Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bangalore Chithrasante 2022 | ಬೆಂಗಳೂರಿನ 19ನೇ ಆವೃತ್ತಿಯ ಚಿತ್ರಸಂತೆಗೆ ಅಭೂತಪೂರ್ವ ಪ್ರತಿಕ್ರಿಯೆ : ರಾಜ್ಯದ ಆರು ಪ್ರಾದೇಶಿಕ ಸ್ಥಳಗಳಲ್ಲಿ ಚಿತ್ರ ಕಲಾ ಗ್ಯಾಲರಿ ಪ್ರಾರಂಭ – ಸಿಎಂ ಬೊಮ್ಮಾಯಿ

ನಾನಾ ಕಲಾಪ್ರಕಾರಗಳ ಸಂಗಮಕ್ಕೆ ವೇದಿಕೆಯಾದ ಚಿತ್ರಕಲಾ ಪರಿಷತ್ತಿನ ಚಿತ್ರಸಂತೆ | ಮುಂದಿನ ಅಧಿವೇಶನದಲ್ಲಿ ಚಿತ್ರಕಲಾ ಪರಿಷತ್ತನ್ನು ಡೀಮ್ಡ್ ವಿಶ್ವವಿದ್ಯಾಲಯವೆಂದು ಘೋಷಿಸಲು ಕ್ರಮ – ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

by Bengaluru Wire Desk
March 27, 2022
in Bengaluru Focus, Photo Gallery
Reading Time: 2 mins read
0
ಬೆಂಗಳೂರಿನ ಚಿತ್ರಸಂತೆ ಸೊಬಗು

ಬೆಂಗಳೂರಿನ ಚಿತ್ರಸಂತೆ ಸೊಬಗು

ಬೆಂಗಳೂರು, (www.bengaluruwire.com) : ರಾಜಧಾನಿಯಲ್ಲಿ ಇಂದು ಬಣ್ಣ ಬಣ್ಣದ ಭಾವನೆಗಳ ಮನಸೂರೆಗೊಳ್ಳುವ ಚಿತ್ರಸಂತೆ ಎರಡು ವರ್ಷಗಳ ನಂತರ ನಡೆಯುತ್ತಿದ್ದು, ನಗರವೂ ಸೇರಿದಂತೆ ಬೇರೆ ಬೇರೆ ಭಾಗಗಳಿಂದ ಜನರು ಮಕ್ಕಳು, ಸ್ನೇಹಿತರು, ಬಂಧುಬಾಂಧವರೊಂದಿಗೆ ಆಗಮಿಸಿ ನೂರಾರು ಚಿತ್ರಕಲಾವಿದರ ಚಿತ್ರಕೃತಿಗಳನ್ನು ವೀಕ್ಷಿಸಿ, ಖರೀದಿಸಿದರು.

ಭಾನುವಾರದ ಈ ಚಿತ್ರಸಂತೆ 19ನೇ ಆವೃತ್ತಿಯದ್ದಾಗಿದ್ದು, 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಸ್ವಾತಂತ್ರ್ಯ ಯೋಧರಿಗೆ ಚಿತ್ರಸಂತೆ ಸಮರ್ಪಣೆ ಮಾಡಲಾಗಿದೆ. ಕಳೆದ ವರ್ಷ ಕರೋನಾ ಎರಡನೇ ಅಲೆಯ ಕಾರಣದಿಂದ ಆನ್ ಲೈನ್ ನಲ್ಲಷ್ಟೇ ನಡೆಸಲಾಗಿತ್ತು. ಆದರೆ ಈ ಬಾರಿ ಚಿತ್ರಸಂತೆಯನ್ನು ಸಾರ್ವಜನಿಕರು ಮತ್ತು ಕಲಾವಿದರ ಕಲಾಕೃತಿಗಳ ಪ್ರದರ್ಶನ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಬೆಳಗ್ಗೆಯಿಂದ ಪ್ರವಾಹೋಪಾದಿಯಲ್ಲಿ ಚಿತ್ರರಸಿಕರು ಕುಮಾರಕೃಪಾ ರಸ್ತೆಗೆ ಆಗಮಿಸಿ ತಮ್ಮ ನೆಚ್ಚಿನ ಕಲಾಕೃತಿಗಳನ್ನು ಖರೀದಿಸಿದರು. ದೇಶದ ವಿವಿಧ ಭಾಗಗಳಿಂದ 1500 ಕಲಾವಿದರು ಭಾಗಿಯಾಗಿದ್ದಾರೆ. ಒಟ್ಟು 4 ಕಲಾವಿದರಿಗೆ ಈ ಕಾರ್ಯಕ್ರಮದಲ್ಲಿ ಚಿತ್ರ ಸಮ್ಮಾನ್ ಪ್ರಶಸ್ತಿ ನೀಡಲಾಯಿತು. 4 ಲಕ್ಷ ಜನರು ಚಿತ್ರ ಸಂತೆಗೆ ಬರುವ ನಿರೀಕ್ಷೆ ಇದೆ.

