Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

‘ರಾಷ್ಟ್ರಕವಿ ಕುವೆಂಪು ಹಾಗೂ ನಾಡಗೀತೆ ತಿರುಚಿ ಬರೆದವರ ವಿರುದ್ಧ ಶೀಘ್ರವೇ ಕ್ರಮ ಕೈಗೊಳ್ಳಿ’ – ಕಸಾಪದಿಂದ ರಾಜ್ಯ ಸರ್ಕಾರಕ್ಕೆ ಒತ್ತಾಯ

ಯಾವುದೇ ಸಾಹಿತಿಯನ್ನು ಟೀಕಿಸುವ ಮೊದಲು ಅವರ ಸಾಹಿತ್ಯದ ಸಾರ-ಸರ್ವವನ್ನು ಅರಿತುಕೊಳ್ಳಬೇಕು. ಅವರ ಬಗ್ಗೆ ತಿಳಿದುಕೊಳ್ಳದೇ ಮಾತನಾಡುವುದು ಶೋಭೆಯಲ್ಲ – ನಾಡೋಜ ಡಾ.ಮಹೇಶ್ ಜೋಶಿ | ರೋಹಿತ್ ಚಕ್ರತೀರ್ಥ ವಿರುದ್ಧ ನಾಳೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

by Bengaluru Wire Desk
May 30, 2022
in News Wire, Public interest
Reading Time: 1 min read
0
ಕನ್ನಡ ಸಾಹಿತ್ಯ ಪರಿಷತ್ ಕಟ್ಟಡದ ಸಾಂದರ್ಭಿಕ ಚಿತ್ರ

ಕನ್ನಡ ಸಾಹಿತ್ಯ ಪರಿಷತ್ ಕಟ್ಟಡದ ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.30 www.bengaluruwire.com : ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ, ನಾಡಗೀತೆಯ ತಿರುಚಿ ಬರೆದವರ ವಿರುದ್ಧ ಸರ್ಕಾರ ತಡಮಾಡದೆ ಕ್ರಮಕೈಗೊಳ್ಳಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತು ಆಗ್ರಹಿಸಿದೆ.

ರಾಷ್ಟ್ರಕವಿ ಕುವೆಂಪು ಅವರ ಕುರಿತು ಅವಹೇಳನಕಾರಿ ಮಾತುಗಳ ಬಗ್ಗೆ ಹಾಗೂ ನಾಡಗೀತೆಯನ್ನು ತಿರುಚಿ ಬರೆದಿರುವ ಕುರಿತು ಮಾಧ್ಯಮಗಳಲ್ಲಿ ಓದುವ, ಹೀನಾಯ ಸ್ಥಿತಿ ತಲುಪಿರುವುದಕ್ಕೆ, ಕನ್ನಡ ಸಾಹಿತ್ಯ ಪರಿಷತ್ತಿನ ಪಾಲಿಗೆ ಅತ್ಯಂತ ಖೇದ ಹಾಗೂ ಬೇಸರದ ಸಂಗತಿಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ, ಬೇಸರ ವ್ಯಕ್ತಪಡಿಸಿದ್ದಾರೆ.

ರಾಮಕೃಷ್ಣ ಪರಮಹಂಸರ, ವಿವೇಕಾನಂದರ ಚಿಂತನೆಗಳನ್ನು ಆದರ್ಶವನ್ನಾಗಿಸಿಕೊಂಡು, ಸಾಹಿತ್ಯದಲ್ಲಿ ಆಧ್ಯಾತ್ಮೀಕತೆಯನ್ನು ಸರಳವಾಗಿ, ಎಲ್ಲರೂ ಅರ್ಥ ಮಾಡಿಕೊಳ್ಳುವ ಹಾಗೆ ರಚಿಸಿದ ಮಹಾಕವಿಯ ಕುರಿತು ನಿಂದನೆಯನ್ನು ಮಾಡಿರುವುದು ವೈಯಕ್ತಿಕವಾಗಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷನಾಗಿ ಖಂಡಿಸುವುದರ ಜೊತೆಗೆ ಅವಹೇಳನಕಾರಿ ಹೇಳಿಕೆಯನ್ನು ನೀಡಿದವರ ವಿರುದ್ಧ ಸರ್ಕಾರ ಶೀಘ್ರವೇ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ ಎಂದು ಪರೋಕ್ಷವಾಗಿ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಮುಖ್ಯಸ್ಥ ರೋಹಿತ್ ಚಕ್ರತೀರ್ಥ ಹೆಸರನ್ನು ಉಲ್ಲೇಖಿಸದೆ ಅವರು ಹೇಳಿದ್ದಾರೆ.

