Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA Dr.Shivram Karanth Layout News | ಬಿಡಿಎ ಡಾ.ಶಿವರಾಮ ಕಾರಂತ ಬಡಾವಣೆ : ಸುಪ್ರೀಂಕೋರ್ಟ್ ನಿಂದ 1475 ಕಟ್ಟಡಗಳಿಗೆ ಬಿಗ್ ರಿಲೀಫ್

ಶೀಘ್ರದಲ್ಲಿಯೇ ಸಕ್ರ ಪ್ರಮಾಣ ಪತ್ರ ವಿತರಣೆ – ನ್ಯಾ.ಎಂ.ವಿ.ಚಂದ್ರಶೇಖರ್ ಸಮಿತಿ | ಕಟ್ಟಡ ಸಕ್ರಮಕ್ಕಾಗಿ ಈತನಕ 7,161 ಅರ್ಜಿ ಸ್ವೀಕಾರ | ಬಿಡಿಎ ಅನುಮೋದಿತ 13 ಬಡಾವಣೆ ಸ್ವಾಧೀನವಿಲ್ಲ | ಬಿಡಿಎನಿಂದ ಮಂಗಳವಾರ 75 ಕೋಟಿ ರೂ. ಮೌಲ್ಯದ ಪ್ರಾಧಿಕಾರದ ಆಸ್ತಿ ವಶ

by Bengaluru Wire Desk
April 12, 2022
in Bengaluru Focus
Reading Time: 2 mins read
0
ಬಿಡಿಎ ಕೇಂದ್ರ ಕಚೇರಿ

ಬಿಡಿಎ ಕೇಂದ್ರ ಕಚೇರಿ

ಬೆಂಗಳೂರು,  (www.bengaluruwire.com) : ಕಳೆದ 15 ತಿಂಗಳುಗಳಲ್ಲಿ ತಮ್ಮ ನೇತೃತ್ವದ ಸಮಿತಿ (ಜೆಸಿಸಿ)ಯು ಸರ್ವೋಚ್ಛ ನ್ಯಾಯಾಲಯಕ್ಕೆ (Supreme Court) 12 ವರದಿಗಳನ್ನು ಸಲ್ಲಿಸಿದೆ. ಈ ವರದಿಗಳನ್ನು ಸರ್ವೋಚ್ಛ ನ್ಯಾಯಾಲಯವು ಪರಿಗಣಿಸಿ 2014-18 ರ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಡಾ.ಶಿವರಾಂ ಕಾರಂತ ಬಡಾವಣೆ (BDA Dr.Shivaram Karanth Layout)ಗೆಂದು ಅಧಿಸೂಚನೆ ಹೊರಡಿಸಲಾಗಿದ್ದ 17 ಗ್ರಾಮಗಳ 1,475 ಕಟ್ಟಡಗಳಿಗೆ ಅನುಮೋದನೆ ನೀಡಿದೆ ಎಂದು ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಅವರು ತಿಳಿಸಿದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯದ ಆದೇಶವನ್ನು ಎಲ್ಲಾ ಅರ್ಜಿದಾರರಿಗೆ ಎಸ್‍ಎಂಎಸ್ ಸಂದೇಶದ ಮೂಲಕ ತಿಳಿಸಲಾಗಿದೆ. ಈ ಮೇಲಿನ ಎಲ್ಲಾ ಕಟ್ಟಡ ಮಾಲೀಕರಿಗೆ “ಸಕ್ರಮ ಪ್ರಮಾಣಪತ್ರ’’ಗಳನ್ನು (ಆರ್‍ಸಿ) ಶೀಘ್ರದಲ್ಲಿ ವಿತರಿಸಲು ಸಮಿತಿ ಉದ್ದೇಶಿಸಿದೆ. ಈ ಸಕ್ರಮ ಪ್ರಮಾಣಪತ್ರಗಳನ್ನು ಡಾ.ಶಿವರಾಮ ಕಾರಂತ ಬಡಾವಣೆ ಅಧಿಸೂಚಿತ ಪ್ರದೇಶದಲ್ಲಿ ಕಟ್ಟಡ ಕಟ್ಟಿದ ಮಾಲೀಕರಿಗೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಇವುಗಳನ್ನು ವಿತರಿಸುವ ಪ್ರಕ್ರಿಯೆ ಸದ್ಯದಲ್ಲಿಯೇ ಆರಂಭವಾಗಲಿದೆ ಎಂದು ಹೇಳಿದರು.

