Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka Rain Damages | ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿ ; ಪರಿಹಾರ ವಿತರಣೆಯಲ್ಲಿ ಲೋಪ ಮಾಡದಿರಿ : ಡಿಸಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ

ಜೂನ್ 1 ರಿಂದ ಸೆಪ್ಟೆಂಬರ್ 30ರ ವರೆಗೆ 42,661 ಮನೆಗಳಿಗೆ ಪರಿಹಾರ

by Bengaluru Wire Desk
October 13, 2022
in News Wire
Reading Time: 1 min read
0

ಹೊಸಪೇಟೆ, ಅ.13 www.bengaluruwire.com :
ರಾಜ್ಯದಲ್ಲಿ ಹಿಂದೆಂದಿಗಿಂತ ಹೆಚ್ಚಿನ ಮಳೆಯಾಗುತ್ತಿದ್ದು, ಜಿಲ್ಲಾಧಿಕಾರಿಗಳು ಕಟ್ಟೆಚ್ಚರಿಕೆ ವಹಿಸಬೇಕು. ಮಳೆಹಾನಿ ಸಂಭವಿಸಿದ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಹಾರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ದೇಶನ ನೀಡಿದರು.

ಅವರು ಇಂದು ಹೊಸಪೇಟೆಯಿಂದ ಮಳೆಹಾನಿ ಸಂಭವಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಪರಿಹಾರ ಕ್ರಮಗಳ ಪರಿಶೀಲನೆ ನಡೆಸಿದರು.

ಮನೆಗಳಿಗೆ ಸಂಬಂಧಿಸಿದ ಹಾನಿಯನ್ನು ದಾಖಲಿಸುವ ಹಂತದಲ್ಲಿಯೇ ಕೆಲವೆಡೆ ಲೋಪಗಳಾಗುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಲೋಪವಾಗದಂತೆ ಜಿಲ್ಲಾಧಿಕಾರಿಗಳು ಖುದ್ದು ಮೇಲ್ವಿಚಾರಣೆ ವಹಿಸಬೇಕು. ವಸ್ತುಸ್ಥಿತಿ ಆಧರಿಸಿ, ಪರಿಹಾರ ಕೋರಿ ಬಂದ ಮನವಿಗಳನ್ನು ದಾಖಲಿಸಬೇಕು. ಕರ್ತವ್ಯ ಲೋಪ ಎಸಗಿದ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಮನೆ ಹಾನಿಗೆ ಸಂಬಂಧಿಸಿದಂತೆ ಎನ್ ಡಿಆರ್ ಎಫ್ ಮಾರ್ಗಸೂಚಿಗಿಂತ ಹೆಚ್ಚುವರಿ ಪರಿಹಾರ ವಿತರಣೆಗೆ ಸುತ್ತೋಲೆ ಹೊರಡಿಸುವಂತೆ ವಿಪತ್ತು ನಿರ್ವಹಣೆ ಆಯುಕ್ತರಿಗೆ ಸೂಚನೆ ನೀಡಿದರು.

ಮಳೆಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ, ಪರಿಹಾರ ವಿತರಣೆ, ಮಾಹಿತಿ ದಾಖಲಿಸುವಲ್ಲಿ ಲೋಪಗಳಾಗದಂತೆ ತಹಸೀಲ್ದಾರರಿಗೆ ಮಾರ್ಗಸೂಚಿ ನೀಡಬೇಕು.

ಬೆಳೆಹಾನಿ ಪರಿಹಾರ ವಿತರಣೆಯನ್ನೂ ತ್ವರಿತವಾಗಿ ವಿತರಿಸಬೇಕು. ಅಕ್ಟೋಬರ್ ತಿಂಗಳಿನಲ್ಲಿ ಸಂಭವಿಸಿದ ಬೆಳೆಹಾನಿಯನ್ನು ಸಹ ಕೂಡಲೇ ಜಂಟಿ ಸಮೀಕ್ಷೆ ನಡೆಸಿ, ಈ ತಿಂಗಳೊಳಗೆ ಪರಿಹಾರ ವಿತರಿಸಲು ಸೂಚನೆ ನೀಡಲಾಯಿತು.

