ಬೆಂಗಳೂರು, (www.bengaluruwire.com) : ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಕಾರ್ಯಕಾರಿಣಿ ಸಭೆ ಇಂದು ನಗರದಲ್ಲಿ ನಡೆಯಿತು.
ವಸತಿ ಸಚಿವರಾದ ವಿ.ಸೋಮಣ್ಣ, ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಅಧ್ಯಕ್ಷರಾದ ಎನ್.ಆರ್. ರಮೇಶ್ ರವರು, ಶಾಸಕರುಗಳಾದ ರವಿಸುಬ್ರಮಣ್ಯ, ಉದಯಗುರಡಾಚಾರ್ ಮತ್ತಿತರರು ಭಾರತಮಾತೆ, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ, ಜಗನ್ನಾಥ ರಾವ್ ಜೋಷಿರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕಾರಿಣಿಗೆ ಚಾಲನೆ ನೀಡಿದರು.
ಸಭೆಯಲ್ಲಿ ಮಾತನಾಡಿದ ವಸತಿ ಸಚಿವ ವಿ.ಸೋಮಣ್ಣ, ವಿಶ್ವದ ಬಹುದೊಡ್ಡ ಸದಸ್ಯತ್ವ ಇರುವ ಪಕ್ಷ ಮತ್ತು ದೇಶ ಮೊದಲು ಎಂದು ಹೇಳಿದ ದೇಶಭಕ್ತಿವುಳ್ಳ ಪಕ್ಷವೆಂದರೆ ಅದು ಭಾರತೀಯ ಜನತಾ ಪಾರ್ಟಿ. ಬಿಜೆಪಿ ಪಕ್ಷದ ಸದಸ್ಯರೆಂದರೆ ಹೆಮ್ಮೆಪಡುವ ಸಂಗತಿಯಾಗಿದೆ.
ಪ್ರಧಾನಿ ನರೇಂದ್ರಮೋದಿರವರ ಆಡಳಿತದಲ್ಲಿ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬಂತೆ ಸಮಾಜ ಕಟ್ಟಕಡೆಯ ವ್ಯಕ್ತಿಗೆ ಯೋಜನೆ ಲಾಭ ದೊರೆಯುತ್ತಿದೆ ಎಂದು ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಯೋಜನೆಗಳನ್ನು ಸಮರ್ಪಕವಾಗಿ ಸಾರ್ವಜನಿಕರಿಗೆ ತಲುಪಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಜೆ.ಹೆಚ್.ಪಟೇಲ್ ಸಂಪುಟದಲ್ಲಿ ಸಚಿವನಾಗಿ ಕಾರ್ಯನಿರ್ವಹಿಸಿದ್ದೇನೆ. ಪ್ರಧಾನಿ ನರೇಂದ್ರ ಮೋದಿ 8 ವರ್ಷದ ಆಡಳಿತವನ್ನು ಇಡಿ ವಿಶ್ವವೇ ಹಾಡಿ ಹೊಗಳಿದೆ. ಉಜ್ವಲ, ಮುದ್ರಾ ಯೋಜನೆಗಳು ಕೊಟ್ಯಾಂತರ ಜನರನ್ನು ತಲುಪಿದೆ.
ಉಜ್ವಲ ಯೋಜನೆಯಿಂದ ಕಾಡು ಜನರಿಗೆ ಅಡುಗೆ ಮಾಡಲು ಗ್ಯಾಸ್ ಸಿಲಿಂಡರ್ ಲಭಿಸಿದೆ. ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿದೆ.
ವಿಜಯನಗರ ಮತ್ತು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ನನಗೆ ಎರಡು ಕಣ್ಣುಗಳು ಇದ್ದಂತೆ. ಬಿಜೆಪಿ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನು ಉನ್ನತ ಸ್ಥಾನಮಾನ ಅವಕಾಶ ಲಭಿಸಲಿದೆ. ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬೆಂಗಳೂರು ನಗರ ಅಭಿವೃದ್ದಿಗೆ 6,000 ಸಾವಿರ ಕೋಟಿ ರೂ. ಅನುದಾನ ನೀಡಿದ್ದಾರೆ.
ಕಾಮಗಾರಿಗಳ ಯೋಜನೆಗಳಿಗೆ ಬೆಸ್ಕಾಂ, ಬಿಬಿಎಂಪಿ ಹಾಗೂ ಜಲಮಂಡಳಿ ಸಮನ್ವಯದಿಂದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಗುಂಡಿ ಮುಕ್ತವಾಗಿದೆ. ಜನರ ಸಮಸ್ಯೆಗಳಿಗೆ ಅಲಿಸುವ, ಪರಿಹರಿಸುವ ಕಾರ್ಯವಾಗಬೇಕು.
ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬೀದಿ ದೀಪ, ಪಾರ್ಕ್ ಮತ್ತು ರಸ್ತೆ, ಬೋರ್ ವೆಲ್ ಎಲ್ಲದರ ಬಗ್ಗೆ ಸಮಗ್ರ ಮಾಹಿತಿಯನ್ನ ಸಂಗ್ರಹಿಸಿ, ವಾರ್ ರೂಂ ನಲ್ಲಿ ಅಳವಡಿಸಿ ಸಾರ್ವಜನಿಕರ ಸಮಸ್ಯೆಗಳನ್ನು ನಿವಾರಣೆ ಮಾಡುವ ಯೋಜನೆ ರೂಪಿಸಲಾಗಿದೆ. ಅಧಿಕಾರ ನಿಂತ ನೀರಲ್ಲ, ಅಧಿಕಾರ ಸಿಕ್ಕಾಗ ಒಳ್ಳೆಯ ಕೆಲಸ ಮಾಡಬೇಕು ಎಂದು ಹೇಳಿದರು.
ಅಧ್ಯಕ್ಷರಾದ ಎನ್.ರಮೇಶ್ ಮಾತನಾಡಿ, ಪರಿಸರ ರಕ್ಷಣೆಗೆ 2ಲಕ್ಷ ಸಸಿ ನೆಡುವ ಮತ್ತು ರಕ್ಷಣೆ ಮಾಡುವ ಅಭಿಯಾನ. ಇದೇ ತಿಂಗಳು 21ನೇ ತಾರೀಖು 13 ಮಂಡಲ,19 ಪ್ರಕೋಷ್ಟಗಳ ಸಮಾವೇಶ ಆಯೋಜಿಸಲಾಗಿದೆ.
ಮೇ 25ರಿಂದ ಜೂನ್ 10ನೇ ತಾರೀಖಿನವರಗೆ ಪ್ರತಿ ಮಂಡಲದ ಕಾರ್ಯಕಾರಿಣಿ ಸಭೆ ಆಯೋಜಿಸಬೇಕು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬ ಕಾರ್ಯಕರ್ತರು ಮನೆ, ಮನೆಗೆ ತಲುಪಿಸುವ ಕಾರ್ಯವಾಗಬೇಕು ಎಂದು ಕಾರ್ಯಕರ್ತರಿಗೆ ಹೇಳಿದರು.
ಹಾಲು ಉತ್ಪಾದಕರು, ಕೈಗಾರಿಕೆ, ವೈದ್ಯಕೀಯ ವಿವಿಧ ಪ್ರಕೋಷ್ಟಗಳು ಪಕ್ಷದ ಸಂಘಟನೆ ಜೊತೆಯಲ್ಲಿ ಜನಸಾಮಾನ್ಯರ ಸಮಸ್ಯೆಗಳನ್ನು ಅಲಿಸಿ, ಸರ್ಕಾರದ ಯೋಜನೆಗಳನ್ನು ತಲುಪಿಸುವಂತೆ ನೋಡಿಕೊಳ್ಳಬೇಕು.
ಬೆಂಗಳೂರು ದಕ್ಷಿಣ ಜಿಲ್ಲೆ ವ್ಯಾಪ್ತಿಯಲ್ಲಿ 10ಕ್ಕೂ ಹತ್ತು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಂಜೀವ್ ಮರಂಠದೂರ್, ವಿಧಾನಪರಿಷತ್ ಸದಸ್ಯರಾದ ಪುಟ್ಟಣ್ಣ, ಗೋವಿಂದರಾಜನಗರ ಮಂಡಲ ಬಿಜೆಪಿ ಅಧ್ಯಕ್ಷರಾದ ವಿಶ್ವನಾಥಗೌಡರು, ವಿಜಯನಗರ ಮಂಡಲ ಬಿ.ಜೆ.ಪಿ.ಅಧ್ಯಕ್ಷರಾದ ಟಿ.ವಿ.ಕೃಷ್ಣ,ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಕೆ.ಉಮೇಶ್ ಶೆಟ್ಟಿ,ಡಾ.ಎಸ್.ರಾಜು, ಮೋಹನ್ ಕುಮಾರ್, ವಾಗೇಶ್ ಮತ್ತು ಬಿಜೆಪಿ ಮುಖಂಡರಾದ ಡೊಡ್ಡವೀರಯ್ಯ, ಶ್ರೀಧರ್ ರವರು ಮತ್ತಿತರರು ಕಾರ್ಯಕಾರಿಣಿಯಲ್ಲಿ ಉಪಸ್ಥಿತರಿದ್ದರು.