Wednesday, August 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

  • Bengaluru Focus

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Loc Kashmir | ಕಾಶ್ಮೀರದ ತೀತ್ವಾಲದಲ್ಲಿನ ಶಾರದಾ ದೇವಸ್ಥಾನ ಅಕ್ಟೋಬರ್ ಗೆ ಸಿದ್ಧವಾಗಲಿದೆ…!

ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಶಾರದಾ ಪೀಠದ ತೀರ್ಥಯಾತ್ರೆ ಕೈಗೊಳ್ಳುತ್ತಿದ್ದ ಬೇಸ್ ಕ್ಯಾಂಪ್ ನಲ್ಲಿ ನಿರ್ಮಾಣವಾಗುತ್ತಿದೆ ಪುಟ್ಟ ಶಾರದಾ ದೇವಸ್ಥಾನ | ಶೃಂಗೇರಿ ಮಠದಿಂದ ಶಾರದಾ ದೇವಸ್ಥಾನಕ್ಕೆ ಪಂಚಲೋಹ ವಿಗ್ರಹ ಸಮರ್ಪಣೆ

by Bengaluru Wire Desk
October 1, 2022
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, (www.bengaluruwire.com) :  ಕಾಶ್ಮೀರದ ತೀತ್ವಾಲದ ಗಡಿನಿಯಂತ್ರಣ ರೇಖೆಯ ಬಳಿ ನಿರ್ಮಿಸುತ್ತಿರುವ ಶ್ರೀ ಶಾರದಾ ದೇವಿಯ ದೇವಸ್ಥಾನ ಕಾಮಗಾರಿ ಪರಿಸ್ಥಿತಿ ಅನುಕೂಲವಾಗಿದ್ದಲ್ಲಿ ಅಕ್ಟೋಬರ್ ವೇಳೆಗೆ ಪೂರ್ಣವಾಗಲಿದೆ ಎಂದು ಶಾರದಾ ಸರ್ವಜ್ಞ ಪೀಠ ಸಂರಕ್ಷಣಾ ಸಮಿತಿ (Save Sharada Committee) ತಿಳಿಸಿದೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ರವೀಂದ್ರ ಪಂಡಿತ್, ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಶಿಸಿರುವ ಮೂಲ ಶಾರದಾ ದೇವಿ ದೇವಸ್ಥಾನಕ್ಕೆ ಭಾರತೀಯರು ಯಾತ್ರೆ ಆರಂಭಿಸುವ ಉದ್ದೇಶದಿಂದ  ಕುಪ್ವಾರ ಜಿಲ್ಲೆಯ ತೀತ್ವಾಲ್ ನಲ್ಲಿನ ಎಲ್ ಒಸಿ ಭಾಗದಲ್ಲಿ ಶಾರದಾ ದೇವಸ್ಥಾನ ನಿರ್ಮಾಣ ಕಾರ್ಯ ಆರಂಭಿಸಲಾಗಿದೆ. ಗಡಿನಿಯಂತ್ರಣ ರೇಖೆಯ ಸ್ಥಳದಲ್ಲಿ ಯಾವುದೇ ಸಮಸ್ಯೆ ಆಗದಿದ್ದಲ್ಲಿ ಅಕ್ಟೋಬರ್ ವೇಳೆಗೆ ಶ್ರೀ ಶಾರದಾ ದೇವಿ ದೇವಸ್ಥಾನ ನಿರ್ಮಾಣ ಕಾಮಗಾರಿ ಪೂರ್ಣವಾಗಲಿದೆ ಎಂದು ಹೇಳಿದರು.

