ಬೆಂಗಳೂರು, (www.bengaluruwire.com) : ಯುದ್ಧಪೀಡಿತ ಉಕ್ರೇನ್ನಿಂದ ಹಿಂದಿರುಗಿದ ರಾಜ್ಯದ ಜನರು, ವಿಶೇಷವಾಗಿ ವಿದ್ಯಾರ್ಥಿ ಸಮುದಾಯದ ಪರಿಸ್ಥಿತಿಯನ್ನು ಪರಿಗಣಿಸಿ, ಕರ್ನಾಟಕದ ಹತ್ತಿರದ ವಿಮಾನ ನಿಲ್ದಾಣದಿಂದ ರಾಜ್ಯದೊಳಗಿನ ಅವರ ಸ್ಥಳೀಯ ಸ್ಥಳಗಳಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತ ಪ್ರಯಾಣವನ್ನು ನೀಡಲು ನಿರ್ಧರಿಸಲಾಗಿದೆ.
ಈ ಕುರಿತಂತೆ ಕೆಎಸ್ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ, ಕರ್ನಾಟಕ ರಾಜ್ಯ ವಿಮಾನ ನಿಲ್ದಾಣದೊಳಗಿನ ಎಲ್ಲಾ ನೋಡಲ್ ಅಧಿಕಾರಿಗಳು ಮತ್ತು ರಸ್ತೆ ಸಾರಿಗೆ ಸಂಸ್ಥೆಯ ಸಂಬಂಧಪಟ್ಟ ವ್ಯಾಪ್ತಿಯ ಅಧಿಕಾರಿಗಳು ಸಮನ್ವಯ ಸಾಧಿಸಿ ಉಚಿತ ಪ್ರಯಾಣವನ್ನು ಅನುವು ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.