Thursday, September 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

  • Bengaluru Focus

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Save Soil | ಸದ್ಗುರುಗಳ ಮಣ್ಣು ಉಳಿಸಿ ಅಭಿಯಾನ ಬೈಕ್ ಯಾತ್ರೆ ಬೆಂಗಳೂರಿಗೆ ; ರಾಜ್ಯ ಸರ್ಕಾರದೊಂದಿಗೆ ಒಡಂಬಡಿಕೆ

40ಕ್ಕೂ ಹೆಚ್ಚು ದೇಶ, 9 ರಾಜ್ಯಗಳಿಗೆ 30 ಸಾವಿರ ಕಿ.ಮೀ ಬೈಕ್ ಯಾತ್ರೆ ಮುಗಿಸಿ ರಾಜಧಾನಿಗೆ ಬಂದ ಈಶಾ ಫೌಂಡೇಷನ್ ಸದ್ಗುರು ಜಗ್ಗಿ ವಾಸುದೇವ್

by Bengaluru Wire Desk
June 19, 2022
in Bengaluru Focus, News Wire
Reading Time: 1 min read
0

ಬೆಂಗಳೂರು, ಜೂ.19, www.bengaluruwire.com :
ಮಣ್ಣು ಉಳಿಸಿ ಭಾಗವಾಗಿ ದೇಶ ವಿದೇಶಗಳಲ್ಲಿ ಬೈಕ್ ಯಾತ್ರೆ ನಡೆಸುತ್ತಿರುವ ಈಶ ಫೌಂಡೇಷನ್ ಸಂಸ್ಥಾಪಕರಾದ ಸದ್ಗುರು ವಾಸುದೇವ್ ಬೆಂಗಳೂರಿಗೆ ಆಗಮಿಸಿ, ಮಣ್ಣು ಉಳಿಸುವ (Save Soil) ಅಭಿಯಾನದ ನಿಟ್ಟಿನಲ್ಲಿ ರಾಜ್ಯ ಸರ್ಕಾರದೊಂದಿಗೆ ಭಾನುವಾರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಡಂಬಡಿಕೆ ಮಾಡಿಕೊಂಡರು.

ಮೂವತ್ತು ದಿನದಲ್ಲಿ ದೇಶ ವಿದೇಶಗಳಲ್ಲಿ ಬರೋಬ್ಬರಿ 30 ಸಾವಿರ ಕಿ.ಮೀ ದೂರ ಬೈಕ್ ನಲ್ಲಿ ಯಾತ್ರೆ ಮಾಡಿ ಮಣ್ಣಿನ ಮಹತ್ವವನ್ನು ಎಲ್ಲೆಡೆ ಸಾರುವ ಕಾರ್ಯವನ್ನು ನಡೆಸಿ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ನಗರದಲ್ಲಿ ಇಂದು ಏರ್ಪಡಿಸಿದ್ದ ಬೃಹತ್‌ ಸಮಾವೇಶದಲ್ಲಿ ಮಣ್ಣು ಉಳಿಸುವ ಕುರಿತು ಸದ್ಗುರು ಸರಕಾರದ ಸಹಕಾರ ಕೋರಿದರು. ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಡಂಬಡಿಕೆಗೆ ಸಹಿ ಹಾಕಿದರು.

ಮುಖ್ಯಮಂತ್ರಿಗಳಿಗೆ ಮಣ್ಣು ಉಳಿಸಿ ಕುರಿತ ಪುಸ್ತಕ ನೀಡಿದ ಸದ್ಗುರು

ಭಾರತದ ಮಣ್ಣಿನಲ್ಲಿ ಜೈವಿಕ ಅಂಶ ಕೇವಲ ಶೇ.0.68 ಮಾತ್ರ :
ಈಶ ಫೌಂಡೇಷನ್ ಸದ್ಗುರು ಮಾತನಾಡಿ, 40ಕ್ಕೂ ಹೆಚ್ಚು ದೇಶಗಳಿಗೆ, 9 ರಾಜ್ಯಗಳಿಗೆ ಭೇಟಿ ನೀಡಿ ಮಣ್ಣಿನ ಮಹತ್ವ ಪ್ರಚಾರ ಪಡಿಸಲಾಗಿದೆ. ಇನ್ನು ಈಶ ಫೌಂಡೇಶನ್ 192 ದೇಶಗಳಲ್ಲಿ ಮಣ್ಣುಗಳ ಅಧ್ಯಯನ ಮಾಡಿದೆ. ಇದರಲ್ಲಿ ಬೆರಳಣಿಕೆಯ ದೇಶಗಳು ಮಾತ್ರ ಮಣ್ಣಿನಲ್ಲಿ ಶೇ.3ರಷ್ಟು ಜೈವಿಕ ಅಂಶ ಹೊಂದಿವೆ. ನಮ್ಮ ದೇಶದಲ್ಲಿ ಇದರ ಪ್ರಮಾಣ ಶೇ.0.68ರಷ್ಟಿದೆ. ಮೂರರಷ್ಟು ಇರಬೇಕಿದ್ದ ಮಣ್ಣಿನ ಜೈವಿಕ ಅಂಶ ಹಲವು ದೇಶದಲ್ಲಿ ಶೇ.1ರಷ್ಟು ಇಲ್ಲ.

