Thursday, September 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

  • Bengaluru Focus

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Proposed For EV In State Govt. | ಇಂಧನ ಇಲಾಖೆ ಕಚೇರಿಗಳಲ್ಲಿ ವಿದ್ಯುತ್ ಚಾಲಿತ ವಾಹನ ಬಳಕೆಗೆ ಕ್ರಮ : ಇಂಧನ ಸಚಿವ ಸುನಿಲ್ ಕುಮಾರ್

2030ರ ಇಸವಿಯ ವೇಳೆಗೆ, ನಗರದ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ದ್ವಿಚಕ್ರ- ತ್ರಿಚಕ್ರ ವಾಹನಗಳ ಪೈಕಿ ಎಲೆಕ್ಟ್ರಿಕ್ ವಾಹನಗಳ ಪಾಲು ಶೇ.80ರಷ್ಟಾಗಲಿದೆ ಎಂದು ಅಂದಾಜಿಸಲಾಗಿದೆ.

by Bengaluru Wire Desk
June 9, 2022
in Bengaluru Focus, News Wire
Reading Time: 1 min read
0
ಬೆಂಗಳೂರು ನಗರವನ್ನು ಜಾಗತಿಕ ಇವಿ ವಲಯವನ್ನಾಗಿಸುವ ದಿಕ್ಸೂಚಿ ವರದಿ ಬಿಡುಗಡೆ ಮಾಡಿದ ಇಂಧನ ಸಚಿವ ಸುನಿಲ್ ಕುಮಾರ್. ಚಿತ್ರದಲ್ಲಿ ಇಂಧನ ಇಲಾಖೆ ಪ್ರಧಾನ ಕಾರ್ಯದರ್ಶಿ ಜಿ.ಕುಮಾರ್ ನಾಯಕ್, ಬೆಸ್ಕಾಂ ಎಂಡಿ ರಾಜೇಂದ್ರ ಚೋಳನ್, ಭಾರತದ ಬ್ರಿಟಿಷ್ ಹೈಕಮಿಷನರ್ ಆಲೆಕ್ಸ್ ಇಲ್ಲಿಸ್ ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರು, ಜೂ.9 www.bengaluruwire.com :  ಇಂಧನ ಇಲಾಖೆಯ ಕಚೇರಿಗಳಲ್ಲಿ ವಿದ್ಯುತ್ ಚಾಲಿತ ವಾಹನ ಬಳಕೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಗುರುವಾರ ತಿಳಿಸಿದರು.

ಕರ್ನಾಟಕ ಇವಿ ಜಾಗೃತಿ ಪೋರ್ಟಲ್ ಮತ್ತು ಬೆಂಗಳೂರು ನಗರವನ್ನು ಜಾಗತಿಕ ಇವಿ ವಲಯವನ್ನಾಗಿ ಪರಿವರ್ತಿಸುವ ದಿಕ್ಸೂಚಿ ವರದಿ ಬಿಡುಗಡೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ , ಇಂಧನ ಇಲಾಖೆ ಅಧೀನದಲ್ಲಿ ಬರುವ ಎಲ್ಲ ಕಚೇರಿಗಳಲ್ಲಿ ವಿದ್ಯುತ್ ಚಾಲಿತ ವಾಹನ ಬಳಕೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಮೂರು ತಿಂಗಳ ಹಿಂದೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿದೆ ಎಂದು ಹೇಳಿದರು.

ವಿದ್ಯುತ್ ಚಾಲಿತ ವಾಹನಗಳ ಬೆಲೆ, ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳ ಬೆಲೆಗಿಂತ ದುಬಾರಿ ಇರುವುದರಿಂದ, ಎಲೆಕ್ಟ್ರಿಕ್ ವಾಹನ ಬಳಕೆಗೆ ಇನ್ನೂ ಒಪ್ಪಿಗೆ ದೊರೆತಿಲ್ಲ. ಎಲೆಕ್ಟ್ರಿಕ್ ವಾಹನ ಬಳಸುವುದು ನಮ್ಮ ಇಲಾಖೆಯ ಆದ್ಯತೆ ಆಗಿದ್ದು, ಹಣಕಾಸು ಇಲಾಖೆ ಸಮ್ಮತಿಸಿದರೆ, ಮುಂದಿನ ದಿನಗಳಲ್ಲಿ ಇಂಧನ ಇಲಾಖೆಯ ಎಲ್ಲ ಕಚೇರಿಗಳಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಸಲಾಗುವುದು ಎಂದು ತಿಳಿಸಿದರು.

