ನವದೆಹಲಿ, ಜು.21 www.bengaluruwire.com : ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಿದ 747 ವೆಬ್ ಸೈಟ್ (Website), 94 ಯೂಟ್ಯೂಬ್ ಚಾನಲ್ (Youtube) ಹಾಗೂ 19 ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.
ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ರಾಜ್ಯಸಭೆಯಲ್ಲಿ ಗುರುವಾರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, ದೇಶದ ಭದ್ರತೆ, ಐಕ್ಯತೆ ಮತ್ತು ಹಿತಾಸಕ್ತಿಗೆ ತೊಡಕು ಉಂಟು ಮಾಡಿದ ಮಾಧ್ಯಮಗಳ ವಿರುದ್ಧ 2021-22ನೇ ಇಸವಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಅಂತರ್ಜಾಲದಲ್ಲಿ ನಕಲಿ ಸುದ್ದಿ ಹಾಕಿ ಎಲ್ಲೆಡೆ ಪ್ರಚಾರ ಮಾಡುತ್ತಾ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುತ್ತಿದ್ದ ಏಜನ್ಸಿಗಳ ವಿರುದ್ದ ಕೇಂದ್ರ ಸರ್ಕಾರ ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್ 69ಎ ಅನುಸಾರ ಕ್ರಮ ಕೈಗೊಂಡಿದ್ದೇವೆ ಎಂದು ರಾಜ್ಯಸಭೆಗೆ ಹೇಳಿದ್ದಾರೆ.