ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಬೆಂಗಳೂರಿನ ವಿಧಾನಸೌಧ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಆಯೋಜಿಸಿದ್ದ ಸಮಾರಂಭದಲ್ಲಿ ವಿದ್ಯುತ್ ಚಾಲಿತ ಬಸ್ ಗಳಿಗೆ ಹಸಿರು ನಿಶಾನೆ ನೀಡುವ ಮೂಲಕ ಲೋಕಾರ್ಪಣೆ ಮಾಡಿದರು. ನಂತರ ಆ ಬಸ್ ನಲ್ಲಿ ಸಂಚಾರ ಮಾಡಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ, ಬಿಎಂಟಿಸಿ ಅಧ್ಯಕ್ಷ ನಂದೀಶ ರೆಡ್ಡಿ, ಶಾಸಕ ನಾಗರಾಜ ಯಾದವ, ಬಿಎಂಟಿಸಿ ಎಂಡಿ ಸತ್ಯವತಿ, ಸಾರಿಗೆ ನಿಗಮಗಳ ಪುನಶ್ಚೇತನಕ್ಕಾಗಿ ರಚಿಸಲಾಗಿರುವ ಸಮೀತಿಯ ಮುಖಸ್ಥ ಎಂ ಆರ್ ಶ್ರೀನಿವಾಸಮೂರ್ತಿ, ಸಾರಿಗೆ ಇಲಾಖೆಯ ಕಾರ್ಯದರ್ಶಿ, ನಿರ್ದೇಶಕರು ಉಪಸ್ಥಿತರಿದ್ದರು.