Sunday, September 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಸೌಜನ್ಯ ಪ್ರಕರಣ: ಮರುತನಿಖೆಗೆ ರಾಜ್ಯ ಸರ್ಕಾರದಿಂದ ಎಸ್‌ಐಟಿ ರಚನೆ

    ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಕಸ್ತೂರಿ ರಂಗನ್ ವರದಿ: ಗ್ರಾಮ ಮಟ್ಟದಲ್ಲಿ ಭೌತಿಕ ಸರ್ವೇಗೆ ಕೇಂದ್ರಕ್ಕೆ 1 ವರ್ಷ ಕಾಲಾವಕಾಶ ಕೋರಿಕೆ; ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

  • Bengaluru Focus

    ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

    GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

    GBA News | ​ಬೆಂಗಳೂರಿಗರಿಗೆ ‘ಇ-ಆಸ್ತಿ 2.0’ ಡಿಜಿಟಲ್ ಕೊಡುಗೆ; ಅಕ್ರಮ ಕಟ್ಟಡಗಳಿಗೆ ಆಯುಕ್ತರ ಚಾಟಿ

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Central Study Team | ರಾಜ್ಯದಲ್ಲಿ ಮಳೆಹಾನಿ: ನ್ಯಾಯಯುತ ಪರಿಹಾರ ಒದಗಿಸಲು ಕೇಂದ್ರ ತಂಡಕ್ಕೆ ಮುಖ್ಯಮಂತ್ರಿ ಮನವಿ

by Bengaluru Wire Desk
September 7, 2022
in News Wire, Public interest
Reading Time: 1 min read
0

ಬೆಂಗಳೂರು, ಸೆ.7 www.bengaluruwire.com : ರಾಜ್ಯ ಸರ್ಕಾರವು ಅತ್ಯಂತ ನಿಖರವಾಗಿ ಹಾಗೂ ಪಾರದರ್ಶಕವಾಗಿ ಹಾನಿಯ ಅಂದಾಜುಪಟ್ಟಿ ಸಿದ್ಧಪಡಿಸಿ, ಪ್ರಸ್ತಾವನೆ ಸಲ್ಲಿಸಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನ್ಯಾಯಯುತ ಪರಿಹಾರ ಒದಗಿಸಲು ಶಿಫಾರಸು ಮಾಡುವಂತೆ ಕೋರಿದ್ದಾಗಿ ಮುಖ್ಯಮಂತ್ರಿಯ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ರಾಜ್ಯದ ಪ್ರವಾಹ ಪರಿಸ್ಥಿತಿ ಅಧ್ಯಯನಕ್ಕೆ ಆಗಮಿಸಿರುವ ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ನೇತೃತ್ವದ ಕೇಂದ್ರ ಅಧ್ಯಯನ ತಂಡದೊಂದಿಗೆ ಸಭೆ ನಡೆಸಿ, ರಾಜ್ಯದಲ್ಲಿ ಪ್ರವಾಹದಿಂದ ಜುಲೈ, ಆಗಸ್ಟ್ ಹಾಗೂ ಈ ತಿಂಗಳು ಸಂಭವಿಸಿದ ಹಾನಿಯ ಕುರಿತು ಚರ್ಚಿಸಿದರು.

ರಾಜ್ಯದಲ್ಲಿ ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಪ್ರವಾಹ ಪರಿಸ್ಥಿತಿಯಿಂದ ಸಂಭವಿಸಿದ ಹಾನಿಯ ಕುರಿತು ಹಾಗೂ ರಾಜ್ಯ ಸರ್ಕಾರ ಕೈಗೊಂಡ ಪರಿಹಾರ ಕ್ರಮಗಳ ಕುರಿತು ಸಭೆಯಲ್ಲಿ ವಿವರವಾದ ಮಾಹಿತಿ ಒದಗಿಸಲಾಯಿತು. ತಂಡವು ಚಿತ್ರದುರ್ಗ, ಹಾಸನ, ಚಿಕ್ಕಮಗಳೂರು, ಹಾವೇರಿ, ಧಾರವಾಡ, ಗದಗ, ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಭೇಟಿ ನೀಡುವ ಕಾರ್ಯಕ್ರಮ ರೂಪಿಸಲಾಗಿತ್ತು.