ಮೂಲಸೌಲಭ್ಯ ಹಾನಿ ವರ್ಗೀಕರಣ‌:
ಮೂಲಸೌಲಭ್ಯ ಹಾನಿಗೆ ಸಂಬಂಧಿಸಿದಂತೆ ಹಾನಿಯ ತೀವ್ರತೆಯನ್ನು ಆಧರಿಸಿ, ಸಿ ವರ್ಗ- ಎನ್ ಡಿಆರ್ ಎಫ್ ಮಾರ್ಗಸೂಚಿಯನ್ವಯ ದುರಸ್ತಿ, ಬಿ ವರ್ಗ- ಸರ್ಕಾರದಿಂದ ಹೆಚ್ಚುವರಿ ನೆರವು ಅಗತ್ಯವಿರುವ ಕಾಮಗಾರಿಗಳು, ಎ- ಸಂಪೂರ್ಣ ಪುನರ್ ನಿರ್ಮಾಣ ಅಗತ್ಯವಿರುವ ಕಾಮಗಾರಿಗಳು- ಎಂದು ಗುರುತಿಸಿ, ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಲಾಯಿತು.

ಕೆರೆಗಳು ಒಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಸಹ ಸೂಚನೆ ನೀಡಿದರು. ಕೆರೆಗಳು ದುರ್ಬಲವಾಗಿರುವುದು, ನೀರಿನ ಒತ್ತಡ ಹೆಚ್ಚಿರುವ ಸೂಕ್ಷ್ಮ ಪರಿಸ್ಥಿತಿಯನ್ನು ಅವಲೋಕಿಸಿ, ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಸೇತುವೆಗಳ ನಿರ್ಮಾಣದ ವಿಷಯದಲ್ಲಿಯೂ ಆದ್ಯತೆಯನ್ನು ಗುರುತಿಸಿ, ಅದರಂತೆ ದುರಸ್ತಿ, ಮರುನಿರ್ಮಾಣ ಮಾಡಬೇಕು ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್ ಗಳನ್ನು 24 ಗಂಟೆಗಳೊಳಗೆ ಸರಿಪಡಿಸಿ, ವಿದ್ಯುತ್ ಸಂಪರ್ಕ ಒದಗಿಸಬೇಕು‌ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ದಿಢೀರ್ ಪ್ರವಾಹದ ವಿರುದ್ಧ ಮುನ್ನೆಚ್ಚರಿಕೆ
ದಿಢೀರ್ ಪ್ರವಾಹ ಉಂಟಾಗುವ ಹೊಳೆ, ಹಳ್ಳಗಳ ವ್ಯಾಪ್ತಿಯಲ್ಲಿ ಸೂಕ್ತ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದರು.

ಅನುದಾನ ಕೊರತೆ ಇಲ್ಲ :
ಬೆಳೆಹಾನಿ ಹಾಗೂ ಮನೆಹಾನಿಗೆ ಪರಿಹಾರ ನೀಡಲು ಅನುದಾನದ ಕೊರತೆ ಇಲ್ಲ. ಮೂಲಸೌಕರ್ಯ ಹಾನಿಗೆ ಬಿಡುಗಡೆ ಮಾಡಲಾದ ಅನುದಾನಕ್ಕೆ ಕ್ರಿಯಾಯೋಜನೆ ರೂಪಿಸಿ, ಅನುಷ್ಠಾನಗೊಳಿಸುವಂತೆ ಸೂಚಿಸಲಾಯಿತು. ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ ಒಟ್ಟು 635.13 ಕೋಟಿ ರೂ. ಲಭ್ಯವಿದೆ. ಮೂಲಸೌಕರ್ಯ ಹಾನಿಗೆ ಸಂಬಂಧಿಸಿದಂತೆ ಮೂರು ದಿನಗಳ ನಂತರ ಮತ್ತೊಮ್ಮೆ ಸಭೆ ನಡೆಸಿ ಚರ್ಚಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯದಲ್ಲಿ ಹಿಂಗಾರು ಹಂಗಾಮಿನಲ್ಲಿ ಅ.1 ರಿಂದ ಈ ವರೆಗೆ ಸಂಬಂಧಿಸಿದಂತೆ ವರದಿಯಾಗಿರುವ ಮಳೆಹಾನಿಯ ವಿವರ :

