Monday, September 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Karnataka State Buget 2022-23 | ರಾಜ್ಯ ಸರ್ಕಾರದ 2022-23 ಬಜೆಟ್ ನಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ. ಅನುದಾನ

ಬಿಬಿಎಂಪಿ ಚುನಾವಣೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಂದ ನಗರಕ್ಕೆ ಬಂಪರ್ ಯೋಜನೆ | ಈ ಬಾರಿಯಾದರೂ ಬಿ-ಖಾತಾ ಎ-ಖಾತಾವಾಗಿ ಬದಲಾವಣೆಯಾಗುತ್ತಾ?

by Bengaluru Wire Desk
March 4, 2022
in Bengaluru Focus, News Wire, Public interest
Reading Time: 2 mins read
0

ಬೆಂಗಳೂರು, (www.bengaluruwire.com) : ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿದ ಬಿಜೆಪಿ ಅಧಿಕಾರ ಅವಧಿಯ ಕೊನೆಯ ಹಾಗೂ ತಮ್ಮ ಚೊಚ್ಚಲ ಬಜೆಟ್​ನಲ್ಲಿ 2,04,586.68 ಕೋಟಿ ರೂ. ಮೊತ್ತದ ಬಜೆಟ್ ಮಂಡಿಸಿದರು.

ಆ ಪೈಕಿ 2022-23ನೇ ಸಾಲಿನ ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ಬಿಬಿಎಂಪಿ ನುಂಬರುವ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು 8,409 ಕೋಟಿ ರೂ. ಅನುದಾನ ಒದಗಿಸಿ, ನಗರಕ್ಕೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದ್ದಾರೆ. 6,000 ಕೋಟಿ ರೂ. ವೆಚ್ಚದಲ್ಲಿ ಅಮೃತ ಯೋಜನೆ ಮೂಲಕ ಬಿಬಿಎಂಪಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಸಿಎಂ ಬಜೆಟ್​ನಲ್ಲಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಬಜೆಟ್ ಭಾಷಣ ಮಾಡುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ

ನಮ್ಮ ಮೆಟ್ರೋ ಗೆ ಬಜೆಟ್ ನಲ್ಲಿ ಪ್ರಕಟಿಸಿರುವ ಅಂಶಗಳು :

2021-22ನೇ ಸಾಲಿನಲ್ಲಿ ನಮ್ಮ ಮೆಟ್ರೊ 2ನೇ ಹಂತದಲ್ಲಿ 7.53 ಕಿ.ಮೀಗಳ ಹೆಚ್ಚುವರಿ ಮಾರ್ಗ ಕಾರ್ಯರಂಭ ಮಾಡಿದೆ. 2022-23ನೇ ಸಾಲಿನಲ್ಲಿ 33 ಕಿ.ಮೀ ಮಾರ್ಗವನ್ನು ಸೇರಿಸಲಾಗುವುದು. ಇದರಿಂದ ಒಟ್ಟಾರೆ 89 ಕಿ.ಮೀಗಳ ಉದ್ದದ ಮೆಟ್ರೋ ಮಾರ್ಗವನ್ನು ಹೊಂದಿದಂತಾಗುತ್ತದೆ.

ಮಾರ್ಚ್ 2025ರ ಒಳಗೆ ಸೆಂಟ್ರಲ್ ಸಿಲ್ಕ್ಸ್ ಬೋರ್ಡ್ ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ 58.19 ಕಿ.ಮೀ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಿಎಂ ಬೊಮ್ಮಾಯಿ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

11,250 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ನಮ್ಮ ಮೆಟ್ರೋ ಹಂತ-3 ಯೋಜನೆ ಜಾರಿಗೆ ಕೇಂದ್ರ ಸರ್ಕಾರಕ್ಕೆ ಸಮಗ್ರ ಯೋಜನಾ ವರದಿ (ಡಿಪಿಆರ್) ಸಲ್ಲಿಕೆ ಮಾಡಲಾಗುವುದು. ಇದು ಹೆಬ್ಬಾಳದಿಂದ ಜೆಪಿನಗರದ ತನಕ 32 ಕಿ.ಮೀ ಹೊರವರ್ತುಲ ರಸ್ತೆ ಮಾರ್ಗ ಹಾಗೂ ಹೊಸಹಳ್ಳಿಯಿಂದ ಕಡಬಗೆರೆವರೆಗೆ 13 ಕಿ.ಮೀ.ಗಳ ಮಾರ್ಗವನ್ನು ಒಳಗೊಂಡಿದೆ.