ಕಟ್ಟಡ ಸಕ್ರಮಕ್ಕಾಗಿ ಈತನಕ 7,161 ಅರ್ಜಿ ಸ್ವೀಕಾರ :

ಈವರೆಗೂ ಉದ್ದೇಶಿತ ಬಡಾವಣೆಯ ವ್ಯಾಪ್ತಿಯಲ್ಲಿ ಈಗಾಗಲೇ ಕಟ್ಟಿರುವ ಕಟ್ಟಡಗಳನ್ನು ಸಕ್ರಮಗೊಳಿಸಲು 7,161 ಅರ್ಜಿಗಳನ್ನು ಸ್ವೀಕರಿಸಿದೆ. ಬದಲಿ ನಿವೇಶನ ನೀಡುವುದಕ್ಕೆ 2,248 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಸಂಬಂಧಿಸಿದ ಸಾರ್ವಜನಿಕರಿಂದ 2022 ರ ಏಪ್ರಿಲ್ 8ರಂದು ಅರ್ಜಿಗಳ ಸ್ವೀಕರಿಸಲು ಕೊನೆಯ ದಿನವಾಗಿತ್ತು. ಒಂದು ವರ್ಷ ಕಾಲಾವಕಾಶ ನೀಡಲಾಗಿತ್ತು. ಆ ನಂತರ ಬಂದ ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ತಿಳಿಸಲಾಗಿತ್ತು ಎಂದರು.

ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿಯಿಂದ ಪತ್ರಿಕಾಗೋಷ್ಠಿ

ಬಿಡಿಎ ಅನುಮೋದಿತ 13 ಬಡಾವಣೆ ಸ್ವಾಧೀನವಿಲ್ಲ :

ಡಾ.ಶಿವರಾಂ ಕಾರಂತ ಬಡಾವಣೆ ವ್ಯಾಪ್ತಿಯಲ್ಲಿರುವ ಬಿಡಿಎ ಅನುಮೋದಿತ 13 ಬಡಾವಣೆಗಳು ಮತ್ತು ನಿರ್ಮಾಣ ಹಂತದಲ್ಲಿರುವ 2 ಬಹುಮಹಡಿ ಅಪಾರ್ಟ್‍ಮೆಂಟ್ ಸಂಕೀರ್ಣಗಳನ್ನು ಸ್ವಾಧೀನಪಡಿಸಿಕೊಳ್ಳಬಾರದು ಎಂದು ಸರ್ವೋಚ್ಛ ನ್ಯಾಯಾಲಯವು ಬಿಡಿಎಗೆ ಆದೇಶ ನೀಡಿದೆ. ಇದೇ ವೇಳೆ, ಡಾ.ಶಿವರಾಂ ಕಾರಂತ ಬಡಾವಣೆಯಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಕಾರ್ಯ ನಿರ್ವಹಿಸುತ್ತಿರುವ 8 ವಿವಿಧ ಸಂಸ್ಥೆಗಳನ್ನು ಸಕ್ರಮ ಮಾಡುವಂತೆ ಜೆ.ಸಿ.ಸಿ. ಶಿಫಾರಸು ಮಾಡಿತ್ತು. ಅವುಗಳೆಂದರೆ :

