Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಅಂಬೇಡ್ಕರ್ – ವಾಲ್ಮೀಕಿ ಭವನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸುಸಜ್ಜಿತ ಗ್ರಂಥಾಲಯ ನಿರ್ಮಿಸಲು ಕ್ರಮ : ಜಿಲ್ಲಾಧಿಕಾರಿ ಜೆ.ಮಂಜುನಾಥ್

by Bengaluru Wire Desk
February 25, 2022
in Bengaluru Focus
Reading Time: 1 min read
0
ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿ ಜೆ.ಮಂಜುನಾಥ್ ನೇತೃತ್ವದಲ್ಲಿ ಸಭೆ ನಡೆಸಿರುವ ಚಿತ್ರ

ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿ ಜೆ.ಮಂಜುನಾಥ್ ನೇತೃತ್ವದಲ್ಲಿ ಸಭೆ ನಡೆಸಿರುವ ಚಿತ್ರ

ಬೆಂಗಳೂರು, (www.bengaluruwire.com) : ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ ನಿರ್ಮಿಸಿರುವ ಅಂಬೇಡ್ಕರ್ ಭವನ ಮತ್ತು ಮಹರ್ಷಿ ವಾಲ್ಮೀಕಿ ಭವನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ಯುವಜನರಿಗೆ ಸುಸಜ್ಜಿತ ಗ್ರಂಥಾಲಯಗಳನ್ನು ನಿರ್ಮಿಸಿ ನಿರ್ವಹಿಸಲು ಬಿಬಿಎಂಪಿ ಆಯವ್ಯಯದಲ್ಲಿ ಸೇರ್ಪಡೆಗೊಳಿಸುವಂತೆ ಜಿಲ್ಲಾಧಿಕಾರಿ ಜೆ ಮಂಜುನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರದ ಬಹುಭಾಗಗಳಲ್ಲಿ ನಿರ್ಮಾಣಗೊಂಡಿರುವ ಅಂಬೇಡ್ಕರ್ ಭವನಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೇ ಸಮರ್ಪಕವಾಗಿ ಉಪಯೋಗವಾಗುತ್ತಿಲ್ಲ ಎಂದು ಸಮಿತಿ ಸದಸ್ಯರು ಸಭೆಯ ಗಮನ ಸೆಳೆದರು.

ಈ ಬಗ್ಗೆ ಸಮಿತಿಯ ವತಿಯಿಂದ ಬಿಬಿಎಂಪಿಗೆ ಪ್ರಸ್ತಾವನೆ ಸಲ್ಲಿಸಿ ಮೂಲಭೂತ ಸೌಕರ್ಯಗಳಿಗೆ ಅನುದಾನ ಮೀಸಲಿಡಲು ಕೋರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ದೌರ್ಜನ್ಯ ಪ್ರಕರಣಗಳ ಸಂಬಂಧ ಬಾಧಿತರು ಪೊಲೀಸ್ ಬಳಿ ಮೊರೆ ಹೋದಾಗ ವಿಳಂಬ ಧೋರಣೆ ತೋರದೆ, ದೂರಿಗೆ ಕೂಡಲೇ ಸ್ವೀಕೃತಿಯನ್ನು ನೀಡಬೇಕು. ದೂರು ದಾಖಲಿಸಲು ಬಂದವರೊಡನೆ ಸೌಜನ್ಯದಿಂದ ನಡೆದುಕೊಳ್ಳುವಂತೆ ಸೂಚಿಸಿದರು.

ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಂಗಳಿಗೆ ಒಮ್ಮೆ ಪರಿಶಿಷ್ಟ ಜಾತಿ/ ಪಂಗಡದ ಮುಖಂಡರನ್ನು ಆಹ್ವಾನಿಸಿ ಸಭೆ ನಡೆಸಿ ಸಮಸ್ಯೆಗಳ ಸೂಕ್ತ ಚರ್ಚೆಗೆ ಅವಕಾಶ ಕಲ್ಪಿಸಬೇಕು. ನಿರ್ಧಿಷ್ಟವಾಗಿ ಯಾವ ಠಾಣೆಗಳಲ್ಲಿ ಈ ಸಭೆ ನಡೆಸಲಾಗುತ್ತಿಲ್ಲವೋ ಅವರ ಬಗ್ಗೆ ಸಹಾಯಕ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲು ಸಮಿತಿ ಸದಸ್ಯ ಕಾರ್ಯದರ್ಶಿ ಮತ್ತು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಲಕ್ಷ್ಮಣ್ ರೆಡ್ಡಿಗೆ ಸೂಚಿಸಿದರು.