ಬೆಂಗಳೂರಿನ ಹೊರವಲಯದ ಸೀಗೇಹಳ್ಳಿಯಲ್ಲಿ 12*12 ಅಡಿ ವಿಸ್ತೀರ್ಣದ ದೇವಸ್ಥಾನಕ್ಕೆ ಅಗತ್ಯವಾದ ಕಲ್ಲಿನ ಕಂಬಗಳು, ಹಾಗೂ ಕಲ್ಲಿನ ಗೋಡೆಯ ನಿರ್ಮಾಣ ಕೆಲಸಗಳು ಭರದಿಂದ ಸಾಗಿವೆ. ಮೊದಲ ಹಂತದಲವಾಗಿ ಈ ತಿಂಗಳಲ್ಲಿ ಇಲ್ಲಿ ಕೆತ್ತನೆಯಾದ ಕಂಬಗಳನ್ನು ಜಮ್ಮುವಿನ ತನಕ ಟ್ರಕ್ ನಲ್ಲಿ ಸಾಗಿಸಲಾಗುತ್ತದೆ. ಸಾಗಣೆಗೆ ಅನುಕೂಲವಾಗುವಂತೆ  ಕಲ್ಲಿನ ನಿರ್ಮಾಣಗಳನ್ನು 6-7 ಅಡಿಗಳಾಗಿ ವಿಭಜಿಸಲಾಗಿದೆ. ದೇವಸ್ಥಾನ ನಿರ್ಮಾಣಕ್ಕೆ ಒಟ್ಟು 1.20 ಕೋಟಿ ರೂ. ವೆಚ್ಚವಾಗುತ್ತಿದೆ. ದಾನಿಗಳಿಂದ ಈ ಹಣ ಸಂಗ್ರಹಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಪಪತ್ರಿಕಾಗೋಷ್ಟಿಯಲ್ಲಿ ಮಾತನಾಡುತ್ತಿರುವ ಶಾರದಾ ಸರ್ವಜ್ಞ ಪೀಠ ಸಂರಕ್ಷಣಾ ಸಮಿತಿ ಅಧ್ಯಕ್ಷ ರವೀಂದ್ರ ಪಂಡಿತ್

ಈ ದೇವಸ್ಥಾನದ ಜೊತೆ ಜೊತೆಗೆ 1947ಕ್ಕೆ ಮುಂಚೆ ಇದೇ ಸ್ಥಳದಲ್ಲಿ ಸಿಖ್ಖರ ಗುರುದ್ವಾರವಿದ್ದು ನಾಶವಾಗಿತ್ತು. ಹಾಗಾಗಿ ದೇವಸ್ಥಾನದ ಆವರಣದಲ್ಲಿ ಚಿಕ್ಕದಾಗಿ ಗುರುದ್ವಾರ ನಿರ್ಮಿಸಲಾಗುತ್ತಿದೆ. ಶಾರದಾ ದೇವಿ ದೇವಸ್ಥಾನದಲ್ಲಿ ಒಟ್ಟು ನಾಲ್ಕು ದಿಕ್ಕಿನಲ್ಲೂ ನಾಲ್ಕು ದ್ವಾರಗಳಿರಲಿದೆ. ಇವು ಸನಾತನ ಧರ್ಮದ ನಾಲ್ಕು ವೇದಗಳನ್ನು ಸಂಕೇತಿಸಲಿವೆ. ದೇವಸ್ಥಾನ ಒಳಾವರಣದ ಕೆಳಭಾಗ ಮತ್ತು ಮೇಲ್ಭಾಗ ಮರದ ಹೊದಿಕೆಗಳಿರಲಿದೆ. ಶೃಂಗೇರಿ ಶಂಕರಮಠದಿಂದ ನೀಡಲಾಗುವ ಪಂಚಲೋಹದ ಶಾರದಾ ದೇವಿ ವಿಗ್ರಹವನ್ನು ಇಲ್ಲಿ ಪ್ರತಿಷ್ಠಾಪಿಸಲಾಗುವುದು. ವಾಸ್ತು ಪ್ರಕಾರ ಈ ದೇವಸ್ಥಾನ ನಿರ್ಮಿಸಲಾಗುತ್ತಿದೆ ಎಂದು ರವೀಂದ್ರ ಪಂಡಿತ್ ಮಾಹಿತಿ ನೀಡಿದರು.

ಕರ್ನಾಟಕದಲ್ಲಿರುವ ಶೃಂಗೇರಿ ಶಂಕರಮಠದಿಂದ ತೀತ್ವಾಲ್ ನಲ್ಲಿನ ದೇವಸ್ಥಾನಕ್ಕೆ ಸಂಪೂರ್ಣ ಬೆಂಬಲ ನೀಡಿದೆ. ಸದ್ಯ ದೇವಸ್ಥಾನ ಪಾಯದ ಕೆಲಸ ಮುಗಿದಿದೆ. ಈ ದೇವಸ್ಥಾನ ನಿರ್ಮಾಣದಿಂದ ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಮೂಲ ಶಾರದಾ ಪೀಠ ಸ್ಥಳಕ್ಕೆ ಭಾರತೀಯರು ತೀರ್ಥಯಾತ್ರೆ ಕೈಗೊಳ್ಳುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಲಿದೆ ಎಂದು ತಿಳಿಸಿದರು.

