Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

World Tourism Day-2022 | ಅಂತರರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕರ್ನಾಟಕ ಶೀಘ್ರ ಸೇರ್ಪಡೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೇಲೂರು, ಹಳೆಬೀಡು, ಸೋಮನಾಥಪುರ ಸುತ್ತಮುತ್ತಲ ಪ್ರವಾಸಿತಾಣಗಳನ್ನೊಳಗೊಂಡ ಮೈಸೂರು ಸರ್ಕೀಟ್, ಬಿಜಾಪುರ ದಿಂದ ಬಾದಾಮಿ ಪಟ್ಟದಕಲ್ಲು ಹಂಪಿ ಇತ್ಯಾದಿಗಳನ್ನು ಒಳಗೊಂಡ ಹಂಪಿ ಸರ್ಕೀಟ್‍ಗಳು ಎರಡು ತಿಂಗಳಲ್ಲಿ ಕಾರ್ಯಾರಂಭ - ಸಿಎಂ

by Bengaluru Wire Desk
September 28, 2022
in News Wire
Reading Time: 2 mins read
0
ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ  ನೊಂದಾಯಿತ ರಾಜ್ಯದ ಪ್ರವಾಸಿ ಮಾರ್ಗದರ್ಶಿಗಳಿಗೆ ಪ್ರೋತ್ಸಾಹಧನವನ್ನು ಸಾಂಕೇತಿಕವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿತರಿಸಿದರು.  ಸಚಿವರಾದ ಆನಂದ್ ಸಿಂಗ್  ಹಾಗೂ ಗೋವಿಂದ ಕಾರಜೋಳ ಚಿತ್ರದಲ್ಲಿದ್ದಾರೆ.

ಬೆಂಗಳೂರು, ಸೆ.28 www.bengaluruwire.com : ಬರುವ ಕೆಲವೇ ತಿಂಗಳುಗಳಲ್ಲಿ ಕರ್ನಾಟಕ ಪ್ರವಾಸೋದ್ಯಮ ಅಂತರರಾಷ್ಟ್ರೀಯ ನಕ್ಷೆಯಲ್ಲಿ ಸೇರ್ಪಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಬುಧವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ  ವಿಶ್ವ ಪ್ರವಾಸೋದ್ಯಮ ದಿನಾಚರಣೆ-2022ಯ ಅಂಗವಾಗಿ ಆಯೋಜಿಸಿದ್ದ  ನೊಂದಾಯಿತ ರಾಜ್ಯದ ಪ್ರವಾಸಿ ಮಾರ್ಗದರ್ಶಿಗಳಿಗೆ ಪ್ರೋತ್ಸಾಹಧನ ವಿತರಣೆ ಹಾಗೂ ಪ್ರವಾಸೋದ್ಯಮ ನೀತಿ 2020-26ರ (ಪರಿಷ್ಕತ) ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.

ರಾಜ್ಯಕ್ಕೆ ವಾರ್ಷಿಕವಾಗಿ ಆಗಮಿಸುತ್ತಿರುವ 30 ಲಕ್ಷ ಪ್ರವಾಸಿಗರನ್ನು  ಮುಂದಿನ ಮೂರು  ವರ್ಷದಲ್ಲಿ ಒಂದು ಕೋಟಿಗೆ ಮುಟ್ಟಿಸುವ ಕೆಲಸವನ್ನು  ನಾವೆಲ್ಲರೂ ಸೇರಿ ಮಾಡಬೇಕು. ರಾಜ್ಯದಲ್ಲಿ ಪ್ರವಾಸಿಗರ ಹೆಜ್ಜೆಗಳನ್ನು ಹೆಚ್ಚಿಸಬೇಕು. ವಿದೇಶಿಯರನ್ನು ಆಕರ್ಷಿಸಿ, ಸ್ಥಳೀಯರಿಗೆ ಕೆಲಸ ಕೊಡಬೇಕು.  ಪ್ರವಾಸೋದ್ಯಮಕ್ಕೆ ಸೂಕ್ತವಾಗಿರುವ ಹಲವು ಸ್ಥಳಗಳು ಕರ್ನಾಟಕದಲ್ಲಿವೆ. ಕಲಬುರಗಿ, ಬೀದರ್ ಕೋಟೆಗಳು ಬಹಳ ಅದ್ಭುತವಾಗಿದೆ. ಇವೆಲ್ಲಾ ನಮ್ಮ ಆಸ್ತಿ. ಅವುಗಳನ್ನು ಸುಧಾರಣೆ ಮಾಡಿದರೆ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದೆ. ನಮ್ಮ ಹಿರಿಯರಿಂದ ಬಂದಿರುವುದನ್ನು ಜಗತ್ತಿಗೆ ನಾವು ಪರಿಚಯಿಸಬೇಕು.  ಇದನ್ನು ನಮ್ಮ ಸರ್ಕಾರ ಗುರುತಿಸುವ ಕೆಲಸ ಮಾಡುತ್ತದೆ. ಈ ನಿಟ್ಟಿನಲ್ಲಿ ಸಮಗ್ರವಾಗಿ ಕೆಲಸ ಮಾಡಬೇಕು.

