Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home BW Special

#KantaraMovie | ಆರು ದಿನಗಳಲ್ಲೇ ‘ಕಾಂತಾರ’ ಸಿನಿಮಾ ಗಳಿಸಿದ್ದೆಷ್ಟು? ಎಷ್ಟು ಭಾಷೆಗಳಲ್ಲಿ ಸೆನ್ಸರ್ ಮಂಡಳಿಗೆ ಹೋಗಿದೆ? ಇಲ್ಲಿದೆ Special Report.

ಕನ್ನಡ ಭಾಷೆಯ 'ಕಾಂತಾರ' ಚಲನಚಿತ್ರ ದಕ್ಷಿಣ ಭಾರತದ 353 ಫಿಲಮ್ ಥಿಯೇಟರ್ ಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಸದ್ಯದಲ್ಲೆ ಅಮೆಜಾನ್ ಒಟಿಟಿ ಪ್ಲಾಟ್ ಫಾರಮ್ ನಲ್ಲೂ ಲಭ್ಯವಾಗುವ ನಿರೀಕ್ಷೆಯಿದೆ

by Bengaluru Wire Desk
October 6, 2022
in BW Special, Public interest
Reading Time: 1 min read
0

ಬೆಂಗಳೂರು, ಅ.6 www.bengaluruwire.com : ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ರಿಷಬ್‌ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಚಲನಚಿತ್ರ ಸೆ.30ರಂದು ಬಿಡುಗಡೆಯಾಗಿ ಕೇವಲ 6 ದಿನಗಳಲ್ಲೇ 80 ಕೋಟಿ ರೂ. ಕಲೆಕ್ಷನ್ ಆಗಿದೆ. ಚಿತ್ರಪ್ರೇಮಿಗಳಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಎಲ್ಲರ ಮನೆಗೆದ್ದಿದೆ.

ಅ.7ರ ಶುಕ್ರವಾರಕ್ಕೆ ಫಿಲಮ್ ರಿಲೀಸ್ ಆಗಿ ಒಂದ ವಾರ ಮುಗಿಯುವುದರ ಒಳಗಾಗಿ ಇಷ್ಟು ದೊಡ್ಡ ಮೊತ್ತ ಸಂಗ್ರಹವಾಗಿದೆ. ನವರಾತ್ರಿಯ ಸಾಲು ಸಾಲು ರಜೆಗಳಿಂದಾಗಿ ಕಲೆಕ್ಷನ್ ಕೂಡ ಹೆಚ್ಚಾಗಿದೆ. ಕನ್ನಡ ಭಾಷೆಯ ‘ಕಾಂತಾರ’ ಚಲನಚಿತ್ರ ರಾಜ್ಯದ 300 ಥಿಯೇಟರ್, ಮುಂಬೈನ 33, ಕೇರಳ ಹಾಗೂ ತಮಿಳುನಾಡಿನಲ್ಲಿ ತಲಾ 10 ಸಿನಿಮಾ ಮಂದಿರಗಳಲ್ಲಿ ತೆರೆ ಕಂಡಿದೆ. ಕನ್ನಡ ಭಾಷೆಯಲ್ಲಿನ ಈ ಸಿನಿಮಾವೊಂದರಿಂದಲೇ ಬಾಕ್ಸ್ ಆಫೀಸ್ ಕಲೆಕ್ಷನ್ 200 ಕೋಟಿ ರೂ. ಗಡಿ ದಾಟಬಹುದೆಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಕರಾವಳಿಯ ಧಾರ್ಮಿಕ ಹಾಗೂ ಸಂಸ್ಕೃತಿಯ ಪ್ರತೀಕವಾಗಿರುವ ದೈವದ ಕೋಲವನ್ನು ಬಹಳ ಪರಿಣಾಮಕಾರಿಯಾಗಿ ತೋರಿಸುವ ಚಿತ್ರ ಹಿಂದಿ, ಮಲೆಯಾಳಂ, ತೆಲುಗು, ತಮಿಳು ಸೇರಿ ನಾಲ್ಕು ಭಾಷೆಗಳಲ್ಲಿ ಬರಲಿದೆ. ತೆಲಗು ಮತ್ತು ಹಿಂದಿ ಭಾಷೆಗೆ ಡಬ್ ಆದ ‘ಕಾಂತಾರ’ ಸಿನಿಮಾ ಕೇಂದ್ರ ಸೆನ್ಸರ್ ಮಂಡಳಿಗೆ ಹೋಗಿದ್ದು, ಸೆನ್ಸರ್ ಪ್ರಮಾಣಪತ್ರ ಬರಬೇಕಿದೆಯಷ್ಟೆ. ಇನ್ನು ತಮಿಳು ಹಾಗೂ ಮಲಯಾಳಮ್ ಭಾಷೆಯ ಚಿತ್ರಗಳು ಸದ್ಯದಲ್ಲಿಯೇ ಸೆನ್ಸರ್ ಮಂಡಳಿಗೆ ಕಳುಹಿಸಲಾಗುತ್ತಿದೆ ಎಂದು ಬೆಂಗಳೂರು ವೈರ್ ಗೆ ಮೂಲಗಳು ತಿಳಿಸಿವೆ.

