Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP ACB RAID THOUSANDS OF CRORES ILLEGALITY | ಬಿಬಿಎಂಪಿಯಲ್ಲಿ ಸಾವಿರಾರು ಕೋಟಿ ರೂ. ಬ್ರಹ್ಮಾಂಡ ಭ್ರಷ್ಟಾಚಾರ : ಎಸಿಬಿ ಅಧಿಕಾರಿಗಳ ಪರಿಶೀಲನೆ ವೇಳೆ ಪತ್ತೆ

ಫೆ.25ರಿಂದ ಒಟ್ಟು 3 ದಿನ ನೂರಾರು ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಂದ ಬಿಬಿಎಂಪಿಯ ವಿವಿಧ ವಿಭಾಗಗಳಲ್ಲಿ ದಾಖಲೆ ಪರಿಶೀಲನೆ, ದಾಖಲೆಗಳ ವಶ | ಪಾಲಿಕೆಯ ಭ್ರಷ್ಟ ಹೆಗ್ಗಳಗಳಿಂದ ಬಿಬಿಎಂಪಿಗೆ ನೂರಾರು ಕೋಟಿ ರೂ. ನಷ್ಟ

by Bengaluru Wire Desk
March 3, 2022
in Bengaluru Focus, Public interest
Reading Time: 2 mins read
1
ಎಸಿಬಿ ಅಧಿಕಾರಿಗಳು ಬಿಬಿಎಂಪಿಯ ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿರುವ ಸಂದರ್ಭದ ಸಾಂದರ್ಭಿಕ ಚಿತ್ರ

ಎಸಿಬಿ ಅಧಿಕಾರಿಗಳು ಬಿಬಿಎಂಪಿಯ ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿರುವ ಸಂದರ್ಭದ ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) : ಸಿಲಿಕಾನ್ ಸಿಟಿಯ ಸ್ಥಳೀಯಾಡಳಿತ ಸಂಸ್ಥೆಯಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯಲ್ಲಿ ಕಂದಾಯ, ನಗರ ಯೋಜನೆ, ಟಿಡಿಆರ್. ಬೃಹತ್ ನೀರುಗಾಲುವೆ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸಾವಿರಾರು ಕೋಟಿ ರೂಪಾಯಿಯಷ್ಟು ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವುದು ಮೂರು ದಿನಗಳ ಕಾಲ ಭ್ರಷ್ಟಾಚಾರ ನಿಗ್ರಹ ದಳ (ACB) ನಡೆಸಿರುವ ಶೋಧನೆಯಿಂದ ಮೇಲ್ನೋಟಕ್ಕೆ ಕಂಡುಬಂದಿದೆ.

ಫೆ.25, 28ನೇ ತಾರೀಖು ಹಾಗೂ ಮಾ.3ರ ಬುಧವಾರದಂದು ಈ ಕಾರ್ಯಚಾರಣೆ ಕೈಗೊಂಡ ಬಳಿಕ ಎಸಿಬಿ ಅಧಿಕಾರಿಗಳು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ. ಬುಧವಾರ ಸಹ ಎಸಿಬಿಯ 200 ಅಧಿಕಾರಿ, ಸಿಬ್ಬಂದಿ ಬಿಬಿಎಂಪಿಯ 3 ವಲಯಗಳಲ್ಲಿ 35 ತಂಡಗಳಾಗಿ ತೆರಳಿ ಪಾಲಿಕೆಯ ವಿವಿಧ ಕಡತ, ದಾಖಲೆಗಳನ್ನು ಪರಿಶೀಲನೆ ನಡೆಸಿದ ಬಳಿಕ ಇಷ್ಟೊಂದು ಬೃಹತ್ ಪ್ರಮಾಣದ ಅಕ್ರಮ ನಡೆದಿರುವುದನ್ನು ಪತ್ತೆಹಚ್ಚಿದೆ.