1. ವಿದ್ಯಾ ವಿಕಾಸ ಶೈಕ್ಷಣಿಕ ಚಾರಿಟೇಬಲ್ ಟ್ರಸ್ಟ್, ವೀರಸಾಗರ ಗ್ರಾಮ

2. ನಿಕಿಸಾ ಡೆಮೆನ್ಷಿಯಾ ಹೋಂ ಅಂಡ್ ಅಲ್ಝೆಮರ್ ಹಾಸ್ಪಿಟಲ್, ಕೆಂಪನಹಳ್ಳಿ

3. ಬಾಲಾಜಿ ಎಜುಕೇಶನ್ ಟ್ರಸ್ಟ್, ರಾಮಗೊಂಡನಹಳ್ಳಿ

4. ಗಂಗೋತ್ರಿ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್, ಕಾಳತಮ್ಮನಹಳ್ಳಿ

5. ಸೇಂಟ್ ಫಿಲೋಮಿನಾ’ಸ್ ಸ್ಕೂಲ್, ಬ್ಯಾಲಕೆರೆ

6. ಜಾಮಿಯಾ ಮಸೀದಿ, ಗಾಣಿಗರಹಳ್ಳಿ, ಚಿಕ್ಕಬಾಣಾವರ

7. ಡಾ.ಸಂಜಯ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಟಲ್, ವೀರಸಾಗರ

8. ದಿವ್ಯಾ ಕಾರುಣ್ಯ ಚಾರಿಟೇಬಲ್ ಟ್ರಸ್ಟ್, ಬ್ಯಾಲಕೆರೆ

ಸುಪ್ರೀಂಕೋರ್ಟ್ ನಿರ್ದೇಶನದ ಪ್ರಕಾರ ಈ ಮೇಲಿನ ಸಂಘ-ಸಂಸ್ಥೆಗಳನ್ನು ಸಕ್ರಮಗೊಳಿಸಲಾಗುತ್ತದೆ.

ಡಾ.ಶಿವರಾಂ ಕಾರಂತ ಬಡಾವಣೆ ಮೂರು ರೀತಿಯಲ್ಲಿ ವರ್ಗೀಕರಣ :

ಡಾ.ಶಿವರಾಂ ಕಾರಂತ ಬಡಾವಣೆಯಲ್ಲಿ ಕಟ್ಟಡಗಳನ್ನು “2014 ಕ್ಕೆ ಮುನ್ನ’’, “2014 ಮತ್ತು 2018 ರ ನಡುವೆ’’ ಹಾಗೂ “2018 ರ ನಂತರ’’ ನಿರ್ಮಾಣ ಎಂದು ವರ್ಗೀಕರಣ ಮಾಡುವ ಕಾರ್ಯವನ್ನು ಜೆ.ಸಿ.ಸಿ. ಮುಂದುವರಿಸಿದೆ. ಈ ವರ್ಗೀಕರಣದ ಆಧಾರದ ಮೇಲೆ ಸೂಕ್ತ ಆದೇಶಗಳಿಗಾಗಿ ಸಮಿತಿಯು ನ್ಯಾಯಾಲಯಕ್ಕೆ ಸಲ್ಲಿಸಲಿದೆ.

ಜೆಸಿಸಿ ನೀಡಿದ ವರದಿ ಆಧಾರದಲ್ಲಿ ಸರ್ವೋಚ್ಛ ನ್ಯಾಯಾಲಯವು ಆವಲಹಳ್ಳಿಯಲ್ಲಿ 25 ಗುಂಟೆ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿದೆ. ಈ ಜಾಗವು ಬಿಎಂಎಸ್ ಎಜುಕೇಶನ್ ಟ್ರಸ್ಟ್ ಸೇರಿದ ಜಾಗವಾಗಿದ್ದು, ಇದು ಬಿಎಂಎಸ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿಯ ಭಾಗವಾಗಿದೆ. ಈ ಟ್ರಸ್ಟ್ ಎಲ್ಲಾ ಅಗತ್ಯವಾದ ಅನುಮತಿ ಮತ್ತು ಅನುಮೋದನೆಗಳನ್ನು ಸಂಬಂಧಪಟ್ಟ ಪ್ರಾಧಿಕಾರಗಳಿಂದ ಪಡೆದುಕೊಂಡಿದೆ. ಬಿಡಿಎದಿಂದ 15-12-2001 ರಂದು ಯೋಜನಾ ಅನುಮತಿಯನ್ನು ಪಡೆದುಕೊಂಡು ದಾಖಲೆಗಳನ್ನು ಸಲ್ಲಿಸಿದೆ.