ಪ್ರವಾಸೋದ್ಯಮದೊಂದಿಗೆ ಕಂದಾಯ, ಆಹಾರ, ಲೋಕೋಪಯೋಗಿ ಇಲಾಖೆಗಳು ಒಟ್ಟಾಗಿ ಕೆಲಸ ಮಾಡಿ ಕರ್ನಾಟಕದ ಒಟ್ಟು ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಂಪೂರ್ಣವಾಗಿ  ಬಳಕೆ ಮಾಡಲಾಗುವುದು.  ಆಗ ಪ್ರವಾಸೋದ್ಯಮ ಸಂಪೂರ್ಣವಾಗಿ ಬಳಕೆಯಾಗಿ ಕರ್ನಾಟಕವನ್ನು ಜಗತ್ರ್ಪಸಿದ್ಧ ಮಾಡಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನವಿರಲಿದೆ ಎಂದರು.

ಕನಕದಾಸರ ಜನ್ಮಸ್ಥಳವೀಗ ಆಕರ್ಷಕ ಪ್ರವಾಸ ಸ್ಥಳವಾಗಿದೆ :

ಶಿಗ್ಗಾಂವಿ  ಕ್ಷೇತ್ರದಲ್ಲಿ ಕನಕದಾಸರು ಹುಟ್ಟಿದ್ದು, ಶಿಶುನಾಳ ಶರೀಫರ ಕರ್ಮಭೂಮಿಯಾಗಿದ್ದರೂ ಅಲ್ಲಿ ಯಾವ ಅಭಿವೃದ್ಧಿಯೂ ಆಗಿರಲಿಲ್ಲ. ಅಲ್ಲಿನ ಪುರಾತತ್ವ ಇಲಾಖೆ ವತಿಯಿಂದ ಉತ್ಖನನ ಮಾಡಿಸಿದ ನಂತರ ಅದು ಒಂದು ಸಣ್ಣ ಅರಮನೆ ಎಂದು ತಿಳಿಸಿದರು. ಅಲ್ಲಿ ಕನಕದಾಸರ ಕೋಟೆ ಮತ್ತು ಅರಮನೆ ಎರಡನ್ನೂ ಕಟ್ಟಲಾಗಿದೆ. 4 ಡಿ ಸ್ಟುಡೀಯೋ ಸೇರಿದಂತೆ ಹಲವು ಉಪಕ್ರಮಗಳನ್ನು ಕೈಗೊಂಡು ಕನಕದಾಸರನ್ನು ಅಲ್ಲಿ ಜೀವಂತವಾಗಿರಿಸಲಾಗಿದೆ. ಈಗ ಸಾವಿರಾರು ಜನ,  ವಿಶೇಷವಾಗಿ ಮಕ್ಕಳು ದೊಡ್ಡ ಪ್ರಮಾಣದಲ್ಲಿ ಅಲ್ಲಿಗೆ ಬರುತ್ತಾರೆ. ಮಹಾರಾಷ್ಟ್ರ, ಆಂಧ್ರ ಎಲ್ಲೆಡೆಗಳಿಂದ ಅಲ್ಲಿಗೆ ಪ್ರವಾಸಿಗರು ಬರುತ್ತಾರೆ ಎಂದರು.