ನಾಡೋಜ ಡಾ.ಮಹೇಶ್ ಜೋಶಿ

ಯಾವುದೇ ಸಾಹಿತಿಯನ್ನು ಟೀಕಿಸುವ ಮೊದಲು ಅವರ ಸಾಹಿತ್ಯದ ಸಾರ-ಸರ್ವವನ್ನು ಅರಿತುಕೊಳ್ಳಬೇಕು. ಅವರ ಬಗ್ಗೆ ತಿಳಿದುಕೊಳ್ಳದೇ ಮಾತನಾಡುವುದು ಶೋಭೆಯಲ್ಲ. ಹಿನ್ನೆಲೆ ತಿಳಿದುಕೊಳ್ಳದೇ ಮಾತನಾಡುವುದು, ಅವರ ಬೇಜವಾಬ್ದಾರಿತನವನ್ನು ಹಾಗೂ ಅಪ್ರಬುದ್ಧತೆಯನ್ನು ತೋರಿಸುತ್ತದೆ. ಕುವೆಂಪು ಅವರನ್ನು ನಿಂದಿಸಿದವರ ಹಾಗೂ ನಾಡಗೀತೆಯನ್ನು ತಿರುಚಿ ಬರೆದವರ ಮೇಲೆ ಕ್ರಮಕೈಗೊಳ್ಳುವಂತೆ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿಗಳ ಒತ್ತಾಯದಂತೆ ಮುಖ್ಯಮಂತ್ರಿಗಳು ಕ್ರಮ ತೆಗೆದುಕೊಳ್ಳುವ ಬಗ್ಗೆ ತೀರ್ಮಾನ ಕೈಗೊಂಡಿರುವುದನ್ನು, ಕನ್ನಡ ಸಾಹಿತ್ಯ ಪರಿಷತ್ತು ಬೆಂಬಲಿಸುತ್ತದೆ. ಈ ಬಗ್ಗೆ ತಡಮಾಡದೇ ಅಂಥವರ ವಿರುದ್ಧ ಶೀಘ್ರ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ರಾಷ್ಟ್ರಕವಿ ಕುವೆಂಪು ಅವರ ಕುರಿತು ಅವಹೇಳನಕಾರಿ ಮಾತುಗಳನ್ನು ಆಡಿರುವ ಹಾಗೂ ನಾಡಗೀತೆಯನ್ನು ತಿರುಚಿ ಬರೆದವರ ಮೇಲೆ ಪರಿಷತ್ತು ತೀವ್ರವಾಗಿ ಖಂಡಿಸುತ್ತದೆ ಹಾಗೂ ಪರಿಷತ್ತಿನ ಎಲ್ಲಾ ಜಿಲ್ಲಾ ಘಟಕಗಳ, ಗಡಿನಾಡ ಘಟಕಗಳ, ತಾಲ್ಲೂಕು ಹಾಗೂ ಹೋಬಳಿ ಘಟಕಗಳ ಅಧ್ಯಕ್ಷರುಗಳು, ಈ ಖಂಡನೆಗೆ ಒಮ್ಮತದಿಂದ ಕೇಂದ್ರ ಪರಿಷತ್ತಿಗೆ ಬೆಂಬಲವನ್ನು ಸೂಚಿಸಿದ್ದಾರೆ.”

– ನಾಡೋಜ ಡಾ. ಮಹೇಶ ಜೋಶಿ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು

ಕುವೆಂಪು ವಿರಚಿತ ಗೀತೆ ನಾಡಗೀತೆಯಾಗಿದ್ದು ಹೇಗೆ ?

ಕುವೆಂಪು ವಿರಚಿತ “ಜಯಭಾರತ ಜನನಿಯ ತನುಜಾತೆ” ಗೀತೆಯನ್ನು “ನಾಡಗೀತೆ” ಮಾಡಬೇಕೆಂದು ಮೊದಲ ಅಳವಡಿಸಿಕೊಂಡಿದ್ದು ಸಾಹಿತ್ಯ ಪರಿಷತ್ತು. 1971ರಲ್ಲಿ ರಾಷ್ಟ್ರಕವಿ ಕುವೆಂಪು ಅವರ ಸಮ್ಮತಿ ಪಡೆದು ಕನ್ನಡ ಸಾಹಿತ್ಯ ಪರಿಷತ್ತು ನಾಡಗೀತೆಯನ್ನು ತನ್ನ ಎಲ್ಲ ಕಾರ್ಯಕ್ರಮಗಳಲ್ಲೂ ಹಾಡಿಸುತ್ತಾ ಬಂದಿದೆ. ಈ ಮೂಲಗೀತೆ 1924ರಲ್ಲಿ ರಚನೆಯಾಗಿ, ಇಂದಿಗೆ 98 ವರ್ಷವಾಯಿತು. ಎರಡು ಸಲ ಪರಿಷ್ಕರಣೆಗೊಂಡು ಮೈಸೂರಿನ ಸಂಪದಭ್ಯುದಯ ಪತ್ರಿಕೆಯಲ್ಲಿ ಪ್ರಕಟವಾಯಿತು. ಅನಂತರ ಮತ್ತೆ ಪರಿಷ್ಕರಣೆಗೊಂಡು ಕುವೆಂಪು ಅವರ ಕೊಳಲು ಕವನ ಸಂಕಲನದಲ್ಲಿ ಪ್ರಕಟವಾಯಿತು. ಇದು ಭಾರತದ ಅಖಂಡತೆಯನ್ನೂ, ಭಾವೈಕ್ಯತೆಯನ್ನೂ ಎತ್ತಿ ಹಿಡಿಯುವ ಗೀತೆ.

