Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Labour Card KSRTC Bus Pass | ರಾಜ್ಯಾದ್ಯಂತ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆ ಆರಂಭ

ಕಾರ್ಮಿಕರು ಯಾವುದೇ ಜಿಲ್ಲೆಯಲ್ಲಿ ನೋಂದಣಿಯಾಗಿದ್ದರೂ ಸಹ ಅವರು ಇಚ್ಛಿಸುವ ಸ್ಥಳದಿಂದ ಬಸ್ ಪಾಸನ್ನು ಪಡೆಯಲು ಅವಕಾಶ ಕಲ್ಪಿಸಲಾಗಿರುತ್ತೆ.

by Bengaluru Wire Desk
September 26, 2022
in News Wire
Reading Time: 1 min read
1

ಬೆಂಗಳೂರು, ಸೆ.20 www.bengaluruwire.com : ಕಾರ್ಮಿಕ ಇಲಾಖೆ ಮತ್ತು ಅಧೀನದಲ್ಲಿ ಬರುವ ಇತರೆ ಮಂಡಳಿಗಳ ನೋಂದಣಿ ನವೀಕರ ಹಾಗೂ ವಿವಿಧ ಸೌಲಭ್ಯಗಳನ್ನು ವಿತರಿಸಲು ನೂತನ ತಂತ್ರಾಂಶವನ್ನು ರೂಪಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಉದ್ಘಾಟಿಸಿದರು.

ವಿಧಾನಸೌಧದ ಬ್ಯಾಂಕ್ವಿಟ್ ಹಾಲ್ ನಲ್ಲಿ ಈ ನೂತನ ತಂತ್ರಾಂಶಕ್ಕೆ ಚಾಲನೆ, ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಣಾ ಯೋಜನೆಯ ಪ್ರಾರಂಭ ಹಾಗೂ ಕಟ್ಟಡ ಕಾರ್ಮಿಕ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಬೆಂಗಳೂರ ವ್ಯಾಪ್ತಿಯಲ್ಲಿ ಕಟ್ಟಡ ಕಾರ್ಮಿಕರಿಗೆ ನೀಡುತ್ತಿದ್ದ ಬಸ್ ಪಾಸ್ ಸೌಲಭ್ಯವನ್ನು ರಾಜ್ಯಾದ್ಯಂತ ಇಂದಿನಿಂದ ವಿಸ್ತರಿಸಲಾಗುತ್ತಿದೆ ಎಂದರು.

ದೇಶದ ಅಭಿವೃದ್ಧಿಗೆ ಕಾರ್ಮಿಕರ ಕೊಡುಗೆ ಅಪಾರವಾದುದು. ಸರ್ಕಾರದ ಬಳಿ ಎಷ್ಟೇ ಹಣವಿದ್ದರೂ, ಕಾರ್ಮಿಕ ಬೆವರು ಹರಿಸಿ ಕಾಮಗಾರಿ ನಡೆಸಿದರಷ್ಟೇ ಆ ಕೆಲಸ ಕಾರ್ಯಗತವಾಗುವುದು. ಕೇವಲ ಹಣವಿದ್ದರೆ ಕೆಲಸ ತನ್ನಿಂದತಾನೇ ಅನುಷ್ಟಾನವಾಗದು. ಇಂತಹ ಕಾರ್ಮಿಕರ ನೆರವಿಗೆ ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ಕಾರ್ಮಿಕ ಇಲಾಖೆಯ ಮೂಲಕ ಜಾರಿಗೆ ತರಲಾಗುತ್ತಿದೆ. ಕಾರ್ಮಿಕರಿಗೆ ವಿವಿಧ ಧನ ಸಹಾಯದ‌ ಸೌಲಭ್ಯಗಳನ್ನು ತಲುಪಿಸಲು Kbocwwb labour ಆಂಡ್ರಾಯ್ಡ್ ಆಪ್ ಅನುಕೂಲಕಾರಿಯಾಗಿದೆ ಎಂದರು.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಇದುವರೆಗೆ 37 ಲಕ್ಷ ಕಟ್ಟಡ ಕಾರ್ಮಿಕರು ನೋಂದಾಯಿತರಾಗಿದ್ದಾರೆ. ಇವರುಗಳಿಗೆ ಸದ್ಯ ಶೈಕ್ಷಣಿಕ ಸಹಾಯಧನ ಹೊರತುಪಡಿಸಿ ಮದುವೆ ಸಹಾಯಧನ, ವೈದ್ಯಕೀಯ, ಪಿಂಚಣಿ ಸೌಲಭ್ಯ, ಮಹಿಳಾ ಕಟ್ಟಡ ಕಾರ್ಮಿಕರಿಗೆ ಹೆರಿಗೆ ಸಹಾಯಧನ ಮತ್ತು ತಾಯಿ ಮಗು ಸಹಾಯಹಸ್ತ ಯೋಜನೆ ಸೇರಿದಂತೆ 19 ಸೌಲಭ್ಯಗಳನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಭೌತಿಕವಾಗಿ ಹಾಕಲಾಗುತ್ತಿತ್ತು.

