ಬೆಂಗಳೂರು, ಅ.15 www.bengaluruwire.com : ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸನ್ನ ಬಾಲಚಂದ್ರ ವರಳೆ ಅವರು ಶನಿವಾರ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದ ಗಾಜಿನಮನೆಯಲ್ಲಿ ಇಂದು ಬೆಳಗ್ಗೆ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು ಎಂದ ರಾಜಭವನದ ಕಚೇರಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಸಮಾರಂಭದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು, ಕುಟುಂಬ ವರ್ಗದವರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮಾ ಸ್ವಾಗತ ಕೋರಿದರು.