ಬೆಂಗಳೂರು, (www.bengaluruwire.com) : ಸಿಲಿಕಾನ್ ಸಿಟಿಯಲ್ಲಿ ಆನೆದಂತ (Elephant ivory) ಅಕ್ರಮ ಮಾರಾಟದಲ್ಲಿ ತೊಡಗಿದ್ದ ಮೂವರನ್ನು ಚೆನ್ನಮ್ಮನಕೆರೆ ಅಚ್ಚುಕಟ್ಟು (ಸಿ.ಕೆ.ಅಚ್ಚುಕಟ್ಟು) ಪೊಲೀಸರು ಬಂಧಿಸಿದ್ದಾರೆ.
ಹಾವೇರಿಯ ಸೋಮಲಿಂಗಪ್ಪ ಕೊಡದ್ (41),ಪ್ರವೀಣ್ ಗುಳೇದ್(24), ಹಾಸನ ಜಿಲ್ಲೆಯ ಚಂದ್ರೇಗೌಡ (46) ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ 29 ಕೆಜಿ ತೂಕದ ಬೆಲೆಬಾಳುವ 2 ಆನೆ ದಂತಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ಬನಶಂಕರಿ 3ನೇ ಹಂತದಲ್ಲಿ ಟಾಟಾ ಇಂಡಿಕಾ ಕಾರಿನಲ್ಲಿ ಆನೆದಂತ ಇಟ್ಟುಕೊಂಡು ಅಕ್ರಮವಾಗಿ ಮಾರಾಟ ಮಾಡಲು ಹೊಂಚು ಹಾಕುತ್ತಿದ್ದಾಗ ಬಂದ ಮಾಹಿತಿ ಮೇರೆಗೆ ಬೆಂಗಳೂರು ದಕ್ಷಿಣ ವಿಭಾಗದ ಎಸಿಪಿ ಹರೀಶ್ ಪಾಂಡೆ ಮಾರ್ಗದರ್ಶನದಲ್ಲಿ ಸಿ.ಕೆ.ಅಚ್ಚಕಟ್ಟು ಪೊಲೀಸ್ ಇನ್ಸ್ ಪೆಕ್ಟರ್ ಪಿ.ಆರ್.ಜನಾರ್ಧನ್ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
ಈ ಮೂವರು ಆರೋಪಿಗಳ ವಿರುದ್ಧ 1972 ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.