ಯಾವ್ಯಾವ ವಿಭಾಗದಲ್ಲಿ ಏನೇನು ಅಕ್ರಮ ಮತ್ತು ಲೋಪದೋಷಗಳು ಕಂಡು ಬಂದಿದೆ ಎಂಬುದನ್ನು ಒಂದೊಂದಾಗಿ ನೋಡೋದಾದರೆ :

ಜಾಹೀರಾತು ವಿಭಾಗದಿಂದ ಪಾಲಿಕೆಗೆ 300 ಕೋಟಿ ರೂ. ತೆರಿಗೆ ನಷ್ಟ  :

ಬಿಬಿಎಂಪಿ ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭ

ಕಳೆದ ಹಲವು ವರ್ಷಗಳಿಂದ ಪಾಲಿಕೆಯ ಜಾಹೀರಾತು ವಿಭಾಗದಲ್ಲಿ 267 ಕೋಟಿ ರೂ. ಜಾಹೀರಾತು ತೆರಿಗೆ ಸಂಗ್ರಹ ಬಾಕಿಯಿದೆ. ಬಸ್ ತಂಗುದಾಣ ಮತ್ತು ಸ್ಕೈವಾಕ್ ಗೆ ಅಳವಡಿಸಿರುವ ಜಾಹೀರಾತುಗಳಿಂದ ಸುಮಾರು 27 ಕೋಟಿ ರೂ.ಗೂ ಅಧಿಕ ತೆರಿಗೆ ಸಂಗ್ರಹ ಮಾಡಿಲ್ಲ. ಖಾಸಗಿ ಮತ್ತು ಸಾರ್ವಜನಿಕ ಜಂಟಿ ಸಹಭಾಗಿತ್ವ ಮಾದರಿಯಡಿ (PPP Model) ಬಸ್ ತಂಗುದಾಣಕ್ಕೆ ಅಳವಡಿಸಿರುವ ಜಾಹೀರಾತುಗಳಿಂದ ಪಾಲಿಕೆಗೆ 6 ಕೋಟಿ ರೂ.ಗೂ ಅಧಿಕ ಕರ ಸಂಗ್ರಹ ಮಾಡಿಲ್ಲ. ಒಟ್ಟಾರೆ ಜಾಹೀರಾತು ವಿಭಾಗದಲ್ಲಿ ನಿಯಮಾನುಸಾರ ಜಾಹೀರಾತು ತೆರಿಗೆ ಸಂಗ್ರಹಿಸದೆ ಪಾಲಿಕೆ ಮತ್ತು ಸರ್ಕಾರಕ್ಕೆ ಅಂದಾಜು 300 ಕೋಟಿ ರೂಪಾಯಿಗಳಿಗೂ ಅಧಿಕ ನಷ್ಟ ಉಂಟಾಗಿರುವುದು ದಾಖಲೆಗಳಿಂದ ತಿಳಿದುಬಂದಿದೆ.

ಟಿ.ಡಿ.ಆರ್.ವಿಭಾಗದಲ್ಲಿ ಸರ್ಕಾರದ ಕರಾಬು ಜಮೀನುಗಳಿಗೂ ಟಿಡಿಆರ್ ಹಂಚಿಕೆ :

ವರ್ಗಾವಣೆ ಮಾಡಬಹುದಾದ ಹಕ್ಕು (TDR)ಗಳನ್ನು ಪಡೆಯಲು ಕಳಪೆ ಗುಣಮಟ್ಟದ ಕಟ್ಟಡಗಳನ್ನು ನಿರ್ಮಿಸಿ, ಹೆಚ್ಚಿನ ಮೊತ್ತದ ಟಿಡಿಆರ್ ಮಂಜೂರು ಮಾಡಿಸಿಕೊಂಡು, ಬಳಿಕ ಅದೇ ಜಾಗದಲ್ಲಿ ಹೊಸ ಕಟ್ಟಡವನ್ನು ನಿರ್ಮಾಣ ಮಾಡಿಕೊಂಡಿರುವ ಅಂಶ ಕಂಡುಬಂದಿದೆ. ರಸ್ತೆ ಅಗಲೀಕರಣ ವಾಸ್ತವವಾಗಿ ಮಾಡದಿದ್ದರೂ, ರಸ್ತೆ ಅಗಲೀಕರಣ ಮಾಡಿದ್ದಾಗಿ ದಾಖಲೆ ಸೃಷ್ಟಿಸಿ, ಪರಿಹಾರ ಮೊತ್ತವನ್ನು ಅಕ್ರಮವಾಗಿ ಮಂಜೂರು ಮಾಡಲಾಗಿದೆ. ಸರ್ಕಾರದ ಕರಾಬ್ ಜಮೀನುಗಳಿಗೆ ಕೊಟ್ಟಿ ದಾಖಲೆ ಸೃಷ್ಟಿಸಿ ಟಿಡಿಆರ್ ಮಂಜೂರು ಮಾಡಲಾಗಿರುವುದು ಎಸಿಬಿ ಪರಿಶೀಲನೆ ವೇಳೆ ಕಂಡುಬಂದಿದೆ.

