Saturday, May 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP 243 Wards Final Notification| ಬಿಬಿಎಂಪಿ ವಾರ್ಡ್ ವಿಂಗಡಣೆ ಅಂತಿಮ ಅಧಿಸೂಚನೆ ಪ್ರಕಟ : ಚುನಾವಣೆ ಪ್ರಕ್ರಿಯೆಗೆ ಮುಂದಡಿ ಇಟ್ಟ ರಾಜ್ಯ ಸರ್ಕಾರ

ಕರಡು ಅಧಿಸೂಚನೆಯಲ್ಲಿದ್ದ 23 ವಾರ್ಡ್ ಗಳ ಹೆಸರು ಬದಲಾವಣೆ | 40 ವಾರ್ಡ್ ಗಳ ಗಡಿಯಲ್ಲಿ ಅಲ್ಪಸ್ವಲ್ಪ ಬದಲಾವಣೆ | ವಾರ್ಡ್ ನಂ.55ರ ಕಾವೇರಿನಗರ ಹೆಸರಿನ ಬದಲು ಪುನೀತ್ ರಾಜ್ ಕುಮಾರ್ ವಾರ್ಡ್ ಎಂದು ಬದಲಾವಣೆ | ವಾರ್ಡ್ ಮೀಸಲಾತಿ ಸಂಬಂಧ ಭಕ್ತವತ್ಸಲ ಸಮಿತಿ ಸರ್ಕಾರಕ್ಕೆ ಶುಕ್ರವಾರ ವರದಿ ನೀಡುವ ಸಾಧ್ಯತೆ

by Bengaluru Wire Desk
July 15, 2022
in Bengaluru Focus, News Wire
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.15 www.bengaluruwire.com : ರಾಜ್ಯ ಸರ್ಕಾರವು ಕೊನೆಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) 243 ವಾರ್ಡ್ ಕ್ಷೇತ್ರ ಮರು ವಿಂಗಡಣೆಯ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. ಈ ಮೂಲಕ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಪಾಲಿಕೆ ಚುನಾವಣೆಗೆ ಒಂದು ಹೆಜ್ಜೆ ಮುಂದಡಿಯಿಟ್ಟಂತಾಗಿದೆ.

ಬಿಬಿಎಂಪಿಯ ಚುನಾವಣೆಯು ವಿವಿಧ ಕಾರಣಗಳಿಂದ ಚುನಾವಣೆ ಮುಂದೂಡಿಕೆ ಆಗಿರುವ ಹೊತ್ತಿನಲ್ಲೇ ಸುಪ್ರೀಂಕೋರ್ಟ್ ಮೇ ತಿಂಗಳಿನಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ 8 ವಾರದಲ್ಲಿ ಚುನಾವಣೆ ಪ್ರಕ್ರಿಯೆಯನ್ನು ನಡೆಸುವಂತೆ ಸೂಚನೆ ನೀಡಿತ್ತು. ಅಲ್ಲದೆ ಬಿಬಿಎಂಪಿ ವ್ಯಾಪ್ತಿಯಲ್ಲಿ ವಾರ್ಡ್ ಪುನರ್ವಿಂಗಡಣೆ ಮತ್ತು ಮೀಸಲಾತಿಯನ್ನು ಕಾಲಮಿತಿಯಲ್ಲಿ ನಿಗಧಿಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಗಡುವು ನೀಡಿತ್ತು. ಆ ಪೈಕಿ ರಾಜ್ಯ ಸರ್ಕಾರವು ತನ್ನ ಜವಾಬ್ದಾರಿಯ ಪೈಕಿ ಒಂದನ್ನು ಪೂರ್ಣಗೊಳಿಸಿ ಕೈತೊಳೆದು ಕೊಂಡಿದೆ.