ವಿಧಾನಸೌಧ ಬಾಂಕ್ವೆಟ್ ಹಾಲ್ ನಲ್ಲಿ ಪ್ರವಾಸೋದ್ಯಮ ಇಲಾಖೆ ಕಾರ್ಯಕ್ರಮದಲ್ಲಿ ನೆರದಿದ್ದ ಜನಸ್ತೋಮ

ಸಚಿವ ಆನಂದ್ ಸಿಂಗ್  ಅವರು ಬಂದ ನಂತರ ಹಲವಾರು ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಯಾಣ, ಚಿಕ್ಕಮಗಳೂರುಗಳಲ್ಲಿ ರೋಪ್ ವೇ,  ಹೋಟೇಲುಗಳನ್ನು ಪುನಶ್ಚೇತನ ಮಾಡುವ ಕೆಲಸಗಳನ್ನು ಮಾಡುತ್ತಿದ್ದಾರೆ.  ಇಲ್ಲಿ ಎರಡು ಸರ್ಕಿಟ್ ಗಳನ್ನು ರೂಪಿಸಲಾಗಿದೆ.  ಸಿ.ಆರ್ ಝೆಡ್ ಸಾಧನೆ ಅದ್ಭುತವಾಗಿದೆ. ಅದರಲ್ಲಿ ಆನಂದ್ ಸಿಂಗ್ ಅವರ  ಪಾತ್ರ ಮುಖ್ಯವಾಗಿದೆ. ಬರುವ ದಿನಗಳಲ್ಲಿ ಇದರ ಉಪಯೋಗ ಪಡೆಯೋಣ.  ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮವನ್ನು ಕೈಗೊಳ್ಳುವ ಕೆಲಸಕ್ಕೆ ಇನ್ನಷ್ಟು ಶಕ್ತಿ ತುಂಬುವ ಕೆಲಸವನ್ನು ಮಾಡಲಾಗುವುದು ಎಂದರು.

ಪ್ರವಾಸಿ ಮಾರ್ಗದರ್ಶಿಗಳಲ್ಲಿ ನಿಷ್ಠೆ –ಪ್ರಾಮಾಣಿಕತೆ ಇರಲಿ :

ಪ್ರವಾಸಿ ಮಾರ್ಗದರ್ಶಿಗಳು ಅತ್ಯಂತ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ಸುಳ್ಳು ಹೇಳುವುದು, ಬಂದವರಿಗೆ ದಾರಿ ತಪ್ಪಿಸುವುದು ಮಾಡಬಾರದು. ಕರ್ನಾಟಕದ ಪ್ರವಾಸಿ ಮಾರ್ಗದರ್ಶಿಗಳೆಂದರೆ ನಂಬರ್ ಒನ್ ಆಗಬೇಕು.  ವಿಶ್ವಾಸಪೂರ್ವಕವಾಗಿರಬೇಕು. ಅವರು ಸರಿಯಾಗಿ ಮಾರ್ಗದರ್ಶನ ಮಾಡುತ್ತಾರೆ ಎಂಬ ವಿಶ್ವಾಸ ಮೂಡಿಸುವ ರೀತಿಯಲ್ಲಿ ನಿಮ್ಮ ನಡೆ ನುಡಿ ಇರಬೇಕು ಎಂದು ಕಿವಿಮಾತು ಹೇಳಿದರು.

 ಒಟ್ಟಾರೆ ಪ್ರವಾಸೋದ್ಯಮ ಅಧಿಕಾರಿಗಳು ಇನ್ನಷ್ಟು ಚುರುಕಾಗಿ ಕೆಲಸ ಮಾಡಬೇಕು. ನಮ್ಮ ಸಾಮರ್ಥ್ಯವನ್ನು ಪರಿಪೂರ್ಣವಾಗಿ ಬಳಸುವಂತಾಗಬೇಕು.  ಸರ್ಕಾರ ನಿಮ್ಮ ಜೊತೆಗಿದೆ. ಹೋಟೇಲು ಉದ್ಯಮಕ್ಕೆ ಬಹಳ ಅವಕಾಶಗಳಿವೆ. ಆನಂದ್ ಸಿಂಗ್ ಅವರು ಹಂಪಿ, ಬಾದಾಮಿ, ಬೇಲೂರಿನಲ್ಲಿ ತ್ರಿಸ್ಟಾರ್ ಹೋಟೇಲುಗಳನ್ನು ಪ್ರಾರಂಭಿಸಿದ್ದಾರೆ. ಇವುಗಳು ಬಹಳಷ್ಟು ಅಭಿವೃದ್ಧಿಯಾಗುತ್ತಿದ್ದು, ಇದರ ಲಾಭವನ್ನು ಎಲ್ಲರೂ ಪಡೆದುಕೊಳ್ಳಬೇಕು. ನಮ್ಮ  ಕನ್ನಡದ ಹುಡುಗರಿಗೆ ಕೆಲಸ ಸಿಗಬೇಕು. ಪ್ರವಾಸೋದ್ಯಮದಲ್ಲಿ ಕರ್ನಾಟಕ ಜಗತ್ಪ್ರಸಿದ್ಧವಾಗಬೇಕು ಎನ್ನುವುದೇ ನನ್ನ ಅಭಿಲಾಷೆ. ಈ ಬಗ್ಗೆ ಸಂಕಲ್ಪವನ್ನು ಮಾಡಿ ನಾವು ಮುಂದುವರೆಯೋಣ ಎಂದು ಅವರು ತಿಳಿಸಿದರು.

