Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home BW Special

Ration Card Server Problem | ಪಡಿತರಕ್ಕಾಗಿ ಎರಡು ಬಾರಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯ : ಸರ್ವರ್ ಸಮಸ್ಯೆಯಿಂದ ರೇಷನ್ ಸಿಗದೆ ಜನ ಕಂಗಾಲು….!

ಗ್ರಾಮೀಣ ಪ್ರದೇಶದಲ್ಲಿ ಕಡಿಮೆ ವೇಗದ ಇಂಟರ್ ನೆಟ್ ನಿಂದಾಗಿ ಒಂದು ಬಾರಿ ಬಯೋಮೆಟ್ರಿಕ್ ಪಡೆಯುವುದು ಸವಾಲಾಗಿರುವಾಗ ಎರಡು ಬಾರಿ ಬೆರಳಚ್ಚು ತೆಗೆದುಕೊಳ್ಳಲು ಸಾಕಷ್ಟು ಸಮಯದ ಕಾರಣಕ್ಕೆ ಆಹಾರ ಧಾನ್ಯ ವಿತರಣೆ ಸಮಸ್ಯೆ ಎದುರಾಗಿದೆ.

by Bengaluru Wire Desk
September 23, 2022
in BW Special, News Wire, Public interest
Reading Time: 1 min read
0
ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

ಬೆಂಗಳೂರು, ಸೆ.23 www.bengaluruwire.com :  ರಾಜ್ಯದಲ್ಲಿ ಪಡಿತರ ಆಹಾರ ಧಾನ್ಯಗಳನ್ನು ಪಡೆಯಲು ಪಡಿತರ ಕಾರ್ಡ್ ದಾರರು ಕಳೆದ ಸೆ.10ರಿಂದ ನ್ಯಾಯಬೆಲೆ ಅಂಗಡಿಗಳ ಮುಂದೆ ಸರ್ಕಸ್ ಮಾಡುವಂತಾಗಿದೆ. ರೇಷನ್ ಕಾರ್ಡ್ ಹಿಡಿದು ಹೋದರು “ನಾಳೆ ಬನ್ನಿ ಸರ್ವಸ್ ಸಮಸ್ಯೆಯಿದೆ” ಎಂದು ಅಂಗಡಿಯವರು ಹೇಳೋದು ಈಗ ಸಾಮಾನ್ಯವಾಗಿದೆ.

ಆಹಾರ ಇಲಾಖೆಯ ತಂತ್ರಾಂಶಕ್ಕೆ ಪಡಿತರದಾರರಿಂದ ಎರಡು ಬಾರಿ ಬಯೋಮೆಟ್ರಿಕ್ (Biometrics) ಪಡೆಯುವ ರೀತಿಯಲ್ಲಿ ಹೊಸ ವ್ಯವಸ್ಥೆಯನ್ನು ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಅಪಡೇಟ್ ಮಾಡಲಾಗಿದೆ. ಈ ಹೊಸ ವ್ಯವಸ್ಥೆ ಅನುಷ್ಠಾನ ಮಾಡಲು ಪ್ರಾರಂಭಿಸುತ್ತಿದ್ದಂತೆ ರಾಜ್ಯದ ಬಹುತೇಕ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆ ಎದುರಾಗಿ ಪಡಿತರ ವಿತರಣಾ ವ್ಯವಸ್ಥೆಯಡಿ ಜನರಿಗೆ ಆಹಾರ ಧಾನ್ಯ ಪಡೆದುಕೊಳ್ಳುವಲ್ಲಿ ಸಮಸ್ಯೆ ಎದುರಾಗಿದೆ. ಮಾರುದ್ದ ಕ್ಯೂ ನಿಂತರೂ ಅದೇ ದಿನ ತಮಗೆ ಅಕ್ಕಿ, ಗೋಧಿ, ರಾಗಿ ಸಿಗುತ್ತೆ ಎಂಬ ಖಾತರಿಯಿಲ್ಲದಂತಾಗಿದೆ.

ಇದು ಬಡವರು ಮತ್ತು ಸಾಮಾನ್ಯ ಜನರಿಗೆ ನುಂಗಲಾರದ ತುತ್ತಾಗಿದೆ. ಪ್ರತಿದಿನ 20 ಜನರಿಗೆ ಆಹಾರ ಧಾನ್ಯವನ್ನು ವಿತರಿಸುತ್ತಿದ್ದ ನ್ಯಾಯಬೆಲೆ ಅಂಗಡಿಗಳು ಈಗ ಪ್ರತಿ ಕಾರ್ಡ್ ದಾರರಿಂದ ಎರಡು ಬಾರಿ ಬಯೋಮೆಟ್ರಿಕ್ ಪಡೆದ ಬಳಿಕವಷ್ಟೇ ಪಡಿತರ ನೀಡಬೇಕಾಗಿರುವುದರಿಂದ ಕೇವಲ 10 ಜನರಿಗಷ್ಟೇ ಅಕ್ಕಿ- ಬೇಳೆ ನೀಡುವಂತಾಗಿದೆ.  