2022-23ನೇ ಸಾಲಿನಲ್ಲಿ 15,000 ಕೋಟಿ ರೂ. ವೆಚ್ಚದಲ್ಲಿ 37 ಕಿ.ಮೀ. ಉದ್ದದ ಹೊಸ ಮೆಟ್ರೋ ಮಾರ್ಗಕ್ಕೆ ಡಿಪಿಆರ್ ತಯಾರಿಸಲು ಕ್ರಮವಹಿಸಲಾಗುವುದು.

ತುಮಕೂರು ರಸ್ತೆಯಿಂದ ಬಳ್ಳಾರಿ ರಸ್ತೆ ಹಾಗೂ ಹಳೆ ಮದ್ರಾಸ್ ರಸ್ತೆಯನ್ನು ಹಾದು ಹೋಗಿ ಹೊಸೂರು ರಸ್ತೆ ಸೇರುವ 73 ಕಿಮೀ. ಉದ್ದ ಮತ್ತು 100 ಮೀ ಅಗಲದ ಫೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಹಾಗೂ ಭೂಸ್ವಾಧೀನ ವೆಚ್ಚ ಸೇರಿ 21,091 ಕೋಟಿ ರೂ. ಯೋಜನೆಯನ್ನು ಪ್ರಸಕ್ತ ವರ್ಷದಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ. ಗುತ್ತಿಗೆದಾರರೇ ಭೂಸ್ವಾಧೀನ ಮಾಡಿಕೊಂಡು, ಯೋಜನಾ ನಿರ್ಮಾಣ ವೆಚ್ಚ ಭರಿಸುವ ಡಿಬಿಎಫ್ ಒಟಿ (DBFOT) ಮಾದರಿಯಲ್ಲಿ ಟೆಂಡರ್ ಕರೆಯಲು ಕ್ರಮ ಕೈಗೊಳ್ಳಲಾಗುವುದು.

ಗುರುಗುಂಟೆಪಾಳ್ಯ ವಾಹನ ದಟ್ಟಣೆಗೆ ಜಂಟಿಕ್ರಮ :

ಗೊರಗುಂಟೆಪಾಳ್ಯದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಗ್ರೇಡ್ ಸೆಪರೇಟರ್ ನಿರ್ಮಾಣ, ಕೇಂಪೆಗೌಡ ಬಡಾವಣೆಯಲ್ಲಿ 1297 ಎಕರೆ ಜಮೀನು ಸ್ವಾಧೀನಪಡಿಸಿಕೊಂಡು ಆಧುನಿಕ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿ‌. ಎನ್ ಜಿಇಎಫ್ (NGEF) ನ 105 ಎಕರೆ ಪ್ರದೇಶದಲ್ಲಿ ಸಿಂಗಾಪುರ ಮಾದರಿಯಲ್ಲಿ ಗ್ರೀನ್ ಎಕ್ಸ್ ಪೋ ನಿರ್ಮಾಣ ಮಾಡಲು ಸರ್ಕಾರ ಘೋಷಿಸಿದೆ.

ಮೆಗಾ ಜ್ಯುವೆಲ್ಲರಿ ಪಾರ್ಕ್​:
ಇನ್ನು ಬೆಂಗಳೂರಿನಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್​ ಸ್ಥಾಪನೆಗೆ ಮಾಡಲು ಸರ್ಕಾರ ಉದ್ದೇಶಿಸಿದ್ದು, ಇದರಿಂದ 10 ಸಾವಿರ ಜನರಿಗೆ ಉದ್ಯೋಗಾವಕಾಶ ಸಿಗುವ ನಿರೀಕ್ಷೆ ಇದೆ. ಒಟ್ಟಾರೆ ಬೆಂಗಳೂರು ನಗರ ಅಭಿವೃದ್ಧಿಗೆ 8,409 ಕೋಟಿ ರೂಪಾಯಿ ಅನುದಾನವನ್ನು ಬಜೆಟ್​ನಲ್ಲಿ ಮೀಸಲಿಡಲಾಗಿದೆ.