ಪ್ರವಾಸೋದ್ಯಮದಿಂದ ಅತಿ ಹೆಚ್ಚಿನ ಉದ್ಯೋಗ ಸೃಷ್ಟಿ :

ಪ್ರವಾಸೋದ್ಯಮ ಕ್ಷೇತ್ರದಲ್ಲಿ ತಂತ್ರಜ್ಞಾನ ಬದಲಾವಣೆಯನ್ನು ತಂದಿದೆ. ಪ್ರವಾಸಿಗರು ಉತ್ತಮ ವಸತಿ, ಸಾರಿಗೆ, ಆಹಾರ ಸೇರಿದಂತೆ ಉತ್ತಮ ಸೇವೆಗಳನ್ನು ಬಯಸುತ್ತಾರೆ. ಪ್ರವಾಸೋದ್ಯಮದಿಂದ ಅತಿ ಹೆಚ್ಚಿನ ಉದ್ಯೋಗಸೃಷ್ಟಿಯೂ ಸಾಧ್ಯವಾಗುತ್ತಿದೆ.

ಕರ್ನಾಟಕದ ಪ್ರವಾಸೋದ್ಯಮದಲ್ಲಿ ಹಂಪಿ, ಬೇಲೂರು, ಹಳೇಬಿಡು, ಗೋಲಗುಂಬಜ್, ಜೈನ ಬಸದಿಗಳಲ್ಲಿ ಕಲಾ ಜಗತ್ತೇ ಸೃಷ್ಟಿಯಾಗಿದ್ದು, ಇವು ಇಲ್ಲಿನ ಕಲಾ ಶ್ರೀಮಂತಿಕೆ ಹಾಗೂ ಪ್ರವಾಸೋದ್ಯಮದ ಅವಕಾಶಗಳಿಗೆ ಕೇವಲ  ಕೆಲವು ಉದಾಹರಣೆಗಳಾಗಿದೆ. ಈ ಐತಿಹಾಸಿಕ ಹಾಗೂ ಪಾರಂಪರಿಕ ಆಸ್ತಿಯನ್ನು ಸಂರಕ್ಷಿಸುವ ಮೂಲಕ ಪ್ರವಾಸೋದ್ಯಮವನ್ನು ಆಕರ್ಷಿಸಬಹುದು. ರಾಜ್ಯದಲ್ಲಿ ಅದ್ಭುತವಾದ ಐತಿಹಾಸಿಕ ಹಾಗೂ ಪಾರಂಪರಿಕ ಮಹತ್ವದ ಶಿಲ್ಪಗಳು, ಶಾಸನಗಳು, ಕಟ್ಟಡಗಳನ್ನು ಜನರಿಗೆ ಪರಿಚಯಿಸಬೇಕು. ಯೂನೆಸ್ಕೋ ಸಂಸ್ಥೆ ಹಂಪಿಯನ್ನು ಈಗಾಗಲೇ ಪಾರಂಪರಿಕ ಕಟ್ಟಡ ಎಂದು ಗುರುತಿಸಿದೆ.  ಬೇಲೂರು , ಹಳೇಬೀಡು ಕೂಡ ಈ ಪಟ್ಟಿಯಲ್ಲಿ ಸೇರಲಿದೆ. ಬಾದಾಮಿ ಗುಹೆಗಳು ಅಜಂತಾ ಗುಹೆಗಳಿಗಿಂತ ಪುರಾತನ ಹಾಗೂ ಮಹತ್ವದ್ದಾಗಿದೆ. ಆದರೆ ಪ್ರವಾಸಿಗರಿಗೆ ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಇವುಗಳನ್ನು ಎಲ್ಲ ವ್ಯವಸ್ಥೆಗಳೊಂದಿಗೆ ಸೃಜನಾತ್ಮಕವಾಗಿ ಪ್ರಸಿದ್ಧಿಗೊಳಿಸಬೇಕು ಎಂದರು.