ಇದಕ್ಕೂ ಮೊದಲು ಇವಿ ಜಾಗೃತಿ ಪೋರ್ಟಲ್ ಮತ್ತು ದಿಕ್ಸೂಚಿ ವರದಿ ಬಿಡುಗಡೆ ಮಾಡಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಇಲೆಕ್ಟ್ರಿಕ್ ವಾಹನ ಬಳಕೆಗೆ ರಾಜ್ಯ ಸರ್ಕಾರ ಉತ್ತೇಜನ ನೀಡುತ್ತಿದ್ದು, ಜೂನ್ 23 ರಿಂದ ಜೂನ್ 30ರವರೆಗೆ ರಾಜ್ಯದಲ್ಲಿ ಇವಿ ಚಾರ್ಜಿಂಗ್ ಸೆಂಟರ್ ಗಳ ಕುರಿತು ಅಭಿಯಾನ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ 1000 ಕ್ಕೂ ಹೆಚ್ಚು ಇವಿ ಚಾರ್ಜಿಂಗ್ ಸ್ಟೇಷನ್ ಗಳಿದ್ದು, 3000 ಚಾರ್ಜಿಂಗ್ ಸ್ಟೇಷನ್ ಗಳ ಗುರಿ ಹೊಂದಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ನಗರದಲ್ಲಿ ಚಾರ್ಜಿಂಗ್ ಸ್ಟೇಷನ್ ಗಳ ನಿರ್ಮಾಣಕ್ಕೆ ಟೆಂಡರ್ ಕರೆಯುವ ಹೊಣೆಯನ್ನು ಬೆಸ್ಕಾಂ ಗೆ ನೀಡಲಾಗಿದೆ. ಚಾರ್ಜಿಂಗ್ ಸ್ಟೇಷನ್ ಗಳ ನಿರ್ಮಾಣಕ್ಕೆ ಸರಕಾರ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಭಾರತದ ಬ್ರಿಟಿಷ್ ಹೈಕಮಿಷನರ್ ಆಲೆಕ್ಸ್ ಇಲ್ಲಿಸ್  ಮಾತನಾಡಿ, ಭಾರತ, ಅಮೆರಿಕ ಮತ್ತು ಚೀನಾ ದೇಶಗಳು ಯುಕೆ ಜತೆ ಸಹಭಾಗಿತ್ವದ ವಹಿವಾಟಿನಲ್ಲಿ ತೊಡಗಿಕೊಂಡಿವೆ. ಭಾರತದ ಸುಮಾರು 22 ಕೋಟಿ ಜನರು ನಗರ ಪ್ರದೇಶಕ್ಕೆ ಮುಂದಿನ ದಿನಗಳಲ್ಲಿ ವಲಸೆ ಹೋಗಲಿದ್ದಾರೆ. ಈ ನಿಟ್ಟಿನಲ್ಲಿ ನಗರ ಪ್ರದೇಶಗಳ ಸಮರ್ಥ ಅಭಿವೃದ್ದಿ ಮುಖ್ಯ ಎಂದು ತಿಳಿಸಿದರು.

ಬೆಸ್ಕಾಂ ಕೇಂದ್ರ ಕಚೇರಿಯಲ್ಲಿರುವ ಇವಿ ಚಾರ್ಜಿಂಗ್ ಸ್ಟೇಷನ್ ಚಿತ್ರ

ಬೆಂಗಳೂರಿನಲ್ಲಿ ಇವಿ ವಾಹನ ಬಳಕೆಗೆ ಹೆಚ್ಚಿನ ಅವಕಾಶವಿದೆ :