ಹರೆಬಿನ್ನಮಂಗಲ, ಜಾಲಹೋಬಳಿ ಮತ್ತು ಜ್ಯೋತಿಪುರ ಗ್ರಾಮಗಳಲ್ಲಿ ಫಾರಂ 53ರ ಅರ್ಜಿಗಳನ್ನು ದಾಖಲಿಸಿ ಭೂಮಿ ಸಕ್ರಮೀಕರಣಗೊಳಿಸಲು ಮಂಜೂರಾತಿ ಈಗಾಗಲೇ ನೀಡಲಾಗಿದ್ದರೂ ಪ. ಜಾ/ ಪ. ಪಂ ಫಲಾನುಭವಿಗಳಿಗೆ ಮಾತ್ರ ಸಾಗವಳಿ ಚೀಟಿ ವಿತರಿಸಿರುವುದಿಲ್ಲ ಎಂದು ಸಮಿತಿ ಸದಸ್ಯರಾದ ಹೆಣ್ಣೂರು ಶ್ರೀನಿವಾಸ್ ಅವರು ಸಭೆ ಗಮನಕ್ಕೆ ತಂದರು. ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ವಹಿಸಿವಂತೆ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿಗಳಿಗೆ ಸೂಚಿಸಿದರು.

ಕೊಳಚೆ ಅಭಿವೃದ್ಧಿ ಮಂಡಳಿಯ ಹೆಸರನ್ನು ಬದಲಾಯಿಸಲು ಸದಸ್ಯರೆಲ್ಲರೂ ಸಭೆಯ ಅಧ್ಯಕ್ಷರಿರಿಗೆ ಆಗ್ರಹಿಸಿದರು. ಈ ಬಗ್ಗೆ ಸೂಕ್ತ ಪ್ರಾಧಿಕಾರಕ್ಕೆ ಮನವಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ದೌರ್ಜನ್ಯ ಪ್ರಕರಣಗಳಲ್ಲಿ ಪ್ರಾಣ ಕಳೆದುಕೊಂಡಂತಹ ಪ.ಜಾ/ ಪ.ಪಂ ದವರ ಕುಟುಂಬದವರಿಗೆ ಅನುಕಂಪ ಆಧಾರಿತ ಸರ್ಕಾರಿ ನೌಕರಿ ನೀಡುವಲ್ಲಿ ಕೆಲವು ಕಡೆ ಲೋಪ ಕಂಡುಬಂದಿವೆ ಎಂಬ ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಲಕ್ಷ್ಮಣ್ ರೆಡ್ಡಿ ಅವರು, ಪ್ರಸ್ತುತ 32 ನೊಂದ ಕುಟುಂಬಗಳಿಗೆ ಪ್ರತಿ ತಿಂಗಳು ₹5,000/- ಗಳ ಮಾಸಾಶನವನ್ನು ಕಳೆದ ಒಂದು ವರ್ಷದಿಂದ ಒದಗಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಗಪ್ಪ, ದಕ್ಷಿಣ ಉಪವಿಭಾಗಾಧಿಕಾರಿ ರಘುನಂದನ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರಂಗಸ್ವಾಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕಿ ಪಲ್ಲವಿ ಹೊನ್ನಾಪುರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BW EXCLUSIVE | UKRAINE GROUND REPORT | ಉಕ್ರೇನ್ ನಿಂದ ಬೆಂಗಳೂರಿನ ವೈದ್ಯ ವಿದ್ಯಾರ್ಥಿಗಳು ಹಂಚಿಕೊಂಡ ಸಾಕ್ಷಾತ್ ವರದಿ…!

Next Post

Citizens Good Governance | ಸ್ಥಳೀಯಾಡಳಿತಕ್ಕೆ ಕಾಯದೆ ಕ್ರೌಡ್ ಫಂಡ್ ಸಂಗ್ರಹಿಸಿ ಆ ಬಡಾವಣೆ ನಾಗರೀಕರು ಮಾಡಿದ್ದೇನು?

Next Post

Citizens Good Governance | ಸ್ಥಳೀಯಾಡಳಿತಕ್ಕೆ ಕಾಯದೆ ಕ್ರೌಡ್ ಫಂಡ್ ಸಂಗ್ರಹಿಸಿ ಆ ಬಡಾವಣೆ ನಾಗರೀಕರು ಮಾಡಿದ್ದೇನು?

ಉಕ್ರೇನ್ ನಲ್ಲಿ ಸಿಲುಕಿದ್ದ 12 ವಿದ್ಯಾರ್ಥಿಗಳು ಬಾಂಬೆಯಿಂದ ಕೆಐಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಅವರನ್ನು ಕಂದಾಯ ಸಚಿವ ಆರ್.ಅಶೋಕ್ ಬರಮಾಡಿಕೊಂಡರು. ಕೆಎಸ್ ಡಿಎಮ್ ಎ ಆಯುಕ್ತ ಮನೋಜ್ ರಾಜನ್ ಚಿತ್ರದಲ್ಲಿದ್ದಾರೆ.

Ukraine Updates | Kannadiaga Students Arrivals KIAL Airport | ಉಕ್ರೇನ್ ನಿಂದ ಭಾರತಕ್ಕೆ ಸ್ಥಳಾಂತರವಾದ 30 ವಿದ್ಯಾರ್ಥಿಗಳು ಹಂತ ಹಂತವಾಗಿ ಇಂದು ಬೆಂಗಳೂರಿಗೆ ಆಗಮನ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group