ರಾಜಧಾನಿ ಬೆಂಗಳೂರಿಗೆ ಏನೆಲ್ಲ ಸಿಕ್ತು ?
ಬಿಬಿಎಂಪಿ ಚುನಾವಣಾ ದೃಷ್ಟಿಯಿಂದ ಬೆಂಗಳೂರಿಗೆ ಸಿಎಂ ಬೊಮ್ಮಾಯಿ ಏನೆಲ್ಲ ಕೊಟ್ರು ಅಂತ ನೋಡೊಣ :

ಬೆಂಗಳೂರು ಯಲಹಂಕದಲ್ಲಿ 350 ಎಕರೆ ವಿಸ್ತೀರ್ಣದಲ್ಲಿ ಅಟಲ್ ಬಿಹಾರಿ ವಾಜಪೇಯಿ ಉದ್ಯಾನವನ(ಲಾಲ್ ಬಾಗ್, ಕಬ್ಬನ್ ಪಾರ್ಕ್ ಮಾದರಿ).

ಬೆಂಗಳೂರಿನಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆ, 10 ಸಾವಿರ ಜನರಿಗೆ ಉದ್ಯೋಗಾವಕಾಶ.

ಬೆಂಗಳೂರಿನ ಎಲ್ಲಾ ವಾರ್ಡ್‌ಗಳಲ್ಲಿ ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಸಾಂಕ್ರಾಮಿಕ ರೋಗಗಳ ತಪಾಸಣೆಗೆ ಒಟ್ಟು 498 “ನಮ್ಮ ಕ್ಲಿನಿಕ್​ಗಳ ಸ್ಥಾಪನೆ

ಚೆನ್ನೈ- ಬೆಂಗಳೂರು- ಮೈಸೂರು ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆ ಅನುಷ್ಠಾನಕ್ಕೆ, ಕೇಂದ್ರದೊಂದಿಗೆ ಸಹಯೋಗ.

15,267 ಕೋಟಿ ರೂ. ವೆಚ್ಚದ ಬೆಂಗಳೂರು ಉಪನಗರ ರೈಲ್ವೇ ಯೋಜನೆ ಜಾರಿಗೆ ಕ್ರಮ. 2026 ಇಸವಿ ವೇಳೆಗೆ ಯೋಜನೆ ಪೂರ್ಣ. ಚಿಕ್ಕಬಾಣಾವರ- ಬೈಯಪ್ಪನಹಳ್ಳಿ ಕಾರಿಡಾರ್ ಕಾಮಗಾರಿ ಶೀಘ್ರ ಆರಂಭ.

6 ಲಕ್ಷ ಬಿ ವಹಿ ಖಾತೆ – ಎ ಖಾತೆಗೆ ಬದಲಾಯಿಸಲು ಕ್ರಮ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಿ ವಹಿಯಲ್ಲಿರುವ ದಾಖಲಿಸಿರುವ 6 ಲಕ್ಷಕ್ಕೂ ಹೆಚ್ಚು ಸ್ವತ್ತುಗಳನ್ನು ಎ- ವಹಿಗೆ ದಾಖಲಿಸಲು, ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಅಧಿನಿಯಮ ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮಗಳಡಿ ಸೂಕ್ತ ಕಾನೂನು ಕ್ರಮ.

ಬೆಂಗಳೂರಿನ ನಾಲ್ಕು ಭಾಗಗಳಲ್ಲಿ 500 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ. ನಗರದ ಆಯ್ದ 20 ಶಾಲೆಗಳನ್ನು 89 ಕೋಟಿ ರೂ.ಗಳಲ್ಲಿ ಉನ್ನತೀಕರಿಸಿ, ಬೆಂಗಳೂರು ಪಬ್ಲಿಕ್ ಶಾಲೆಗಳ ಅಭಿವೃದ್ಧಿ.

