ಬೆಂಗಳೂರು, (www.bengaluruwire.com) : ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆ (DA)ಯನ್ನು ಶೇ. 2.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿನ ಅಂದಾಜು 5 ರಿಂದ 6 ಲಕ್ಷ ಸರ್ಕಾರಿ ನೌಕರರು ಹಾಗೂ 3 ರಿಂದ 4 ಲಕ್ಷ ಸರ್ಕಾರದ ನಿವೃತ್ತ ಪಿಂಚಣಿದಾರರಿಗೆ ಅನುಕೂಲವಾಗಲಿದೆ.
ಇದಕ್ಕಾಗಿ ಸರ್ಕಾರ 1,447 ಕೋಟಿ ರೂ. ವಾರ್ಷಿಕ ವೆಚ್ಚವನ್ನು ಭರಿಸಲಿದ್ದು, ತುಟ್ಟಿಭತ್ಯೆ ಏರಿಕೆ ಸಂಬಂಧ ಸರ್ಕಾರಿ ಆದೇಶ ಹೊರಡಿಸಲಾಗಿದೆ.
“ರಾಜ್ಯ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯನ್ನು ಕೇವಲ ಮೂರೇ ದಿನದಲ್ಲಿ ಈಡೇರಿಸಿ ಶೇ.24.50 ಇದ್ದ ತುಟ್ಟಿಭತ್ಯೆಯನ್ನು ಶೇ.2.75 ರಷ್ಟು ಏರಿಕೆ ಮಾಡಿ 2022ರ ಜ.1ರಿಂದ ಅನ್ವಯವಾಗುವಂತೆ ಜಾರಿಗೆ ತಂದಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ. ಸರ್ಕಾರದ ಈ ಕ್ರಮವನ್ನು ಸ್ವಾಗತಿಸುತ್ತೇವೆ.”
- ಸಿ.ಎಸ್.ಷಡಕ್ಷರಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