ರಾಜ್ಯ ಸರ್ಕಾರವು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಪ್ರತಿ ವರ್ಷ ಜೂನ್ 27 ರಂದು ಆಚರಿಸುತ್ತಿದೆ. ಅದರಂತೆ 513ನೇ ನಾಡ ಪ್ರಭು ಕೆಂಪೇಗೌಡರ ಜಯಂತಿಯ ಅಂಗವಾಗಿ ಬಿಬಿಎಂಪಿಯ ಕೇಂದ್ರ ಕಛೇರಿಯ ಮುಂಭಾಗದಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಹಾಗೂ ಕೆಂಪೇಗೌಡರ ಸೊಸೆ ಮಹಾತ್ಯಾಗಿ ಲಕ್ಷೀದೇವಿ ಪ್ರತಿಮೆಗೆ ಇಂದು ಆಡಳಿತಗಾರರಾದ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಮಾಲಾರ್ಪಣೆ ಹಾಗೂ ಪುಷ್ಪಾರ್ಪಣೆ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಅಂಜುಂ ಪರ್ವೇಜ್, ಬಿಡಿಎ ಆಯುಕ್ತರಾದ ರಾಜೇಶ್ ಗೌಡ, ಜಲಮಂಡಳಿ ಅಧ್ಯಕ್ಷರಾದ ಜಯರಾಮ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಂದ್ರ ಚೋಳನ್, ಪಾಲಿಕೆಯ ಎಲ್ಲಾ ವಿಶೇಷ ಆಯುಕ್ತರುಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.