ನಾಗರಿಕ ಸೌಲಭ್ಯಗಳು :

ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕೆ 2,671 ಎಕರೆ ಜಮೀನಿನ ಭೂಸ್ವಾಧೀನ ಪಡಿಸಿಕೊಳ್ಳಲಾಗಿದೆ. ಬಾಕಿ ಇರುವ 1,297 ಎಕರೆ ಭೂಸ್ವಾಧೀನ ಪೂರ್ಣಗೊಳಿಸಿ, ಆಧುನಿಕ ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ಕ್ರಮ. ಸರ್.ಎಂ.ವಿಶ್ವೇರಯ್ಯ, ಬನಶಂಕರಿ 6ನೇ ಹಂತ, ಅಂಜನಾಪುರ ಬಿಡಿಎ ಬಡಾವಣೆಗಳಲ್ಲಿ 404 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (BDA) ಬಾಕಿಯಿರುವ ಮೂಲಸೌಕರ್ಯ ಕಲ್ಪಿಸಿ ಬಿಬಿಎಂಪಿಗೆ ಹಸ್ತಾಂತರ.

ಬೆಂಗಳೂರಿಗೆ ಕಾವೇರಿ ನೀರು 5ನೇ ಹಂತ 2024-25 ಇಸವಿಗೆ ಪೂರ್ಣ :
ಬೆಂಗಳೂರು ನಗರಕ್ಕೆ ಹೆಚ್ಚುವರಿಯಾಗಿ 775 ದಶಲಕ್ಷ ಲೀ. ಕಾವೇರಿ ನೀರನ್ನು ತರಲು 5,550 ಕೋಟಿ ರೂ. ವೆಚ್ಚದಲ್ಲಿ ಕಾವೇರಿ ನೀರು ಸರಬರಾಜು ಯೋಜನೆ 5ನೇ ಹಂತ ಜಾರಿಯಲ್ಲಿದ್ದು, ಈತನಕ 1,556 ಕೋಟಿ ರೂ. ವೆಚ್ಚವಾಗಿದೆ. ಯೋಜನೆ ಪೂರ್ಣ ಪ್ರಮಾಣದಲ್ಲಿ ಪ್ರಗತಿಯಲ್ಲಿದ್ದು, 2024-25ನೇ ಸಾಲಿನ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು.

1,500 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ನಗರದ ವಿವಿಧ ಸ್ಥಳಗಳಲ್ಲಿರುವ ಹಳೆಯ 20 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಪುನರುಜ್ಜೀವನ ಮತ್ತು ಉನ್ನತೀಕರಣ. ಮೆಗಾಸಿಟಿ ರಿವಾಲ್ವಿಂಗ್ ನಿಧಿ ಅಡಿಯಲ್ಲಿ ಅರ್ಕಾವತಿ ನೀರಿನ ಮೂಲವನ್ನು ಪುನರುಜ್ಜೀವನಗೊಳಿಸುವ ಜೊತೆಗೆ ಎತ್ತಿನಹೊಳೆ ಯೋಜನೆಯಿಂದ 1.7 ಟಿಎಂಸಿ ನೀರನ್ನು ಯೋಜನಾಬದ್ಧವಾಗಿ ಬಳಸಲು 312 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ತಿಪ್ಪಗೊಂಡನಹಳ್ಳಿ ಜಲಾಶಯ ಪುನಶ್ಚೇತನ ಕಾಮಗಾರಿಯನ್ನು 2022-23 ನೇ ಸಾಲಿನಲ್ಲಿ ಮುಕ್ತಾಯಗೊಳಿಸುವುದು.

ರಾಜಕಾಲುವೆ ಕೊಳಚೆ ನೀರು ಬೇರ್ಪಡಿಸಿ ವಿಹಾರ ತಾಣ ಅಭಿವೃದ್ಧಿ :

ಕೋರಮಂಗಲ ರಾಜಕಾಲುವೆಯನ್ನು 195 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೆ.ಆರ್.ಮಾರುಕಟ್ಟೆ ಜಂಕ್ಷನ್ ನಿಂದ ಬೆಳ್ಳಂದೂರು ಕೆರೆವರೆಗೆ ಕೆ-100 ಸಿಟಿಜನ್ ವಾಟರ್ ಯೋಜನೆಯಡಿ ಕೊಳಚೆ ನೀರನ್ನು ಬೇರ್ಪಡಿಸಿ ನಾಗರೀಕರಿಗೆ ವಿಹಾರ ತಾಣವಾಗಿ ಅಭಿವೃದ್ಧಿ. ನಗರದಲ್ಲಿನ ಮಳೆ ನೀರು ಹರಿವಿಗೆ ಮಳೆ ನೀರು ನೀರುಗಾಲುವೆ, ಪ್ರವಾಹ ಉಂಟಾಗದಂತೆ ತಡೆಯಲು ರಾಜಕಾಲುವೆ ಅಭಿವೃದ್ಧಿಗೆ 1,500 ಕೋಟಿ ರೂ. ಯೋಜನೆ ರೂಪಿಸಲಾಗುತ್ತೆ.