ಇದರೊಂದಿಗೆ ಅತಿ ಹೆಚ್ಚು ಭೂಕುಸಿತ, ಸಮುದ್ರ ಕೊರೆತ ಸಂಭವಿಸಿರುವ ಕೊಡಗು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೂ ಭೇಟಿ ನೀಡುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಸಾಂದರ್ಭಿಕ ಚಿತ್ರ

ಜೊತೆಗೆ ಬೆಂಗಳೂರು ನಗರ, ನೆರೆಯ ಮಂಡ್ಯ, ರಾಮನಗರ ಜಿಲ್ಲೆಗಳ ಪ್ರವಾಹ ಪರಿಸ್ಥಿತಿಯನ್ನು ಸಹ ಅವಲೋಕಿಸುವಂತೆ ತಿಳಿಸಲಾಯಿತು. ಈ ಬಾರಿ ಭಾರಿ ಸಂಖ್ಯೆಯಲ್ಲಿ ಮೀನುಗಾರಿಕಾ ದೋಣಿಗಳಿಗೆ, ಅಂಗಡಿ ಮುಂಗಟ್ಟುಗಳಿಗೆ ಸಂಭವಿಸಿದ ಹಾನಿ ಹಾಗೂ ರಾಮನಗರದ ರೇಷ್ಮೆ ರೀಲಿಂಗ್ ಘಟಕ ಹಾಗೂ ಟ್ವಿಸ್ಟಿಂಗ್ ಘಟಕಗಳಿಗೆ ಸಂಭವಿಸಿದ ಹಾನಿಯ ಕುರಿತೂ ಸಹ ಕೇಂದ್ರ ತಂಡದ ಗಮನಕ್ಕೆ ತಂದ ಮುಖ್ಯಮಂತ್ರಿಗಳು, ಮೊದಲ ಬಾರಿಗೆ ಇಂತಹ ಹಾನಿ ಸಂಭವಿಸಿದ್ದು, ಅವರಿಗೆ ಜೀವನೋಪಾಯಕ್ಕೆ ತೊಂದರೆಯಾಗಿದೆ. ಆದ್ದರಿಂದ ಮಾನವೀಯ ದೃಷ್ಟಿಯಿಂದ ಅವರಿಗೆ ನೆರವು ನೀಡಲು ಪರಿಶೀಲಿಸುವಂತೆ ಕೋರಿದರು.