ಬಿಡಿಎಗೆ 393.31 ಎಕರೆ ಸರ್ಕಾರಿ ಜಮೀನು ಹಸ್ತಾಂತರ ಕುರಿತು ಚರ್ಚೆ :

ಇದೇ ವೇಳೆ ಸುಪ್ರೀಂಕೋರ್ಟ್ ಹಾರೋಹಳ್ಳಿ ಗ್ರಾಮದಲ್ಲಿ ಗಡಿ ಹೊಂದಾಣಿಕೆ ಆಗದ ಕಾರಣ 34 ಗುಂಟೆ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿದೆ. ಬಿಡಿಎಗೆ 393 ಎಕರೆ ಮತ್ತು 31 ಗುಂಟೆ ಸರ್ಕಾರಿ ಜಮೀನನ್ನು ಹಸ್ತಾಂತರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಮಿತಿಯು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆಗಳನ್ನು ನಡೆಸುತ್ತಿದೆ.

ರಾಜೀವ್ ಗಾಂಧಿ ವಸತಿ ನಿಗಮಕ್ಕೆ 150 ಎಕರೆ ಮಂಜೂರಿಗೆ ಸೂಚನೆ :

ಬಡಾವಣೆಗೆಂದು ಗುರುತಿಸಿರುವ ಸರ್ಕಾರಿ ಭೂಮಿಯನ್ನು ಆದಷ್ಟು ಬೇಗ ಬಿಡಿಎಗೆ ಹಸ್ತಾಂತರ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಕೈಗೊಂಡು ಗಡಿಯನ್ನು ಗುರುತಿಸಬೇಕೆಂದು ಜೆಸಿಸಿ ಬಿಡಿಎ ಉಪ ಆಯುಕ್ತ (ಭೂ ಸ್ವಾಧೀನ)ರಿಗೆ ಸೂಚನೆ ನೀಡಿದೆ. ಸರ್ವೋಚ್ಛ ನ್ಯಾಯಾಲಯವು 2022 ಮಾರ್ಚ್ 31  ರಂದು ಮಹತ್ವದ ತೀರ್ಪು ನೀಡಿದ್ದು, ಡಾ.ಶಿವರಾಂ ಕಾರಂತ ಬಡಾವಣೆಯಲ್ಲಿ 6 ಪ್ರತ್ಯೇಕ ಬ್ಲಾಕ್‍ಗಳಲ್ಲಿ(ಹಂತಗಳಲ್ಲಿ) ತಲಾ 25 ಎಕರೆಯಂತೆ ಒಟ್ಟು 150 ಎಕರೆ ಭೂಮಿಯನ್ನು ರಾಜೀವ್ ಗಾಂಧಿ ವಸತಿ ನಿಗಮ ಲಿಮಿಟೆಡ್‍ಗೆ ಮಂಜೂರು ಮಾಡುವಂತೆ ಬಿಡಿಎ ಆಯುಕ್ತರಿಗೆ ಸೂಚನೆ ನೀಡಿದೆ.

