ಬೆಂಗಳೂರು, ಜು.9 www.bengaluruwire.com : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಜೂನ್ ತಿಂಗಳಲ್ಲಿ 2,751 ಪ್ರಯಾಣಿಕರಿಂದ 4.41 ಲಕ್ಷ ರೂ.ಗಳನ್ನು ದಂಡದ ಮೂಲಕ ಸಂಗ್ರಹಿಸಿದೆ.
ಬಿಎಂಟಿಸಿ ಬಸ್ ನಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸುತ್ತಿದ್ದ ಹಾಗೂ ಸಂಸ್ಥೆಯ ಸಾರಿಗೆ ಆದಾಯ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಸಂಸ್ಥೆಯ ತನಿಖಾ ತಂಡ ನಗರದಾದ್ಯಂತ ಜೂನ್ ನಲ್ಲಿ 22,549 ಟ್ರಿಪ್ ಗಳಲ್ಲಿ ತಪಾಸಣೆ ನಡೆಸಿ 2,613 ಪ್ರಯಾಣಿಕರನ್ನು ಪತ್ತೆಹಚ್ಚಿ ಅವರಿಂದ ಒಟ್ಟು 4.27 ಲಕ್ಷ ರೂ. ದಂಡ ವಸೂಲಿ ಮಾಡಿದೆ. ಅಲ್ಲದೆ ಕರ್ತವ್ಯಲೋಪ ಎಸಗಿದ 1,268 ನಿರ್ವಾಹಕರ ಮೇಲೆ ಪ್ರಕರಣಗಳನ್ನು ದಾಖಲಿಸಿದೆ.
ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 236 ಪುರುಷ ಪ್ರಯಾಣಿಕರಿಂದ 13,800 ದಂಡ ವಿಧಿಸಲಾಗಿದೆ ಎಂದು ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುವವರು ಅಧಿಕೃತ ಟಿಕೆಟ್, ದಿನ ಅಥವಾ ಮಾಸಿಕ ಪಾಸ್ ಪಡೆದು ಪ್ರಯಾಣಿಸಿದರೆ ದಂಡ ಕಟ್ಟುವುದರಿಂದ ತಪ್ಪಿಸಿಕೊಳ್ಳಬಹುದಾಗಿದೆ.