Thursday, September 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

  • Bengaluru Focus

    ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

    GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka Govt. Withdraw Photos, Videos Ban Order | ಸರ್ಕಾರಿ ಕಚೇರಿಗಳಲ್ಲಿ ಫೊಟೊ, ವಿಡಿಯೋ ಚಿತ್ರೀಕರಣ ನಿಷೇಧ ಆದೇಶ ಹಿಂಪಡೆದ ಸರ್ಕಾರ

ಜು.15ರ ಬೆಳಗ್ಗೆ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ | ಸಾಮಾಜಿಕ ವಲಯದಲ್ಲಿ ತೀವ್ರ ಟೀಕೆ, ವಿರೋಧಗಳ ಹಿನ್ನಲೆಯಲ್ಲಿ ಆದೇಶ ರದ್ದು | ಕೆಆರ್ ಎಸ್ ಪಕ್ಷ ಹಾಗೂ ಪಕ್ಷಾತೀತವಾಗಿ ಈ ಆದೇಶದ ವಿರುದ್ಧ ದನಿಎತ್ತಿದ್ದಕ್ಕೆ ಸಿಕ್ಕ ಜಯ- ರವಿಕೃಷ್ಣಾರೆಡ್ಡಿ

by Bengaluru Wire Desk
July 16, 2022
in News Wire
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.16 www.bengaluruwire.com : ಬಿಜೆಪಿ ನೇತೃತ್ವದ ಸರ್ಕಾರ ಬೆಳಗ್ಗೆ ಹೊರಡಿಸಿರೋ ಆದೇಶ ರಾತ್ರಿಯಾದ್ರೆ ಇರಲ್ಲ. ಇಂತಹ ಗಳಿಗೆಗೊಂದು ಗಂಟೆಗೊಂದು ಆದೇಶ ಹೊರಡಿಸಿ ಪೇಚೆಗೆ ಸಿಲುಕುತ್ತಿದೆ. ಆ ಪಟ್ಟಿಗೆ ಈಗ ಹೊಸ ಸೇರ್ಪಡೆಯಂದ್ರೆ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ, ವಿಡಿಯೋ ತೆಗೆಯಬಾರದು ಎಂದು ಶುಕ್ರವಾರ ಬೆಳಗ್ಗೆಯಷ್ಟೇ ಹೊರಡಿಸಿದ್ದ ಆದೇಶವನ್ನು ನಾಗರೀಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ನಿನ್ನೆ ತಡರಾತ್ರಿಯೇ ಆ ಆದೇಶವನ್ನು ರದ್ದುಗೊಳಿಸಿದೆ.

ಸರ್ಕಾರದ ಕಚೇರಿಗಳಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಸಚಿವಾಲಯದ ಕಚೇರಿಗಳನ್ನು ಹೊರತುಪಡಿಸಿ ಬೇರೆಲ್ಲಾ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಅದೇ ರೀತಿ ಆಯಾ ಕಚೇರಿಗಳ ಮುಖ್ಯಸ್ಥರು ಆ ಕಚೇರಿಯಲ್ಲಿನ ವಿವಿಧ ಕೊಠಡಿಗಳಲ್ಲಿ ನಡೆಯುವ ಕಾರ್ಯಚಟುವಟಿಕೆಗಳನ್ನು ಗಮನಿಸಲು ಕೇಂದ್ರೀಕೃತ ವ್ಯವಸ್ಥೆಯನ್ನು ಅನುಷ್ಠಾನ ಮಾಡಲಾಗಿತ್ತು. ಈ ವಿಚಾರದಲ್ಲಿ ಮತ್ತಷ್ಟು ಸುಧಾರಣೆ ತರಬೇಕೆಂಬ ಬಗ್ಗೆ ವ್ಯಾಪಕವಾದ ಒತ್ತಾಯ ಇರುವಾಗಲೇ ಕರ್ನಾಟಕ ರಾಜ್ಯ ನೌಕರರ ಸಂಘದ ಮನವಿ ಮೇರೆಗೆ ಸರ್ಕಾರ ಜು.15ರಂದು ಬೆಳಗ್ಗೆ ಈ ಆದೇಶ ಹೊರಡಿಸಿತ್ತು. ಇದು ಮಾಧ್ಯಮಗಳು, ಸಾರ್ವಜನಿಕರು ಸೇರಿದಂತೆ ಸಾಮಾಜಿಕ ವಲಯಗಳಲ್ಲಿ ಸಾಕಷ್ಟು ಟೀಕೆ ಮತ್ತು ಆಕ್ರೋಶಕ್ಕೆ ಗುರಿಯಾಗಿತ್ತು.