“ಭಾರತದಲ್ಲಿ ಎಲೆಕ್ಟ್ರಾನಿಕ್ ವಾಹನಗಳ ಬಳಕೆ ಕುರಿತು ಭಾರತದ ಪ್ರಧಾನಿ ನರೇಂದ್ರ ಮೋದಿ ಜತೆ ನಾನು ಮಾತನಾಡಿದ್ದೇನೆ. ಅವರು ಈ ಕುರಿತು ಧನಾತ್ಮಕ ಧೋರಣೆ ಹೊಂದಿದ್ದು, ಭಾರತ ಸರಕಾರ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಭಾರತದಲ್ಲಿ ಅದರಲ್ಲೂ ಮುಖ್ಯವಾಗಿ ಕರ್ನಾಟಕದಲ್ಲಿ ಇವಿ ಚಲನೆಶೀಲತೆ ಬಗ್ಗೆ ಸಹಭಾಗಿತ್ವಹೊಂದಲು ಬ್ರಿಟನ್ ಉತ್ಸುಕತೆ ಹೊಂದಿದೆ”. ನಮ್ಮ ಇತಿಹಾಸ ಪಠ್ಯದಲ್ಲಿ ಭಾರತ, ಸ್ವಾತಂತ್ರ್ಯಕ್ಕಾಗಿ ಬ್ರಿಟನ್ ಜತೆ ಹೋರಾಟ ಮಾಡಿದೆ. ನಾವು ಅದನ್ನು ಮರೆತು ಪ್ರಸ್ತುತ ನಮ್ಮ ದೇಶಗಳ ಪರಸ್ಪರ ಅಭಿವೃದ್ದಿಗಾಗಿ ಕೈಜೋಡಿಸಬೇಕಾಗಿದೆ. ಬೆಂಗಳೂರು ಬಹಳ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಇಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಅವಕಾಶ ಇದೆ ಎಂದು ಆಲೆಕ್ಸ್ ಇಲ್ಲಿಸ್ ಉಲ್ಲೇಖಿಸಿದರು.

ಬೆಸ್ಕಾಂ ಆಡಳಿತ ನಿರ್ದೇಶಕ ಪಿ. ರಾಜೇಂದ್ರ ಚೋಳನ್ ಪ್ರಸ್ತಾವಿಕ ಮಾತನಾಡಿ, ದೇಶದಲ್ಲೇ ಮೊದಲ ಬಾರಿಗೆ ಬೆಸ್ಕಾಂ ಸಾರ್ವಜನಿಕರಿಗಾಗಿ ಇವಿ ಚಾರ್ಜಿಂಗ್ ಸ್ಟೇಷನ್ ಗಳನ್ನು ತೆರೆದಿದ್ದು, ಎರಡು ಚಾರ್ಜಿಂಗ್ ಸ್ಟೇಷನ್ ಗಳನ್ನು ಬೆಸ್ಕಾಂ ನ ನಿಗಮ ಕಚೇರಿಗಳಲ್ಲಿ ತೆರೆಯಲಾಗಿದೆ.ಪ್ರಸ್ತುತ ವಿರುವ ಬೆಸ್ಕಾಂ ಚಾರ್ಜಿಂಗ್ ಸ್ಟೇಷನ್ ಗಳಿಂದ ತಿಂಗಳಿಗೆ 6,000ಕ್ಕೂ ಹೆಚ್ಚು ವಹಿವಾಟು ನಡೆಯುತ್ತಿದ್ದು, ಸುಮಾರು 30,000 ಕಿ.ವ್ಯಾಟ್ ಇಂಧನ ಮಾರಾಟ ಮಾಡಿ, 2.5 ಲಕ್ಷ ರೂ, ಆದಾಯಗಳಿಸುತ್ತಿದೆ ಎಂದು ಮಾಹಿತಿ ನೀಡಿದರು.

ಇವಿ- ಜಾಗೃತಿ ಪೋರ್ಟಲ್ ಗೆ ಚಾಲನೆ :

ರಾಜ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಬಗ್ಗೆ ಜನರದಲ್ಲಿ ಜಾಗೃತಿ ಮೂಡಿಸಲು ಇವಿ- ಜಾಗೃತಿ ಪೋರ್ಟಲ್ (EV Awareness Portal : www.evkarnataka.co.in) ಜನರಿಗೆ ಉಪಯುಕ್ತ ಮಾಹಿತಿಯನ್ನು ಒದಗಿಸಲಿದೆ. ಕರ್ನಾಟಕದಲ್ಲಿ ವಿದ್ಯುತ್ ವಾಹನಗಳ ಅಂಕಿ ಅಂಶಗಳ ಮಾಹಿತಿಗೆ ಈ ಜಾಲತಾಣವು ‘ಒನ್ ಸ್ಟಾಪ್ ಸೈಟ್’ ಆಗಿ ಕಾರ್ಯನಿರ್ವಹಿಸುವ ಗುರಿಯನ್ನು ಈ ಪೋರ್ಟಲ್ ಹೊಂದಿದೆ.