ಡಾ.ಶಿವರಾಮ ಕಾರಂತ ಬಡಾವಣೆಗೆ ಒಳಪಟ್ಟಿರುವ ಗ್ರಾಮಗಳ ನಕ್ಷೆ

ಈ ಜಾಗಗಳಲ್ಲಿ ರಾಜೀವ್ ಗಾಂಧಿ ವಸತಿ ನಿಗಮವು ಆರ್ಥಿಕವಾಗಿ ಹಿಂದುಳಿದವರಿಗೆ (EWS) ಮನೆಗಳು (House) ಅಥವಾ ಫ್ಲಾಟ್‍ಗಳನ್ನು (Flates) ನಿರ್ಮಿಸಲಿದೆ. ಇಡಬ್ಲುಎಸ್ ಯೋಜನೆಯಡಿ ವಿಶಾಲವಾದ ಜಾಗ ಮತ್ತು ಬಹುಮಹಡಿ ಕಟ್ಟಡಗಳ ಅಪಾರ್ಟ್‍ಮೆಂಟ್‍ಗಳನ್ನು ನಿರ್ಮಾಣ ಮಾಡಬೇಕೆಂದು ಸರ್ವೋಚ್ಛ ನ್ಯಾಯಾಲಯವು ಆದೇಶದಲ್ಲಿ ತಿಳಿಸಿದೆ. ಮಂಜೂರು ಮಾಡುವ ಭೂಮಿಯನ್ನು ಜೆ.ಸಿ.ಸಿ ಮೇಲ್ವಿಚಾರಣೆ ಮಾಡಬೇಕೆಂದೂ ನ್ಯಾಯಾಲಯ ಸೂಚಿಸಿದೆ ಎಂದು ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಅವರು  ತಿಳಿಸಿದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿ ಪಡಿಸುತ್ತಿರುವ ಉದ್ದೇಶಿತ ಡಾ. ಶಿವರಾಮ್ ಕಾರಂತ ಬಡಾವಣೆ ವ್ಯಾಪ್ತಿಯಲ್ಲಿ ಬರುವ ಕಟ್ಟಡಗಳ ಪರಿಶೀಲನೆ ನಡೆಸಿ ಅವುಗಳನ್ನು ಸಕ್ರಮಗೊಳಿಸುವ ಸಂಬಂಧ ಅಧ್ಯಯನ ನಡೆಸಿ ಶಿಫಾರಸು ಮಾಡಲು ಸರ್ವೋಚ್ಛ ನ್ಯಾಯಾಲಯವು ನ್ಯಾಯಮೂರ್ತಿ ಚಂದ್ರಶೇಖರ್ ಸಮಿತಿ(ಜೆಸಿಸಿ)ಯನ್ನು ಡಿಸೆಂಬರ್ 2020 ರಲ್ಲಿ ನೇಮಕ ಮಾಡಿತ್ತು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಸದಸ್ಯರಾದ ನಿವೃತ್ತ ಐ.ಎ.ಎಸ್ ಅಧಿಕಾರಿ ಜೈಕರ್ ಜೆರೋಮ್ ಹಾಗೂ ನಿವೃತ್ತ ಐ.ಪಿ.ಎಸ್ ಅಧಿಕಾರಿ ಎಸ್.ಟಿ. ರಮೇಶ್ ಅವರು ಉಪಸ್ಥಿತರಿದ್ದರು.

75 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿವಶ :

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮಂಗಳವಾರ ಸುಮಾರು 75 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಕ್ಕೆ ತೆಗೆದುಕೊಂಡಿದೆ. ಬಿಟಿಎಂ ಬಡಾವಣೆಯ 4 ನೇ ಹಂತದ 2 ನೇ ಬ್ಲಾಕ್ ನ ದೇವರಚಿಕ್ಕನಹಳ್ಳಿಯ ಸರ್ವೇ ಸಂಖ್ಯೆ 41 ರಲ್ಲಿ ಶಾಲಾ ಉದ್ದೇಶಕ್ಕಾಗಿ 23 ಗುಂಟೆ ಜಾಗವನ್ನು ಮತ್ತು ಇದೇ ಸರ್ವೇ ಸಂಖ್ಯೆಯಲ್ಲಿನ 36 1/2 ಗುಂಟೆ ಜಾಗವನ್ನು ಬಿಎಂಟಿಸಿ ಬಸ್ ಡಿಪೋಗೆ ಮಂಜೂರು ಮಾಡಲಾಗಿತ್ತು. ಆದರೆ, ಕಳೆದ ಒಂದು ದಶಕದಿಂದ ಖಾಸಗಿ ವ್ಯಕ್ತಿಗಳು ಈ ಎರಡೂ ಜಾಗಗಳನ್ನು ಅತಿಕ್ರಮಿಸಿಕೊಂಡು ಅಲ್ಲಿ ತಾತ್ಕಾಲಿಕ ಶೆಡ್ ಗಳನ್ನು ನಿರ್ಮಿಸಿ ವಾಣಿಜ್ಯ ವ್ಯವಹಾರ ನಡೆಸುತ್ತಿದ್ದರು.