ಅಮೆಜಾನ್ ಒಟಿಟಿ ಫ್ಲಾಟ್ ಫಾರಮ್ ಗಳಲ್ಲೂ ಸಿನಿಮಾ ವಿತರಣೆಗೆ ಹೊಂಬಾಳೆ ಪ್ರೊಡಕ್ಷನ್ ಹೌಸ್ ಮಾತುಕತೆ ನಡೆಸಿದ್ದು, ಒಟಿಟಿಯಲ್ಲೂ ಚಿತ್ರಪ್ರೇಮಿಗಳು ಈ ಸಿನಿಮಾವನ್ನು‌ ನೋಡಬಹುದಾಗಿದೆ.

“ಕಾಂತಾರ” ಪದದ ಅರ್ಥ ಏನಂದರೆ ನಿಗೂಢ ಕಾಡು. ಕಾಂತಾರ ಸಿನಿಮಾ ಮಾಡುವುದೇ ಒಂದು ಸವಾಲು ಆಗಿತ್ತು. ಅದರಲ್ಲೂ ನಾಡಿನ ನಂಬಿಕೆ, ಆಚಾರ, ವಿಚಾರಗಳಿಗೆ, ದೈವರಾಧನೆಗೆ ಎಲ್ಲೂ ಧಕ್ಕೆಯಾಗದಂತೆ, ಅದರ ಶ್ರೇಷ್ಠತೆ, ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ಸಿನಿಮಾ ಮಾಡುವುದು ಅಷ್ಟು ಸುಲಭದ ಮಾತಾಗಿರಲಿಲ್ಲ. ಅದನ್ನು ನಿಭಾಯಿಸುವುದರಲ್ಲಿ ಚಿತ್ರತಂಡ ಗೆಲುವು ಸಾಧಿಸಿದೆ.

ಇದನ್ನೂ ಓದಿ : HEALTH TIPS | ಚಳಿಗಾಲದಲ್ಲಿ ಇಂತಹ ತಪ್ಪುಗಳನ್ನು ಮಾಡಲು ಹೋಗದಿರಿ : ಆರೋಗ್ಯ ಹದಗೆಡಲಿದೆ ; ಆಯುರ್ವೇದಲ್ಲಿನ ಸರಳ ಪರಿಹಾರವೇನು? ಇಲ್ಲಿದೆ ತಜ್ಞ ವೈದ್ಯರ ಸಲಹೆ

ಈ ಸಿನಿಮಾ ಕುರಿತಂತೆ ಇತ್ತೀಚೆಗೆ‌ ಮಾಧ್ಯಮಗಳೊಂದಿಗೆ ಮುಕ್ತವಾಗಿ ಮಾತನಾಡಿರುವ ನಟ ರಿಷಬ್ ಶೆಟ್ಟಿ, ತಾವು ಸಣ್ಣ ವಯಸ್ಸಿಂದಲೂ ದೈವ, ದೇವರುಗಳ ಬಗ್ಗೆ ಭಕ್ತಿ ಇಟ್ಟುಕೊಂಡವನು. ಅವುಗಳನ್ನು ಆರಾಧಿಸುತ್ತಾ ಬಂದವನು. ದೈವರಾಧನೆ ಜತೆಗೆ ಬೆಳೆದವನು. ದೈವಗಳ ಕೃಪೆಯಿಂದ ಎಲ್ಲರ ಸಹಕಾರದಿಂದ ‘ಕಾಂತಾರ’ ಸಿನಿಮಾ ಸಾಕಾರಗೊಂಡಿದೆ. ಈ ಸಿನಿಮಾ ನಾವು ಮಾಡಿದ್ದು ಎಂದು ನಾನು ಹೇಳುವುದಿಲ್ಲ. ನಾವು ನಂಬಿರುವ ದೈವಗಳೇ ಮಾಡಿಸಿದ್ದು ಎಂದಷ್ಟೆ ಹೇಳಬಲ್ಲೆ ಎಂದು ಭಾವುಕತೆಯಿಂದ ತಿಳಿಸಿದ್ದರು.