ಚಿತ್ರಸಂತೆಯಲ್ಲಿ ಜನವೋ ಜನ

ಕುಮಾರಕೃಪಾ ರಸ್ತೆಯಲ್ಲಿ ತಾತ್ಕಾಲಿಕವಾಗಿ ಸಂಚಾರ ಬಂದ್ :

19ನೇ ಚಿತ್ರಸಂತೆ ಹಿನ್ನೆಲೆ ಕುಮಾರ ಕೃಪಾ ರಸ್ತೆಯಲ್ಲಿ ಸಂಚಾರ ನಿಷೇಧ ಮಾಡಲಾಗಿತ್ತು. ಬೆಳಗ್ಗೆ 6 ರಿಂದ ರಾತ್ರಿ  9ಗಂಟೆವರೆಗೂ ಕುಮಾರಕೃಪ ರಸ್ತೆ ಬಂದ್ ಮಾಡಲಾಗಿದೆ. ಕುಮಾರಕೃಪ ರಸ್ತೆಯ ವಿನ್ಸರ್ ಮ್ಯಾನರ್ ವೃತ್ತದಿಂದ ರೇಸ್ ವ್ಯೂವ್ ಜಂಕ್ಷನ್ ರಸ್ತೆವರೆಗೂ ಎರಡೂ ಬದಿ ರಸ್ತೆಗಳು ಬಂದ್ ಆಗಿದ್ದವು. ಪರ್ಯಾಯ ಮಾರ್ಗವಾಗಿ ಟ್ರಿಲೈಟ್ ಜಂಕ್ಷನ್, ಬಸವೇಶ್ವರ ವೃತ್ತ, ಹಳೇ ಹೈಗ್ರೌಂಡ್ಸ್ ಮ್ಯಾನರ್ ಸರ್ಕಲ್ ಮೂಲಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ವಿವಿಧ ಕಲಾ ಪ್ರಕಾರಗಳ ಸಂಗಮದಂತಿದ್ದ ಚಿತ್ರಸಂತೆ :

ಇನ್ನು ಈ  ಚಿತ್ರಸಂತೆಯಲ್ಲಿ ನಟ ಪುನೀತ್ ರಾಜ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಸೇರಿದಂತೆ ವಿವಿಧ ಗಣ್ಯರ ಚಿತ್ರವನ್ನು ಸಹ ಪ್ರದರ್ಶನಕ್ಕೆ ಇಡಲಾಗಿತ್ತು. ಈ ಬಾರಿಯ ಚಿತ್ರಸಂತೆಯಲ್ಲಿ ಕೊಲಾಜ್, ಲಿಥೋಗ್ರಾಫ್, ಡೂಡಲ್, ಎಂಬೋಸಿಂಗ್, ವಿಡಿಯೊ ಕಲೆ, ಗ್ರಾಫಿಕ್ ಕಲೆ, ಶಿಲ್ಪಕಲೆ, ಪರ್ಫಾಮೆನ್ಸ್ ಕಲೆ, ಮಿಶ್ರ ಮಾಧ್ಯಮ, ಫೋಟೋಗ್ರಫಿ ಹೀಗೆ ಹಲವು ಬಗೆಯ ಕಲಾ ಪ್ರಕಾರದ ಚಿತ್ರಗಳನ್ನು ಪ್ರದರ್ಶನಕ್ಕಿಡಲಾಗಿದೆ. ಇನ್ನು ಸಾಂಪ್ರದಾಯಿಕ ತಂಜಾವೂರು ಶೈಲಿ, ಮೈಸೂರು ಶೈಲಿಯ ಕಲೆ, ರಾಜಸ್ಥಾನಿ ಶೈಲಿ, ಮಧುಬನಿ ಶೈಲಿ, ತೈಲ ಮತ್ತು ಜಲವರ್ಣಗಳಲ್ಲಿ ರಚಿಸಿರುವ ಚಿತ್ರಗಳು, ಆಕ್ರಿಲಿಕ್, ಗಾಜಿನ ಮೇಲೆ ಬಿಡಿಸಿರುವ ಚಿತ್ರಗಳು ಸೇರಿದಂತೆ ನಾನಾ ರೀತಿಯ ಕಲಾಕೃತಿಗಳನ್ನು ಒಂದೇ ಸ್ಥಳದಲ್ಲಿ ನೋಡಿ ಕಲಾಭಿಮಾನಿಗಳು ಸಂತಸಪಟ್ಟರು.