 ಈ ಹಿನ್ನೆಲೆಯಲ್ಲಿ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್ ಗೌಡ ಅವರ ಮಾರ್ಗದರ್ಶನದಲ್ಲಿ ಶಾಲಾ ಉದ್ದೇಶಕ್ಕಾಗಿ ಮೀಸಲಿದ್ದ ಜಾಗವನ್ನು ಬಿಡಿಎ ಕಾರ್ಯಪಾಲಕ ಅಭಿಯಂತರ ಸುರೇಶ್, ಸಹಾಯಕ ಕಾರ್ಯಪಾಲಕ ಅಭಿಯಂತರ ಅಶೋಕ್ ಮತ್ತು ಬಿಡಿಎ ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್ ನೇತೃತ್ವದಲ್ಲಿ 10 ಕ್ಕೂ ಹೆಚ್ಚು ತಾತ್ಕಾಲಿಕ ಶೆಡ್ ಗಳು ಮತ್ತು ಅಂಗಡಿ ಮುಗ್ಗಟ್ಟುಗಳನ್ನು ಆರು ಜೆಸಿಬಿಗಳನ್ನು ಬಳಸಿ ಮಂಗಳವಾರ ತೆರವುಗೊಳಿಸಲಾಯಿತು.

ಮತ್ತೊಂದೆಡೆ, ಬಿಎಂಟಿಸಿಗೆ ಮಂಜೂರು ಮಾಡಲಾಗಿದ್ದ ಜಾಗದಲ್ಲಿ ಇದ್ದ 10 ಕ್ಕೂ ಹೆಚ್ಚು ತಾತ್ಕಾಲಿಕ ಶೆಡ್ ಗಳು ಮತ್ತು ಅಂಗಡಿ ಮುಗ್ಗಟ್ಟುಗಳನ್ನು ತೆರವುಗೊಳಿಸಿ ಸುಮಾರು ಒಂದು ಮುಕ್ಕಾಲು ಎಕರೆ ಜಾಗವನ್ನು ಮರುವಶಕ್ಕೆ ತೆಗೆದುಕೊಳ್ಳಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Hyperbaric Oxygen therapy unit | ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹತ್ತಾರು ವಿಧದ ಗಂಭೀರ ರೋಗಗಳಿಗೆ ರಾಮ ಬಾಣದಂತಹ ಚಿಕಿತ್ಸೆ ಸದ್ಯದಲ್ಲೇ ಲಭ್ಯ

Next Post

INDIA PATENT FILING | ಅಂತರರಾಷ್ಟ್ರೀಯ ಮಟ್ಟಕ್ಕಿಂತ ಹೆಚ್ಚಳವಾದ ಸ್ವದೇಶಿ ಪೇಟೆಂಟ್ ಅರ್ಜಿ ಸಲ್ಲಿಕೆ ಟ್ರೆಂಡ್ : ಹಾಗಾದ್ರೆ ಭಾರತದಲ್ಲಿ ಪೇಟೆಂಟ್ ಗಾಗಿ ಎಷ್ಟು ಅಪ್ಲಿಕೇಷನ್ ಹಾಕಲಾಗುತ್ತಿದೆ ಗೊತ್ತಾ?

Next Post

INDIA PATENT FILING | ಅಂತರರಾಷ್ಟ್ರೀಯ ಮಟ್ಟಕ್ಕಿಂತ ಹೆಚ್ಚಳವಾದ ಸ್ವದೇಶಿ ಪೇಟೆಂಟ್ ಅರ್ಜಿ ಸಲ್ಲಿಕೆ ಟ್ರೆಂಡ್ : ಹಾಗಾದ್ರೆ ಭಾರತದಲ್ಲಿ ಪೇಟೆಂಟ್ ಗಾಗಿ ಎಷ್ಟು ಅಪ್ಲಿಕೇಷನ್ ಹಾಕಲಾಗುತ್ತಿದೆ ಗೊತ್ತಾ?

#KGFChapter2 Film | ವಿಶ್ವದಾದ್ಯಂತ ಕೆಜಿಎಫ್-2 ರಿಲೀಸ್ ಗೆ ಕ್ಷಣಗಣನೆ : ರಾಜ್ಯದಲ್ಲೇ ಮೊದಲಿಗೆ ಮಧ್ಯರಾತ್ರಿ ಫಸ್ಟ್ ಶೋ

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d