ಇದಲ್ಲದೆ ‘ಈ ಸರ್ಕಾರದ ಒಂದಲ್ಲಾ ಒಂದು ಭ್ರಷ್ಟಾಚಾರಗಳು ಹೊರಬರುತ್ತಲೇ ಇರುವಾಗ, ಶೇ.40 ಕಿಕ್ ಬ್ಯಾಕ್ ಪಡೆಯುವ ಸರ್ಕಾರ ಎಂಬ ಆರೋಪಕ್ಕೆ ಗುರಿಯಾಗಿರುವಾಗ, ಸರ್ಕಾರವೇ ಭ್ರಷ್ಟಾಚಾರ ನಡೆಯಲು ಅವಕಾಶ ಮಾಡಿಕೊಡಲು ಸರ್ಕಾರಿ ಕಚೇರಿಗಳಲ್ಲಿ ಫೊಟೊ, ವಿಡಿಯೋ ತೆಗೆಯುವುದನ್ನು ನಿರ್ಬಂಧಿಸುವ ಆದೇಶ ಹೇರಿದೆ’ ಎಂದು ವ್ಯಾಪಕ ಟೀಕೆ, ಆರೋಪಗಳು ಸಾಮಾಜಿಕ ಜಾಲತಾಣಗಳು, ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (KRS)ದ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ಈ ಕುರಿತಂತೆ ದನಿ ಎತ್ತಿದ್ದರು.

ವಿವಾದಿತ ಆದೇಶ ಹಿಂಪಡೆದಿರುವ ರಾಜ್ಯ ಸರ್ಕಾರದ ಆದೇಶ ಪ್ರತಿ

ಈ ಹಿನ್ನಲೆಯಲ್ಲಿ ಆದೇಶವನ್ನು ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಮಧ್ಯರಾತ್ರಿಯೇ ಈ ಆದೇಶವನ್ನು ಸರ್ಕಾರ ಹಿಂಪಡೆದಿದೆ.

ಜನವಿರೋಧಿ ಆದೇಶದ ವಿರುದ್ಧ ದಿಟ್ಟತನದಿಂದ ದನಿಯತ್ತಿದ್ದಕ್ಕೆ ಸಿಕ್ಕ ಜಯ :

ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೊಟೊ, ವಿಡಿಯೋ ಚಿತ್ರೀಕರಣಕ್ಕೆ ನಿಷೇಧ ಹೇರಿರುವುದನ್ನು ಹಿಂಪಡೆದಿರುವ ಬಗ್ಗೆ ಕೆಆರ್ ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ಬೆಂಗಳೂರು ವೈರ್ ಜೊತೆ ಮಾತನಾಡಿ, ‘ಸರ್ಕಾರ ನಿನ್ನೆ ಬೆಳಗ್ಗೆ ಹೊರಡಿಸಿದ್ದ ಜನವಿರೋಧಿ ಆದೇಶವನ್ನು ತಡರಾತ್ರಿ ಹಿಂಪಡೆದಿದೆ. ಇದು ಕೆಆರ್ ಎಸ್ ಹೋರಾಟಕ್ಕೆ ಸಂದ ಜಯ. ನಮ್ಮ ಪಕ್ಷದ ಕಾರ್ಯಕರ್ತರು ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಡಿ, ಅಲ್ಲಿನ ಹುಳುಕುಗಳನ್ನು ಬಯಲಿಗೆ ಎಳೆಯುತ್ತಿದ್ದರು. ಇದರಿಂದ ಹೆದರಿದ ಸರ್ಕಾರ ಆದೇಶವನ್ನು ಹೊರಡಿಸಿತ್ತು. ಆದರೆ ಈ ಬಗ್ಗೆ ನಮ್ಮ ಪಕ್ಷ ದಿಟ್ಟವಾಗಿ ದನಿಯೆತ್ತಿತ್ತು. ಅಲ್ಲದೆ ಮಾಧ್ಯಮಗಳು, ಬಿಜೆಪಿ ಪಕ್ಷದ ಕಾರ್ಯಕರ್ತರು ಪಕ್ಷಾತೀತವಾಗಿ ಖಂಡಿಸಿದ್ದಾರೆ. ಇದು ಎಲ್ಲರಿಗೂ ಸಿಕ್ಕ ಜಯ. ಇದಕ್ಕಾಗಿ ಎಲ್ಲರಿಗೂ ಪಕ್ಷದ ವತಿಯಿಂದ ಧನ್ಯವಾದ’ ಎಂದು ಅವರು ಹೇಳಿದ್ದಾರೆ.