ಯಾವ ದೇಶದ ಮಣ್ಣಿನಲ್ಲಿ ಜೈವಿಕ ಅಂಶ ಶೇ.1ಕ್ಕಿಂತ ಕಡಿಮೆ ಇದೆಯೋ ಅಲ್ಲಿ‌ ಪರಿಸರಕ್ಕೆ ಧಕ್ಕೆಯಾಗುತ್ತಿದೆ. ಪ್ರತಿಯೊಬ್ಬರೂ ಮನೆ ಮುಂದೆ ಸಸಿ ನೆಡಿ. ಅಲ್ಲಿ ಜೈವಿಕ ಮಣ್ಣು ಹೆಚ್ಚಿಸಿ ಎಂದು ಸಾರ್ವಜನಿಕರಿಗೆ ಕರೆ ನೀಡಿದರು. ರಾಜ್ಯ ಸರ್ಕಾರವೂ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿದೆ ಎಂದು ಸದ್ಗುರು ಸರ್ಕಾರಕ್ಕೆ ಮನವಿ ಮಾಡಿಕೊಂಡರು.

ಭವಿಷ್ಯದಲ್ಲಿ ಆಹಾರ ಉತ್ಪಾದನೆ ಮೇಲೆ ದುಷ್ಪರಿಣಾಮ :
ಭವಿಷ್ಯದಲ್ಲಿ ಆಹಾರ ಉತ್ಪಾದನೆ ಮೇಲೆ‌ ಈ ಪರಿಸ್ಥಿತಿಯಿಂದ ದೊಡ್ಡ ಪರಿಣಾಮ ಬೀರಲಿದೆ. ಪ್ರತಿಯೊಬ್ಬರೂ ಮಣ್ಣಿನ ರಕ್ಷಣೆಗೆ ಮುಂದಾಗಬೇಕಿದೆ. ಆಧುನಿಕತೆ ಬೆಳೆಯುತ್ತಿದ್ದಂತೆ ಮಾನವೀಯತೆ ಮರೆಯಾಗುತ್ತಿದೆ. ಯುದ್ಧ, ಪ್ರಕೃತಿ ವಿಕೋಪಗಳಿಗೆ ಭೂಮಿ ಸಾಕ್ಷಿಯಾಗುತ್ತಿದೆ.

ಮುಂದೆ ನಾಗರೀಕ ಯುದ್ಧ ನಡೆದರೆ, ಯುಕ್ರೇನ್ ನಂತಹ ದೇಶಗಳಿಗೆ ಹಸಿದ ಮಕ್ಕಳಿಗೆ ಆಹಾರ ನೀಡಲಾಗದ ಪರಿಸ್ಥಿತಿ ಬರುತ್ತದೆ. ಆಹಾರವೇ ಸಿಗುವುದಿಲ್ಲವೆಂದರೆ ಎಲ್ಲದೂ ನಾಶವಾಗುತ್ತೆ. ನಾಗರೀಕತೆ, ಮಾನವೀಯತೆ ಮರೆಯಾಗಿ ಕ್ರೂರತೆ ಸ್ಥಾಪನೆಯಾಗುತ್ತದೆ. ಈಗಾಗಲೇ ಪ್ರಪಂಚಾದ್ಯಂತ 27 ಸಾವಿರ ಸಸ್ಯ ಸಂಕುಲ ನಾಶವಾಗುತ್ತಿದೆ ಎಂದು ಪರಿಸ್ಥಿತಿಯ ಭೀಕರತೆ ತೆರೆದಿಟ್ಟರು.

70 ವರ್ಷದಲ್ಲಿ ಪ್ರಕೃತಿಗೆ ಸಾಕಷ್ಟು ಹಾನಿಯಾಗಿದೆ :
ನಮ್ಮ ಭೂಮಿಯನ್ಮು ನಾವು ಉಳಿಸಬೇಕಿದೆ.
ಕಳೆದ 70 ವರ್ಷದಲ್ಲಿ ನಾವು ಪ್ರಕೃತಿಗೆ ಸಾಕಷ್ಟು ಹಾನಿ ಮಾಡಿದ್ದೀವಿ. ಇನ್ನು‌ ಮುಂದೆ ನಮ್ಮ ತಾಯಿಯಂಥ ಭೂಮಿಯ ಮಣ್ಣು ಉಳಿಸುವ ಕೆಲಸ ಮಾಡಬೇಕಿದೆ ಎಂದು ಸದ್ಗುರು ವಾಸುದೇವ್ ಅಭಿಪ್ರಾಯಪಟ್ಟರು.