2 ಸರ್ಕೀಟ್ ಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಏರಿಸಲು ಚಿಂತನೆ :

ರಾಜ್ಯದಲ್ಲಿ 2  ಪ್ರವಾಸೋದ್ಯಮ ಸರ್ಕೀಟ್ ಗಳನ್ನು ಅಂದರೆ ಬೇಲೂರು, ಹಳೆಬೀಡು, ಸೋಮನಾಥಪುರ ಸುತ್ತಮುತ್ತಲ ಪ್ರವಾಸಿತಾಣಗಳನ್ನೊಳಗೊಂಡ ಮೈಸೂರು ಸರ್ಕೀಟ್, ಬಿಜಾಪುರ ದಿಂದ ಬಾದಾಮಿ ಪಟ್ಟದಕಲ್ಲು ಹಂಪಿ ಇತ್ಯಾದಿಗಳನ್ನು ಒಳಗೊಂಡ ಹಂಪಿ ಸರ್ಕೀಟ್‍ಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಅಭಿವೃದ್ಧಿಪಡಿಸಲು ಸರ್ಕಾರ ಯೋಜನೆ ರೂಪಿಸಿದೆ.  ಈ ಸರ್ಕೀಟ್‍ಗಳಿಗೆ ಪ್ರವಾಸಿಗರು ವೆಬ್‍ಸೈಟ್ ಮೂಲಕ ತಮ್ಮ ಪ್ರವಾಸದ ಸಂಪೂರ್ಣ ವ್ಯವಸ್ಥೆಯನ್ನು ಮಾಡಿಕೊಳ್ಳುವ ಯೋಜನೆಯನ್ನು ರೂಪಿಸಲಾಗುತ್ತಿದ್ದು, ಮುಂದಿನ 2 ತಿಂಗಳ ಒಳಗಾಗಿ ಎರಡು ಸರ್ಕಿಟ್‍ಗಳನ್ನು ಕಾರ್ಯಾರಂಭ ಮಾಡಲಾಗುವುದು.

ಟೆಂಪಲ್ ಟೂರಿಸಂ, ನೈಸರ್ಗಿಕ ಟೂರಿಸಂಗಳಿಗೆ ಪ್ರಾಶಸ್ತ್ಯ ನೀಡಲಾಗುವುದು. ಜೋಗ ಜಲಪಾತ ಪ್ರವಾಸಿ ತಾಣ, ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲಿರಿಸಲಾಗಿದ್ದು, 600 ಕೊಠಡಿಗಳ ಪ್ರವಾಸಿ ವಸತಿ ನಿಲಯ ನಿರ್ಮಿಸಲಾಗುತ್ತಿದೆ. ಕರಾವಳಿ ಪ್ರದೇಶದ ಅಭಿವೃದ್ಧಿಗೆ ಪೂರಕವಾಗಿ ಸಿಆರ್‍ ಜೆಡ್ ವಲಯದಲ್ಲಿ ಕೇಂದ್ರ ಸರ್ಕಾರ ವಿನಾಯ್ತಿ ನೀಡಿದ್ದು, ಕರಾವಳಿ ಭಾಗದ ಪ್ರವಾಸೋದ್ಯಮಕ್ಕೆ ದೊಡ್ಡ ಪ್ರಮಾಣದ ಸಹಾಯವಾಗಲಿದೆ. ಕರಾವಳಿ ಪ್ರದೇಶದ ಪ್ರವಾಸೋದ್ಯಮಕ್ಕೆ ಪೂರಕವಾಗಿ ಕರಾವಳಿ ಅಭಿವೃದ್ಧಿ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಜ್ಯದಲ್ಲಿ ಕ್ಯಾರವಾನ್ ವಾಹನಗಳ ಮೂಲಕ ಪ್ರವಾಸ :

