ಬೆಂಗಳೂರು, ಸೆ.2 www.bengaluruwire.com : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯ ಲೋಕಾರ್ಪಣೆಗೆ ಪೂರ್ವಭಾವಿಯಾಗಿ ಇಂದು ಉದ್ಘಾಟನಾ ಅಭಿಯಾನಕ್ಕೆ ಚಾಲನೆ ನೀಡಿದರು.
ಸಚಿವರಾದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್, ಆರ್.ಅಶೋಕ್, ಡಾ.ಕೆ.ಸುಧಾಕರ್, ಎಸ್.ಟಿ.ಸೋಮಶೇಖರ್, ಮುನಿರತ್ನ, ಸಂಸದ ಡಿ.ವಿ.ಸದಾನಂದಗೌಡ, ಜಗ್ಗೇಶ್, ಬಿ.ಡಿ.ಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹಾಗೂ ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.