ನೂತನ ತಂತ್ರಾಂಶವು ಕಟ್ಟಡ ಕಾರ್ಮಿಕರಿಗೆ ತ್ವರಿತವಾಗಿ ಸೇವೆಯನ್ನು ನೀಡುವ ಸಲುವಾಗಿ ಹಾಗೂ ಸಹಾಧನವು ನೇರವಾಗಿ ಫಲಾನುಭವಿಗಳ ಖಾತೆಗೆ ನೇರವಾಗಿ (DBT) ತಲುಪಿಸಲು ಈ ಹೊಸ ಸಾಫ್ಟ್ ವೇರ್ ನಿಂದ ಸಾಧ್ಯವಾಗಲಿದೆ. ಅಲ್ಲದೆ ಒಬ್ಬ ಫಲಾನುಭವಿಯು ಒಂದೇ ಸೌಲಭ್ಯವನ್ನು ಎರಡೆರಡು ಬಾರಿ ಪಡೆಯುವುದನ್ನು ತಪ್ಪಿಸುತ್ತದೆ. ಈ ಎಲ್ಲಾ ಅವಕಾಶಗಳು ಹಳೆಯ ಸೇವಾಸಿಂಧು ತಂತ್ರಾಂಶದಲ್ಲಿ ಲಭ್ಯವಿರಲಿಲ್ಲ. ಹೊಸ ಸಾಫ್ಟ್ ವೇರ್ ಈ ಎಲ್ಲಾ ಅನುಕೂಲಗಳಿವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಕಾರ್ಮಿಕ ಇಲಾಖೆಯ ಅಧೀನದಲ್ಲಿರುವ ಇತರೆ ಮಂಡಳಿಗಳಾದ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಕಾರ್ಖಾನೆಗಳು, ಬಾಯ್ಲರ್ ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಗಳ ಅಡಿಯಲ್ಲಿ ನೋಂದಣಿ, ನವೀಕರಣ ಮತ್ತು ವಿವಿಧ ಸೌಲಭ್ಯಗಳನ್ನು ವಿತರಿಸಲು ಈ ನೂತನ ತಂತ್ರಾಂಶವನ್ನು ರೂಪಿಸಲಾಗಿದೆ.

ಆಂಡ್ರಾಯ್ಡ್ ಆಪ್

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರ ಮಕ್ಕಳಿಗೆ 2021-22ನೇ ಸಾಲಿನಲ್ಲಿ 4.19 ಲಕ್ಷ ಫಲಾನುಭವಿಗಳ ಖಾತೆಗೆ 654 ಕೋಟಿ ರೂ.ಗಳ ಶೈಕ್ಷಣಿಕ ಸಹಾಯ ಧನವನ್ನು ನೇರ ನಗದು ರೂಪದಲ್ಲಿ‌ ನೀಡಲಾಗಿದೆ. ಇದೇ ಮೊದರಿಯಲ್ಲಿ ಮಂಡಳಿಯು ಉಳಿದ ಸೇವೆಗಳಲ್ಲಿ ಡಿಬಿಟಿ ಮುಖಾಂತರ ಹಣವನ್ನು ಹಸ್ತಾಂತರಿಸಲಿದೆ ಎಂದರು.

ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಬಿಎಂಟಿಸಿ ವ್ಯಾಪ್ತಿಯಿಂದ ರಿಯಾಯಿತಿ ಬಸ್ ಪಾಸ್ ಯೋಜನೆಯನ್ನು ರಾಜ್ಯದಾದ್ಯಂತ ವಿಸ್ತರಿಸಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಏ.16ರಂದು ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಿತ್ತು. ಇಂದಿನಿಂದ ಈ ಯೋಜನೆ ಜಾರಿಗೆ ಬಂದಿದ್ದು ಅರ್ಹ ಕಾರ್ಮಿಕರು ತಮ್ಮ ವಾಸ ಸ್ಥಳ ಅಥವಾ ಕೆಲಸ ನಿರ್ವಹಿಸುವ ಸ್ಥಳದಿಂದ 45 ಕಿ.ಮೀ ವ್ಯಾಪ್ತಿಯಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಕೂಲವಾಗುತ್ತದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೆಎಸ್ ಆರ್ ಟಿಸಿ (KSRTC) ಬಸ್ ಪಾಸ್ ಗಳನ್ನು ಬೆಂಗಳೂರು-ಒನ್, ಕರ್ನಾಟಕ-ಒನ್ ಮತ್ತು ಗ್ರಾಮ-ಒನ್ ಕೇಂದ್ರಗಳ ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿ ಪಡೆಯಬಹುದಾಗಿರುತ್ತದೆ. ಮಂಡಳಿಯ ಫಲಾನುಭವಿಗಳಿಗೆ ವಿತರಿಸಲಾಗುವ ಬಸ್ ಪಾಸ್ ಗಳು ತ್ರೈಮಾಸಿಕ ಅವಧಿಯದಾಗಿದ್ದು, ಅವಧಿ ಮುಕ್ತಾಯದ ನಂತರ ಪುನಃ ಅರ್ಜಿ ಸಲ್ಲಿಸಿ ನವೀಕರಿಸಿಕೊಳ್ಳಬಹುದು ಎಂದು ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.