ರಾಜ್ಯಾದ್ಯಂತ ಪಡಿತರ ಪಡೆಯಲು ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಕಾರ್ಡ್‌ದಾರರು ಎರಡು ಬಾರಿ ಬಯೋಮೆಟ್ರಿಕ್‌ ನೀಡುವುದನ್ನು ಇದೇ ಸೆಪ್ಟೆಂಬರ್‌ನಿಂದ ಕಡ್ಡಾಯಗೊಳಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಡುವಿನ ಪಡಿತರ ಲೆಕ್ಕಾಚಾರ ತಪ್ಪಾಗದಿರಲಿ ಎಂಬ ಕಾರಣಕ್ಕೆ ಒಂದು ಬಾರಿ ನೀಡುವ ಬಯೋಮೆಟ್ರಿಕ್ ದತ್ತಾಂಶ ರಾಜ್ಯ ಸರ್ಕಾರದ ಸರ್ವರ್ ಸೇರಿದರೆ, ಮತ್ತೊಮ್ಮೆ ನೀಡುವ ದತ್ತಾಂಶ ಕೇಂದ್ರ ಸರ್ಕಾರದ ಸರ್ವರ್ ಗೆ ಹೋಗುತ್ತದೆ. ಈಗಾಗಲೇ ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಪಡಿತರ ಕಾರ್ಡ್ ಪಡೆಯಲು ಬರುವ ಗ್ರಾಹಕರಿಂದ ಎರಡೆರಡು ಬಾರಿ ಬಯೋಮೆಟ್ರಿಕ್ ಪಡೆದುಕೊಳ್ಳಲಾಗುತ್ತಿದೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯ ಅನ್ನ ಭಾಗ್ಯ ಮತ್ತು ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಗಳ ಪಡಿತರ ಆಹಾರಧಾನ್ಯಗಳನ್ನು ವಿತರಿಸುವ ಸಂದರ್ಭದಲ್ಲಿ, ಎರಡೂ ಯೋಜನೆಗಳಿಗೆ ಪ್ರತ್ಯೇಕವಾಗಿಯೇ ಆಧಾರ್‌ ಬಯೋ ದೃಢೀಕರಣ ಪಡೆಯುವಂತೆ ಸೂಚಿಸಲಾಗಿದೆ. ಈ ಸಂಬಂಧ ಆಹಾರ ಇಲಾಖೆಯ ತಂತ್ರಾಂಶದಲ್ಲೂ ಮಾರ್ಪಾಡು ಮಾಡಲಾಗಿದೆ. ಒಂದು ಬಾರಿ ಬಯೋಮೆಟ್ರಿಕ್‌ ಪಡೆಯುವುದೇ ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಸವಾಲಾಗಿದೆ. ಈಗ ಎರಡು ಬಾರಿ ಬಯೋಮೆಟ್ರಿಕ್ ಪಡೆದುಕೊಳ್ಳುವುದು ಪಡಿತರ ಅಂಗಡಿಯವರಿಗೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ.

ಬೆರಳಚ್ಚು ತೆಗೆದುಕೊಳ್ಳುವ ಯಂತ್ರ

“ರಾಜ್ಯದ 20,210 ಪಡಿತರ ಅಂಗಡಿಗಳಲ್ಲಿ ಸೆ.10ರಿಂದ ಆಹಾರ ಧಾನ್ಯ ಪಡೆಯಲು ಬರುವ ಕಾರ್ಡ್ ದಾರರಿಂದ ಎರಡು ಬಾರಿ ಬಯೋಮೆಟ್ರಿಕ್ ಪಡೆಯಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಬಯೋಮೆಟ್ರಿಕ್ ಪಡೆದ ಬಳಿಕ ಸರ್ವರ್ ಹಾಗೂ ಕಡಿಮೆ ವೇಗದ ಇಂಟರ್ ನೆಟ್ ನಿಂದಾಗಿ ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ಜಾಲದಲ್ಲಿ ಬಯೋಮೆಟ್ರಿಕ್ ಪಡೆದುಕೊಳ್ಳಲು ಸಾಧ್ಯವಾಗದೆ ಹಲವರು ಗ್ರಾಹಕರು ಬರಿಗೈಲಿ ಹಿಂದಿರುಗುವಂತಾಗಿದೆ. ಸರ್ವರ್ ಹಾಗೂ ಇಂಟರ್ ನೆಟ್ ವೇಗವಿದ್ದರಷ್ಟೆ ಕೆಲಸ ಆಗುತ್ತೆ. ಇಲ್ಲದಿದ್ದರೆ ಗ್ರಾಹಕರು ಮತ್ತೊಮ್ಮೆ ನ್ಯಾಯ ಬೆಲೆ ಅಂಗಡಿಗೆ ಹೋಗಿ ಬರಬೇಕು. ಇದು ನ್ಯಾಯಬೆಲೆ ಅಂಗಡಿ ನಡೆಸುವವರಿಗೂ ಹೊರೆಯಾಗಿದೆ. ಈ ಬಗ್ಗೆ ಆಹಾರ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರು ಸಮಸ್ಯೆ ಪರಿಹಾರವಾಗಿಲ್ಲ.”

