೆ ಅನ್ವಯ ಅಕ್ರಮ ಮದ್ಯ ಮಾರಾಟದಲ್ಲಿ ಕಳ್ಳಬಟ್ಟಿ ಮಾರಾಟ, ಕಳಪೆ ಮದ್ಯ, ಅಬಕಾರಿ ಲೈಸೆನ್ಸ್ ಇಲ್ಲದೆ ಮದ್ಯ ಮಾರಾಟ ಮಾಡುವುದು, ಗರಿಷ್ಠ ಮಾರಾಟ ದರಕ್ಕಿಂತ ಹೆಚ್ಚಿಗೆ ಲಿಕ್ಕರ್ ಮಾರುವುದು ಸೇರಿದಂತೆ ಮತ್ತಿತರ ಪ್ರಕರಣಗಳಲ್ಲಿ ಅಕ್ರಮ ಮದ್ಯ ಮಾರಾಟ ಕೇಸ್ ದಾಖಲಿಸಲಾಗುತ್ತದೆ ಎಂದು ಅಬಕಾರಿ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

WhatsApp Join our WhatsApp Channel
Previous Post

ISRO PSLV C52 ROCKET LAUNCH | ಇಸ್ರೋದ ಈ ವರ್ಷದ ಮೊದಲ ಪಿಎಸ್ ಎಲ್ ವಿ-ಸಿ52 ರಾಕೆಟ್ ಉಡಾವಣೆ ಯಶಸ್ವಿ

Next Post

Bengaluru International Film Festival | ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 3ರಿಂದ ಆರಂಭ

Next Post

Bengaluru International Film Festival | ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 3ರಿಂದ ಆರಂಭ

Poet Chennaveera Kanavi No More | ವಿಶ್ವಭಾರತಿಗೆ ಕನ್ನಡದ ಆರತಿ ಬೆಳಗಿದ ಸಾಹಿತಿ ನಾಡೋಜ ಡಾ.ಚೆನ್ನವೀರ ಕಣವಿ ವಿಧಿವಶ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group