ಭಾರತಾಂತರ್ಗತ ಕರ್ನಾಟಕ, ಕರ್ನಾಟಕಾಂತರ್ಗತ ಭಾರತ ಎಂಬುದನ್ನು ಆವೇಶವಿಲ್ಲದೆ, ಘೋಷಣೆಗಳಿಲ್ಲದೆ ಸಾರುವ ಭಾವನಾತ್ಮಕ ಗೀತೆಯಿದು. ಇಂತಹ ಅಪರೂಪದ ಗೀತೆಯನ್ನು ಪರಿಷತ್ತು ನಾಡಗೀತೆಯಾಗಿ ಆರಿಸಿತು. ಅದರ ಅನಂತರ ಸರ್ಕಾರವೂ ಇದನ್ನೇ ನಾಡಗೀತೆ ಎಂದು ಅಂಗೀಕರಿಸಿ, ಪರಿಷತ್ತಿನ ಆಯ್ಕೆಯನ್ನು ದೃಢಗೊಳಿಸಿ, 6 ಜನವರಿ 2004ರಂದು ಕರ್ನಾಟಕದ ನಾಡಗೀತೆಯನ್ನಾಗಿ ನಿಗದಿಪಡಿಸಿ ಆದೇಶ ಹೊರಡಿಸಿತು.

“ಮನುಜ ಮತ ವಿಶ್ವಪಥ” ಎಂಬ ಸಂದೇಶದ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದ ಕುವೆಂಪು ಅವರು, ಪ್ರಕೃತಿಯಲ್ಲಿ ದೇವರನ್ನು ಕಾಣುವ, ದೇವರಲ್ಲಿ ಪ್ರಕೃತಿಯನ್ನು ಕಾಣುವ ದೈವಿಕ ಸಂಬಂಧಗಳನ್ನು ಪ್ರತಿಪಾದಿಸಿದ ಸರ್ವೋದಯ ತತ್ವ ಪ್ರತಿಪಾದಕರು. ಸಾಮಾಜಿಕ, ಧಾರ್ಮಿಕ, ಆರ್ಥಿಕ ಅಸಮಾನತೆಯನ್ನು ಮತ್ತು ಲಿಂಗಭೇದವನ್ನು ನಿವಾರಿಸಿಕೊಂಡು ಈ ಜಗತ್ತು “ಸರ್ವಜನಾಂಗದ ಶಾಂತಿಯ ತೋಟ”ವಾಗಬೇಕೆಂದು ಕನಸು ಕಂಡ ಶ್ರೇಷ್ಠ ದಾರ್ಶನಿಕರು.

ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಲು ಸಾಹಿತ್ಯದ ಮೂಲಕ ಅರ್ಥಗರ್ಭಿತ ಪ್ರಯತ್ನ ಮಾಡಿದ ಮೇರು ಸಾಹಿತಿಗಳು. ಅವರ ಸಾಹಿತ್ಯವನ್ನು ಓದಿದವರ್ಯಾರೂ ಸಹ ಕುವೆಂಪು ಅವರ ಕುರಿತು ಚಕಾರ ಎತ್ತುವ ಧೈರ್ಯವನ್ನು ಮಾಡುವುದಿಲ್ಲ. ಯಾರು ಈ ಮಹಾದಾರ್ಶನಿಕರನ್ನು ಸರಿಯಾಗಿ ಅರ್ಥೈಸಿಕೊಂಡಿಲ್ಲವೋ, ಅಂಥವರು ಮಾತ್ರ ಅಡ್ಡದಾರಿಯನ್ನು ಹಿಡಿದು, ಅವರ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡುತ್ತಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ವಿವರಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Yoga Day | ಮೈಸೂರಿನಲ್ಲಿ ಈ ಬಾರಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ – ಪ್ರಧಾನಿ ಭಾಗಿ ; ವಿಡಿಯೋ ಕಾನ್ಫರೆನ್ಸ್ ನಲ್ಲಿ ಮೋದಿ ಜೊತೆ ಬೊಮ್ಮಾಯಿ ಮಾತುಕತೆ

Next Post

Petrol Purchase Bandh | ಕಮಿಷನ್ ಏರಿಕೆಗೆ ಒತ್ತಾಯಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ಮಂಗಳವಾರ ರಾಜ್ಯಾದ್ಯಂತ ತೈಲ ಖರೀದಿ ಸ್ಥಗಿತ

Next Post
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

Petrol Purchase Bandh | ಕಮಿಷನ್ ಏರಿಕೆಗೆ ಒತ್ತಾಯಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ಮಂಗಳವಾರ ರಾಜ್ಯಾದ್ಯಂತ ತೈಲ ಖರೀದಿ ಸ್ಥಗಿತ

ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

Karnataka Textbook Controversy | ಪಠ್ಯ ಪರಿಷ್ಕರಣೆ : ಸಚಿವರ ವರದಿ ಆಧರಿಸಿ ಕ್ರಮ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d