Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ರಾಜ್ಯದಲ್ಲಿ ಅ.1ರಿಂದ ವಿದ್ಯುತ್ ದರ ಹೆಚ್ಚಳ ಹಿನ್ನಲೆ ; ʼಬಡವರನ್ನು ಸುಲಿದು ಬಿಸ್ನೆಸ್‌ ಕ್ಲಾಸಿನ ಜನರ ಜೇಬು ತುಂಬುತ್ತಿದೆ’ ಬಿಜೆಪಿ – ಎಚ್ ಡಿಕೆ ಟೀಕೆ

ಈ ಕರೆಂಟ್ ಶಾಕ್ ಹೊರೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್

by Bengaluru Wire Desk
September 24, 2022
in News Wire
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.24 www.bengaluruwire.com : ನಾಡಹಬ್ಬ ದಸರಾ ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಕರೆಂಟ್ ದರ ಏರಿಕೆ ಬರೆಯನ್ನು ಹಾಕಿದೆ. ಅಕ್ಟೋಬರ್ ಒಂದರಿಂದಲೇ ಪ್ರತಿ ಯೂನಿಟ್ ವಿದ್ಯುತ್ ದರ ಕನಿಷ್ಠ 24 ಪೈಸೆಯಿಂದ ಗರಿಷ್ಠ 43 ಪೈಸೆ ಏರಿಕೆಯಾಗಲಿದೆ.

ಕೇವಲ 5 ತಿಂಗಳ ಅಂತರದಲ್ಲಿ ಕೆಇಆರ್ ಸಿ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದ್ದು ಸಾಮಾನ್ಯ ಜನರು ಹಾಗೂ ಉದ್ದಿಮೆದಾರರಿಗೂ ನೂತನ ದರ ಏರಿಕೆ ಚಡಿಯೇಟು ನೀಡಿದಂತಾಗಿದೆ. ‘ಇಂಧನ ಹೊಂದಾಣಿಕೆ ಶುಲ್ಕ’ದ ಕಾರಣ ನೀಡಿ ಅ.1 ರಿಂದ ಮುಂದಿನ ಮಾರ್ಚ್ ಅನ್ವಯವಾಗುವಂತೆ ಈ ದರ ಪರಿಷ್ಕರಣೆ ಮಾಡಲಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳು, ಜನಸಾಮಾನ್ಯರು, ಸಂಘ ಸಂಸ್ಥೆಗಳು ಅಸಮಾಧಾನ ವ್ಯಕ್ತಪಡಿಸಿವೆ.

ಸಾಮಾನ್ಯವಾಗಿ ರಾಜ್ಯದ ವಿದ್ಯುತ್ ಸರಬರಾಜು ಕಂಪನಿ (ಎಸ್ಕಾಂ)ಗಳು ವಿವಿಧ ವಿದ್ಯುತ್ ಉತ್ಪಾದನಾ ಕಂಪನಿಗಳಿಂದ ವಿದ್ಯುತ್ ಖರೀದಿಸುತ್ತದೆ. ಇದಕ್ಕೆ ತಗಲಿದ ವೆಚ್ಚವನ್ನು ಹೊಂದಾಣಿಕೆ ಶುಲ್ಕದ ರೂಪದಲ್ಲಿ ಗ್ರಾಹಕರಿಂದ ವಸೂಲಿ ಮಾಡಲು ಅವಕಾಶವಿದೆ. ಕಲ್ಲಿದ್ದಲು ಖರೀದಿ ದರಲ್ಲಾದ ಹೆಚ್ಚಳ ಸರಿದೂಗಿಸಲು 3 ತಿಂಗಳಿಗೊಮ್ಮೆ ಪರಿಷ್ಕರಣೆ ಮಾಡಲು ಕಾನೂನಿನಲ್ಲಿ ಅವಕಾಶವಿದೆ.

ಪದೇ ಪದೇ ದರ ಏರಿಸುವುದನ್ನು ತಪ್ಪಿಸಲು ಎಲ್ಲಾ 5 ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂ) ಇಂಧನ ಹೊಂದಾಣಿಕೆ ಶುಲ್ಕ’ವನ್ನು ಪ್ರತಿ ಯೂನಿಟ್ ಗೆ ಮುಂದಿನ ಮೂರು ತಿಂಗಳಿಗೆ ಅನ್ವಯವಾಗುವಂತೆ 75 ಪೈಸೆ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದವು. ಆದರೆ ಕೆಇಆರ್ ಸಿ ಯೂನಿಟ್ ಗೆ ಸರಾಸರಿ ಅಂದಾಜು 37.41 ಪೈಸೆ ಏರಿಕೆ ಮಾಡಲು ತನ್ನ ಸಮ್ಮತಿ ನೀಡಿದೆ.

ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯ ಬಿಸಿ ಆಗಾಗ ಅನ್ನುವಂತೆ ಒಂದೇ ಸಮನೆ ಹೆಚ್ಚಳವಾಗುತ್ತಲೇ ಇದೆ. 2021ರ ನವೆಂಬರ್ ನಲ್ಲಿ ಪ್ರತಿ ಯೂನಿಟ್ ಗೆ 31ಪೈಸೆ ಹೆಚ್ಚಳ ಮಾಡಿ, 2021ರ ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗುವಂತೆ ಆದೇಶಿಸಲಾಗಿತ್ತು. ಇದಾದ ಬಳಿಕ ಈ ವರ್ಷದ ಏಪ್ರಿಲ್ ನಲ್ಲಿ ಪ್ರತಿ ಯೂನಿಟ್ ವಿದ್ಯುತ್ ಗೆ ಸರಾಸರಿಯಾಗಿ 35 ಪೈಸೆಯಷ್ಟು ಕೆಇಆರ್ ಸಿ ಹೆಚ್ಚಿಸಿ ಆದೇಶಿಸಿತ್ತು.