ಪಾಲಿಕೆ ವ್ಯಾಪ್ತಿಯಲ್ಲಿ 243 ವಾರ್ಡ್ ಪುನರ್ವಿಂಗಡಣೆ ಕುರಿತಂತೆ ಜೂ.23ರಂದು ಕರಡು ಅಧಿಸೂಚನೆ ಹೊರಡಿಸಿ ಆಕ್ಷೇಪ ವ್ಯಕ್ತಪಡಿಸಲು ಜು.9ರ ತನಕ 15 ದಿನಗಳ ಕಾಲಾವಕಾಶ ನೀಡಲಾಗಿತ್ತು. ಆಗ ಸಾರ್ವಜನಿಕರು ಮತ್ತು ಸಂಘ- ಸಂಸ್ಥೆಗಳಿಂದ ವಾರ್ಡ್ ಹೆಸರು ಮತ್ತು ಗಡಿ ಗುರುತುಗಳ ಬದಲಾವಣೆ ಸೇರಿದಂತೆ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ಸುಮಾರು 3,833 ಆಕ್ಷೇಪಣೆ, ಸಲಹೆ ಮತ್ತು ದೂರುಗಳು ವ್ಯಕ್ತವಾಗಿದ್ದವು. ಅವುಗಳ ಪೈಕಿ ಸೂಕ್ತವಾದ ಆಕ್ಷೇಪಣೆಗಳನ್ನು ಪರಿಗಣಿಸಿ ಈ ಹಿಂದೆ ವಾರ್ಡ್ ಪುನರ್ವಿಂಗಡಣೆ ಕರಡಿನಲ್ಲಿ 23 ವಾರ್ಡ್ ಗಳ ಹೆಸರುಗಳನ್ನು ಬದಲಿಸಿ, 40 ವಾರ್ಡ್ ಗಳ ಗಡಿಯಲ್ಲಿ ಅಲ್ಪಸ್ವಲ್ಪ ಬದಲಾವಣೆ ಮಾಡಿ ಗುರುವಾರ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ.

ಬಿಬಿಎಂಪಿ 243 ವಾರ್ಡ್ ಪುನರ್ವಿಂಗಡಣೆ ಅಂತಿಮ ಅಧಿಸೂಚನೆಯ ದಾಖಲೆಗಳು Download

ಬಿಬಿಎಂಪಿಯು ವಾರ್ಡ್ ಪುನರ್ವಿಂಗಡಣೆ ಕರಡಿನಲ್ಲಿ ವಾರ್ಡ್ 55ರ ಕಾವೇರಿನಗರ ವಾರ್ಡ್ ಎಂಬ ಹೆಸರನ್ನು ಅಂತಿಮ ಅಧಿಸೂಚನೆಯಲ್ಲಿ ದಿವಂಗತ ನಟ ಪುನೀತ್ ರಾಜ್ ಕುಮಾರ್ ಹೆಸರನ್ನು ಇಟ್ಟಿದೆ. ಆ ಮೂಲಕ ಅಗಲಿದ ನಟನಿಗೆ, ಆ ವಾರ್ಡಿನ ಬಹುತೇಕ ನಾಗರೀಕರ ಬೇಡಿಕೆಯಂತೆ ಪವರ್ ಸ್ಟಾರ್ ಹೆಸರನ್ನು ಇಡಲಾಗಿದೆ. 243 ವಾರ್ಡ್ ಗಳ ಮರು ವಿಂಗಡಣೆ ವರದಿಗೆ ಸಲ್ಲಿಕೆಯಾದ 3,833 ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಪತ್ರದ ಮೂಲಕ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ.

ಇದೇ ರೀತಿ ಕರಡು ಅಧಿಸೂಚನೆಯಲ್ಲಿ ವಾರ್ಡ್ ನಂಬರ್ 77ರ ಹೆಸರನ್ನು ಮೋದಿ ಗಾರ್ಡನ್ ಎಂದು ಹೆಸರು ಬದಲಾವಣೆ ಮಾಡಿದಕ್ಕೆ ಸಾಕಷ್ಟು ಆಕ್ಷೇಪಣೆಗಳು ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಅದನ್ನು 198 ವಾರ್ಡ್ ಇದ್ದಾಗ ಇಟ್ಟ ದೇವರಜೀವನಹಳ್ಳಿ ಹೆಸರನ್ನೇ ಉಳಿಸಿಕೊಂಡಿದೆ.