ಮಿನಿ ಕೈಗಾರಿಕಾ ಪಾರ್ಕ್ :
ಪೀಣ್ಯಾ ಕೈಗಾರಿಕಾ ಪ್ರದೇಶದ ಮಾದರಿಯಲ್ಲಿ ಅತಿ ಸಣ್ಣ ಕೈಗಾರಿಕಾ ಪಾರ್ಕ್ ಅಭಿವೃದ್ಧಿಪಡಿಸಲಾಗುವುದು.

ಮೆಟ್ರೋ ರೈಲ್ವೆ ಜೊತೆ ಭಾರತೀಯ ರೈಲ್ವೆ ಸಂಪರ್ಕ ಕಾಮಗಾರಿ :
ವೈಟ್‌ಫೀಲ್ಡ್, ಕೆ.ಆರ್. ಪುರಂ, ಬೈಯ್ಯಪ್ಪನಹಳ್ಳಿ, ಯಶವಂತಪುರ, ಜ್ಞಾನಭಾರತಿ ಮತ್ತು ಯಲಹಂಕ ರೈಲ್ವೆ ನಿಲ್ದಾಣಗಳಲ್ಲಿ 55 ಕೋಟಿ ರೂ. ವೆಚ್ಚದಲ್ಲಿ ಮೆಟ್ರೋ ನಿಲ್ದಾಣದ ಸಂಪರ್ಕ ಕಾಮಗಾರಿ ಅನುಷ್ಠಾನ

ಬನಶಂಕರಿ ಜಂಕ್ಷನ್‌ನಲ್ಲಿ ರೂ. 45 ಕೋಟಿ ವೆಚ್ಚದಲ್ಲಿ ಸ್ಕೈವಾಕ್. ಮಡಿವಾಳ, ಎಲೆಮಲ್ಲಪ್ಪಶೆಟ್ಟಿ ಕೆರೆಗಳ ಸಮಗ್ರ ಅಭಿವೃದ್ಧಿಗೆ ಬಿಬಿಎಂಪಿಯಿಂದ ರೂಪುರೇಷೆ ಸಿದ್ದಪಡಿಸಲಾಗುವುದು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಪ್ರತಿವರ್ಷ ಮಾರ್ಚ್ 3 ರಂದು ವಿಶ್ವ ಕನ್ನಡ ಸಿನಿಮಾ ದಿನವಾಗಿ ಆಚರಣೆ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ

Next Post

13th Bengaluru International Film Festival | ವರ್ಚುವಲ್ ಮಾದರಿಯಲ್ಲಿ ಚಲನಚಿತ್ರೋತ್ಸವ ಮಾಡುವುದು ಸರಿಯಲ್ಲ : ನಿರ್ದೇಶಕ ಎನ್.ಆರ್.ನಂಜುಂಡೇಗೌಡ

Next Post

13th Bengaluru International Film Festival | ವರ್ಚುವಲ್ ಮಾದರಿಯಲ್ಲಿ ಚಲನಚಿತ್ರೋತ್ಸವ ಮಾಡುವುದು ಸರಿಯಲ್ಲ : ನಿರ್ದೇಶಕ ಎನ್.ಆರ್.ನಂಜುಂಡೇಗೌಡ

Vehicle Insurance TP Premium Will Hike | ಹೆಚ್ಚಾಗಲಿದೆ ನಿಮ್ಮ ಕಾರು, ದ್ವಿಚಕ್ರ ವಾಹನಗಳ ಥರ್ಡ್ ಪಾರ್ಟಿ ವಿಮಾ ಕಂತಿನ ಮೊತ್ತ..! : ಏ.1 ರಿಂದ ಜಾರಿಗೆ ಬರುವ ಸಾಧ್ಯತೆ

Please login to join discussion

Like Us on Facebook

Follow Us on Twitter

Recent News

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d