ಪಾಲಿಕೆ ಅಧಿಕಾರಿಗಳು ಡೆವಲಪ್ ಮೆಂಟ್ ರೈಟ್ಸ್ ಸರ್ಟಿಫಿಕೇಟ್ (DRC) ನೀಡಿದ ಬಳಿಕ ಆ ಡಿಆರ್ ಸಿಯನ್ನು ಬಹುಮಹಡಿ ಕಟ್ಟಡಗಳ ಎಫ್ ಎಆರ್ ಹೆಚ್ಚಿಸಲು ಬಳಸಬೇಕಾಗಿರುತ್ತದೆ. ಆದರೆ ಪಾಲಿಕೆಯ ನಗರ ಯೋಜನೆಯ ಭ್ರಷ್ಟ ಅಧಿಕಾರಿಗಳು ಆ ಡಿಆರ್ ಸಿ ಗೆ ಹೆಚ್ಚಿನ ಟಿಡಿಆರ್ ನಿಗಧಿಪಡಿಸಿ, ಕೋಟ್ಯಾಂತರ ರೂಪಾಯಿ ಮೊತ್ತದ ಭಾರೀ ಅವ್ಯವಹಾರ ನಡೆಸಿರುವುದು ಎಸಿಬಿ ಅಧಿಕಾರಿಗಳು ದಾಖಲೆ ಶೋಧನೆ ಸಂದರ್ಭದಲ್ಲಿ ಕಂಡುಬಂದಿದ್ದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಟಿವಿಸಿಸಿಗೆ ಸಲ್ಲಿಸಲಾದ ದಾಖಲೆಗಳಲ್ಲಿ ಲೋಪದೋಷವಿದ್ದರೂ ಕ್ರಮವಿಲ್ಲ :

ಮುಖ್ಯ ಆಯುಕ್ತರ ಅಡಿಯಲ್ಲಿ ಪ್ರಧಾನ ಎಂಜಿನಿಯರ್ ನೇತೃತ್ವದಲ್ಲಿ ತಾಂತ್ರಿಕ ಜಾಗೃತ ಕೋಶವಿದ್ದು, ಆ ಕೋಶಕ್ಕೆ ಬಿಬಿಎಂಪಿಯ ಕಾಮಗಾರಿಗಳು, ಆಂತರಿಕ ಪರಿಶೀಲನೆ ಬಗ್ಗೆ ಬಂದ ಸಮಗ್ರ ವರದಿಗಳಲ್ಲಿ ಸಾಕಷ್ಟು ಲೋಪದೋಷಗಳು ಕಂಡುಬಂದಿದ್ದರೂ, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕ್ರಮವಹಿಸಿಲ್ಲ. ಹೀಗಾಗಿ ಸಂಬಂಧಪಟ್ಟ ದಾಖಲೆ ಮತ್ತು ಕಡತಗಳನ್ನು ವಶಕ್ಕೆ ಪಡೆದು ಪರಿಶೀಲಿಸಲಾಗುತ್ತಿದೆ.

ಬಿಬಿಎಂಪಿ ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭ

ಕಟ್ಟಡ ಪೂರ್ಣಗೊಳ್ಳುವ ಮುನ್ನವೇ ಒಸಿ ವಿತರಿಸಿದ ಟೌನ್ ಪ್ಲಾನಿಂಗ್ ಅಧಿಕಾರಿಗಳು :