– ಬಿ.ಪಿ.ಮಾದಪ್ಪ, ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಪಡಿತರ ವಿತರಕರ ಹಿತರಕ್ಷಣಾ ಸಂಘ

ರಾಜ್ಯದಲ್ಲಿ ಈ ವ್ಯವಸ್ಥೆಯನ್ನು ಕೊಂಚ ಮುಂದಕ್ಕೆ ಹಾಕಿ ಈಗ ಜಾರಿಗೆ ತರಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ರಾಜ್ಯ ಸರ್ಕಾರವು ಪಡೆಯುವ ಆಹಾರ ಧಾನ್ಯಗಳು ಬಳಕೆಯಾಗಿದ್ದನ್ನು ಕ್ಲೈಮ್ ಮಾಡಲು ಎರಡನೇ ಬಾರಿ ಬಯೋಮೆಟ್ರಿಕ್ ಪಡೆದ ಡಾಟಾವನ್ನು ಅಲ್ಲಿಗೆ ಕಳುಹಿಸಲಾಗುತ್ತದೆ. ಹೊಸ ವ್ಯವಸ್ಥೆ ಜಾರಿಗೆ ಬಂದಿದ್ದು ಕೆಲವೇ ದಿನಗಳ ಕಾಲ ಗ್ರಾಹಕರಿಗೆ ಸಮಸ್ಯೆಯಾಗಲಿದೆ. ಆನಂತರ ಎಲ್ಲವೂ ಸರಿಯಾಗಲಿದೆ ಎನ್ನುತ್ತಾರೆ ಆಹಾರ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು.

ರಾಜ್ಯದಲ್ಲಿ ಈಗಾಗಲೇ ಎಪಿಲ್ (APL), ಬಿಪಿಎಲ್ (BPL), ಅಂತ್ಯೋದಯ ಕಾರ್ಡ್ ದಾರರು ಸೇರಿದಂತೆ 1.26 ಕೋಟಿ ರೇಷನ್ ಕಾರ್ಡ್ ದಾರರಿದ್ದಾರೆ. ಆ ಪೈಕಿ ಈಗಾಗಲೇ ಶೇ.52ರಷ್ಟು ಕಾರ್ಡ್ ದಾರರು ಪಡಿತರವನ್ನು ಪಡೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಯಾಕೆ ಇಷ್ಟೆಲ್ಲಾ ಸರ್ಕಸ್ ಅಂತಿರಾ?

ಪಡಿತರ ವಿತರಣೆಯಲ್ಲಿ ರಾಜ್ಯಗಳ ಪಾಲು ಮತ್ತು ಕೇಂದ್ರ ಸರಕಾರದ ಪಾಲು ಇದೆ. ಆದರೆ ಕೆಲವೊಂದು ರಾಜ್ಯಗಳು ಅಷ್ಟೂ ಪಡಿತರವನ್ನು ತಾವೇ ನೀಡುತ್ತಿರುವುದಾಗಿ ಹೇಳಿಕೊಂಡು ಕೇಂದ್ರದ ಕೊಡುಗೆಯನ್ನು ಮರೆ ಮಾಚುತ್ತಿವೆ. ಇದನ್ನು ತಪ್ಪಿಸಿ ಕೇಂದ್ರದ ಉಚಿತ ಕೊಡುಗೆಯನ್ನು ಜನರಿಗೆ ಪ್ರತ್ಯೇಕವಾಗಿ ತಿಳಿಸಲು ಹೊಸ ವ್ಯವಸ್ಥೆ ಜಾರಿಗೆ ತರಲಾಗಿದೆ.

ಸರ್ವರ್ ಸಮಸ್ಯೆಯಿಂದ ಏನಾಗುತ್ತಿದೆ?

ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆಯಡಿ 5 ಕೆ.ಜಿ. ಅಕ್ಕಿ, ಕೇಂದ್ರ ಸರ್ಕಾರದ ಗರೀಬ್‌ ಕಲ್ಯಾಣದಡಿ 5 ಕೆ.ಜಿ. ಅಕ್ಕಿ ಪಡೆಯಲು ಎರಡು ಬಾರಿ ಬಯೋಮೆಟ್ರಿಕ್ ನೀಡಬೇಕು. ರಾಜ್ಯದ ಅಕ್ಕಿಗಾಗಿ ಒಮ್ಮೆ ಬೆರಳಚ್ಚು ನೀಡಿ ಅದನ್ನು ಕಂಪ್ಯೂಟರ್ ಮಾನ್ಯ ಮಾಡಲು ಕನಿಷ್ಟ ಅಂದರೂ ಗ್ರಾಮೀಣ ಪ್ರದೇಶದಲ್ಲಿ ಕನಿಷ್ಠ 5 ನಿಮಿಷ ಬೇಕು. ಈಗ ಸರ್ವರ್‌ ಸಮಸ್ಯೆಯಿಂದಾಗಿ ಕನಿಷ್ಠ 15 ನಿಮಿಷದಿಂದ 30 ನಿಮಿಷ ಸಮಯ ಹಿಡಿಯುತ್ತಿದೆ.

ಆಹಾರ ಇಲಾಖೆಯ ಸರ್ವರ್ ಸಮಸ್ಯೆ ಹಾಗೂ ಗ್ರಾಮೀಣ ಭಾಗದಲ್ಲಿ ಪಡಿತರ ವಿತರಣೆಯಲ್ಲಾಗುತ್ತಿರುವ ಸಮಸ್ಯೆಗಳ ಬಗ್ಗೆ ಆಹಾರ ಇಲಾಖೆ ಆಯುಕ್ತರಾದ ಕನಗವಲ್ಲಿ ಹಾಗೂ ಇಲಾಖೆಯ ಸರ್ವರ್ ಮತ್ತು ಐಟಿ ವಿಭಾಗದ ಜಂಟಿ ನಿರ್ದೇಶಕ ಜ್ಞಾನೇಂದ್ರ ಕುಮಾರ್ ಅವರನ್ನು ಬೆಂಗಳೂರು ವೈರ್ ಸಂಪರ್ಕಿಸಲು ಪ್ರಯತ್ನಿಸಿತಾದರೂ ಪ್ರತಿಕ್ರಿಯೆ ನೀಡಲು ಲಭ್ಯರಾಗಲಿಲ್ಲ. ಆದಷ್ಟು ಶೀಘ್ರದಲ್ಲೇ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳದಿದ್ದರೆ ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ಸಿಗದೆ ಜನರು ಮತ್ತಷ್ಟು ತೊಂದರೆಗೆ ಒಳಗಾಗುವುದು ತಪ್ಪುವುದಿಲ್ಲ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW Special | Bangalore Apartments | ಬೆಂಗಳೂರಿನಲ್ಲಿ ಐದು ವರ್ಷದಲ್ಲಿ ಬಿಕರಿಯಾಯ್ತು 3.12 ಲಕ್ಷ ಫ್ಲಾಟ್ ಗಳು : ನಗರದಲ್ಲಿ ಫ್ಲಾಟ್ ಗಳಿಗೆ ಹೆಚ್ಚುತ್ತಿದೆ ಬೇಡಿಕೆ…!

Next Post

ರಾಜ್ಯದಲ್ಲಿ ಅ.1ರಿಂದ ವಿದ್ಯುತ್ ದರ ಹೆಚ್ಚಳ ಹಿನ್ನಲೆ ; ʼಬಡವರನ್ನು ಸುಲಿದು ಬಿಸ್ನೆಸ್‌ ಕ್ಲಾಸಿನ ಜನರ ಜೇಬು ತುಂಬುತ್ತಿದೆ’ ಬಿಜೆಪಿ – ಎಚ್ ಡಿಕೆ ಟೀಕೆ

Next Post
ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ ಅ.1ರಿಂದ ವಿದ್ಯುತ್ ದರ ಹೆಚ್ಚಳ ಹಿನ್ನಲೆ ; ʼಬಡವರನ್ನು ಸುಲಿದು ಬಿಸ್ನೆಸ್‌ ಕ್ಲಾಸಿನ ಜನರ ಜೇಬು ತುಂಬುತ್ತಿದೆ' ಬಿಜೆಪಿ - ಎಚ್ ಡಿಕೆ ಟೀಕೆ

ವೈಭವದ ದಸರಾ ಹಬ್ಬ-2022ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d