ಹೊಸ ಜಾಗಗಳಲ್ಲಿ ಕಡಲಕೊರೆತ :
ರಾಜ್ಯವು 330 ಕಿ.ಮೀ. ಕರಾವಳಿ ಪ್ರದೇಶವನ್ನು ಹೊಂದಿದ್ದು, ಸಮುದ್ರ ಕೊರೆತ ತಡೆಗಟ್ಟಲು ಹಲವು ಸೂಕ್ಷ್ಮ ಪ್ರದೇಶಗಳಲ್ಲಿ 350 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಆದರೆ ಹೊಸ ಜಾಗಗಳಲ್ಲಿ ಕಡಲಕೊರೆತ ಉಂಟಾಗಿದ್ದು, ರಾಜ್ಯದ ಸಂಪೂರ್ಣ ಕರಾವಳಿ ಪ್ರದೇಶದ ರಕ್ಷಣೆಗೆ ಕೇಂದ್ರದ ನೆರವಿನ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಪ್ರವಾಹ ಕಾಣಿಸಿಕೊಳ್ಳದ ಕಡೆಗಳಲ್ಲಿಯೂ ಪ್ರವಾಹ :
ಉತ್ತರ ಕರ್ನಾಟಕ ಭಾಗದಲ್ಲಿಯೂ ಹಿಂದೆ ಪ್ರವಾಹ ಕಾಣಿಸಿಕೊಳ್ಳದ ಕಲಬುರಗಿ, ಗದಗ, ಬೀದರ್, ಕೊಪ್ಪಳ ಮೊದಲಾದ ಜಿಲ್ಲೆಗಳಲ್ಲಿ ಈ ಬಾರಿ ಪ್ರವಾಹ ಉಂಟಾಗಿದೆ.
ಕಳೆದ ನವೆಂಬರ್ ತಿಂಗಳಿನಿಂದ ಬಿಟ್ಟು ಬಿಟ್ಟು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಮಳೆಯ ಮಾದರಿಯನ್ನು ಅಧ್ಯಯನ ನಡೆಸುವ ಅಗತ್ಯವಿದೆ. ಸತತ ಮಳೆಯಿಂದಾಗಿ ರಾಜ್ಯದ ಬಹುತೇಕ ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ. ಇದರಿಂದಾಗಿ ಕೆರೆ ತುಂಬಿ ಹಾಗೂ ಕೆರೆ ಏರಿ ಒಡೆದು ಪ್ರವಾಹ ಉಂಟಾಗುತ್ತಿದೆ. ನದಿ ಪ್ರವಾಹಕ್ಕಿಂತ ಭಿನ್ನ ಪರಿಸ್ಥಿತಿ ಇದಾಗಿದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಮೂಲಸೌಕರ್ಯ ದುರಸ್ತಿಗೆ 1600 ಕೋಟಿ ರೂ. ಬಿಡುಗಡೆ :
ರಾಜ್ಯದಲ್ಲಿ ಕಳೆದ ನವೆಂಬರ್ ನಿಂದೀಚೆಗೆ ಮೂಲಸೌಕರ್ಯಗಳ ದುರಸ್ತಿಗೆ ಎರಡು ಬಾರಿ 500 ಕೋಟಿ ರೂ.ಗಳಂತೆ ಹಾಗೂ ಎರಡು ದಿನಗಳ ಹಿಂದೆ 600 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಬೆಳೆ ಹಾನಿಗೆ ರಾಜ್ಯ ಸರ್ಕಾರ ಹೆಚ್ಚುವರಿ ಪರಿಹಾರ ನೀಡುತ್ತಿದ್ದು, 18.58 ಲಕ್ಷ ರೈತರಿಗೆ ಒಟ್ಟು 2452 ಕೋಟಿ ರೂ. ಪರಿಹಾರ ವಿತರಿಸಲಾಗಿದೆ.

ಇದರಲ್ಲಿ 1160 ಕೋಟಿ ರೂ. ಹೆಚ್ಚುವರಿ ಮೊತ್ತವನ್ನು ರಾಜ್ಯ ಸರ್ಕಾರದ ಬೊಕ್ಕಸದಿಂದ ಭರಿಸಲಾಗಿದೆ. ಮನೆ ಹಾನಿಗೂ ನಷ್ಟದ ಪ್ರಮಾಣವನ್ನು ಆಧರಿಸಿ, ಪರಿಹಾರ ವಿತರಿಸಲಾಗುತ್ತಿದೆ. ಈ ಎಲ್ಲ ಪರಿಹಾರಗಳನ್ನೂ ಅತ್ಯಂತ ತ್ವರಿತವಾಗಿ, ಪಾರದರ್ಶಕವಾಗಿ ನೇರವಾಗಿ ಸಂತ್ರಸ್ತರ ಖಾತೆಗೆ ಜಮಾ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಕಳೆದ ಒಂದು ವಾರದಿಂದೀಚೆಗೆ ಪುನಃ ಭಾರಿ ಮಳೆಯಾಗುತ್ತಿದ್ದು, ಬೆಂಗಳೂರು, ರಾಮನಗರ, ಮಂಡ್ಯ ಮತ್ತಿತರ ಜಿಲ್ಲೆಗಳಲ್ಲಿ ಬಹಳಷ್ಟು ಹಾನಿಯಾಗಿದೆ. ಈ ಅವಧಿಯಲ್ಲಿ ಸಂಭವಿಸಿದ ನಷ್ಟದ ಕುರಿತು ಪೂರಕ ಪ್ರಸ್ತಾವನೆಯನ್ನು ಸಹ ಕೂಡಲೇ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೇಂದ್ರ ಅಧ್ಯಯನ ತಂಡದೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಿತು

ಕೇಂದ್ರ ತಂಡದಲ್ಲಿರುವವರು ಯಾರು?
ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶೀಶ್ ಕುಮಾರ್ ನೇತೃತ್ವದ ತಂಡವು ಕೇಂದ್ರ ಹಣಕಾಸು ಇಲಾಖೆಯ ಉಪಕಾರ್ಯದರ್ಶಿ ಮಹೇಶ್ ಕುಮಾರ್, ಇಂಧನ ಇಲಾಖೆಯ ಸಹಾಯಕ ನಿರ್ದೇಶಕರಾದ ಭಾವ್ಯ ಪಾಂಡೆ, ಜಲಶಕ್ತಿ ಸಚಿವಾಲಯದ ಅಶೋಕ್ ಕುಮಾರ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧೀಕ್ಷಕ ಅಭಿಯಂತರ ವಿ.ವಿ.ಶಾಸ್ತ್ರಿ, ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಡಾ. ಕೆ. ಮನೋಹರನ್, ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧೀನ ಕಾರ್ಯದರ್ಶಿ ಎಸ್.ಬಿ. ತಿವಾರಿ ಅವರನ್ನು ಒಳಗೊಂಡಿದೆ.

ಸಭೆಯಲ್ಲಿದ್ದವರು?
ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ, ಬಿ.ಸಿ. ಪಾಟೀಲ, ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರನಾಯಕ್, ವಿಪತ್ತು ನಿರ್ವಹಣೆ ಆಯುಕ್ತ ಮನೋಜ್ ರಾಜನ್ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Umesh Katti | ಸಚಿವ ಉಮೇಶ್ ಕತ್ತಿ ನಿಧನ ; ರಾಜ್ಯಾದ್ಯಂತ ಒಂದು ದಿನ ಶೋಕಾಚರಣೆ

Next Post

BBMP News | ನಾಲ್ಕು ಟೆಲಿಕಾಮ್ ಸರ್ವಿಸ್ ಸಂಸ್ಥೆಗಳಿಗೆ ಬಿಬಿಎಂಪಿ 80 ಲಕ್ಷ ರೂ. ದಂಡ

Next Post

BBMP News | ನಾಲ್ಕು ಟೆಲಿಕಾಮ್ ಸರ್ವಿಸ್ ಸಂಸ್ಥೆಗಳಿಗೆ ಬಿಬಿಎಂಪಿ 80 ಲಕ್ಷ ರೂ. ದಂಡ

ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತ ನೀಲಕುರಂಜಿ ಹೂಗಳಿಂದ ಕಂಗೊಳಿಸುತ್ತಿರುವ ಮನೋಹರ ದೃಶ್ಯ

BW Special | Kurinji Flower | ಚಂದ್ರದ್ರೋಣ ಪರ್ವತದಲ್ಲಿ ನೀಲ ಕುರಂಜಿ ಹೂವಿನ ಸಿಂಗಾರ : ಭೂರಮೆಯ ಸೌಂದರ್ಯ ಕಣ್ತುಂಬಿಕೊಳ್ಳಲು ಇದು ಸಕಾಲ

Please login to join discussion

Like Us on Facebook

Follow Us on Twitter

Recent News

ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

September 27, 2026

ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

September 26, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

September 27, 2026

ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

September 26, 2026

Inspiring News | ​ಸ್ವಿಗ್ಗಿಯಿಂದ ಸೀಫುಡ್ ಸಾಮ್ರಾಜ್ಯಕ್ಕೆ: ಬೆಂಗಳೂರಿನ ಯುವಕನ ಸ್ಪೂರ್ತಿದಾಯಕ ಯಶೋಗಾಥೆ

September 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d