  1. ಜೀವಹಾನಿ- 13
  2. ಜಾನುವಾರುಗಳ ಸಾವು- 28
  3. ಮನೆಹಾನಿ- 3309
  4. ಬೆಳೆಹಾನಿ- 6279 ಹೆಕ್ಟೇರ್
  5. ಕಾಳಜಿ ಕೇಂದ್ರಗಳ ಸ್ಥಾಪನೆ- 5, ಆಶ್ರಯ ಪಡೆದವರ ಸಂಖ್ಯೆ 1330

6.16 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆಹಾನಿಗೆ ಪರಿಹಾರ:
ಮುಂಗಾರು ಹಂಗಾಮಿನಲ್ಲಿ ಒಟ್ಟು 9,90,957 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದ್ದು, 6,16,138 ಹೆಕ್ಟೇರ್ ಪ್ರದೇಶದ ಬೆಳೆಹಾನಿಗೆ 8.83 ಲಕ್ಷ ರೈತರಿಗೆ 947.8 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ಇನ್ನು ಎರಡು ದಿನಗಳಲ್ಲಿ ಇನ್ನೊಂದು ಹಂತದಲ್ಲಿ ಸುಮಾರು 2 ಲಕ್ಷ ರೈತರಿಗೆ ಅಂದಾಜು 250 ಕೋಟಿ ರೂ. ಬೆಳೆ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.

42,661 ಮನೆಗಳಿಗೆ ಪರಿಹಾರ ವಿತರಣೆ :
ಜೂನ್ 1 ರಿಂದ ಸೆಪ್ಟೆಂಬರ್ 30ರ ವರೆಗೆ 48,485 ಮನೆ ಹಾನಿ ಸಂಭವಿಸಿದ್ದು, 42,661 ಮನೆಗಳಿಗೆ ಪರಿಹಾರ ವಿತರಿಸಲಾಗಿದೆ.

ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಮುಖ್ಯಮಂತ್ರಿಯವರೊಂದಿಗೆ ಉಪಸ್ಥಿತರಿದ್ದರು. ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರು, ಸರ್ಕಾರದ ಹಿರಿಯ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

KAS | 2017-18ನೇ ಸಾಲಿನ ಕೆಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಜ್ಞಾನಗಂಗೋತ್ರಿ ಅಕಾಡೆಮಿ ವತಿಯಿಂದ ಅಭಿನಂದನಾ ಕಾರ್ಯಕ್ರಮ

Next Post

Bangalore Metro Rail News | ಭೈಯ್ಯಪ್ಪನಹಳ್ಳಿ – ವೈಟ್ ಫೀಲ್ಡ್ ನಡುವೆ ಅ.25ರಿಂದ ಮೆಟ್ರೋ ರೈಲು ಪ್ರಾಯೋಗಿಕ ಸಂಚಾರ

Next Post

Bangalore Metro Rail News | ಭೈಯ್ಯಪ್ಪನಹಳ್ಳಿ - ವೈಟ್ ಫೀಲ್ಡ್ ನಡುವೆ ಅ.25ರಿಂದ ಮೆಟ್ರೋ ರೈಲು ಪ್ರಾಯೋಗಿಕ ಸಂಚಾರ

ಸಾಂದರ್ಭಿಕ ಚಿತ್ರ

NO Kavery Water Supply | ಬೆಂಗಳೂರಿನ 254 ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಕಾವೇರಿ ನೀರು ಪೂರೈಕೆ ಬಂದ್...!

Please login to join discussion

Like Us on Facebook

Follow Us on Twitter

Recent News

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d