ಕೆಲವು ಕೆರೆ ಮತ್ತು ಬಫರ್ ಜೋನ್ ಗಳಲ್ಲಿ ಅನಧಿಕೃತವಾಗಿ ಅಪಾರ್ಟ್ ಮೆಂಟ್ ಗಳನ್ನು ನಿರ್ಮಾಣ ಮಾಡಲು ಸ್ಥಳ ಪರಿಶೀಲನೆ ಮಾಡದೆ ನಕ್ಷೆಯನ್ನು ಮಂಜೂರು ಮಾಡಿ, ಖಾತಾ ಸೃಷ್ಟಿಸಿರುವುದನ್ನು ಎಸಿಬಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಇಂತಹ ಕಡತಗಳನ್ನು ಪರಿಶೀಲನೆಗಾಗಿ ವಶಕ್ಕೆ ಪಡೆಯಲಾಗಿದೆ. ಕೆಲವು ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಿಗೆ ಆ ಕಟ್ಟಡ ಪೂರ್ಣವಾಗುವ ಮುನ್ನವೇ ಸ್ವಾಧೀನ ಪ್ರಮಾಣಪತ್ರ (ಒಸಿ) ನೀಡಲಾಗಿದೆ. 3 ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆದು 6 ಅಂತಸ್ತಿನ ಕಟ್ಟಡ ನಿರ್ಮಿಸಿದರೂ ಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವುದನ್ನು ಎಸಿಬಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. 10 ಮಹಡಿಗಳಿಗಿಂತ ಮೇಲ್ಪಟ್ಟ ಹಾಗೂ 2 ಎಕರೆಗಿಂತಲೂ ಹೆಚ್ಚಿನ ವಿಸ್ತೀರ್ಣದಲ್ಲಿ ಕಟ್ಟಲಾಗಿರುವ ಅಪಾರ್ಟ್ ಮೆಂಟ್ ಅಥವಾ ಕಟ್ಟಡಗಳಿಗೆ ಸಂಬಂಧಿಸಿದ ಕಡತಗಳನ್ನು ಪರಿಶೀಲಿಸಲಾಗುತ್ತಿದೆ. ಇವುಗಳಿಂದ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ತೆರಿಗೆ ಬರಬೇಕಿರುವುದನ್ನು ಅಂದಾಜಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ವಾಣಿಜ್ಯ ಸಂಕೀರ್ಣಗಳಿಗೆ ಕಡಿಮೆ ತೆರಿಗೆ ವಿಧಿಸಿ ಕೋಟ್ಯಾಂತರ ರೂ. ಅಕ್ರಮ :

ಬಿಬಿಎಂಪಿಯ ಮೂರು ವಲಯ ಕಚೇರಿಗಳ ವ್ಯಾಪ್ತಿಯಲ್ಲಿನ ವಾಣಿಜ್ಯ ಸಂಕೀರ್ಣಗಳಿಗೆ ಹಾಗೂ ವಸತಿ ಉದ್ದೇಶಿತ ಸ್ವತ್ತುಗಳಿಗೆ ಕಡಿಮೆ ಆಸ್ತಿ ತೆರಿಗೆ ವಿಧಿಸಲಾಗುತ್ತಿದೆ. ಬಹುಮಹಡಿ, ಸಾಫ್ಟ್ ವೇರ್ ಮತ್ತು ಬಾಡಿಗೆ ಉದ್ದೇಶಕ್ಕಾಗಿ ನಿರ್ಮಾಣ ಮಾಡಿರುವ ಕಟ್ಟಡಗಳಿಗೆ ವಸತಿ ಉದ್ದೇಶದ ಸ್ವತ್ತುಗಳೆಂದು ಪರಿಗಣಿಸಿ, ಕಡಿಮೆ ತೆರಿಗೆ ನಿಗಧಿಪಡಿಸಲಾಗಿದೆ. ಹೊಸದಾಗಿ ಕಟ್ಟಿರುವ ವಾಣಿಜ್ಯ ಸಂಕೀರ್ಣಗಳಿಗೆ ಹಳೆಯ ವಲಯದ ತೆರಿಗೆ ನಿಗಧಿ ಮಾಡಿ ಆ ಮೂಲಕ ಪಾಲಿಕೆಗೆ ಕೋಟ್ಯಾಂತರ ರೂಪಾಯಿ ನಷ್ಟ ಉಂಟು ಮಾಡುತ್ತಿರುವುದು ದಾಖಲೆ ಪರಿಶೀಲನೆ ವೇಳೆ ಕಂಡುಬಂದಿದೆ.

ತೆರಿಗೆ ನಿಗಧಿಪಡಿಸುವ ವಿಷಯಕ್ಕೆ ಸಂಬಂಧಿಸಿದಂತೆ ಕಾನೂನು ಬಾಹಿರವಾಗಿ ಕ್ರಮ ಕೈಗೊಂಡು ಬಿಬಿಎಂಪಿಗೆ 217 ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ 7 ಕಡತಗಳನ್ನು ಎಸಿಬಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ನಗರದ ಕೆಲವೊಂದು ಕಡೆಗಳಲ್ಲಿ ಪೆಂಟ್ ಹೌಸ್ ನಿರ್ಮಿಸಿದರೂ ಪಾಲಿಕೆಗೆ ತೆರಿಗೆ ಹಣ ಪಾವತಿಸದೆ ಅಪಾರ ನಷ್ಟ ಉಂಟಾಗಿರುವುದು ಎಸಿಬಿ ಶೋಧನೆ ವೇಳೆ ಬಹಿರಂಗವಾಗಿದೆ.

