ಬೆಂಗಳೂರು, (www.bengaluruwire.com) : ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ (DDU-GKY) ಯಡಿ 18ರಿಂದ 35 ವರ್ಷದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಉದ್ಯೋಗ ಕಲ್ಪಿಸುವ ಸಲುವಾಗಿ ಮಾ.27ರಂದು ಬೆಳಿಗ್ಗೆ 9.30 ರಿಂದ ಸಂಜೆ 4.30ರವರೆಗೆ ಕುಂಬಳಗೋಡಿನ, ರಾಮೋಹಳ್ಳಿ ಕ್ರಾಸ್ ಬಳಿಯಿರುವ ರಾಜರಾಜೇಶ್ವರಿ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಉದ್ಯೋಗ ಮೇಳ-2022ನ್ನು (Job Fair -2022) ಆಯೋಜಿಸಲಾಗಿದೆ.
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಬೆಂಗಳೂರು ದಕ್ಷಿಣ ತಾಲೂಕು ಪಂಚಾಯಿತಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ (Skill Development, Entrepreneurship and Livelihood Department), ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಉದ್ಯೋಗಾಕಾಂಕ್ಷಿಗಳ ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿಯಾಗಿದೆ.
ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಬಿಕಾಂ, ಬಿಬಿಎ, ಬಿಎ, ಬಿಸಿಎ, ಬಿಇ, ಎಂಕಾಂ, ಎಂಬಿಎ, ಎಂಎ, ಎಂಸಿಎ ಪದವಿಗಳನ್ನು ಹೊಂದಿದ ಉದ್ಯೋಗಕಾಂಕ್ಷಿಗಳಿಗೆ ಒಂಭತ್ತು ವಿವಿಧ ಖಾಸಗಿ ಕಂಪನಿಗಳಾದ ಮುತ್ತೂಟ್ ಗ್ರೂಪ್, ಎಚ್ ಡಿ ಎಫ್ ಸಿ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಯುರೇಕಾ ಫೋರ್ಬ್ಸ್, ಟೀಮ್ ಲೀಸ್, ಯು.ಟಿ.ಎಲ್ ಟೆಕ್ನಾಲಜಿ ಲಿಮಿಟೆಡ್, ಜಸ್ಟ್ ಡಯಲ್, ಇಂಪ್ಯಾಕ್ಟ್ ಹಾಗೂ ರಿಲೆಯನ್ಸ್ ಗಳಲ್ಲಿ ಉದ್ಯೋಗವನ್ನು ಈ ಉದ್ಯೋಗ ಮೇಳದಲ್ಲಿ ಪಡೆದುಕೊಳ್ಳುವ ಅವಕಾಶವಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ : 9964907444 / 7975014738 ನ್ನು ಹಾಗೂ ನೋಂದಣಿಗಾಗಿ https://forms.gle/FcuM18DKZ7Gsngqm6 ಗೂಗಲ್ ಲಿಂಕ್ ನ್ನು ಸಂಪರ್ಕಿಸಬಹುದಾಗಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಕ್ಯೂರ್ ಕೋಡನ್ನು ಸ್ಮಾರ್ಟ್ ಫೋನ್ ಮೊಬೈಲ್ ನಲ್ಲಿ ಸ್ಕ್ಯಾನ್ ಮಾಡುವ ಮೂಲಕ ತೆರೆದುಕೊಳ್ಳುವ ವೆಬ್ ಪುಟದಲ್ಲೂ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಂಗಪ್ಪರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.