“2013ರಿಂದ 2018ರವರೆಗೆ 278 ಕೋಟಿ ರೂ. ಮಾತ್ರ ವ್ಯಯಿಸಲಾಗಿತ್ತು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶ್ರಮಿಕರ ಕಲ್ಯಾಣಕ್ಕಾಗಿ 1619 ಕೋಟಿ ರೂ.ಗಳನ್ನು ವ್ಯಯಿಸಲಾಗಿದೆ. ಇದು ರಾಜ್ಯದ ಕಾರ್ಮಿಕ ಇಲಾಖೆಯ ಇತಿಹಾಸದಲ್ಲೇ ಒಂದು ದಾಖಲೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ದೇಶದಲ್ಲೇ ಮೊದಲು ಎಂಬಂತಹ ಮೂರು ಹೊಸ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗುತ್ತಿದೆ”
-ಶಿವರಾಂ ಹೆಬ್ಬಾರ್, ಕಾರ್ಮಿಕ ಸಚಿವರು

ಮಂಡಳಿಯ ನೋಂದಾಯಿತ ಕಾರ್ಮಿಕರು ಯಾವುದೇ ಜಿಲ್ಲೆಯಲ್ಲಿ ನೋಂದಣಿಯಾಗಿದ್ದರೂ ಸಹ ಅವರು ಇಚ್ಛಿಸುವ ಸ್ಥಳದಿಂದ ಬಸ್ ಪಾಸನ್ನು ಪಡೆಯಲು ಅವಕಾಶ ಕಲ್ಪಿಸಲಾಗಿರುತ್ತೆ.

2021-22ನೇ ಸಾಲಿನ ಎಸ್ ಎಸ್ ಎಲ್ ಸಿ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರ ಮಕ್ಕಳು 600 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರೋತ್ಸಾಹಧನ ನೀಡಲು ನಿರ್ಣಯಿಸಲಾಗಿತ್ತು. ಕ್ಷೇತ್ರ ಮಟ್ಟದ ಅಧಿಕಾರಿಗಳ ಕಚೇರಿಯಿಂದ ಒಟ್ಟು 2,491 ಅರ್ಜಿಗಳು ಸ್ವೀಕೃತಗೊಂಡಿದೆ. ಆ ಪೈಕಿ 2,307 ಅರ್ಜಿಗಳಿಗೆ ಪ್ರೋತ್ಸಾಹಧನ ಪಡೆಯಲು ಅರ್ಹರಾಗಿದ್ದಾರೆ.

ಕಾರ್ಯಕ್ರಮದಲ್ಲಿ ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೆಎಸ್‌ಆರ್‌ಟಿಸಿ ಅಧ್ಯಕ್ಷ ಮತ್ತು ಶಾಸಕ ಕೆ. ಚಂದ್ರಪ್ಪ, ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ಇಲಾಖೆ ಆಯುಕ್ತ ಅಕ್ರಂ ಪಾಷ, ಕಲ್ಯಾಣ ಕರ್ನಾಟಕ ಮಂಡಳಿಯ ಡಾ.ರಾಜ್ ಕುಮಾರ್, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಾರ್ಯದರ್ಶಿ ಗುರು ಪ್ರಸಾದ್ ಎಂ.ಪಿ, ಜಂಟಿ ಕಾರ್ಯದರ್ಶಿ ಶಿವಪುತ್ರ, ಸಚಿವರ ಆಪ್ತ ಕಾರ್ಯದರ್ಶಿ ಮಂಜುನಾಥ್ ಬಳ್ಳಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

JDS HD Kumarswamy | ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಸೇರಿಕೊಂಡ್ರಾ?

Next Post

Mysore Dasara-2022 | ಮೈಸೂರು ದಸರಾ ಮಹೋತ್ಸವ-2022 ; ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

Next Post

Mysore Dasara-2022 | ಮೈಸೂರು ದಸರಾ ಮಹೋತ್ಸವ-2022 ; ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

ಪಂಚಮಸಾಲಿ ಮೀಸಲಾತಿಗೆ ಬಿಎಸ್‌ವೈ ಅಡ್ಡಿ ಪಡಿಸಿಲ್ಲ: ಸಚಿವ ಮುರುಗೇಶ್ ನಿರಾಣಿ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group