ಬೃಹತ್ ನೀರುಗಾಲುವೆ ವಿಭಾಗದಲ್ಲಿ ದಾಖಲೆಗಳಿಲ್ಲದ 1.18 ಲಕ್ಷ ನಗದು ಪತ್ತೆ :

ಪಾಲಿಕೆಯ ಬೃಹತ್ ನೀರುಗಾಲುವೆ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಯಲ್ಲಿ 1.18 ಲಕ್ಷ ರೂಪಾಯಿ ಸೂಕ್ತ ದಾಖಲೆಗಳಿಲ್ಲದ ನಗದು ಹಣ ಪತ್ತೆಯಾಗಿದ್ದು, ಇದನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. 2017ನೇ ಇಸವಿಯಿಂದ ಈತನಕ 1,050 ಕೋಟಿ ರೂ. ಮೌಲ್ಯದ ಟೆಂಡರ್ ಕಾಮಗಾರಿಗಳ ದಾಖಲೆಗಳನ್ನು, ಕೊಟ್ಟಿ ಕಡತ, ಲೆಕ್ಕಪರಿಶೋಧನಾ ವರದಿಗಳನ್ನು ಪರಿಶೀಲನೆಗಾಗಿ ವಶಕ್ಕೆ ಪಡೆದಿದ್ದಾರೆ.

ಬಿಬಿಎಂಪಿ ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭ

ಬೃಹತ್ ನೀರುಗಾಲುವೆಯ ಕಾಮಗಾರಿಗಳ ಕೆಲವು ಕಡತಗಳನ್ನು ಪರಿಶೋಧಿಸಿದ ಅಧಿಕಾರಿಗಳಿಗೆ ಶಾಕಿಂಗ್ ಕಾದಿತ್ತು. ಕೇವಲ ಕೆಲವೇ ಗುತ್ತಿಗೆದಾರರಿಗೆ ಕಾಮಗಾರಿಗಳನ್ನು ಹಂಚಿಕೆ ಮಾಡಿರುವುದು, ಹೂಳೆತ್ತುವ ಕಾಮಗಾರಿಗಳಲ್ಲಿ ಅಕ್ರಮ ನಡೆದಿರುವುದು ಕಂಡು ಬಂದಿದೆ. ಹೀಗಾಗಿ ಆ ಕಡತಗಳ ಪರಿಶೀಲನಾ ಕಾರ್ಯವನ್ನು ಅಧಿಕಾರಿಗಳು ಮುಂದುವರೆಸಿದ್ದಾರೆ.

ಘನತ್ಯಾಜ್ಯ ನಿರ್ವಹಣಾ ವಿಭಾಗದಲ್ಲಿ 100 ಕೋಟಿ ರೂ. ಅವ್ಯವಹಾರ :

ಪಾಲಿಕೆಯ ಘನತ್ಯಾಜ್ಯ ನಿರ್ವಹಣಾ ವಿಭಾಗದಲ್ಲಿ 2014-15ನೇ ಸಾಲಿನ ಲೆಕ್ಕಪರಿಶೋಧನಾ ವರದಿಯ ಪ್ರಕಾರ 75 ಕೋಟಿ ರೂ. ಹೆಚ್ಚುವರಿ ಬಿಲ್ ಆಗಿರುವ ಬಗ್ಗೆ ವರದಿಯಲ್ಲಿ ನಮೂದಿಸಲಾಗಿದೆ. ಆದರೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ. ಒಂದು ಅಂದಾಜಿನ ಪ್ರಕಾರ ಘನತ್ಯಾಜ್ಯ ನಿರ್ವಹಣಾ ವಿಭಾಗದಲ್ಲಿ 100 ಕೋಟಿ ರೂ. ಹೆಚ್ಚು ಅವ್ಯವಹಾರ ನಡೆದಿರುವ ಬಗ್ಗೆ ಮಾಹಿತಿಯಿದ್ದು, ಕಡತ ಪರಿಶೀಲನಾ ಕಾರ್ಯ ನಡೆಯುತ್ತಿದೆ.