ಈ ಸಿನಿಮಾ ದೈವ ನರ್ತಕ ಕುಟುಂಬಕ್ಕೆ ಅರ್ಪಣೆ: ಇಡೀ ಚಲನಚಿತ್ರವನ್ನು ದೈವ ನರ್ತಕರು ಹಾಗೂ ಅವರ ಕುಟುಂಬಕ್ಕೆ ಸಮರ್ಪಿಸಿದ್ದೇನೆ. ದೈವದ ಸೇವೆ ಮಾಡುವಂತದ್ದು ವಿಶೇಷ ಮತ್ತು ಪುಣ್ಯದ ಕಾರ್ಯ. ಕಾಂತಾರ ಚಿತ್ರ ಹೊರರಾಜ್ಯ ಹಾಗೂ ವಿದೇಶಗಳಲ್ಲೂ ಸದ್ದು ಮಾಡಿದೆ. ಆನೇಕ ವರ್ಷಗಳಿಂದ ಊರಿಗೆ ಬಾರದ, ದೈವಗಳ ಕೋಲ, ನೇಮಗಳಲ್ಲಿ ಪಾಲ್ಗೊಳ್ಳದ ಹಲವಾರು ಮಂದಿ ಇದೀಗ ಊರಿಗೆ ಬರಬೇಕು, ನಮ್ಮ ಮನೆತನದ, ಊರಿನ ಕೋಲ, ನೇಮಗಳಲ್ಲಿ ಪಾಲ್ಗೊಳುವಂತೆ ಪ್ರೇರೇಪಣೆ ಬಂದಿರುವುದಾಗಿ ದೂರವಾಣಿ ಕರೆ, ಮೆಸೇಜ್‌ಗಳಲ್ಲಿ ವ್ಯಕ್ತಪಡಿಸುತ್ತಿದ್ದಾರೆ. ಅಷ್ಟರ ಮಟ್ಟಿಗೆ ಅವರಿಗೆಲ್ಲ ‘ಕಾಂತಾರ’ ಸಿನಿಮಾ ಪ್ರೇರಣೆ ನೀಡಿದೆ ಎಂದಿದ್ದಾರೆ.

ಈ ಚಿತ್ರದ ನಾಯಕಿ ಸಪ್ತಮಿ ಗೌಡಗೆ ನಟಿಸುವ ವೇಳೆ ಕೋಲ, ನೇಮಗಳ ಬಗ್ಗೆ ತಿಳಿದಿರಲಿಲ್ಲ. ಆದರೆ ಚಿತ್ರದಲ್ಲಿ ಪಾತ್ರ ಮಾಡುವ ಸಂದರ್ಭದಲ್ಲಿ ಇದರ ಬಗ್ಗೆ ತಿಳಿದುಕೊಂಡು ಅದರಲ್ಲಿನ ಆಚಾರ, ವಿಚಾರ, ನಂಬಿಕೆಗಳನ್ನು ಚಾಚೂ ತಪ್ಪದೆ ಶ್ರದ್ಧೆಯಿಂದ ಪಾತ್ರ ನಿರ್ವಹಿಸಿದ್ದಾರಂತೆ. ಇನ್ನೂ ಮುಂದೆಯೂ ತಮಗೆ ಅವಕಾಶ ಸಿಕ್ಕಾಗಲೆಲ್ಲಾ ಕರಾವಳಿಯ ಕೋಲ, ನೇಮಗಳಲ್ಲಿ ಭಾಗವಹಿಸುತ್ತೇನೆ ಎಂದಿದ್ದಾರೆ.

