ಬೆಂಗಳೂರು, (www.bengaluruwire.com) : ರಾಜ್ಯದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರ ಹಾಗೂ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳನ್ನು ಖಾಸಗಿಯವರಿಗೆ ವಹಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಕರ್ನಾಟಕ ವಿದ್ಯುತ್ ನಿಗಮ (KPCL) ಅಲ್ಲಗಳೆದಿದೆ.
ರಾಜ್ಯ ಸರ್ಕಾರವಾಗಲಿ, ಕರ್ನಾಟಕ ವಿದ್ಯುತ್ ನಿಗಮವು ಈ ಎರಡು ವಿದ್ಯುತ್ ಕೇಂದ್ರಗಳನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುವ ಯಾವುದೇ ಪ್ರಸ್ತಾವನೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಕುರಿತಂತೆ ಕೆಲವು ಮಾಧ್ಯಮಗಳಲ್ಲಿ ಬಂದಿರುವ ವರದಿ ಸತ್ಯಕ್ಕೆ ದೂರವಾದುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.