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕ್ಯಾರವಾನ್ ವಾಹನಗಳ ಸೇವೆಗಳಿಗೆ ಸಾಂಕೇತಿಕವಾಗಿ ಚಾಲನೆ ನೀಡಿದರು. ವಿದೇಶಗಳಲ್ಲಿ ಹೆಚ್ಚು ಪ್ರಸಿದ್ಧವಾಗಿರುವ ಇಂತಹ ವಾಹನಗಳನ್ನು ನಮ್ಮ ದೇಶದಲ್ಲಿ ಸಾಮಾನ್ಯವಾಗಿ ಚಲನಚಿತ್ರ ನಟ, ನಟಿಯರು ಬಳಸುತ್ತಾರೆ. ಈ ವಾಹನದಲ್ಲೇ ಉಳಿದುಕೊಳ್ಳಲು, ಅಡುಗೆಮನೆ, ಶೌಚಾಲಯ ಸೇರಿದಂತೆ ಸಕಲ ಸೌಲಭ್ಯಗಳಿರುತ್ತದೆ. ಈ ವಾಹನವನ್ನು ಯಾವುದೇ ಪ್ರವಾಸಿ ತಾಣಗಳಿಗೆ ಬುಕಿಂಗ್ ಮಾಡಿಕೊಂಡು ತೆಗೆದುಕೊಂಡು ಹೋಗಬಹುದು. ಈ ರೀತಿಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಬುಧವಾರ ಸಾಂಕೇತಿಕವಾಗಿ ಎರಡು ಖಾಸಗಿ ಕ್ಯಾರವಾನ್ ವಾಹನಗಳಿಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಂಸದ ಜಿ.ಎಸ್.ಬಸವರಾಜ್, ಪ್ರವಾಸೋದ್ಯಮ ಸಚಿವರಾದ ಆನಂದ್ ಸಿಂಗ್, ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್.ಅಶೋಕ್, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಎನ್.ವಿ.ಪ್ರಸಾದ್, ಕೆಎಸ್ ಟಿಡಿಸಿ ಅಧ್ಯಕ್ಷರಾದ ಕಾಪು ಸಿದ್ದಲಿಂಗಸ್ವಾಮಿ, ಇಲಾಖೆಯ ನಿರ್ದೇಶಕರಾದ ವೆಂಕಟೇಶ್, ಕೆಎಸ್ ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಜಗದೀಶ್, ಜೆಎಲ್ಆರ್ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರಾಜ ಜನಾರ್ಧನ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

PFI BAN | ಪಿಎಫ್ ಐ ಸಂಘಟನೆ ಮೇಲೆ 5 ವರ್ಷ ನಿಷೇಧ ಹೇರಿದ ಕೇಂದ್ರ ಸರ್ಕಾರ

Next Post

BBMP Election 2022 | ಬಿಬಿಎಂಪಿ ವಾರ್ಡ್ ಮೀಸಲಾತಿ ನ.30 ರ ಒಳಗೆ ಪ್ರಕಟಿಸಿ ಡಿ.31ರ ಒಳಗೆ ಚುನಾವಣೆ ನಡೆಸಿ : ಹೈಕೋರ್ಟ್ – ಇಲ್ಲಿದೆ ಕಂಪ್ಲೀಟ್ ನ್ಯೂಸ್

Next Post
ಸಾಂದರ್ಭಿಕ ಚಿತ್ರ

BBMP Election 2022 | ಬಿಬಿಎಂಪಿ ವಾರ್ಡ್ ಮೀಸಲಾತಿ ನ.30 ರ ಒಳಗೆ ಪ್ರಕಟಿಸಿ ಡಿ.31ರ ಒಳಗೆ ಚುನಾವಣೆ ನಡೆಸಿ : ಹೈಕೋರ್ಟ್ - ಇಲ್ಲಿದೆ ಕಂಪ್ಲೀಟ್ ನ್ಯೂಸ್

ಸಾಂದರ್ಭಿಕ ಚಿತ್ರ

HEALTH TIPS | ಚಳಿಗಾಲದಲ್ಲಿ ಇಂತಹ ತಪ್ಪುಗಳನ್ನು ಮಾಡಲು ಹೋಗದಿರಿ : ಆರೋಗ್ಯ ಹದಗೆಡಲಿದೆ ; ಆಯುರ್ವೇದಲ್ಲಿನ ಸರಳ ಪರಿಹಾರವೇನು? ಇಲ್ಲಿದೆ ತಜ್ಞ ವೈದ್ಯರ ಸಲಹೆ

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d