ರಾಜ್ಯದ ಆರು ಪ್ರಾದೇಶಿಕ ಸ್ಥಳಗಳಲ್ಲಿ ಚಿತ್ರ ಕಲಾ ಗ್ಯಾಲರಿಗಳ ಪ್ರಾರಂಭ :

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾರತಾಂಬೆ ಕಲಾಕೃತಿ ಪಕ್ಕ ಹಸ್ತಾಕ್ಷರ ಹಾಕುವ ಮೂಲಕ ಚಿತ್ರಸಂತೆಗೆ ಚಾಲನೆ ನೀಡಿದ ಚಿತ್ರ

ಇದಕ್ಕೂ ಮುನ್ನ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿತ್ರಸಂತೆ – 2022  ಕಾರ್ಯಕ್ರಮಕ್ಕೆ, ಭಾರತಾಂಬೆ ಕಲಾಕೃತಿ ಪಕ್ಕ ಹಸ್ತಾಕ್ಷರ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡುತ್ತಾ, ಇಡೀ ಕರ್ನಾಟಕದ ಚಿತ್ರಕಲೆಗೆ ತವರೂರು ಚಿತ್ರಕಲಾ ಪರಿಷತ್ತು. ಇದು ಎಲ್ಲೆಡೆ ವ್ಯಾಪಿಸಬೇಕೆಂಬ ಉದ್ದೇಶವಿದೆ. ಆರು ಪ್ರಾದೇಶಿಕ ಸ್ಥಳಗಳಲ್ಲಿ ಚಿತ್ರ ಕಲಾ ಗ್ಯಾಲರಿಗಳನ್ನು  ಪ್ರಾರಂಭಿಸಲು ಕ್ರಮ‌ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಸ್ವಾಯತ್ತ ಸಂಸ್ಥೆಯಾಗಿರುವ ಚಿತ್ರ ಕಲಾ ಪರಿಷತ್ತನ್ನು ಡೀಮ್ಡ್ ವಿಶ್ವವಿದ್ಯಾಲಯ ಮಾಡಬೇಕೆಂಬ ಬೇಡಿಕೆ ಇದ್ದು,  ಬರುವ ಅಧಿವೇಶನದಲ್ಲಿ ಡೀಮ್ಡ್ ವಿಶ್ವವಿದ್ಯಾಲಯವೆಂದು ಘೋಷಿಸಲು ಕ್ರಮ ವಹಿಸಲಾಗುವುದು. ಇದರಡಿಯಲ್ಲಿ  ಹಲವಾರು ಸಂಸ್ಥೆಗಳನ್ನು ತಂದು ಚಿತ್ರಕಲೆಗೆ ಹೊಸ ಆಯಾಮ ನೀಡುವ ಕೆಲಸವನ್ನು ಬಿ.ಎಲ್.ಶಂಕರ್ ಅವರ ನೇತೃತ್ವದಲ್ಲಿ ಮಾಡಲಾಗುವುದು ಎಂದರು. 