ರಾಜ್ಯದ ಶಕ್ತಿಕೇಂದ್ರ ವಿಧೌನಸೌಧ ಹಾಗೂ ವಿಕಾಸಸೌಧದಲ್ಲಿನ ಸಚಿವರು ಮತ್ತು ಅಧಿಕಾರಿಗಳ ಕಚೇರಿಗೆ ಮಾಧ್ಯಮದ ಪ್ರತಿನಿಧಿಗಳು ಭೇಟಿ ನೀಡುವುದನ್ನು ಈ ಹಿಂದೆ ಜುಲೈ 2021ರಲ್ಲಿ ಸರ್ಕಾರಿ ಆದೇಶ ಹೊರಡಿಸಲಾಗಿತ್ತು. ಆನಂತ್ರ ಈ ವಿಚಾರದ ಬಗ್ಗೆ ತೀವ್ರ ಟೀಕೆ, ವಿರೋಧ ವ್ಯಕ್ತವಾದಾಗ ಆಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಆದೇಶವನ್ನು ಹಿಂದಕ್ಕೆ ಪಡೆದಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

#Gandhadagudi | ಪುನೀತ್ ರಾಜ್ ಕುಮಾರ್ ಕೊನೆಯ ಚಿತ್ರ “ಗಂಧದಗುಡಿ” ಅ.28ಕ್ಕೆ ರಿಲೀಸ್

Next Post

Vipra Business Forum | ಗಾಂಧಿಬಜಾರಿನಲ್ಲೊಂದು ವಿಭಿನ್ನ ಅಭಿರುಚಿಯ ವಿಪ್ರ ಬ್ಯುಸಿನೆಸ್ ಫೋರಮ್ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ

Next Post
ಗಾಂಧಿಬಜಾರ್ ಡಿವಿಜಿ ರಸ್ತೆಯಲ್ಲಿ ನಡೆಯುತ್ತಿರುವ ವಿಪ್ರ ಬ್ಯುಸಿನೆಸ್ ಫೋರಮ್ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳದ ಚಿತ್ರ

Vipra Business Forum | ಗಾಂಧಿಬಜಾರಿನಲ್ಲೊಂದು ವಿಭಿನ್ನ ಅಭಿರುಚಿಯ ವಿಪ್ರ ಬ್ಯುಸಿನೆಸ್ ಫೋರಮ್ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ

Crime News | ಅಕ್ರಮವಾಗಿ ಹುಕ್ಕಾ ಬಾರ್ ನಡೆಸುತ್ತಿದ್ದ ಸಾಷ್ ಸ್ಕೈ ಅಂಗಡಿ ಮೇಲೆ ಸಿಸಿಬಿ ದಾಳಿ : ನಗದು ಮತ್ತು ವಸ್ತು ವಶ

Please login to join discussion

Like Us on Facebook

Follow Us on Twitter

Recent News

ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

September 24, 2026

ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

September 24, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

September 24, 2026

ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

September 24, 2026

GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

September 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d