ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಕನ್ನಡ ಸಂಘದ ವತಿಯಿಂದ ಪಾಲಿಕೆ ಕೇಂದ್ರ ಕಛೇರಿ ಆವರಣದಲ್ಲಿ ಸ್ಥಾಪಿಸಿರುವ ಡಾ. ಪುನೀತ್ ರಾಜ್ ಕುಮಾರ್ ರವರ ಪುತ್ಥಳಿಯನ್ನು, “ಗಂಧದಗುಡಿ” ಉದ್ಯಾನವನವನ್ನು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ರವರು ಭಾನುವಾರ ಸಂಜೆ ಲೋಕಾರ್ಪಣೆ ಮಾಡಿದರು.
ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ.ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಚಿವರಾದ ಮುನಿರತ್ನ, ಸಂಸದ ಪಿ.ಸಿ.ಮೋಹನ್, ಶಾಸಕರಾದ ರಿಜ್ವಾನ್ ಹರ್ಷದ್, ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ಗೌರವ್ ಗುಪ್ತ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್, ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಸಂಘದ ಅಧ್ಯಕ್ಷ ಅಮೃತ್ ರಾಜ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.