ಬಾಲ್ಯದ ನೆನಪಿಗೆ ಜಾರಿ ಮ್ಯಾಂಗೋ ಐಸ್ ಕ್ಯಾಂಡಿ ಸವಿದ ಸಿಎಂ :

ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಐಸ್ ಕ್ಯಾಂಡ್ ಸವಿಯುತ್ತಿರುವ ಚಿತ್ರ

ವಿಂಡ್ಸರ್ ಮ್ಯಾನರ್ ವೃತ್ತದಿಂದ ಶಿವಾನಂದ ವೃತ್ತದವರೆಗೆ ಆಯೋಜಿಸಲಾಗಿದ್ದ ಚಿತ್ರಸಂತೆ ಯಲ್ಲಿ ದೇಶ-ವಿದೇಶದ ಕಲಾವಿದರು ಪ್ರದರ್ಶಿಸಿದ ಕಲಾಕೃತಿಗಳನ್ನು ಮುಖ್ಯಮಂತ್ರಿಗಳು ವೀಕ್ಷಿಸಿ ಕಲಾವಿದರಿಗೆ ಪ್ರೋತ್ಸಾಹಿಸಿದರು. ಈ ಸಂದರ್ಭದಲ್ಲಿ ಐಸ್ ಕ್ರೀಮ್ ಮಾರಾಟ ಮಾಡುತ್ತಿರುವುದನ್ನು ಗಮನಿಸಿದ ಅವರು, ತಮಗೆ ಬಾಲ್ಯದಿಂದಲೂ ಇಷ್ಟವಾದ ಜಾಯ್ ಮ್ಯಾಂಗೋ ಕ್ರೀಮ್ ಐಸ್ ಕ್ಯಾಂಡಿಯನ್ನು ತಾವೇ ಹಣ ಪಾವತಿಸುವ ಮೂಲಕ ಖರೀದಿಸಿ  ಸಂತೋಷದಿಂದ ಸವಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವರಾದ ಡಾ.ಅಶ್ವತ್ಥನಾರಾಯಣ, ಎಸ್.ಟಿ ಸೋಮಶೇಖರ್, ಶಾಸಕ ರಿಜ್ವಾನ್ ಅರ್ಷದ್, ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿಎಲ್ ಶಂಕರ್, ಮಾಜಿ ಸಚಿವೆ ರಾಣಿ ಸತೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Real Ghost Capture in CCTV | ಸಿಸಿಟಿವಿಯಲ್ಲಿ ಸೆರೆಯಾಯ್ತು ಭೂತ ಚೇಷ್ಟೆಯ ದೃಶ್ಯ…! ದೆವ್ವದ ಕಾಟಕ್ಕೆ ಸೆಕ್ಯುರಿಟಿ ಗಾರ್ಡ್ ಹೈರಾಣು – ಮುಂದೇನಾಯ್ತು? ನೀವೇ ನೋಡಿ

Next Post

Puneeth Rajkumar Statue | ಬಿಬಿಎಂಪಿ ನೌಕರರ ಕನ್ನಡ ಸಂಘ ಸ್ಥಾಪಿಸಿದ ಡಾ.ಪುನೀತ್ ರಾಜ್ ಕುಮಾರ್ ಪುತ್ಥಳಿ ಲೋಕಾರ್ಪಣೆ

Next Post

Puneeth Rajkumar Statue | ಬಿಬಿಎಂಪಿ ನೌಕರರ ಕನ್ನಡ ಸಂಘ ಸ್ಥಾಪಿಸಿದ ಡಾ.ಪುನೀತ್ ರಾಜ್ ಕುಮಾರ್ ಪುತ್ಥಳಿ ಲೋಕಾರ್ಪಣೆ

BW Special | Non IPS SP Promotion Injustice | ಅರ್ಹತೆಯಿದ್ದರೂ ಕರ್ನಾಟಕದಲ್ಲಿ 109 ಎಸ್ ಪಿ ಹುದ್ದೆಗೆ ಬಡ್ತಿ ಸಿಗದೆ ಅನ್ಯಾಯ : ಎಸ್ ಪಿ ಹುದ್ದೆ ಎಂಬುದು ಇವರಿಗೆ ಗಗನಕುಸುಮ...!

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d