ಹಣಕಾಸು ವಿಭಾಗದಲ್ಲಿ ಹಲವು ವರ್ಷಗಳಿಂದ ಭಾರೀ ಮೊತ್ತದ ಟೆಂಡರ್ ಅವ್ಯವಹಾರ :

ಹಣಕಾಸು ವಿಭಾಗದಲ್ಲಿ ಹಲವು ವರ್ಷಗಳಿಂದ ಭಾರೀ ಮೊತ್ತದ ಟೆಂಡರ್ ಅವ್ಯವಹಾರ ನಡೆದಿರುವ ಗುಮಾನಿಯಿದ್ದು, ಕೆಲವೊಂದು ಅಕ್ರಮಗಳು ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ದೊಡ್ಡ ಮೊತ್ತದ ಕಾಮಗಾರಿ ನಿರ್ವಹಿಸುವ ಗುತ್ತಿಗೆದಾರರಿಗೆ ಬಿಲ್ ಪಾವತಿಸಿ, ಸಣ್ಣ ಮೊತ್ತದ ಕಾಮಗಾರಿ ನಡೆಸಿದ ಕಾಂಟ್ರಾಕ್ಟರ್ ಗಳಿಗೆ ಹಣ ಪಾವತಿಸಿದೆ ಬಾಕಿ ಉಳಿಸಿಕೊಳ್ಳಲಾಗಿದೆ. ಕಾಮಗಾರಿ ನಡೆಯದಿದ್ದರೂ, ನಕಲಿ ದಾಖಲೆ ನೀಡಿದರೂ ಪರಿಶೀಲಿಸದೆ ಲೀಲಾಜಾಲವಾಗಿ ಗುತ್ತಿಗೆದಾರರಿಗೆ ಬಿಲ್ ಪಾವತಿಸಿರುವುದು ಕಂಡುಬಂದಿದೆ. ಟೆಂಡರ್ ವಿಲೇವಾರಿ ಮಾಡಲು ಬಾಕಿಯಿರುವ ಅಂತಹ ಕಡತಗಳನ್ನು ಎಸಿಬಿ ಅಧಿಕಾರಿಗಳು ಕಡತಗಳನ್ನು ವಶಕ್ಕೆ ಪಡೆದಿದ್ದಾರೆ. ಟೆಂಡರ್ ಅನ್ನು ನಿಯಮಾನುಸಾರ ಮಾಡದೆ ತರಾತುರಿಯಲ್ಲಿ ಟೆಂಡರ್ ಮಂಜೂರು ಮಾಡಿರುವುದನ್ನು ಎಸಿಬಿ ಪರಿಶೀಲನೆ ವೇಳೆ ಪತ್ತೆಯಾಗಿದೆ.

ಬಿಬಿಎಂಪಿ ಹಲವು ಕಚೇರಿಗಳ ವಿವಿಧ ವಿಭಾಗಗಳ ಮೇಲೆ ಎಸಿಬಿ ಅಧಿಕಾರಿಗಳು ಫೆ.25ರಿಂದ ಬೇರೆ ಬೇರೆ ದಿನಾಂಕಗಳಂದು ಮೂರು ದಿನಗಳ ಕಾಲ ಪರಿಶೀಲನೆ ನಡೆಸಿರುವ ಮಧ್ಯೆಯೇ ನಗರದಲ್ಲಿನ ಖಾಸಗಿ ಸಂಸ್ಥೆಗಳು, ನಾಗರೀಕರು 15 ಕೋಟಿ ರೂ. ನಷ್ಟು ಆಸ್ತಿ ತೆರಿಗೆ ಕಟ್ಟಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Mahashivarathri 2022 Shankara Math | ಬೆಂಗಳೂರಿನ ಶಂಕರಮಠದಲ್ಲಿ ಮಹಾದೇವನಿಗೆ ಚತುರ್ವೇದ ಸಹಿತ ಚತುರ್ಯಾಮ ಪೂಜೆ

Next Post

ಪ್ರತಿವರ್ಷ ಮಾರ್ಚ್ 3 ರಂದು ವಿಶ್ವ ಕನ್ನಡ ಸಿನಿಮಾ ದಿನವಾಗಿ ಆಚರಣೆ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ

Next Post

ಪ್ರತಿವರ್ಷ ಮಾರ್ಚ್ 3 ರಂದು ವಿಶ್ವ ಕನ್ನಡ ಸಿನಿಮಾ ದಿನವಾಗಿ ಆಚರಣೆ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ

Karnataka State Buget 2022-23 | ರಾಜ್ಯ ಸರ್ಕಾರದ 2022-23 ಬಜೆಟ್ ನಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ. ಅನುದಾನ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d