ಈ ಕರೆಂಟ್ ಶಾಕ್ ಹೊರೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರ್ಕಾರ ವಿದ್ಯುತ್‌ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್‌ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ @BJP4Karnataka ಸರಕಾರ ವಿದ್ಯುತ್‌ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್‌ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ.1/4‌#ನವರಾತ್ರಿಗೆ_ಕರೆಂಟ್_ಶಾಕ್

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 24, 2022

ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್‌ ದರ ಏರಿಕೆ ಆಗಿದೆ! ಏನೀ ಹುನ್ನಾರ? ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರ್ಕಾರ, ಕರೆಂಟ್‌ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ.‌ ಪ್ರತಿ ಯೂನಿಟ್‌ʼಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ ಹಾಗೂ ಖಂಡನೀಯ‌ ಎಂದಿದ್ದಾರೆ.

ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್‌ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿ ಇಲ್ಲ. ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ.

ರಾಜ್ಯ ಬಿಜೆಪಿ ಸರ್ಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಛಾತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲಬೆಲೆ ಇಳಿಸದ ಕೇಂದ್ರದ ಸರ್ಕಾರದ ಹಾದಿಯಲ್ಲೇ ರಾಜ್ಯ ಬಿಜೆಪಿ ಸರ್ಕಾರವೂ ಸಾಗಿದೆ. ವಿದ್ಯುತ್‌ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ.

ವಿದ್ಯುತ್‌ ಸೋರಿಕೆ, ಕಳವು ತಡೆಲಾಗದ, ನವೀನ ತಂತ್ರಜ್ಞಾನ ಅಳವಡಿಸಿಕೊಳ್ಳದ ಬಿಜೆಪಿ ಸರ್ಕಾರ ಅದಕ್ಷತೆಯ ಆಡಂಬೋಲ. ʼಬಡವರನ್ನು ಸುಲಿದು ಬಿಸ್ನೆಸ್‌ ಕ್ಲಾಸಿನ ಜನರ ಜೇಬು ತುಂಬುʼ ಎನ್ನುವುದು ಬಿಜೆಪಿ ತತ್ತ್ವ. ಅದನ್ನೇ ಕರ್ನಾಟಕದಲ್ಲೂ ಎಗ್ಗಿಲ್ಲದೆ ಮಾಡುತ್ತಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ವಿದ್ಯುತ್ ದರ ಏರಿಕೆ ಅವಶ್ಯಕತೆಯಿರಲಿಲ್ಲ ; ಎಫ್ ಕೆಸಿಸಿಐ
“ಕೆಇಆರ್ ಸಿಗೆ ಎಫ್ ಕೆಸಿಸಿಐ ನಿಂದ ಕರೋನಾ ಸೋಂಕಿನಿಂದ ಜರ್ಜರಿತವಾಗಿರುವ ಕೈಗಾರಿಕೆಗಳಿಗೆ ದರ ಏರಿಕೆ ಮಾಡದಂತೆ ಮನವಿ ಮಾಡಿತ್ತು. ಆದತೂ ಏಪ್ರಿಲ್ ನಲ್ಲಷ್ಟೆ ಪ್ರತಿ ಯೂನಿಟ್ ವಿದ್ಯುತ್ ಗೆ ಸರಾಸರಿ 35 ಪೈಸೆ ಕೆಇಆರ್ ಸಿ ಏರಿಕೆ ಮಾಡಿತ್ತು. ಈಗ ಕೆಪಿಸಿಎಲ್ ಕಲ್ಲಿದ್ದಲು ಖರೀದಿ ಟೆಂಡರ್ ನಲ್ಲಿ ಪಾಲ್ಗೊಂಡು ನಿಗಧಿತ ಕಲ್ಲಿದ್ದಲು ದರವನ್ನು ಪಡೆದುಕೊಂಡಿದೆ. ಹೀಗಿರುವಾಗ ಎಸ್ಕಾಂಗಳು ವಿದ್ಯುತ್ ಖರೀದಿಗಾಗಿ ಇಂಧನ ದರ ಹೊಂದಾಣಿಕೆ ಹಿನ್ನಲೆಯಲ್ಲಿ ದರ ಏರಿಕೆಗಾಗಿ ಪ್ರಸ್ತಾವನೆ ಸಲ್ಲಿಸದ್ದನ್ನು ಕೆಇಆರ್ ಸಿ ದರ ಏರಿಕೆ ಮಾಡುವ ಅವಶ್ಯಕತೆ ಇರಲಿಲ್ಲ. ಸಾಮಾನ್ಯ ಜನರಿಗೂ ಇದರಿಂದ ಹೊರೆಯಾಗಿದೆ.”

  • ಸುರೇಶ್ ಬಾಬು, ಅಧ್ಯಕ್ಷರು, ಎಫ್ ಕೆಸಿಸಿಐ ಇಂಧನ ಸಮಿತಿ
WhatsApp Join our WhatsApp Channel
Previous Post

Ration Card Server Problem | ಪಡಿತರಕ್ಕಾಗಿ ಎರಡು ಬಾರಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯ : ಸರ್ವರ್ ಸಮಸ್ಯೆಯಿಂದ ರೇಷನ್ ಸಿಗದೆ ಜನ ಕಂಗಾಲು….!

Next Post

ವೈಭವದ ದಸರಾ ಹಬ್ಬ-2022ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ

Next Post

ವೈಭವದ ದಸರಾ ಹಬ್ಬ-2022ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ

ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕನ್ನಡಕ್ಕೆ ಸಿಗದ ಮನ್ನಣೆ - ವ್ಯಾಪಕ ಆಕ್ರೋಶ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group