1947ರ ಪೂರ್ವದಲ್ಲಿ ಭಾರತ – ಪಾಕಿಸ್ತಾನ ವಿಭಜನೆಗೆ ಮುಂಚೆ ಶ್ರೀ ಶಾರದಾ ದೇವಿ ದೇವಸ್ಥಾನಕ್ಕೆ ಪ್ರತಿವರ್ಷ ಹಿಂದೂಗಳು ಯಾತ್ರೆ ಕೈಗೊಳ್ಳುತ್ತಿದ್ದರು. ತೀತ್ವಾಲ್ ಪ್ರದೇಶದಲ್ಲಿ ನಿರ್ಮಿಸುತ್ತಿರುವ ದೇವಸ್ಥಾನ ಸ್ಥಳದಿಂದಲೇ ತೀರ್ಥಯಾತ್ರೆ ಆರಂಭವಾಗುತ್ತಿತ್ತು. ಹಾಗಾಗಿ ಆ ಬೇಸ್ ಕ್ಯಾಂಪ್ ನಲ್ಲಿಯೇ ಶಾರದಾ ದೇವಸ್ಥಾನ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.

ಪಾಕಿಸ್ಥಾನದಲ್ಲಿ ಭಾರತದಿಂದ ಸಿಖ್ಖರು ಕರ್ತಾಪುರ ಯಾತ್ರೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಅದೇ ರೀತಿ ಹಿಂದುಗಳು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಶಾರದಾ ಮಾತೆಯ ಪುಣ್ಯಸ್ಥಳಕ್ಕೆ ಭೇಟಿ ನೀಡಲು ಎಲ್ ಒಸಿ ಪರ್ಮಿಟ್ ಕಾನೂನಿಗೆ ಸೂಕ್ತ ತಿದ್ದುಪಡಿ ತರಬೇಕಿದೆ ಎಂದು ಕೇಂದ್ರ ಸರ್ಕಾರವನ್ನು ಅವರು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾರದಾ ಸರ್ವಜ್ಞ ಪೀಠ ಸಂರಕ್ಷಣಾ ಸಮಿತಿ ಟ್ರಸ್ಟ್ ನ ಸುರೇಂದರ್ ಮಿರ್ಜಾ, ಶಾರದಾ ಸಂರಕ್ಷಣಾ ಸಮಿತಿಯ ಕಾರ್ಯಕರ್ತರಾದ ಮಂಜುನಾಥ ಶರ್ಮ, ರವಿಂದರ್ ಟೀಕು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

RDPR Schemes & Projects | ರೈತರ ಹೊಲ ಸಂಪರ್ಕಿಸುವ ರಸ್ತೆ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

IAS Officers Transfer | ಬಿಬಿಎಂಪಿ ಮುಖ್ಯ ಆಯುಕ್ತರಾಗಿದ್ದ ಗೌರವ್ ಗುಪ್ತಾ ಸೇರಿದಂತೆ 17 ಐಎಎಸ್ ಅಧಿಕಾರಿಗಳ ವರ್ಗಾವಣೆ

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

IAS Officers Transfer | ಬಿಬಿಎಂಪಿ ಮುಖ್ಯ ಆಯುಕ್ತರಾಗಿದ್ದ ಗೌರವ್ ಗುಪ್ತಾ ಸೇರಿದಂತೆ 17 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬಿಬಿಎಂಪಿಯ ನಿರ್ಗಮಿತ ಮುಖ್ಯ ಆಯುಕ್ತ ಗೌರವ್ ಗುಪ್ತಾ, ತುಷಾರ್ ಗಿರಿನಾಥ್ ಗೆ ಬೆಳ್ಳಿಯ ಅಧಿಕಾರ ದಂಡ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

BBMP New Chief Commissioner | ಬಿಬಿಎಂಪಿ ನೂತನ ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ಅಧಿಕಾರ ಸ್ವೀಕಾರ

Please login to join discussion

Like Us on Facebook

Follow Us on Twitter

Recent News

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group