ಇಶಾ ಫೌಂಡೇಷನ್ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಎ ಜನಸಮೂಹ

ಕಾವೇರಿ ಕಾಲಿಂಗ್ ವೇಳೆ ಆಗ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ಸಹಕಾರ ಮರೆಯಲಾಗುವುದಿಲ್ಲ. ಇದೀಗ ಮಣ್ಣು ಉಳಿಸಿ ಅಭಿಯಾನಕ್ಕೆ ಎಲ್ಲೆಡೆಯಿಂದ ಬೆಂಬಲ ಸಿಗುತ್ತಿದೆ. ರಾಜ್ಯ ಸರ್ಕಾರ ಇದಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದೆ. ಇದು ಸಂತೋಷದ ವಿಚಾರ ಎಂದರು.

ರಾಜ್ಯದಲ್ಲಿ ಅರಣ್ಯ ನಾಶ ತಡೆದು, ಜೈವಿಕ ಮಣ್ಣಿನ ಅಂಶ ಉಳಿಸುವಲ್ಲಿ ರಾಜ್ಯ ಸರ್ಕಾರ ಬದ್ದ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿ, ಆಹಾರ ಉತ್ಪಾದನೆಗೆ ಲಭ್ಯವಿರುವ ಮಣ್ಣನ್ನು ನಾವು ಲಭ್ಯ ಮಾಡಿಕೊಳ್ಳದೆ ಸಾಕಷ್ಟು ಮಾರ್ಪಾಡು ಮಾಡಿಕೊಳ್ಳುತ್ತಿದ್ದೇವೆ. ಸದ್ಗುರು ಕೈಗೊಂಡಿರುವ ಮಣ್ಣು ಉಳಿಸಿ ಅಭಿಮಾನ ಅರ್ಥಪೂರ್ಣವಾಗಿದೆ. ಈ ಅಭಿಮಾನಕ್ಕೆ ಭಾಗಿಯಾಗಿ ನೈಸರ್ಗಿಕ ಸಂಪನ್ಮೂಲವನ್ನು ಉಳಿಸಬೇಕಾಗಿದೆ ಎಂದು ಕರೆ ನೀಡಿದರು.

ಕಾರ್ಯಕ್ರಮಕ್ಕೆ ಸದ್ಗುರು ಅಭಿಮಾನಿಗಳು, ಪರಿಸರ ಪ್ರೇಮಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದರು. ಮಣ್ಣು ಉಳಿಸಿ ಅಭಿಯಾನದ ಬೈಕ್ ಯಾತ್ರೆ ಬೆಂಗಳೂರಿನಿಂದ ಮೈಸೂರಿನತ್ತ ಸದ್ಗುರು ಪಯಣ ಬೆಳಸಲಿದ್ದಾರೆ. ಯಾತ್ರೆ ಉದ್ದಕ್ಕೂ ಇದು ಕೇವಲ ಇದು ಮಣ್ಣಲ್ಲೋ ಮಂಕುತಿಮ್ಮ ಎಂದು ಮತ್ತೆ ಮತ್ತೆ ತಿಳಿಹೇಳುವ ಹೇಳುವ ಕಾಯಕ ಸದ್ಗುರು ಮುಂದುವರೆಸಲಿದ್ದಾರೆ.

ಬೃಹತ್‌ ಸಮಾವೇಶದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಶಿಕ್ಷಣ ಸಚಿವ ನಾಗೇಶ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Kota Dr.Shivarama Karanth Theme Park | ಕೋಟಾದ ಡಾ.ಶಿವರಾಮ ಕಾರಂತರ ಥೀಮ್ ಪಾರ್ಕ್ ಮೇಲ್ದರ್ಜೆಗೆ

Next Post

PM Modi Bangalore Visit | ಪ್ರಧಾನಿ ನರೇಂದ್ರ ಮೋದಿಯಿಂದ ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Next Post

PM Modi Bangalore Visit | ಪ್ರಧಾನಿ ನರೇಂದ್ರ ಮೋದಿಯಿಂದ ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Mysore Yoga Day 2022 | ಮೈಸೂರು ರಾಜವಂಶಸ್ಥರಿಂದ ಪ್ರಧಾನಿ ನರೇಂದ್ರ ಮೋದಿಗೆ ಅರಮನೆಯಲ್ಲಿ ನಡೆದ ವಿಶೇಷ ಆತಿಥ್ಯ ಹೇಗಿತ್ತು?

Please login to join discussion

Like Us on Facebook

Follow Us on Twitter

Recent News

STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

September 23, 2026

IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

September 23, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

September 23, 2026

IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

September 23, 2026

ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

September 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d