ರಾಜ್ಯ ಸರ್ಕಾರವು ಈಗಾಗಲೇ ಸುಪ್ರೀಂಕೋರ್ಟ್ ನಿರ್ದೇಶನದಂತೆ ಬಿಬಿಎಂಪಿಯ ವಾರ್ಡ್ ಗಳಿಗೆ ಮೀಸಲಾತಿಯನ್ನು ವೈಜ್ಞಾನಿಕವಾಗಿ ನಿಗಧಿಪಡಿಸಲು ಭಕ್ತವತ್ಸಲ ಸಮಿತಿಯನ್ನು ಈಗಾಗಲೇ ನೇಮಕ ಮಾಡಿದ್ದು, ಆ ಸಮಿತಿಯು ಇಂದು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ವರದಿಯನ್ನು ಆಧರಿಸಿ ರಾಜ್ಯ ಸರ್ಕಾರವು ಮೀಸಲಾತಿಯನ್ನು ಪ್ರಕಟ ಮಾಡಲಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ನೀಡುವ ಮೀಸಲಾತಿಯ ಪ್ರಮಾಣವನ್ನು ಶೇ.50ಕ್ಕೆ ಮಿತಿಗೊಳಿಸಿ ಕಳೆದ ತಿಂಗಳಷ್ಟೇ ಸುಗ್ರೀವಾಜ್ಞೆ ಹೊರಡಿಸಲಾಗಿತ್ತು. ಒಟ್ಟಿನಲ್ಲಿ ಬಿಬಿಎಂಪಿ ವಾರ್ಡ್ ಪುನರ್ವಿಂಗಡಣೆಗೆ ಸಾಕಷ್ಟು ಆಕ್ಷೇಪ ವ್ಯಕ್ತವಾಗಿ ಪಾಲಿಕೆ ಚುನಾವಣೆ ನಡೆಯುತ್ತಾ? ಅಥವಾ ಇಲ್ಲವಾ ಎಂಬ ಅನುಮಾನಗಳಿಗೆ ಸರ್ಕಾರದ 243 ವಾರ್ಡ್ ಪುನರ್ವಿಂಗಡಣಾ ಅಂತಿಮ ಅಧಿಸೂಚನೆಯು ಪಾಲಿಕೆ ಕಾರ್ಪೊರೇಟರ್ ಆಕಾಂಕ್ಷಿಗಳಲ್ಲಿ ಹೊಸ ಆಶಾಕಿರಣವನ್ನು ಮೂಡಿಸಿದೆ.

WhatsApp Join our WhatsApp Channel
Previous Post

Bangalore Parks | “ಬಿಬಿಎಂಪಿ ಪಾರ್ಕ್ ಗಳಲ್ಲಿ ವಾಕಿಂಗ್ ಮಾಡುವವರಿಗೆ ಇನ್ನು ಮುಂದೆ ಹೆಚ್ಚಿನ ಸಮಯಾವಕಾಶ”

Next Post

Karnataka Fire And Emergency Recruitment | ಅಗ್ನಿಶಾಮಕ ಇಲಾಖೆಯಲ್ಲಿ 1,222 ಅಗ್ನಿಶಾಮಕ ದಳದ ಅಭ್ಯರ್ಥಿಗಳಿಗೆ ಶೀಘ್ರ ನೇಮಕಾತಿ ಪತ್ರ ವಿತರಣೆ : ಗೃಹ ಸಚಿವ ಆರಗ ಜ್ಞಾನೇಂದ್ರ

Next Post
ಅಗ್ನಿಶಾಮಕ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿರುವ ಸಾಂದರ್ಭಿಕ ಚಿತ್ರ

Karnataka Fire And Emergency Recruitment | ಅಗ್ನಿಶಾಮಕ ಇಲಾಖೆಯಲ್ಲಿ 1,222 ಅಗ್ನಿಶಾಮಕ ದಳದ ಅಭ್ಯರ್ಥಿಗಳಿಗೆ ಶೀಘ್ರ ನೇಮಕಾತಿ ಪತ್ರ ವಿತರಣೆ : ಗೃಹ ಸಚಿವ ಆರಗ ಜ್ಞಾನೇಂದ್ರ

#Gandhadagudi | ಪುನೀತ್ ರಾಜ್ ಕುಮಾರ್ ಕೊನೆಯ ಚಿತ್ರ "ಗಂಧದಗುಡಿ" ಅ.28ಕ್ಕೆ ರಿಲೀಸ್

Please login to join discussion

Like Us on Facebook

Follow Us on Twitter

Recent News

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026

ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

May 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group