ಬೆಂಗಳೂರು ನಗರವನ್ನು ಎಲೆಕ್ಟ್ರಿಕ್ ವಾಹನಗಳ ವಲಯವನ್ನಾಗಿಸುವ ದಿಕ್ಸೂಚಿ ವರದಿಯಲ್ಲಿ, 2030ರ ಇಸವಿಯ ವೇಳೆಗೆ, ನಗರದ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಖಾಸಗಿ ಕಾರಿನ ವರ್ಗದಲ್ಲಿ, ಎಲೆಕ್ಟ್ರಿಕ್ ಕಾರುಗಳ ಪಾಲು ಶೇ.30ರಷ್ಟು, ವಾಣಿಜ್ಯ ವಾಹನಗಳಲ್ಲಿ ಎಲೆಕ್ಟ್ರಿಕ್ ವಾಹನದ ಪಾಲು ಶೇ.70ರಷ್ಟು ಹಾಗೂ ಬಸ್ ನಲ್ಲಿ ಶೇ.40ರಷ್ಟು ಹಾಗೂ ದ್ವಿಚಕ್ರ- ತ್ರಿಚಕ್ರ ವಾಹನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಪಾಲು ಶೇ.80ರಷ್ಟಾಗಲಿದೆ. ಎಲ್ಲಾ ವರ್ಗದ ಎಲೆಕ್ಟ್ರಿಕ್ ವಾಹನಗಳಿಗೆ 58,146 ಚಾರ್ಜರ್ ಗಳ ಅಗತ್ಯ ಬರಲಿದೆ ಎಂದು ಅಂದಾಜಿಸಲಾಗಿದೆ.

ಕರ್ನಾಟಕ ಮತ್ತು ಕೇರಳದ ಬ್ರಿಟಿಷ್ ಉಪ ಹೈಕಮಿಷನರ್ ಅನ್ನಾ ಶೋಟ್ ಬೋಲ್ಟ್, ಅಪರ ಮುಖ್ಯ ಕಾರ್ಯದರ್ಶಿ  ಜಿ. ಕುಮಾರ್ ನಾಯಕ್ ಮತ್ತು ಕೆಪಿಟಿಸಿಎಲ್  ಆಡಳಿತ ನಿರ್ದೇಶಕಿ ಡಾ. ಎನ್. ಮಂಜುಳಾ ಹಾಜರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW SPECIAL | BDA Land Acquisition Section Corruption | ಬಿಡಿಎ ನಲ್ಲಿದ್ದಾರೆ ಭ್ರಷ್ಟ ಭೂಸ್ವಾ(ಹಾ)ಧೀನ ಸರ್ವೆಯರ್ ಗಳು…! ಇಲ್ಲಿ ಅಕ್ರಮಗಳು ಹೇಗೆಲ್ಲಾ ನಡೆಯುತ್ತೆ ಗೊತ್ತಾ?

Next Post

Unisys Innovation Program | 13ನೇ ಯೂನಿಸಿಸ್ ಇನ್ನೊವೇಷನ್ ಪ್ರೊಗ್ರಾಮ್ ಸ್ಪರ್ಧೆಯ ವಿಜೇತರನ್ನು ಘೋಷಿಸಿದ ಯೂನಿಸಿಸ್ ಕಾರ್ಪೊರೇಷನ್

Next Post
ಪ್ರಾತಿನಿಧಿಕ ಚಿತ್ರ

Unisys Innovation Program | 13ನೇ ಯೂನಿಸಿಸ್ ಇನ್ನೊವೇಷನ್ ಪ್ರೊಗ್ರಾಮ್ ಸ್ಪರ್ಧೆಯ ವಿಜೇತರನ್ನು ಘೋಷಿಸಿದ ಯೂನಿಸಿಸ್ ಕಾರ್ಪೊರೇಷನ್

ನಮ್ಮ ಮೆಟ್ರೋ ಸಂಸ್ಥೆಯಿಂದ ವಿಶ್ವ ಪರಿಸರ ದಿನಾಚರಣೆ ಸಪ್ತಾಹ ನಿಮಿತ್ತ ಸೈಕಲ್ ಜಾಥಾ

Please login to join discussion

Like Us on Facebook

Follow Us on Twitter

Recent News

STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

September 23, 2026

IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

September 23, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

September 23, 2026

IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

September 23, 2026

ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

September 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d