ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸೋಮವಾರ ನಡೆದ “ನರೇಗಾ ಹಬ್ಬ-2022” ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬವರಾಜ್ ಬೊಮ್ಮಾಯಿ ಉದ್ಘಾಟನೆ ಮಾಡಿ, ವಿಶೇಷ ಸಂಚಿಕೆ ಬಿಡುಗಡೆ ಮಾಡಿದರು.
ಇದೇ ಸಂದರ್ಭದಲ್ಲಿ ಅವರೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಕೆ.ಎಸ್ ಈಶ್ವರಪ್ಪ ಹಾಗೂ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಸಚಿವರುಗಳು, ಶಾಸಕರುಗಳು, ಸಂಸದರು ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ಹೆಚ್ಚುವರಿ ಮುಖ್ಯ ಕಾಯದರ್ಶಿ ಅತೀಕ್, ಗ್ರಾಮೀಣಾಭಿವೃದ್ಧಿ ಇಲಾಖೆ ಆಯುಕ್ತೆ ಶಿಲ್ಪಾನಾಗ್, ನರೇಗಾ ಮುಖ್ಯ ಕಾರ್ಯಾಚರಣೆ ಅಧಿಕಾರಿ ಪ್ರಾಣೇಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
“ನರೇಗಾ ಹಬ್ಬ-2022” ಕಾರ್ಯಕ್ರಮದಲ್ಲಿ ನರೇಗಾ ಕಾಯಕ ಯೋಗಿಗಳನ್ನು ಗೌರವಿಸಿ ಸನ್ಮಾನ ಮಾಡಲಾಯಿತು.