ಹೊಂಬಾಳೆ ಪ್ರೊಡಕ್ಷನ್ ನಿಂದ ಕಾಂತಾರ-2..?
ಕಾಂತಾರ ಚಲನಚಿತ್ರ ಅದ್ಭುತ ಯಶಸ್ಸು ಕಾಣುತ್ತಿರುವಂತೆಯೇ ಇದೀಗ ಕಾಂತಾರ-2 ಚಿತ್ರ ಬರಲಿದೆಯೇ ಎಂಬ ಕುತೂಹಲ‌ ಚಿತ್ರರಸಿಕರನ್ನು ಕಾಡುತ್ತಿದೆ. ಆದರೆ ಈತನಕ ‘ಕಾಂತಾರ-2 ಹೆಸರಿನ ಟೈಟಲ್ ನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿಲ್ಲ ಎಂದು ತಿಳಿದುಬಂದಿದೆ.

ಕಾಂತಾರ-2 ಸಿನಿಮಾ ಕುರಿತ ಕುತೂಹಲವನ್ನು ಹಾಗೆಯೇ ಉಳಿಸಿಕೊಂಡಿರುವ ಚಿತ್ರದ ನಾಯಕ, ನಿರ್ದೇಶಕ ರಿಷಬ್‌ ಶೆಟ್ಟಿ, ಕಾಂತಾರ ಸಿನಿಮಾ ರಿಲೀಸ್ ಮಾಡಿದ್ದೇವೆ. ನಮ್ಮ ರಾಜ್ಯ ಮಾತ್ರವಲ್ಲದೆ ದೇಶ ವಿದೇಶಗಳಲ್ಲೂ ಚಿತ್ರಕ್ಕೆ ಅದ್ಭುತ ಸ್ಪಂದನೆ ವ್ಯಕ್ತವಾಗಿದೆ. ಕಾಂತಾರ-2 ಸಿನಿಮಾ ಬಗ್ಗೆ ಈಗ ಏನನ್ನೂ ಹೇಳಲಾರೆ. ಇದನ್ನು ದೈವೇಚ್ಛೆಗೆ ಬಿಟ್ಟಿದ್ದೇನೆ. ದೈವದ ಇಚ್ಛೆ ಇದ್ದರೆ ಬರಬಹುದು ಎಂದ ಹೇಳುವ ಮೂಲಕ ಸಾಧ್ಯತೆಗಳನ್ನು ಮುಕ್ತವಾಗಿ ತೆರೆದಿಟ್ಟಿದ್ದಾರೆ. ಒಟ್ಟಿನಲ್ಲಿ ದಕ್ಷಿಣ ಭಾರತದ ನಾಲ್ಕು ಭಾಷೆಗಳಿಂದ ಕಾಂತಾರ ಹವಾ ಹಾಗೂ ಕನ್ನಡ ಚಿತ್ರರಂಗದ ಹೆಸರು ಮತ್ತಷ್ಟು ಹೆಚ್ಚಾಗಲಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

KASHMIR SHARADA TEMPLE | ಕಾಶ್ಮೀರದ ಗಡಿ ದೇವಸ್ಥಾನಕ್ಕೆ ಶೃಂಗೇರಿ ಪೀಠದಿಂದ ಪಂಚಲೋಹ ಶಾರದಾ ವಿಗ್ರಹ ಹಸ್ತಾಂತರ

Next Post

BWSSB NEWS | ಬೆಂಗಳೂರಿನ ಈ ಭಾಗಗಳಲ್ಲಿ ನಾಳೆ ಕಾವೇರಿ ನೀರು ಪೂರೈಕೆ ಬಂದ್….!

Next Post
ಸಾಂದರ್ಭಿಕ ಚಿತ್ರ

BWSSB NEWS | ಬೆಂಗಳೂರಿನ ಈ ಭಾಗಗಳಲ್ಲಿ ನಾಳೆ ಕಾವೇರಿ ನೀರು ಪೂರೈಕೆ ಬಂದ್....!

ಸರತಿ ಸಾಲಿನಲ್ಲಿ ದೇವರ ದರ್ಶನಕ್ಕೆ ನಿಂತಿರುವ ಭಕ್ತರು (ಸಾಂದರ್ಭಿಕ ಚಿತ್ರ)

TTD Venkateshwara Temple | ತಿರುಪತಿಗೆ ಭೇಟಿ ನೀಡುವ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳ : ವೆಂಕಟೇಶ್ವರನ ಸಾಮಾನ್ಯ ದರ್ಶನಕ್ಕೆ ಕಾಯಬೇಕು 30 ಗಂಟೆ?

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d